Homeಅಂತರಾಷ್ಟ್ರೀಯಉಕ್ರೇನ್ ಯುದ್ಧಕ್ಕೆ ರಷ್ಯಾ ದೂಷಿಸಲು ಅಮೆರಿಕ ನಿರಾಕರಣೆ : ಕದನ ವಿರಾಮ ನಿರ್ಣಯಗಳ ಮತದಾನದಿಂದ ದೂರ...

ಉಕ್ರೇನ್ ಯುದ್ಧಕ್ಕೆ ರಷ್ಯಾ ದೂಷಿಸಲು ಅಮೆರಿಕ ನಿರಾಕರಣೆ : ಕದನ ವಿರಾಮ ನಿರ್ಣಯಗಳ ಮತದಾನದಿಂದ ದೂರ ಉಳಿದ ಭಾರತ

- Advertisement -
- Advertisement -

ರಷ್ಯಾ-ಉಕ್ರೇನ್‌ ನಡುವಿನ ಯುದ್ಧ ಮೂರು ವರ್ಷ ಪೂರೈಸಿರುವ ಹಿನ್ನೆಲೆ, ಶಾಂತಿ ಸ್ಥಾಪಿಸುವ ಸಂಬಂಧ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ (ಯುನ್‌ಜಿಎ) ಮಂಡಿಸಿದ ನಿರ್ಣಯದ ಮೇಲಿನ ಮತದಾನ ಸೋಮವಾರ (ಫೆ.24) ನಾಟಕೀಯ ಬೆಳವಣಿಗೆಗೆ ಕಾರಣವಾಯಿತು.

ಉಕ್ರೇನ್ ಮೇಲಿನ ದಾಳಿಗೆ ರಷ್ಯಾವನ್ನು ದೂಷಿಸಲು ನಿರಾಕರಿಸಿದ ಡೊನಾಲ್ಡ್ ಟ್ರಂಪ್ ಆಡಳಿತ, ಈ ಹಿಂದೆ ಬೈಡೆನ್ ಆಡಳಿತದಲ್ಲಿ ರಷ್ಯಾ ವಿರುದ್ದ ನೀಡಿದ್ದ ಹೇಳಿಕೆಯನ್ನು ಹಿಂಪಡೆಯಿತು.

ವರದಿಗಳ ಪ್ರಕಾರ, ರಷ್ಯಾಗೆ ಪೂರಕವಾದ ರೀತಿಯಲ್ಲಿ ಯುದ್ಧ ಕೊನೆಗೊಳಿಸಲು ಅಮೆರಿಕ ಮುಂದಾಗಿದೆ. ಉಕ್ರೇನ್ ಹೊರಗಿಟ್ಟು ರಷ್ಯಾ ಜೊತೆ ಮಾತ್ರ ಚರ್ಚಿಸಿ ಏಕಪಕ್ಷೀಯ ನಿರ್ಣಯ ತೆಗೆದುಕೊಳ್ಳುತ್ತಿದೆ. ಇದಕ್ಕೆ ಯುರೋಪಿಯನ್ ಒಕ್ಕೂಟದ ಅದರ ಮಿತ್ರ ರಾಷ್ಟ್ರಗಳೇ ವಿರೋಧ ವ್ಯಕ್ತಪಡಿಸಿವೆ.

ಸೋಮವಾರ ವಿಶ್ವಸಂಸ್ಥೆಯಲ್ಲಿ, ಅಮೆರಿಕ ಮತ್ತು ರಷ್ಯಾ ಎರಡೂ ಯುರೋಪಿಯನ್ ಒಕ್ಕೂಟ ಬೆಂಬಲಿತ ನಿರ್ಣಯವನ್ನು ವಿರೋಧಿಸಿದವು. ಏಕೆಂದರೆ, ಆ ನಿರ್ಣಯದಲ್ಲಿ ಉಕ್ರೇನ್ ಮೇಲಿನ ದಾಳಿಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ನೇರವಾಗಿ ದೂಷಿಸಲಾಗಿದೆ.

ರಷ್ಯಾ-ಉಕ್ರೇನ್ ಯುದ್ಧದ ಕುರಿತಾದ ಹಿಂದಿನ ನಿರ್ಣಯಗಳಿಗೆ ಹೋಲಿಸಿದರೆ ಕಡಿಮೆ ಬೆಂಬಲವನ್ನು ಗಳಿಸಿದ ಈ ನಿರ್ಣಯವು, ರಷ್ಯಾವನ್ನು ಬಲವಾಗಿ ಟೀಕಿಸಿದೆ ಮತ್ತು ಉಕ್ರೇನ್‌ನ ಪ್ರಾದೇಶಿಕ ಸಮಗ್ರತೆ ಮತ್ತು ಅದರ ಗಡಿಗಳ ಉಲ್ಲಂಘನೆಯನ್ನು ಒತ್ತಿ ಹೇಳಿದೆ.

ಅಮೆರಿದಕ ದ್ವಂದ್ವ ನೀತಿಯ ಕಾರಣ, ಉದ್ವಿಗ್ನತೆ ಕಡಿಮೆ ಮಾಡಲು, ಬೇಗನೆ ಕದನ ವಿರಾಮವನ್ನು ಘೋಷಿಸಲು ಮತ್ತು ಯುದ್ಧಕ್ಕೆ ಶಾಂತಿಯುತ ಪರಿಹಾರವನ್ನು ಕೋರುವ ಪ್ರತ್ಯೇಕ ನಿರ್ಣಯದಿಂದ ಭಾರತ ಮತ್ತು ಚೀನಾ ದೂರ ಉಳಿದವು.

ಭಾರತ ಮತ್ತು ಚೀನಾ ಜೊತೆಗೆ, ಬ್ರೆಝಿಲ್, ಇರಾನ್, ಇರಾಕ್, ಪಾಕಿಸ್ತಾನ, ಬಾಂಗ್ಲಾದೇಶ, ಸೌದಿ ಅರೇಬಿಯಾ, ದಕ್ಷಿಣ ಆಫ್ರಿಕಾ, ಶ್ರೀಲಂಕಾ, ಯುಎಇ, ವಿಯೆಟ್ನಾಂ ಸೇರಿದಂತೆ 65 ಯುಎನ್‌ ಸದಸ್ಯ ರಾಷ್ಟ್ರಗಳು ನಿರ್ಣಯದಿಂದ ದೂರ ಉಳಿದವು.

ನಂತರ, ಅಮೆರಿಕ ಮತ್ತು ರಷ್ಯಾ ಎರಡೂ ರಾಷ್ಟ್ರಗಳು ರಷ್ಯಾದ ಕಡೆಗೆ ಬೆರಳು ತೋರಿಸದೆ ಯುದ್ಧವನ್ನು ತ್ವರಿತವಾಗಿ ಕೊನೆಗೊಳಿಸಲು ಕರೆ ನೀಡುವ ಭದ್ರತಾ ಮಂಡಳಿಯ ನಿರ್ಣಯವನ್ನು ಬೆಂಬಲಿಸಿದವು.

ರಷ್ಯಾವನ್ನು ದೂಷಿಸುವ ನಿರ್ಣಯವನ್ನು ಅಮೆರಿಕ ಮತ್ತು ರಷ್ಯಾ ವಿರೋಧಿಸಿದ ಬಳಿಕ, ಜಿ-7 ರಾಷ್ಟ್ರಗಳು ನಿರ್ಣಯ ತೆಗೆದುಕೊಳ್ಳಲು ಹೆಣಗಾಡಿದವು. ಅದರ ಪರಿಣಾಮವಾಗಿ ತಟಸ್ಥ ನಿಲುವು ಅನುಸರಿವೆ.

ಯುರೋಪಿಯನ್ ರಾಷ್ಟ್ರಗಳು ಮತ್ತು ಯುರೋಪಿಯನ್ ಒಕ್ಕೂಟದಿಂದ ಯಾವುದೇ ಸಲಹೆ ಪಡೆಯದೆ, ಕೇವಲ ರಷ್ಯಾದ ವಿಷಯಗಳನ್ನು ಪರಿಣಿಸಿ ಯುದ್ಧ ಕೊನೆಗೊಳಿಸುವ ನಿಟ್ಟಿನಲ್ಲಿ ಟ್ರಂಪ್ ಅತ್ಯಂತ ವೇಗದಿಂದು ಮುಂದುವರಿಯುತ್ತಿದ್ದಾರೆ. ” ಸೋಮವಾರ ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ್ದ ಅವರು ” ಯುದ್ದ ಕೊನೆಗೊಳಿಸುವ ನಿಟ್ಟಿನಲ್ಲಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ನಾನು ಗಂಭೀರ ಚರ್ಚೆಗಳಲ್ಲಿ ತೊಡಗಿದ್ದೇನೆ” ಎಂದಿದ್ದರು.

ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಈ ವಾರದಲ್ಲೇ ವಾಷಿಂಗ್ಟನ್‌ಗೆ ಪ್ರಯಾಣಿಸಿ ನೈಸರ್ಗಿಕ ಸಂಪನ್ಮೂಲಗಳ ಒಪ್ಪಂದಕ್ಕೆ ಸಹಿ ಹಾಕಬಹುದು ಎಂದು ಟ್ರಂಪ್ ಶ್ವೇತಭವನದಲ್ಲಿ ಹೇಳಿದ್ದರು. ಯುದ್ಧವನ್ನು ಕೊನೆಗೊಳಿಸಲು ಮತ್ತು ಅಮೆರಿಕ ನೀಡಿದ ಬೆಂಬಲದ ಋಣ ತೀರಿಸಲು ಟ್ರಂಪ್ ಈ ಒಪ್ಪಂದ ಅಗತ್ಯವೆಂದು ಹೇಳಿದ್ದಾರೆ.

ಆದರೆ, ಟ್ರಂಪ್ ಅವರ ಈ ನಡೆ ಉಕ್ರೇನ್ ಮೇಲೆ ಬೆದರಿಕೆ ಹಾಕಿ, ಯುದ್ಧ ನಿಲ್ಲಿಸುವ ನೆಪದಲ್ಲಿ ಲಾಭ ಪಡೆಯುವುದು ಮತ್ತು ರಷ್ಯಾ ಪರ ವಕಾಲತ್ತು ವಹಿಸಿದಂತೆ ಕಾಣುತ್ತಿದೆ.

ಜರ್ಮನಿ ಚುನಾವಣೆ | ಕನ್ಸರ್ವೇಟಿವ್‌ ಮೈತ್ರಿಕೂಟಕ್ಕೆ ಗೆಲುವು : ಫ್ರೆಡ್ರಿಕ್ ಮರ್ಝ್ ಹೊಸ ಚಾನ್ಸೆಲರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಲ್ವರು ಬಾಲಕರಿಂದ ಬಾಲಕಿಗೆ ಕಿರುಕುಳ ಆರೋಪ : ‘ಉತ್ತಮ ಸಂಸ್ಕಾರ ಕಲಿಸಿಲ್ಲ’ ಎಂದು ತಾಯಂದಿರನ್ನು ಬಂಧಿಸಿದ ಪೊಲೀಸರು!

ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಾಲ್ವರು ಬಾಲಕರ ವಿರುದ್ಧ ಬಾಲಕಿಗೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದ್ದು, ಪೊಲೀಸರು ಬಾಲಕರ ತಾಯಂದಿರನ್ನು 'ಪ್ರಿವೆಂಟಿವ್ ಅರೆಸ್ಟ್' ಮಾಡಿದ್ದಾರೆ ಎಂದು indianexpress.com ಶನಿವಾರ (ಡಿ.20) ವರದಿ...

ಎಸ್‌ಐಆರ್‌: ಸ್ಟಾಲಿನ್ ಅವರ ಕೊಳತ್ತೂರು ಕ್ಷೇತ್ರದಲ್ಲಿ 1 ಲಕ್ಷ ಮತದಾರ ಹೆಸರು ಕರಡು ಮತದಾರರ ಪಟ್ಟಿಯಲ್ಲಿ ಡಿಲೀಟ್

ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಕೊಳತ್ತೂರು ಕ್ಷೇತ್ರದಿಂದ 1,03,812 ಕ್ಕೂ ಹೆಚ್ಚು ಮತದಾರರ ಹೆಸರು ತೆಗೆದುಹಾಕಲಾಗಿದೆ. ಇದು ತಮಿಳುನಾಡಿನಲ್ಲಿ ರಾಜ್ಯಾದ್ಯಂತ ನಡೆದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಮತದಾರರ ಪಟ್ಟಿಯಲ್ಲಿನ ಅತಿದೊಡ್ಡ ಮತದಾರರ...

ಅಸ್ಸಾಂ : 15 ಮಂದಿಗೆ 24 ಗಂಟೆಯೊಳಗೆ ದೇಶ ತೊರೆಯಲು ಆದೇಶ : ಮಾಧ್ಯಮಗಳ ಮೂಲಕ ವಿಷಯ ತಿಳಿದುಕೊಂಡ ಕುಟುಂಬಸ್ಥರು

ಅಸ್ಸಾಂನ ನಾಗಾಂವ್ ಜಿಲ್ಲಾಡಳಿತವು 15 ಘೋಷಿತ ವಿದೇಶಿಯರಿಗೆ 24 ಗಂಟೆಗಳ ಒಳಗೆ ರಾಜ್ಯ ತೊರೆಯುವಂತೆ ಆದೇಶಿಸಿದ ಬಗ್ಗೆ ವರದಿಯಾಗಿದೆ. ಬುಧವಾರ (ಡಿ.17) ಜಿಲ್ಲಾಡಳಿತ ಈ ಆದೇಶ ನೀಡಿತ್ತು. ಆದರೆ, ಇದುವರೆಗೆ (ಡಿ.20) ಈ 15...

ಸಿರಿಯಾದ ಐಸಿಸ್ ಅಡಗುತಾಣಗಳ ಮೇಲೆ ಅಮೆರಿಕ ವಾಯುದಾಳಿ

ಕಳೆದ ವಾರ ಅಮೆರಿಕದ ಸಿಬ್ಬಂದಿ ಮೇಲೆ ನಡೆದ ಮಾರಕ ದಾಳಿಗೆ ಪ್ರತೀಕಾರವಾಗಿ ಅಮೆರಿಕವು ಮಧ್ಯ ಸಿರಿಯಾದಾದ್ಯಂತ ಡಜನ್‌ಗಟ್ಟಲೆ ಇಸ್ಲಾಮಿಕ್ ಸ್ಟೇಟ್ (ಐಎಸ್) ನೆಲೆಗಳ ಮೇಲೆ ವಾಯುದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 'ಆಪರೇಷನ್ ಹಾಕೈ...

16 ಲಕ್ಷಕ್ಕೂ ಹೆಚ್ಚು ಕಾರ್ಮಿಕರನ್ನು ‘ಮನರೇಗಾ’ ಪಟ್ಟಿಯಿಂದ ಕೈಬಿಟ್ಟ ಕೇಂದ್ರ ಸರ್ಕಾರ: ವರದಿ

ಯುಪಿಎ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಹೆಸರನ್ನು ಬದಲಿಸಲು ಪ್ರಯತ್ನಿಸುವ 'ವಿಕ್ಷಿತ್ ಭಾರತ್ - ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (ವಿಬಿ–ಜಿ...

ಅಮೆರಿಕದ ಬಹು ನಿರೀಕ್ಷಿತ ‘ಎಪ್‌ಸ್ಟೀನ್ ಫೈಲ್ಸ್’ ಬಿಡುಗಡೆ : ಬಿಲ್ ಕ್ಲಿಂಟನ್, ಮೈಕಲ್ ಜಾಕ್ಸನ್ ಸೇರಿದಂತೆ ಪ್ರಮುಖರ ಫೋಟೋಗಳು ಬಹಿರಂಗ

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ(ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಕೆಲ ದಾಖಲೆಗಳನ್ನು...

ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

'ಭಾರತದ ಮುಸ್ಲಿಮರು, ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ವೈಯಕ್ತಿಕ ಮತ್ತು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು' ಎಂದು ಜಮಾಅತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಅವರು ಒತ್ತಾಯಿಸಿದರು. ಕೋಮು ಸಾಮರಸ್ಯ ಇಲಾಖೆಯು ಆಯೋಜಿಸಿದ್ದ 'ಅಖಿಲ...

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...