Homeಅಂತರಾಷ್ಟ್ರೀಯ'ರಷ್ಯಾ ನಿರ್ಬಂಧ ಮಸೂದೆ' ಅಂಗೀಕರಿಸಿದ ಅಮೆರಿಕ ಸೆನೆಟ್: ಭಾರತದ ಮೇಲೆ ಶೇ. 100ರಷ್ಟು ಸುಂಕ ವಿಧಿಸುವ...

‘ರಷ್ಯಾ ನಿರ್ಬಂಧ ಮಸೂದೆ’ ಅಂಗೀಕರಿಸಿದ ಅಮೆರಿಕ ಸೆನೆಟ್: ಭಾರತದ ಮೇಲೆ ಶೇ. 100ರಷ್ಟು ಸುಂಕ ವಿಧಿಸುವ ಎಚ್ಚರಿಕೆ

- Advertisement -
- Advertisement -

ಉಕ್ರೇನ್ ವಿರುದ್ಧದ ಯುದ್ಧಕ್ಕೆ ಆರ್ಥಿಕ ನೆರವು ಸಿಗದಂತೆ ಮಾಡಲು, ರಷ್ಯಾದಿಂದ ಪೆಟ್ರೋಲಿಯಂ ಉತ್ಪನ್ನಗಳನ್ನು ಹೆಚ್ಚಾಗಿ ಖರೀದಿಸುವ ಭಾರತ ಮತ್ತು ಚೀನಾದಂತಹ ಪ್ರಮುಖ ದೇಶಗಳನ್ನು ಗುರಿಯಾಗಿಸಿಕೊಂಡು ಅಮೆರಿಕದ ಸೆನೆಟ್‌ ಬೃಹತ್‌ ಬೆಂಬಲದೊಂದಿಗೆ ಹೊಸ ಮಸೂದೆಯನ್ನು ಅಂಗೀಕರಿಸಿದೆ.

‘ಲಿಂಡ್ಸೆ ಒ ಗ್ರಾಹಂ ಸಂಕ್ಷನ್ ರಷ್ಯಾ ಅಂಡ್ ಇರಾನ್ ಆಕ್ಟ್ ಆಫ್ 2026’ ಎಂದು ಮರುನಾಮಕರಣ ಮಾಡಲಾದ ಈ ಮಸೂದೆಯು ಸೆನೆಟ್‌ನಲ್ಲಿ 86-11 ಮತಗಳ ಬಹುಮತದಿಂದ ಅನುಮೋದನೆ ಪಡೆದುಕೊಂಡಿದೆ.

ಈ ಕಾಯ್ದೆಯು ರಷ್ಯಾದಿಂದ ಅತಿ ಹೆಚ್ಚು ತೈಲ ಮತ್ತು ಅನಿಲ ಆಮದು ಮಾಡಿಕೊಳ್ಳುವ ಮೊದಲ ಐದು ದೇಶಗಳ ಸರಕುಗಳ ಮೇಲೆ ಶೇಕಡಾ 100ರಷ್ಟು ತೆರಿಗೆ (ತರೀಫ್) ವಿಧಿಸುವ ಅಧಿಕಾರವನ್ನು ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಅವರಿಗೆ ನೀಡುತ್ತದೆ.

ಪ್ರಸ್ತುತ ಚೀನಾ, ಭಾರತ, ಅಜರ್‌ಬೈಜಾನ್, ಹಂಗೇರಿ ಮತ್ತು ಸ್ಲೊವಾಕಿಯಾ ದೇಶಗಳು ರಷ್ಯಾದಿಂದ ಅತಿ ಹೆಚ್ಚು ತೈಲ ಮತ್ತು ಅನಿಲವನ್ನು ಆಮದು ಮಾಡಿಕೊಳ್ಳುತ್ತಿರುವ ಪ್ರಮುಖ ಐದು ರಾಷ್ಟ್ರಗಳಾಗಿವೆ.

ರಷ್ಯಾ ಮೇಲಿನ ನಿರ್ಬಂಧಗಳ ಜೊತೆಗೆ, ಇರಾನ್ ಶಕ್ತಿ (ಎನರ್ಜಿ) ಕ್ಷೇತ್ರದಲ್ಲಿ ಹೂಡಿಕೆ ಮಾಡುವ ಕಂಪನಿಗಳ ಮೇಲೆ ದಂಡ ವಿಧಿಸುವ ‘ಇರಾನ್ ನಿರ್ಬಂಧಗಳ ಕಾಯ್ದೆ 1996’ರ ಗಡುವನ್ನು 2031ರವರೆಗೆ ವಿಸ್ತರಿಸಲು ಈ ಮಸೂದೆಯಲ್ಲಿ ಪ್ರಸ್ತಾಪಿಸಲಾಗಿದೆ.

ದ್ವಿಪಕ್ಷೀಯ ಬೆಂಬಲ ಹೊಂದಿದ್ದ ಈ ಮಸೂದೆಯನ್ನು ಜುಲೈ 11 ರಂದು ನಿಧನರಾದ ರಿಪಬ್ಲಿಕನ್ ಸಂಸದ ಲಿಂಡ್ಸೆ ಗ್ರಾಹಂ ಮತ್ತು ಡೆಮಾಕ್ರಟ್ ನಾಯಕ ರಿಚರ್ಡ್ ಬ್ಲುಮೆಂಥಾಲ್ ಜಂಟಿಯಾಗಿ ರೂಪಿಸಿದ್ದರು. ಕೀವ್‌ಗೆ ಪ್ರವಾಸ ಕೈಗೊಂಡ ಬೆನ್ನಲ್ಲೇ ಇದ್ದಕ್ಕಿದ್ದಂತೆ ನಿಧನರಾದ ಗ್ರಾಹಂ ಅವರ ಸ್ಮರಣಾರ್ಥ ಮತ್ತು ಉಕ್ರೇನ್‌ಗೆ ಅವರ ಬೆಂಬಲ ಗೌರವಿಸಿ, ಎಲ್ಲಾ ಪಕ್ಷಗಳ ನಾಯಕರು ಒಗ್ಗಟ್ಟಿನಿಂದ ಈ ಮಸೂದೆಯನ್ನು ಅಂಗೀಕರಿಸಿದ್ದಾರೆ.

“ರಷ್ಯಾದ ಆರ್ಥಿಕತೆಯನ್ನು ಜೀವಂತವಾಗಿಟ್ಟಿರುವ ಪ್ರಮುಖ ದೇಶಗಳಿಗೆ ಈ ಮಸೂದೆಯು ಒಂದು ಸ್ಪಷ್ಟ ಆಯ್ಕೆಯನ್ನು ನೀಡುತ್ತದೆ. ಅಮೆರಿಕದೊಂದಿಗೆ ವ್ಯವಹಾರ ಮಾಡಬೇಕೋ ಅಥವಾ ರಷ್ಯಾದಿಂದ ಅಗ್ಗದ ಇಂಧನವನ್ನು ಖರೀದಿಸಬೇಕೋ ಎಂಬುದನ್ನು ಆ ದೇಶಗಳೇ ತೀರ್ಮಾನಿಸಬೇಕು” ಎಂದು ಲಿಂಡ್ಸೆ ಗ್ರಾಹಂ ನಿಧನದ ನಂತರ ಅವರ ಸ್ಥಾನಕ್ಕೆ ನೇಮಕಗೊಂಡ ಅವರ ಸಹೋದರಿ ಡಾರ್ಲಿನ್ ಗ್ರಾಹಂ ಹೇಳಿದ್ದಾರೆ.

ಇಷ್ಟೇ ಅಲ್ಲದೆ, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತು ಅಲ್ಲಿನ ಪ್ರಭಾವಿ ಉದ್ಯಮಿಗಳು ಹಾಗೂ ಹಣಕಾಸು ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ಅವರ ಮೇಲೆಯೂ ನಿರ್ಬಂಧಗಳನ್ನು ವಿಧಿಸಲು ಈ ಮಸೂದೆ ಯತ್ನಿಸುತ್ತದೆ.

ಮತದಾನದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಬ್ಲುಮೆಂಥಾಲ್, “ನಾವು ಸಾಧಿಸಿರುವುದನ್ನು ನೋಡಿ ಗ್ರಾಹಂ ಖಂಡಿತ ಹೆಮ್ಮೆಪಡುತ್ತಿದ್ದರು. ಉಕ್ರೇನ್‌ನ ಸ್ವತಂತ್ರ ಜನರ ವಿರುದ್ಧ ನಡೆಯುತ್ತಿರುವ ಈ ಕ್ರೂರ ಯುದ್ಧಕ್ಕೆ ಕುಮ್ಮಕ್ಕು ನೀಡುವ ಪ್ರತಿಯೊಬ್ಬರನ್ನು ಈ ಕಠಿಣ ನಿರ್ಬಂಧಗಳು ಮತ್ತು ಸುಂಕಗಳು ತಡೆಯಲಿವೆ” ಎಂದು ತಿಳಿಸಿದರು.

ಆದರೆ, ಡೊನಾಲ್ಡ್ ಟ್ರಂಪ್ ಅವರು ಈಗಾಗಲೇ ತಮ್ಮ ವ್ಯಾಪಾರ ನೀತಿಯಲ್ಲಿ ಸುಂಕ ಹೆಚ್ಚಳವನ್ನು ಅಸ್ತ್ರವಾಗಿ ಬಳಸುತ್ತಿದ್ದು, ಈ ಮಸೂದೆಯು ಅವರಿಗೆ ಮತ್ತಷ್ಟು ಸುಂಕ ವಿಧಿಸುವ ಹೊಸ ಅಧಿಕಾರ ನೀಡಲಿದೆ ಎಂದು ಕೆಲ ಡೆಮಾಕ್ರಟಿಕ್ ನಾಯಕರು ಎಚ್ಚರಿಸಿದ್ದಾರೆ.

ಈ ಮಸೂದೆಯು ಈಗ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್ (ಕೆಳಮನೆ) ಮುಂದಿನ ಅನುಮೋದನೆಗೆ ಹೋಗಲಿದ್ದು, ಆಗಸ್ಟ್ 31 ರಂದು ಸದನ ಸಮಾವೇಶಗೊಂಡಾಗ ಚರ್ಚೆಗೆ ಬರಲಿದೆ.

ಡೆಮಾಕ್ರಟಿಕ್ ಸಂಸದರಾದ ಮೆಕ್ಸ್ ಮತ್ತು ಡಾನ್ ಬೇಯರ್ ಈ ಶಾಸನವನ್ನು ಟೀಕಿಸಿದ್ದು, “ಈ ಕಾಯ್ದೆಯು ಅಧ್ಯಕ್ಷರಿಗೆ ವ್ಯಾಪಕ ಸುಂಕ ವಿಧಿಸುವ ಅಧಿಕಾರವನ್ನು ನೀಡುತ್ತದೆ, ಇದನ್ನು ಟ್ರಂಪ್ ಅವರು ಆದೇಶದಂತೆ ಮತ್ತೆ ದುರುಪಯೋಗಪಡಿಸಿಕೊಳ್ಳಬಹುದು” ಎಂದಿದ್ದಾರೆ.

“ಉಕ್ರೇನ್‌ಗೆ ಬೆಂಬಲ ನೀಡುವ ಮತ್ತು ರಷ್ಯಾವನ್ನು ಶಿಕ್ಷಿಸುವ ನಮ್ಮ ಸೆನೆಟ್ ಸಹೋದ್ಯೋಗಿಗಳ ತುರ್ತು ಪ್ರಯತ್ನವನ್ನು ನಾವು ಸ್ವಾಗತಿಸುತ್ತೇವೆ. ಆದರೆ ಈ ಮಸೂದೆಯಿಂದ ಆ ಗುರಿ ತಲುಪಲು ಸಾಧ್ಯವಿಲ್ಲ. ಬದಲಾಗಿ, ರಷ್ಯಾವನ್ನು ಹೊಣೆಗಾರರನ್ನಾಗಿ ಮಾಡುವುದರಿಂದ ಟ್ರಂಪ್ ತಪ್ಪಿಸಿಕೊಳ್ಳಲು ಮತ್ತು ತಮ್ಮ ಹಾನಿಕಾರಕ ವ್ಯಾಪಾರ ಯುದ್ಧದಲ್ಲಿ ಮತ್ತಷ್ಟು ಸುಂಕಗಳನ್ನು ವಿಧಿಸುವುದಕ್ಕೆ ಇದು ರಹದಾರಿಯಾಗಲಿದೆ. ಅಂತಿಮವಾಗಿ ಇದರ ಹೊೆಯನ್ನು ಅಮೆರಿಕದ ಜನರೇ ಹೊರಬೇಕಾಗುತ್ತದೆ” ಎಂದು ಇಬ್ಬರೂ ನಾಯಕರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಯಚೂರು ದಲಿತ ದೌರ್ಜನ್ಯ: ಪ್ರಕರಣಗಳನ್ನು CIDಗೆ ಒಪ್ಪಿಸುವಂತೆ ಆಗ್ರಹಿಸಿ ಗೃಹ ಸಚಿವರನ್ನು ಭೇಟಿಯಾದ ನಿಯೋಗ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ದಲಿತರ ಮೇಲೆ ಸಾಲು ಸಾಲು ದೌರ್ಜನ್ಯ, ಕೊಲೆ ಹಾಗೂ ಅತ್ಯಾಚಾರದಂತಹ ಭೀಕರ ಕೃತ್ಯಗಳು ಹೆಚ್ಚಾಗುತ್ತಿರುವುದನ್ನು ತೀವ್ರವಾಗಿ ಖಂಡಿಸಿ, ದಲಿತ ಹಕ್ಕುಗಳ ಹೋರಾಟಗಾರರ ಹಾಗೂ ಪ್ರಮುಖ ಮುಖಂಡರ ನಿಯೋಗವು ಗೃಹ...

ಶಾರ್ಜೀಲ್ ಇಮಾಮ್‌ಗೆ 7 ದಿನಗಳ ಮಧ್ಯಂತರ ಜಾಮೀನು ಮಂಜೂರು

ವಿದ್ಯಾರ್ಥಿ ಹೋರಾಟಗಾರ ಶಾರ್ಜೀಲ್ ಇಮಾಮ್‌ಗೆ ಅವರ ಸೋದರಸಂಬಂಧಿಯ ಮದುವೆಯಲ್ಲಿ ಪಾಲ್ಗೊಳ್ಳಲು ದೆಹಲಿ ನ್ಯಾಯಾಲಯವು ಏಳು ದಿನಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಈ ಜಾಮೀನು ಅಕ್ಟೋಬರ್ 4 ರಿಂದ ಅಕ್ಟೋಬರ್ 10 ರವರೆಗೆ ಇರಲಿದೆ...

ಎಬಿವಿಪಿ ಒತ್ತಡಕ್ಕೆ ಮುಸ್ಲಿಂ ಪ್ರಾಧ್ಯಾಪಕಿ ರಾಜೀನಾಮೆ; ಕಾಲೇಜು ಆವರಣ ‘ಶುದ್ಧೀಕರಣ’ ಮಾಡಿದ ಬಲಪಂಥೀಯ ಗುಂಪು

ಕೋಲ್ಕತ್ತಾದ ಸುರೇಂದ್ರನಾಥ ಕಾಲೇಜಿನ ಮುಸ್ಲಿಂ ಪ್ರಾಧ್ಯಾಪಕಿ ಮೊಹಮ್ಮದಿ ತರನ್ನುಮ್ ಅವರನ್ನು ಹಾಜರಾತಿ ವಿಚಾರಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್ 11ರಂದು ರಾಜೀನಾಮೆ ನೀಡುವಂತೆ ಒತ್ತಾಯಿಸಲಾಗಿದೆ. ಇದಾದ ಬಳಿಕ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಸದಸ್ಯರು...

SIR ಪರಿಶೋಧ ಹಾಗೂ ಪ್ರತಿರೋಧ ಪ್ರವಾಸಕ್ಕೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನಲ್ಲಿ ಚಾಲನೆ: ಸಿಪಿಐ(ಎಂ) ಬೆಂಬಲ

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ 'SIR ವಿರೋಧಿ ಕರ್ನಾಟಕ', ನಾಗರಿಕ ಮತಕಾವಲು ಸಮಿತಿ, ಜಾತ್ಯತೀತ ಪಕ್ಷಗಳು ಹಾಗೂ ವಿವಿಧ ನಾಗರಿಕ ಸಂಘಟನೆಗಳ...

ಪಶ್ಚಿಮ ಬಂಗಾಳ: ಸರ್ಕಾರದ ಜೊತೆ ಇರಬೇಕಾದರೆ ಎಲೆಕ್ಷನ್ ‘ಟೆಸ್ಟ್’ನಲ್ಲಿ ಗೆಲ್ಲಿ, ಮುಸ್ಲಿಮರಿಗೆ ಸುವೇಂದು ಅಧಿಕಾರಿ ಎಚ್ಚರಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರು ನಂದಿಗ್ರಾಮ ಮತ್ತು ರೆಜಿನಗರ ಕ್ಷೇತ್ರಗಳ ಮುಂಬರುವ ಉಪಚುನಾವಣೆಯನ್ನು ಅಲ್ಪಸಂಖ್ಯಾತರಿಗೆ ಒಂದು ‘ಪರೀಕ್ಷೆ’ ಎಂದು ಕರೆದಿರುವುದು ರಾಜಕೀಯ ವಲಯದಲ್ಲಿ ತೀವ್ರ ವಿವಾದ ಹಾಗೂ ಕಳವಳಕ್ಕೆ ಕಾರಣವಾಗಿದೆ....

ಮಹಿಳೆಯರ ಮೇಲಿನ ದಾಳಿಗಳು ಮತ್ತಷ್ಟು ಹಿಂಸಾತ್ಮಕವಾಗುತ್ತಿವೆ: ಪ್ರಿಯಾಂಕಾ ಗಾಂಧಿ

ದೆಹಲಿ ಮತ್ತು ಬಿಹಾರದಲ್ಲಿ ಮಹಿಳೆಯರ ಮೇಲೆ ಇತ್ತೀಚೆಗೆ ನಡೆದ ಲೈಂಗಿಕ ದೌರ್ಜನ್ಯಗಳ ಬಗ್ಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಕಳವಳ ವ್ಯಕ್ತಪಡಿಸಿದ್ದು, ಇಂತಹ ದಾಳಿಗಳು ಹೆಚ್ಚಾಗುತ್ತಿರುವುದು ಮಾತ್ರವಲ್ಲದೆ ಇನ್ನಷ್ಟು ಹಿಂಸಾತ್ಮಕವಾಗುತ್ತಿವೆ...

ಜಮುಯಿ ಅಪ್ರಾಪ್ತರ ಮೇಲಿನ ದೌರ್ಜನ್ಯ ಪ್ರಕರಣ: ಎನ್‌ಕೌಂಟರ್ ಬಳಿಕ ಪ್ರಮುಖ ಆರೋಪಿ ನಂದನ್ ಯಾದವ್ ಬಂಧನ; 7 ಮಂದಿಯಲ್ಲಿ 5 ಮಂದಿ ವಶಕ್ಕೆ

ಪಾಟ್ನಾ: ಬಿಹಾರದ ಜಮುಯಿ ಜಿಲ್ಲೆಯಲ್ಲಿ ಕೋಚಿಂಗ್‌ ತರಗತಿಯಿಂದ ಮನೆಗೆ ಮರಳುತ್ತಿದ್ದ ಅಪ್ರಾಪ್ತ ಬಾಲಕಿ ಮತ್ತು ಬಾಲಕನನ್ನು ತಡೆದು ಹಲ್ಲೆ ಮಾಡಿ, ಕಿರುಕುಳ ನೀಡಿದ ಪ್ರಕರಣದಲ್ಲಿ ಪೊಲೀಸರು ಪ್ರಮುಖ ಆರೋಪಿಗಳ ಪತ್ತೆಗಾಗಿ ಕಾರ್ಯಾಚರಣೆ ತೀವ್ರಗೊಳಿಸಿದ್ದಾರೆ....

ಬಿಹಾರ|ಸಭ್ಯ ರೀತಿಯಲ್ಲಿ ಅನೈತಿಕ ಪೊಲೀಸ್‌ಗಿರಿ ಮಾಡಿ: ಬಿಜೆಪಿ ಸಚಿವೆ ಶ್ರೇಯಸಿ ಸಿಂಗ್

ಬಿಹಾರದ ಜಮುಯಿ ಜಿಲ್ಲೆಯಲ್ಲಿ ಯುವಕ ಮತ್ತು ಯುವತಿಗೆ ಗುಂಪೊಂದು ಸಾರ್ವಜನಿಕವಾಗಿ ಕಿರುಕುಳ ನೀಡಿದ ಘಟನೆಯನ್ನು ಖಂಡಿಸುವ ಭರದಲ್ಲಿ, ‘ಅನೈತಿಕ ಪೊಲೀಸ್‌ಗಿರಿಯನ್ನು ಹೆಚ್ಚು ಸಭ್ಯ ಮತ್ತು ಘನತೆಯುತ ರೀತಿಯಲ್ಲಿ ಮಾಡಬಹುದು’ ಎಂದು ಬಿಹಾರದ ಬಿಜೆಪಿ...

ಭೋಪಾಲ್: ಮಕ್ಕಳ ಸಾವಿನ ಬಗ್ಗೆ ವರದಿ ಮಾಡುತ್ತಿದ್ದಾಗ ಪೊಲೀಸರು ಹೋಟೆಲ್‌ಗಳಿಂದ ಹೊರಹಾಕಿದರು ಎಂದು ಖ್ಯಾತ ಯೂಟ್ಯೂಬರ್ ಕಾವ್ಯ ಕರ್ನಾಟಕ್ ಆರೋಪ

ಭೋಪಾಲ್: ಮಧ್ಯಪ್ರದೇಶದ ಬಾಲಾಘಾಟ್ ಜಿಲ್ಲೆಯಲ್ಲಿ ಮಕ್ಕಳ ಸಾವಿನ ಕುರಿತು ವರದಿ ಮಾಡಲು ತೆರಳಿದ್ದ ತಮ್ಮ ತಂಡವನ್ನು ಎರಡು ಹೋಟೆಲ್‌ಗಳಿಂದ ಹೊರಹೋಗುವಂತೆ ಒತ್ತಾಯಿಸಲಾಯಿತು. ಪೊಲೀಸರು ಹೋಟೆಲ್‌ಗಳ ದಾಖಲೆಗಳನ್ನು ಪರಿಶೀಲಿಸುತ್ತಿದ್ದು, ದೆಹಲಿಯಿಂದ ಬಂದ ಪತ್ರಕರ್ತರನ್ನು ಅಲ್ಲಿಂದ...

DELHI SIR |’ನೋಟಿಸ್‌ಗಳನ್ನು ಯಾಂತ್ರಿಕವಾಗಿ ನೀಡಿದಂತಿದೆ, ಲಾಜಿಕಲ್ ಡಿಸ್ಕ್ರಿಪೆನ್ಸಿ ಬಗ್ಗೆ ಸ್ಪಷ್ಟನೆ ಅಗತ್ಯ : ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್‌

ದೆಹಲಿಯ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಮಯದಲ್ಲಿ ಮತದಾರರಿಗೆ ನೀಡಲಾದ ನೋಟಿಸ್‌ಗಳು 'ಬಹುತೇಕ ಯಾಂತ್ರಿಕವಾಗಿ' ಜಾರಿಯಾದಂತೆ ಕಂಡುಬರುತ್ತಿವೆ ಮತ್ತು 'ತಾರ್ಕಿಕ ವ್ಯತ್ಯಾಸ'ವನ್ನು ಗುರುತಿಸಲು ಬಳಸಲಾದ ಆಧಾರದ ಬಗ್ಗೆ ಸ್ಪಷ್ಟೀಕರಣದ ಅಗತ್ಯವಿದೆ...