Homeಅಂತರಾಷ್ಟ್ರೀಯಇರಾನ್ ವಿರುದ್ಧ ಯುದ್ಧ | ಟ್ರಂಪ್ ಅಧಿಕಾರ ತಡೆಯುವ ಮಸೂದೆ ಮಂಡಿಸಿದ ಯುಎಸ್ ಸೆನೆಟರ್

ಇರಾನ್ ವಿರುದ್ಧ ಯುದ್ಧ | ಟ್ರಂಪ್ ಅಧಿಕಾರ ತಡೆಯುವ ಮಸೂದೆ ಮಂಡಿಸಿದ ಯುಎಸ್ ಸೆನೆಟರ್

- Advertisement -
- Advertisement -

ಸಂಸತ್‌ನ ಅನುಮತಿಯಿಲ್ಲದೆ ಇರಾನ್ ವಿರುದ್ಧದ ಮಿಲಿಟರಿ ಕಾರ್ಯಾಚರಣೆಗಳಿಗೆ ಫೆಡರಲ್ ನಿಧಿಗಳನ್ನು ಬಳಸುವ ಟ್ರಂಪ್ ಅಧಿಕಾರ ತಡೆಯುವ ಮಸೂದೆಯನ್ನು ಅಮೆರಿಕದ ಸೆನೆಟರ್ ಬರ್ನಿ ಸ್ಯಾಂಡರ್ಸ್ ಸೋಮವಾರ (ಜೂ.16) ಮಂಡಿಸಿದ್ದಾರೆ.

“ಇರಾನ್ ವಿರುದ್ಧ ಯುದ್ಧ ಬೇಡ ಮಸೂದೆಯು” ಯುದ್ಧ ಅಧಿಕಾರ ಕಾಯ್ದೆ ಮತ್ತು ಅನ್ವಯವಾಗುವ ಯುಎಸ್ ಕಾನೂನಿನಲ್ಲಿ ಪ್ರತಿಪಾದಿಸಲಾದ ಸ್ವರಕ್ಷಣೆಗಾಗಿ ಒಂದು ವಿನಾಯಿತಿಯನ್ನು ಒಳಗೊಂಡಿದೆ.

ಸೆನೆಟರ್ ಪೀಟರ್ ವೆಲ್ಚ್, ಎಲಿಜಬೆತ್ ವಾರೆನ್, ಜೆಫ್ ಮರ್ಕ್ಲಿ, ಕ್ರಿಸ್ ವ್ಯಾನ್ ಹೊಲೆನ್, ಎಡ್ ಮಾರ್ಕಿ, ಟ್ಯಾಮಿ ಬಾಲ್ಡ್ವಿನ್ ಮತ್ತು ಟೀನಾ ಸ್ಮಿತ್ ಅವರು ಸ್ಯಾಂಡರ್ಸ್ ಅವರ ಮಸೂದೆಯನ್ನು ಬೆಂಬಲಿಸಿದ್ಧಾರೆ.

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ “ಅಜಾಗರೂಕ ಮತ್ತು ಕಾನೂನುಬಾಹಿರ ದಾಳಿಗಳು ಅಂತಾರಾಷ್ಟ್ರೀಯ ಕಾನೂನನ್ನು ಉಲ್ಲಂಘಿಸುತ್ತವೆ ಮತ್ತು ಪ್ರಾದೇಶಿಕ ಯುದ್ಧವನ್ನು ಹುಟ್ಟುಹಾಕುವ ಅಪಾಯವನ್ನುಂಟುಮಾಡುತ್ತವೆ” ಎಂದು ಸ್ಯಾಂಡರ್ಸ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ನೆತನ್ಯಾಹು ಅವರ ಆಯ್ಕೆಯ ಯುದ್ಧಕ್ಕೆ ಅಮೆರಿಕವನ್ನು ಎಳೆಯಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಸ್ಪಷ್ಟಪಡಿಸಬೇಕು” ಎಂದು ಸ್ಯಾಂಡರ್ಸ್ ಹೇಳಿದ್ದಾರೆ. ಕಾಂಗ್ರೆಸ್‌ನ ಸ್ಪಷ್ಟ ಅನುಮತಿಯಿಲ್ಲದೆ ಮತ್ತೊಂದು “ದುಬಾರಿ ಯುದ್ಧ”ವನ್ನು ಕೈಗೊಳ್ಳಲು ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ “ಯಾವುದೇ ಅಧಿಕಾರ” ಇಲ್ಲ ಎಂದಿದ್ದಾರೆ.

“ಮಧ್ಯಪ್ರಾಚ್ಯದಲ್ಲಿ ಮತ್ತೊಂದು ಯುದ್ಧವು ಲೆಕ್ಕವಿಲ್ಲದಷ್ಟು ಜೀವಗಳನ್ನು ಬಲಿ ಪಡೆಯಬಹುದು, ಟ್ರಿಲಿಯನ್‌ಗಟ್ಟಲೆ ಡಾಲರ್‌ಗಳನ್ನು ವ್ಯರ್ಥ ಮಾಡಬಹುದು ಮತ್ತು ಇನ್ನೂ ಹೆಚ್ಚಿನ ಸಾವುಗಳು, ಹೆಚ್ಚಿನ ಸಂಘರ್ಷ ಮತ್ತು ಹೆಚ್ಚಿನ ಸ್ಥಳಾಂತರಕ್ಕೆ ಕಾರಣವಾಗಬಹುದು” ಎಂದು ಸ್ಯಾಂಡರ್ಸ್ ಹೇಳಿದ್ದಾರೆ.

ಜೂನ್ 13ರಂದು ಇಸ್ರೇಲ್ ಇರಾನ್ ಮೇಲೆ ನಡೆಸಿದ ಅನೀರಿಕ್ಷಿತ ದಾಳಿಯಿಂದ ಪ್ರಾರಂಭಗೊಂಡ ಎರಡೂ ದೇಶಗಳ ಸಂಘರ್ಷ ಐದನೇ ದಿನಕ್ಕೆ ಕಾಲಿಟ್ಟಿದೆ. ಇದರಿಂದ ನೂರಾರು ಜನರು ಸಾವಿಗೀಡಾಗಿದ್ದಾರೆ. ಸಾವಿರಾರು ಮಂದಿ ಗಾಯಗೊಂಡಿದ್ದಾರೆ.

ಇತರ ಸಂಘರ್ಷಗಳಂತೆ ಎರಡು ದೇಶಗಳ ಈ ಸಂಘರ್ಷದಲ್ಲಿ ಅಮೆರಿಕ ತಲೆ ಹಾಕಲು ಮುಂದಾಗಿದೆ. ಒಂದೆಡೆ ಶಾಂತಿಮಂತ್ರ ಜಪಿಸುವ ಯುಎಸ್ ಅಧ್ಯಕ್ಷ ಟ್ರಂಪ್, ಮತ್ತೊಂದೆಡೆ ಇರಾನ್‌ಗೆ ಎಚ್ಚರಿಕೆ ಕೊಡುವ ಮೂಲಕ ಪರೋಕ್ಷವಾಗಿ ಯುದ್ದಕ್ಕೆ ಬೆಂಬಲ ನೀಡುತ್ತಿದ್ದಾರೆ. ಗಾಝಾ, ಸಿರಿಯಾ ಇತರ ರಾಷ್ಟ್ರಗಳ ವಿಚಾರದಲ್ಲೂ ಅಮೆರಿಕ ವಿಶೇಷವಾಗಿ ಟ್ರಂಪ್ ಮಾಡಿರುವುದು ಇದನ್ನೇ ಆಗಿದೆ.

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಅಧಿಕಾರಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...