Homeಮುಖಪುಟಅಮೆರಿಕದಿಂದ ಇರಾನ್ ನಾಯಕರ ಹತ್ಯೆ ಬೆದರಿಕೆ ಖಂಡನೀಯ: ಸಿಪಿಎಂ

ಅಮೆರಿಕದಿಂದ ಇರಾನ್ ನಾಯಕರ ಹತ್ಯೆ ಬೆದರಿಕೆ ಖಂಡನೀಯ: ಸಿಪಿಎಂ

- Advertisement -
- Advertisement -

ನವದೆಹಲಿ: ಅಮೆರಿಕ ಮತ್ತು ಜಿ7 ರಾಷ್ಟ್ರಗಳು ಇರಾನ್ ವಿರುದ್ಧ ಅನುಸರಿಸುತ್ತಿರುವ ಆಕ್ರಮಣಕಾರಿ ಧೋರಣೆಯನ್ನು ಸಿಪಿಐ(ಎಂ) ಪಾಲಿಟ್‌ಬ್ಯೂರೋ ತೀವ್ರವಾಗಿ ಖಂಡಿಸಿದೆ. ಈ ಕ್ರಮಗಳು ಅಂತರರಾಷ್ಟ್ರೀಯ ಶಾಂತಿಗೆ ಅಪಾಯ ತಂದೊಡ್ಡುತ್ತವೆ ಎಂದು ಪಕ್ಷ ಸ್ಪಷ್ಟಪಡಿಸಿದೆ.

ಅಮೆರಿಕ ಅಧ್ಯಕ್ಷ ಟ್ರಂಪ್ ಅವರ ಹೇಳಿಕೆಗಳನ್ನು “ಆಕ್ರಮಣಕಾರಿ” ಎಂದು ಸಿಪಿಎಂ ಬಣ್ಣಿಸಿದ್ದು, ಇರಾನ್ ನಾಯಕರನ್ನು “ಸಾರ್ವಜನಿಕವಾಗಿ ಹತ್ಯೆ ಮಾಡುವ ಬೆದರಿಕೆ” ಹಾಕಿರುವುದು ಅತ್ಯಂತ ಖಂಡನೀಯ ಎಂದು ಹೇಳಿದೆ. ಕೆನಡಾದಲ್ಲಿ ನಡೆದ ಜಿ7 ರಾಷ್ಟ್ರಗಳ ಶೃಂಗಸಭೆಯ ಜಂಟಿ ಹೇಳಿಕೆಯು ಇಸ್ರೇಲ್‌ನ ಆಕ್ರಮಣಕಾರಿ ಕೃತ್ಯಗಳನ್ನು ನಿರ್ಲಕ್ಷಿಸಿ, ಇರಾನ್‌ನನ್ನೇ ದೂಷಿಸುತ್ತಿದೆ ಎಂದು ಎಡಪಕ್ಷ ತೀವ್ರವಾಗಿ ಟೀಕಿಸಿದೆ. ಟ್ರಂಪ್ ಅವರು ನೀಡುತ್ತಿರುವ ಪ್ರಚೋದನಕಾರಿ ಹೇಳಿಕೆಗಳು ಇಡೀ ಪಶ್ಚಿಮ ಏಷ್ಯಾ ಪ್ರದೇಶವನ್ನು ಯುದ್ಧ ಮತ್ತು ಅಸ್ಥಿರತೆಗೆ ತಳ್ಳುವ ಅಪಾಯವನ್ನುಂಟುಮಾಡುತ್ತಿವೆ ಎಂದು ಹೇಳಿಕೆ ಆರೋಪಿಸಿದೆ.

ಇರಾನ್‌ ಬೇಷರತ್ ಶರಣಾಗತಿಯಾಗಬೇಕೆಂದು ಟ್ರಂಪ್ ಬೆದರಿಕೆ ಹಾಕುತ್ತಿರುವುದು ಅತ್ಯಂತ ಖಂಡನೀಯ. ಅಮೆರಿಕದ ಸೇನಾ ನೌಕಾಪಡೆಗಳನ್ನು ಬೃಹತ್ತಾಗಿ ಸಜ್ಜುಗೊಳಿಸುತ್ತಿರುವುದು ಇಸ್ರೇಲ್‌ನೊಂದಿಗೆ ಸೇರಿಕೊಂಡು ಇರಾನ್ ಮೇಲೆ ನೇರ ದಾಳಿಗಳನ್ನು ಪ್ರಾರಂಭಿಸುವ ಸಿದ್ಧತೆಯನ್ನು ಸೂಚಿಸುತ್ತದೆ. ಈ ಬೆಳವಣಿಗೆಗಳು ಅತ್ಯಂತ ಅಪಾಯಕಾರಿ ಎಂದು ಸಿಪಿಎಂ ಹೇಳಿಕೆ ವಿವರಿಸಿದೆ. ಅಮೆರಿಕ ಮತ್ತು ಪಾಶ್ಚಿಮಾತ್ಯ ಸಾಮ್ರಾಜ್ಯಶಾಹಿಗಳು ಅಂತರರಾಷ್ಟ್ರೀಯ ಕಾನೂನುಗಳು ಮತ್ತು ಒಪ್ಪಂದಗಳನ್ನು ಸ್ಪಷ್ಟವಾಗಿ ಉಲ್ಲಂಘಿಸಿ, ಪಶ್ಚಿಮ ಏಷ್ಯಾದಲ್ಲಿ ತಮ್ಮ ಪ್ರಾಬಲ್ಯ ಸಾಧಿಸಲು ಇಸ್ರೇಲ್ ಅನ್ನು ಒಂದು ಏಜೆಂಟ್ ಆಗಿ ಬಳಸಿಕೊಳ್ಳುತ್ತಿವೆ ಎಂದು ಸಿಪಿಐ(ಎಂ) ಪ್ರತಿಪಾದಿಸಿದೆ.

ಜಿ7 ದೇಶಗಳ ನಾಯಕರು ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷವನ್ನು ಕಡಿಮೆ ಮಾಡಲು ಕೆನಡಾದಲ್ಲಿ ನಡೆದ ಶೃಂಗಸಭೆಯಲ್ಲಿ ಜಂಟಿ ಹೇಳಿಕೆಗೆ ಸಹಿ ಹಾಕಿದ್ದರೂ, ಇರಾನ್‌ಗೆ ಪರಮಾಣು ಬಾಂಬ್ ಹೊಂದಲು ಅವಕಾಶ ನೀಡಲಾಗುವುದಿಲ್ಲ ಎಂದು ಪುನರುಚ್ಚರಿಸಿದ್ದಾರೆ. “ಮಧ್ಯಪ್ರಾಚ್ಯದಲ್ಲಿ ಶಾಂತಿ ಮತ್ತು ಸ್ಥಿರತೆಗೆ ನಮ್ಮ ಬದ್ಧತೆಯನ್ನು ಪುನರುಚ್ಚರಿಸುತ್ತೇವೆ. ಇಸ್ರೇಲ್‌ಗೆ ತನ್ನನ್ನು ತಾನು ರಕ್ಷಿಸಿಕೊಳ್ಳುವ ಹಕ್ಕಿದೆ” ಎಂದು ಅವರು ಹೇಳಿದ್ದಾರೆ. ಆದರೆ, ಈ ಹೇಳಿಕೆಯು ಪರೋಕ್ಷವಾಗಿ ಇಸ್ರೇಲ್ ಇರಾನ್ ಮೇಲೆ ದಾಳಿ ಮಾಡಿ ಅದರ ನಾಯಕರನ್ನು ಹತ್ಯೆ ಮಾಡಿದ್ದನ್ನು ಬೆಂಬಲಿಸುತ್ತದೆ. ಇದು ಖಂಡನೀಯ ಎಂದು ಸಿಪಿಎಂ ತಿಳಿಸಿದೆ.

ಅಮೆರಿಕ ಮತ್ತು ಇಸ್ರೇಲ್‌ಗಳು ಇರಾನ್ ಮೇಲೆ ನಡೆಸುತ್ತಿರುವ ಯುದ್ಧವನ್ನು ನಿಲ್ಲಿಸುವಂತೆ ಒತ್ತಡ ಹೇರಲು ಅಂತರರಾಷ್ಟ್ರೀಯ ಸಮುದಾಯವು ತುರ್ತಾಗಿ ಕಾರ್ಯನಿರ್ವಹಿಸಬೇಕು ಎಂದು ಸಿಪಿಎಂ ಒತ್ತಾಯಿಸಿದೆ. ಅಲ್ಲದೆ, ಬಿಜೆಪಿ ನೇತೃತ್ವದ ಭಾರತ ಸರ್ಕಾರವು ತನ್ನ ಅಮೆರಿಕ-ಪರ, ಇಸ್ರೇಲ್-ಪರ ವಿದೇಶಾಂಗ ನೀತಿಯನ್ನು ತ್ಯಜಿಸಬೇಕು ಎಂದು ಪಕ್ಷ ಆಗ್ರಹಿಸಿದೆ.

ಕೆಲಸದ ಅವಧಿ ಹೆಚ್ಚಿಸಲು ಮುಂದಾದ ರಾಜ್ಯ ಸರ್ಕಾರ: ಕಾರ್ಮಿಕ ಸಂಘಟನೆಗಳಿಂದ ತೀವ್ರ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...