Homeಮುಖಪುಟಭಾರತದಲ್ಲಿ ಸಿಎಎ ಜಾರಿ: ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆ, ಅಮೆರಿಕ

ಭಾರತದಲ್ಲಿ ಸಿಎಎ ಜಾರಿ: ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆ, ಅಮೆರಿಕ

- Advertisement -
- Advertisement -

ಭಾರತದಲ್ಲಿ ಸಿಎಎ ಜಾರಿ ಕುರಿತು ಕೇಂದ್ರ ಸರಕಾರ ಹೊರಡಿಸಿರುವ ಅಧಿಸೂಚನೆಗೆ ಅಮೆರಿಕ ಮತ್ತು ವಿಶ್ವಸಂಸ್ಥೆ ಕಳವಳವನ್ನು ವ್ಯಕ್ತಪಡಿಸಿದೆ.

ಪೌರತ್ವ ತಿದ್ದುಪಡಿ ಕಾಯ್ದೆ ಅಥವಾ ಸಿಎಎ ಕಾಯ್ದೆಯು ಡಿಸೆಂಬರ್ 31, 2014ರೊಳಗೆ ಭಾರತಕ್ಕೆ ಆಗಮಿಸಿದ ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದ ಹಿಂದೂಗಳು, ಸಿಖ್ಖರು, ಜೈನರು, ಬೌದ್ಧರು, ಪಾರ್ಸಿಗಳು ಮತ್ತು ಕ್ರಿಶ್ಚಿಯನ್ನರು ಸೇರಿದಂತೆ ಮುಸ್ಲಿಮೇತರ ವಲಸಿಗರಿಗೆ ಭಾರತೀಯ ಪೌರತ್ವವನ್ನು ನೀಡುತ್ತದೆ.

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಹೈ ಕಮಿಷನರ್ ಕಚೇರಿಯ ವಕ್ತಾರರು ಮಂಗಳವಾರ ರಾಯಿಟರ್ಸ್‌ ಜೊತೆಗೆ ಈ ಬಗ್ಗೆ ಮಾತನಾಡಿದ್ದು, ಪೌರತ್ವ ತಿದ್ದುಪಡಿ ಕಾಯ್ದೆಯು ಮೂಲಭೂತವಾಗಿ ತಾರತಮ್ಯ ಸ್ವರೂಪದ್ದಾಗಿದೆ ಮತ್ತು ಭಾರತದ ಅಂತರರಾಷ್ಟ್ರೀಯ ಮಾನವ ಹಕ್ಕುಗಳ ಕಟ್ಟುಪಾಡುಗಳನ್ನು ಉಲ್ಲಂಘಿಸುತ್ತದೆ ಎಂದು ಹೇಳಿ ಕಳವಳವನ್ನು ವ್ಯಕ್ತಪಡಿಸಿದೆ.

ಸಿಎಎ ನಿಯಮಗಳು ಅಂತರಾಷ್ಟ್ರೀಯ ಮಾನವ ಹಕ್ಕುಗಳ ಕಾನೂನಿಗೆ ಅನುಗುಣವಾಗಿವೆಯೇ ಎಂಬುದನ್ನು ಅಧ್ಯಯನ ಮಾಡುತ್ತಿದ್ದೇವೆ ಎಂದು ವಿಶ್ವಸಂಸ್ಥೆ ಹೇಳಿದೆ. ಅಮೆರಿಕದ ಸ್ಟೇಟ್ ಡಿಪಾರ್ಟ್ಮೆಂಟ್ ಕೂಡ ನಿಯಮಗಳ ಅಧಿಸೂಚನೆಯ ಬಗ್ಗೆ ಕಳವಳ ವ್ಯಕ್ತಪಡಿಸಿದೆ ಮತ್ತು ಈ ಕಾಯಿದೆಯನ್ನು ಹೇಗೆ ಕಾರ್ಯಗತಗೊಳಿಸಲಾಗುತ್ತದೆ ಎಂದು ಮೇಲ್ವಿಚಾರಣೆ ಮಾಡುತ್ತಿದ್ದೇವೆ, ಧಾರ್ಮಿಕ ಸ್ವಾತಂತ್ರ್ಯಕ್ಕೆ ಗೌರವ ಮತ್ತು ಕಾನೂನಿನಡಿಯಲ್ಲಿ ಎಲ್ಲಾ ಸಮುದಾಯಗಳಿಗೆ ಸಮಾನತೆಯನ್ನು ನೀಡುವುದು ಮೂಲಭೂತ ಪ್ರಜಾಪ್ರಭುತ್ವದ ತತ್ವಗಳಾಗಿವೆ ಎಂದು ಅಮೆರಿಕದ ರಾಜ್ಯ ಇಲಾಖೆಯ ವಕ್ತಾರರು ಹೇಳಿದ್ದಾರೆ.

ಡಿಸೆಂಬರ್ 2019ರಲ್ಲಿ ಸಂಸತ್ತು ಅಂಗೀಕರಿಸಿದ ಪೌರತ್ವ ತಿದ್ದುಪಡಿ ಕಾಯಿದೆಯಲ್ಲಿ ಮುಸ್ಲಿಮರನ್ನು ಹೊರಗಿಟ್ಟಿರುವುದು ವ್ಯಾಪಕವಾಗಿ ಟೀಕೆಗೆ ಕಾರಣವಾಗಿದೆ. ಇದು 2019 ಮತ್ತು 2020ರಲ್ಲಿ ದೇಶಾದ್ಯಂತ ಭಾರೀ ಪ್ರತಿಭಟನೆಗೆ ಕಾರಣವಾಗಿತ್ತು. ಅಸ್ಸಾಂನಲ್ಲಿ ಎನ್‌ಆರ್‌ಸಿಯಂತೆ ನಾಗರಿಕರ ನೋಂದಣಿಯನ್ನು ಮಾಡಲು ರಾಷ್ಟ್ರವ್ಯಾಪಿ ಮುಂದಾದರೆ ಏನಾಗುತ್ತದೆ ಎಂಬುವುದು ಜನರಲ್ಲಿ ಭಯ ಮೂಡಿತ್ತು. ಅಸ್ಸಾಂನಲ್ಲಿ ಆರಂಭದಲ್ಲಿ 19ಲಕ್ಷಕ್ಕೂ ಹೆಚ್ಚು ಜನರನ್ನು ನಾಗರಿಕರ ಪಟ್ಟಿಯಿಂದ ಹೊರಗಿಡಲಾಗಿತ್ತು, ವರದಿಗಳ ಪ್ರಕಾರ, ಇದರಲ್ಲಿ ಕನಿಷ್ಠ 5 ಲಕ್ಷ ಹಿಂದೂಗಳು ಸೇರಿದ್ದಾರೆ. ಇದರಿಂದಾಗಿ ಸಿಎಎ ಎನ್‌ಆರ್‌ಸಿ ವಿರುದ್ಧ ದೇಶದಾದ್ಯಂತ ವ್ಯಾಪಕವಾದ ಪ್ರತಿಭಟನೆಗಳು ನಡೆದಿದ್ದವು.

ಸಿಎಎಗೆ ದೇಶದಲ್ಲಿ ವ್ಯಾಪಕವಾಗಿ ವಿರೋಧ ವ್ಯಕ್ತವಾಗಿತ್ತು. ವಿರೋಧ ಪಕ್ಷದ ನಾಯಕರು ಈ ಕಾಯ್ದೆಯನ್ನು ಟೀಕಿಸಿದ್ದರು, ಇದು ಮುಸ್ಲಿಮರ ವಿರುದ್ಧ ತಾರತಮ್ಯವನ್ನು ಹೊಂದಿದೆ ಎಂದು ಹೇಳಿದ್ದರು. ಫೆಬ್ರವರಿ 12ರಂದು ದ್ರಾವಿಡ ಮುನ್ನೇತ್ರ ಕಳಗಂ(ಡಿಎಂಕೆ) ನೇತೃತ್ವದ ತಮಿಳುನಾಡು ಸರ್ಕಾರವು ರಾಜ್ಯದಲ್ಲಿ ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು ಜಾರಿಗೆ ತರಲು ಎಂದಿಗೂ ಅನುಮತಿಸುವುದಿಲ್ಲ ಎಂದು ಹೇಳಿದೆ. ವಿವಿಧತೆಯಲ್ಲಿ ಏಕತೆ ಎಂಬ ಆದರ್ಶವು ದೇಶದಲ್ಲಿ ಗಂಭೀರ ಬೆದರಿಕೆಯನ್ನು ಎದುರಿಸುತ್ತಿರುವಾಗ ರಾಜ್ಯ ಸರ್ಕಾರವು ಕೋಮು ಸೌಹಾರ್ದತೆಯನ್ನು ಖಾತ್ರಿಪಡಿಸಲು ಬದ್ಧವಾಗಿದೆ ಎಂದು ತಮಿಳುನಾಡು ಸರಕಾರ ಹೇಳಿದೆ.

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೂಡ ಸಿಎಎ ಕಾಯ್ದೆಯನ್ನು ರಾಜ್ಯದಲ್ಲಿ ಜಾರಿಗೆ ತರುವುದಿಲ್ಲ ಎಂದು ಹೇಳಿದ್ದಾರೆ. ಲೋಕಸಭೆ ಚುನಾವಣೆ ಹಿನ್ನೆಲೆ ಬಿಜೆಪಿ ಈ ವಿಷಯದಲ್ಲಿ ರಾಜಕೀಯ ಮಾಡುತ್ತಿದೆ ಎಂದು ಮಮತಾ ಟೀಕಿಸಿದ್ದರು.

ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಅವರು ಸಿಎಎ ಬಗ್ಗೆ ವ್ಯಾಪಕವಾದ ವಿರೋಧವನ್ನು ವ್ಯಕ್ತಪಡಿಸಿದ್ದು, ಮುಸ್ಲಿಮರನ್ನು ಎರಡನೇ ದರ್ಜೆಯ ಪ್ರಜೆಗಳನ್ನಾಗಿಸುವ ಬಿಜೆಪಿಯ ಸಿದ್ದಾಂತದ ಭಾಗ ಎಂದು ಹೇಳಿದ್ದಾರೆ. ಕಿರುಕುಳಕ್ಕೊಳಗಾದ ಯಾರಿಗಾದರೂ ಆಶ್ರಯ ನೀಡಿ ಆದರೆ ಪೌರತ್ವವು ಧರ್ಮ ಅಥವಾ ರಾಷ್ಟ್ರೀಯತೆಯನ್ನು ಆಧರಿಸಿರಬಾರದು ಎಂದು ಹೇಳಿದ್ದರು.

ಇದನ್ನು ಓದಿ: ಸಿಎಎ: ಪೌರತ್ವ ಕಾಯ್ದೆ ಏನು ಹೇಳುತ್ತದೆ?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗಾಝಾದಲ್ಲಿ ಇಸ್ರೇಲ್‌ ನಡೆಸಿದ ಹತ್ಯಾಕಾಂಡವನ್ನು ಜಗತ್ತಿನ ಮುಂದೆ ಬಿಚ್ಚಿಟ್ಟ ಪ್ಯಾಲೆಸ್ತೀನ್‌ ಪತ್ರಕರ್ತರಿಗೆ ‘2024ರ ಯುನೆಸ್ಕೋ...

0
ಗಾಝಾದಲ್ಲಿ ಇಸ್ರೇಲ್‌ ನಡೆಸಿದ ಹತ್ಯಾಕಾಂಡದ ಬಗ್ಗೆ ವರದಿ ಮಾಡಿದ ಪ್ಯಾಲೆಸ್ತೀನ್ ಪತ್ರಕರ್ತರನ್ನು 2024ರ ಯುನೆಸ್ಕೋ/ಗಿಲ್ಲೆರ್ಮೊ ಕ್ಯಾನೊ ವರ್ಲ್ಡ್ ಪ್ರೆಸ್ ಫ್ರೀಡಂ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಅಂತರಾಷ್ಟ್ರೀಯ ಮಾಧ್ಯಮ ವೃತ್ತಿಪರ ತೀರ್ಪುಗಾರರ ಶಿಫಾರಸಿನ ಮೇರೆಗೆ ವಿಜೇತರನ್ನು...