Homeಮುಖಪುಟಅಮೆರಿಕ ಇನ್ನು ಮುಂದೆ ಗಂಡು, ಹೆಣ್ಣು ಎಂಬ ಎರಡು ಲಿಂಗಗಳನ್ನು ಮಾತ್ರ ಗುರುತಿಸಲಿದೆ : ಪ್ರಮಾಣ...

ಅಮೆರಿಕ ಇನ್ನು ಮುಂದೆ ಗಂಡು, ಹೆಣ್ಣು ಎಂಬ ಎರಡು ಲಿಂಗಗಳನ್ನು ಮಾತ್ರ ಗುರುತಿಸಲಿದೆ : ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಟ್ರಂಪ್ ಘೋಷಣೆ

- Advertisement -
- Advertisement -

ಅಮೆರಿಕದ 47ನೇ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಪ್ರಮುಖ ಘೋಷಣೆ ಮಾಡಿದ ಡೊನಾಲ್ಡ್ ಟ್ರಂಪ್, ಪುರುಷ ಮತ್ತು ಮಹಿಳೆ ಎಂಬ ಎರಡು ಲಿಂಗಗಳನ್ನು ಮಾತ್ರ ಗುರುತಿಸುವುದು ಅಮೆರಿಕದ ಅಧಿಕೃತ ನೀತಿಯಾಗಲಿದೆ ಎಂದು ಘೋಷಿಸಿದರು. ನಮ್ಮ ಆಡಳಿತವು ‘ಅರ್ಹತೆ ಆಧಾರಿತ’ ಮತ್ತು ‘ವರ್ಣರಹಿತ ಸಮಾಜ’ವನ್ನು ನಿರ್ಮಿಸಲು ಕೆಲಸ ಮಾಡಲಿದೆ ಎಂದು ಹೇಳಿದರು.

ಈ ಘೋಷಣೆಯು, ವಿಶೇಷವಾಗಿ ವೈವಿಧ್ಯತೆ, ಸಮಾನತೆ ಮತ್ತು ಒಳಗೊಳ್ಳುವಿಕೆ (ಡಿಇಐ) ಕಾರ್ಯಕ್ರಮಗಳನ್ನು ಗುರಿಯಾಗಿರಿಸಿಕೊಂಡು, ಅಮೆರಿಕ ಸರ್ಕಾರದ ಲಿಂಗ ಮತ್ತು ವೈವಿಧ್ಯತೆಯ ನೀತಿಗಳನ್ನು ಬದಲಾಯಿಸುವ ಟ್ರಂಪ್ ಅವರ ಯೋಜನೆಗಳ ಭಾಗವಾಗಿದೆ.

ಕಳೆದ ನವೆಂಬರ್‌ನಲ್ಲಿ ಟ್ರಂಪ್ ಆಯ್ಕೆಯಾದಾಗಿನಿಂದ ಮೆಕ್‌ಡೊನಾಲ್ಡ್ಸ್, ವಾಲ್‌ಮಾರ್ಟ್ ಮತ್ತು ಫೇಸ್‌ಬುಕ್ ಮಾತೃ ಕಂಪನಿ ಮೆಟಾ ಸೇರಿದಂತೆ ಹಲವಾರು ಯುಎಸ್ ಕಂಪನಿಗಳು ತಮ್ಮ ಡಿಇಐ ಕಾರ್ಯಕ್ರಮಗಳನ್ನು ಕೊನೆಗೊಳಿಸಿವೆ ಅಥವಾ ಕಡಿಮೆ ಮಾಡಿವೆ.

ಇತ್ತೀಚಿನ ವರ್ಷಗಳಲ್ಲಿ ಅಮೆರಿಕದಲ್ಲಿ ಲಿಂಗತ್ವ ಅಲ್ಪ ಸಂಖ್ಯಾತರ ಹಕ್ಕುಗಳು ರಾಜಕೀಯ ವಿಷಯವಾಗಿದೆ. ಕಳೆದ ಚುನಾವಣಾ ಪ್ರಚಾರದಲ್ಲಿ ಅನೇಕ ರಿಪಬ್ಲಿಕನ್ನರು ಲಿಂಗತ್ವ ಅಲ್ಪ ಸಂಖ್ಯಾತರಿಗೆ ಸಂಬಂಧಿಸಿದ ಕಾನೂನುಗಳನ್ನು ರದ್ದುಗೊಳಿಸುವ ಬಗ್ಗೆ ಮಾತನಾಡಿದ್ದರು. ಕ್ರೀಡೆಗಳಲ್ಲಿ ಲಿಂಗತ್ವ ಅಲ್ಪ ಸಂಖ್ಯಾತ ಮಹಿಳೆಯರು ಭಾಗವಹಿಸುವುದಕ್ಕೆ ವಿರೋಧಿಸಿದ್ದರು.

ಅಮೆರಿಕದ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸುವ ಒಂದು ದಿನದ ಮೊದಲು ಮಾತನಾಡಿದ್ದ ಡೊನಾಲ್ಡ್ ಟ್ರಂಪ್, ಎಲ್ಲಾ ಪುರುಷರನ್ನು ಮಹಿಳಾ ಕ್ರೀಡೆಗಳಿಂದ ದೂರವಿಡಲು ಕ್ರಮ ಕೈಗೊಳ್ಳುವುದಾಗಿ ಹೇಳಿದ್ದರು. ಡೊನಾಲ್ಡ್ ಟ್ರಂಪ್ ಅಮೆರಿಕ ಅಧ್ಯಕ್ಷರಾಗಿದ್ದ ತಮ್ಮ ಮೊದಲ ಅವಧಿಯಲ್ಲಿ ಮಿಲಿಟರಿಯಲ್ಲಿ ಲಿಂಗತ್ವ ಅಲ್ಪ ಸಂಖ್ಯಾತರಿಗೆ ಅವಕಾಶ ನಿರಾಕರಿಸಿದ್ದರು.

ಡೊನಾಲ್ಡ್ ಟ್ರಂಪ್ ಅವರು ವಾಷಿಂಗ್ಟನ್, ಡಿಸಿಯಲ್ಲಿರುವ ಯುಎಸ್ ಕ್ಯಾಪಿಟಲ್‌ನಲ್ಲಿ ಅಮೆರಿಕದ 47ನೇ ಅಧ್ಯಕ್ಷರಾಗಿ ಸೋಮವಾರ (ಜ.20) ಪ್ರಮಾಣ ವಚನ ಸ್ವೀಕರಿಸಿದರು. ಅಮೆರಿಕದ ಮುಖ್ಯ ನ್ಯಾಯಮೂರ್ತಿ ಜಾನ್ ರಾಬರ್ಟ್ಸ್ ಅವರು ಟ್ರಂಪ್ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಟ್ರಂಪ್ ಪ್ರಮಾಣ ವಚನ ಸ್ವೀಕರಿಸುವ ಮೊದಲು, ಜೆಡಿ ವ್ಯಾನ್ಸ್ ಅವರು ಅಮೆರಿಕದ 50ನೇ ಉಪಾಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಅಧಿಕಾರ ಸ್ವೀಕರಿಸಿದ ಬಳಿಕ ಉದ್ಘಾಟನಾ ಭಾಷಣ ಮಾಡಿದ ಟ್ರಂಪ್, ಚುನಾವಣಾ ಪ್ರಚಾರದ ಸಮಯದಲ್ಲಿ ನೀಡಿದ ಭರವಸೆಗಳನ್ನು ಈಡೇರಿಸುವ ಕೆಲಸ ಪ್ರಾರಂಭಿಸಿದರು. ಅಮೆರಿಕದ ದಕ್ಷಿಣ ಗಡಿಯಲ್ಲಿ “ರಾಷ್ಟ್ರೀಯ ತುರ್ತುಸ್ಥಿತಿ”ಯನ್ನು ಘೋಷಿಸುವುದಾಗಿ ಮತ್ತು ದೇಶದ “ವಿನಾಶಕಾರಿ ಆಕ್ರಮಣ”ವನ್ನು ತಡೆಯಲು ಸೈನ್ಯವನ್ನು ಕಳುಹಿಸುವುದಾಗಿ ಘೋಷಿಸಿದರು.

ಅಮೆರಿಕವು “ಲಕ್ಷಾಂತರ ಕ್ರಿಮಿನಲ್ ವಿದೇಶಿಯರನ್ನು” ಗಡೀಪಾರು ಮಾಡಲಿದೆ ಮತ್ತು ಕಾರ್ಟೆಲ್‌ಗಳನ್ನು ವಿದೇಶಿ ಭಯೋತ್ಪಾದಕ ಸಂಘಟನೆಗಳೆಂದು ಹೆಸರಿಸಲಿದೆ ಎಂದು ಟ್ರಂಪ್ ಒತ್ತಿ ಹೇಳಿದರು.

“ಮೊದಲು ನಾನು ದಕ್ಷಿಣ ಗಡಿಯಲ್ಲಿ ರಾಷ್ಟ್ರೀಯ ತುರ್ತು ಪರಿಸ್ಥಿತಿಯನ್ನು ಘೋಷಿಸುತ್ತೇನೆ. ಎಲ್ಲಾ ಅಕ್ರಮ ಪ್ರವೇಶವನ್ನು ತಕ್ಷಣವೇ ನಿಲ್ಲಿಸಲಾಗುವುದು ಮತ್ತು ಲಕ್ಷಾಂತರ ಕ್ರಿಮಿನಲ್ ವಿದೇಶಿಯರನ್ನು ಅವರು ಬಂದ ಸ್ಥಳಕ್ಕೆ ಹಿಂದಿರುಗಿಸುವ ಪ್ರಕ್ರಿಯೆಯನ್ನು ನಾವು ಪ್ರಾರಂಭಿಸುತ್ತೇವೆ. ನಾವು ನನ್ನ ‘ಮೆಕ್ಸಿಕೊದಲ್ಲಿ ಉಳಿಯಿರಿ’ ನೀತಿಯನ್ನು ಪುನಃಸ್ಥಾಪಿಸುತ್ತೇವೆ” ಎಂದು ಟ್ರಂಪ್ ತಿಳಿಸಿದರು.

“ಸೆರೆ ಹಿಡಿದು ಬಿಡುಗಡೆ ಮಾಡುವ ಅಭ್ಯಾಸವನ್ನು ನಾನು ತ್ಯಜಿಸುತ್ತೇನೆ. ನಮ್ಮ ದೇಶದ ಮೇಲಿನ ವಿನಾಶಕಾರಿ ಆಕ್ರಮಣವನ್ನು ಹಿಮ್ಮೆಟ್ಟಿಸಲು ನಾನು ದಕ್ಷಿಣ ಗಡಿಗೆ ಸೈನ್ಯವನ್ನು ಕಳುಹಿಸುತ್ತೇನೆ. ನಾನು ಇಂದು ಸಹಿ ಮಾಡಿದ ಆದೇಶಗಳ ಅಡಿಯಲ್ಲಿ, ನಾವು ಕಾರ್ಟೆಲ್‌ಗಳನ್ನು ವಿದೇಶಿ ಭಯೋತ್ಪಾದಕ ಸಂಘಟನೆಗಳೆಂದು ಗುರುತಿಸುತ್ತೇವೆ” ಎಂದು ಟ್ರಂಪ್ ಹೇಳಿದರು.

ಪ್ರಮಾಣ ವಚನ ಸ್ವೀಕರಿಸಿದ ನಂತರ, ಟ್ರಂಪ್ ಅಮೆರಿಕದ “ಸುವರ್ಣಯುಗ” ಪ್ರಾರಂಭವಾಗಿದೆ ಎಂದು ಘೋಷಿಸಿದರು ಮತ್ತು ಇಂದು ದೇಶಕ್ಕೆ ‘ವಿಮೋಚನಾ ದಿನ’ವಾಗಿದೆ ಎಂದರು.

“ದೇಶದಲ್ಲಿನ ಹಣದುಬ್ಬರದ ಕುರಿತು ಮಾತನಾಡಿದ ಟ್ರಂಪ್, ತೈಲಕ್ಕಾಗಿ ಕೊರೆಯುವ ಅವರ ಭರವಸೆಯನ್ನು ಉಲ್ಲೇಖಿಸುವ ‘ಡ್ರಿಲ್ ಬೇಬಿ ಡ್ರಿಲ್’ ಎಂಬ ತಮ್ಮ ಹಿಂದಿನ ಘೋಷಣೆಯನ್ನು ಪುನರುಚ್ಚರಿಸಿದರು.” “ಹಣದುಬ್ಬರ ಬಿಕ್ಕಟ್ಟು ಮಿತಿಮೀರಿದ ಖರ್ಚು ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳಿಂದ ಉಂಟಾಗಿದೆ. ಈ ಸಮಸ್ಯೆ ಪರಿಹರಿಸಲು ಇಂದು ನಾನು ರಾಷ್ಟ್ರೀಯ ಇಂಧನ ತುರ್ತುಸ್ಥಿತಿಯನ್ನು ಘೋಷಿಸುತ್ತೇನೆ. ನಾವು ಡ್ರಿಲ್ ಮಾಡುತ್ತೇವೆ, ಬೇಬಿ, ಡ್ರಿಲ್ ಮಾಡುತ್ತೇವೆ” ಎಂದು ಟ್ರಂಪ್ ಹೇಳಿದರು.

ಲಾಸ್ ಏಂಜಲೀಸ್‌ನಲ್ಲಿನ ಕಾಡ್ಗಿಚ್ಚನ್ನು ಉಲ್ಲೇಖಿಸಿದ ಟ್ರಂಪ್, ಬೈಡನ್ ಆಡಳಿತ ಪರಿಸ್ಥಿತಿ ನಿಯಂತ್ರಿಸಲು ವಿಫಲವಾಗಿತ್ತು ಎಂದು ಟೀಕಿಸಿದರು. ಇನ್ನೊಮ್ಮೆ ಆ ರೀತಿಯಾಗಲು ಬಿಡುವುದಿಲ್ಲ ಎಂದರು.

ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಅಧಿಕಾರ ಸ್ವೀಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...

ವಿದ್ಯುತ್ ಸ್ಥಾವರಗಳ ಸುತ್ತ ಮಾನವ ಸರಪಳಿ ರಚಿಸುವಂತೆ ಇರಾನಿನ ಯುವಕರಿಗೆ ಮನವಿ

ಯುನೈಟೆಡ್ ಸ್ಟೇಟ್ಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಬೆದರಿಕೆ ದಾಳಿಗಳಿಗೆ ಮುಂಚಿತವಾಗಿ ವಿದ್ಯುತ್ ಸ್ಥಾವರಗಳ ಸುತ್ತ ಮಾನವ ಸರಪಳಿಗಳನ್ನು ರಚಿಸುವಂತೆ ಇರಾನ್ ಸರ್ಕಾರ 'ಕ್ರೀಡಾಪಟುಗಳು, ಕಲಾವಿದರು, ವಿದ್ಯಾರ್ಥಿಗಳು, ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಮತ್ತು ಅವರ...

ಪಶ್ಚಿಮ ಬಂಗಾಳ| ಎಸ್‌ಐಆರ್ ಬಳಿಕ ಮತದಾರರ ಪಟ್ಟಿಯಿಂದ ಸುಮಾರು 91 ಲಕ್ಷ ಹೆಸರುಗಳು ಡಿಲೀಟ್

ಚುನಾವಣಾ ಆಯೋಗ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ರಾಜ್ಯದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಸುಮಾರು 91 ಲಕ್ಷ ಮತದಾರರನ್ನು ಮತದಾರರ ಪಟ್ಟಿಯಿಂದ ಅಳಿಸಲಾಗಿದೆ. ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯ ನಂತರ...

ಇರಾನ್ ನೂತನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ‘ಪ್ರಜ್ಞಾಹೀನ’, ಕೋಮ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ: ವರದಿ

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಅವರು ಕೋಮ್‌ನಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಪ್ರಜ್ಞಾಹೀನರಾಗಿದ್ದಾರೆ ಎಂದು ನಂಬಲಾಗಿದೆ ಎಂದು ಗುಪ್ತಚರ ಆಧಾರಿತ ರಾಜತಾಂತ್ರಿಕ ಜ್ಞಾಪಕ ಪತ್ರವನ್ನು ಉಲ್ಲೇಖಿಸಿ ದಿ ಟೈಮ್ಸ್ ವರದಿ...

ಪ. ಬಂಗಾಳ : ಎಸ್‌ಐಆರ್‌ನಲ್ಲಿ ಮತದಾರರ ಪಟ್ಟಿಯಿಂದ ಕೈ ಬಿಟ್ಟಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ವೇಳೆ (ಎಸ್‌ಐಆರ್‌) ತೆಗೆದು ಹಾಕಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರನ್ನು ಮತದಾರರ ಪಟ್ಟಿಗೆ ಮರು ಸೇರ್ಪಡೆಗೊಳಿಸುವಂತೆ ಮೇಲ್ಮನವಿ ನ್ಯಾಯಮಂಡಳಿ ಸೋಮವಾರ (ಏ.6) ಆದೇಶಿಸಿರುವುದಾಗಿ ವರದಿಯಾಗಿದೆ. ರತುವಾ...

ಹೈದರಾಬಾದ್| ಐಪಿಎಲ್ ಪಂದ್ಯದಿಂದ ಭಾರೀ ಸಂಚಾರ ದಟ್ಟಣೆ; ಆಂಬ್ಯುಲೆನ್ಸ್‌ನಲ್ಲಿದ್ದ ಮಹಿಳೆ ಸಾವು

ಏಪ್ರಿಲ್ 5 ರ ಭಾನುವಾರ ಉಪ್ಪಳದಲ್ಲಿ ಉಂಟಾದ ಭಾರೀ ಸಂಚಾರ ದಟ್ಟಣೆಯಿಂದಾಗಿ ಒಂದು ಗಂಟೆಗೂ ಹೆಚ್ಚು ಕಾಲ ಆಂಬ್ಯುಲೆನ್ಸ್‌ನಲ್ಲಿ ಸಿಲುಕಿಕೊಂಡಿದ್ದ ಬಿಷ್ಣಾ ಎಂಬ 30 ವರ್ಷದ ಮಹಿಳೆ ಸಾವನ್ನಪ್ಪಿದ ದುರಂತ ಘಟನೆ ನಡೆದಿದೆ. ಉಪ್ಪಳದ...