Homeಮುಖಪುಟಮುಸ್ಲಿಂ ಹೆಸರು ಬಳಸಿ ಕುಂಭಮೇಳ ಸ್ಫೋಟಿಸುವುದಾಗಿ ಬೆದರಿಕೆ; ಆರೋಪಿ ಆಯುಶ್‌ ಕುಮಾರ್ ಜೈಸ್ವಾಲ್‌ ಬಂಧನ

ಮುಸ್ಲಿಂ ಹೆಸರು ಬಳಸಿ ಕುಂಭಮೇಳ ಸ್ಫೋಟಿಸುವುದಾಗಿ ಬೆದರಿಕೆ; ಆರೋಪಿ ಆಯುಶ್‌ ಕುಮಾರ್ ಜೈಸ್ವಾಲ್‌ ಬಂಧನ

- Advertisement -
- Advertisement -

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯಲಿರುವ ಕುಂಭಮೇಳದಲ್ಲಿ ಸ್ಫೋಟ ನಡೆಸುವುದಾಗಿ ಬೆದರಿಕೆಯೊಡ್ಡಿದ್ದ ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಆರೋಪಿಯು  ಮುಸ್ಲಿಂ ವ್ಯಕ್ತಿಯ ಹೆಸರು ಬಳಸಿಕೊಂಡು ಈ ಕೃತ್ಯ ಎಸಗಿದ್ದಾನೆ ಎಂದು ವರದಿಯಾಗಿದೆ.

ಆರೋಪಿಯನ್ನು ಬಿಹಾರದ ಪುರ್‌ನಿಯಾ ನಿವಾಸಿ ಆಯುಶ್‌ ಕುಮಾರ್ ಜೈಸ್ವಾಲ್‌ ಎಂದು ಗುರುತಿಸಲಾಗಿದೆ. ದುಷ್ಕರ್ಮಿಯು ಸಾಮಾಜಿಕ ಮಾಧ್ಯಮದಲ್ಲಿ ‘ನಾಸೀರ್‌ ಪಠಾಣ್‌’ ಎಂಬ ಸುಳ್ಳು ಹೆಸರನ್ನು ಬಳಸಿಕೊಂಡು ಕುಂಭಮೇಳವನ್ನು ಸ್ಫೋಟಿಸುವುದಾಗಿ ಬೆದರಿಕೆಯೊಡ್ಡಿದ್ದ. ಡಿಸೆಂಬರ್‌ 31ರಂದು ಆಯುಶ್‌ ಪೋಸ್ಟ್‌ ಪ್ರಕಟಿಸಿದ್ದನು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಆನ್‌ಲೈನ್‌ನಲ್ಲಿ ಪೋಸ್ಟ್‌ ಪ್ರಕಟವಾದ ನಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು. ಉತ್ತರ ಪ್ರದೇಶ ಹಾಗೂ ಕೊಲ್ಕತ್ತಾದ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಆಯುಶ್‌ ಕುಮಾರ್‌ ಜೈಸ್ವಾಲ್‌ನನ್ನು ಬಂಧಿಸಲಾಗಿದೆ. ಆರೋಪಿಯು ಅಪಾಯಕಾರಿ ಮನಸ್ಥಿತಿಯುಳ್ಳವನಾಗಿದ್ದು, ಅಪರಾಧ ಹಿನ್ನೆಲೆಯುಳ್ಳವರ ಜೊತೆ ಸಂಪರ್ಕ ಹೊಂದಿರುವ ಬಗ್ಗೆ ವಿಚಾರಣೆ ನಡೆಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಬೆದರಿಕೆ ಪೋಸ್ಟ್‌ ಪ್ರಕಟಿಸಿದ ನಂತರ ಆರೋಪಿ ಆಯುಶ್‌ ನೇಪಾಳಕ್ಕೂ ಭೇಟಿ ನೀಡಿದ್ದು, ಅಲ್ಲಿ ಯಾರನ್ನು ಭೇಟಿ ಮಾಡಿದ್ದಾನೆ ಎಂಬುದನ್ನು ಕೂಡ ತನಿಖೆ ನಡೆಸುತ್ತಿದ್ದೇವೆ. ಆರೋಪಿಯನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ 2025ರ ಜನವರಿ 13 ರಿಂದ ಫೆಬ್ರವರಿ 26ರ ತನಕ ಮಹಾ ಕುಂಭಮೇಳ ನಡೆಯಲಿದೆ. ಇದಕ್ಕೆ ಭರದ ಸಿದ್ಧತೆ ನಡೆದಿದೆ. ಈ ನಡುವೆ ಎದುರಾಗುತ್ತಿರುವ ಸುಳ್ಳು ಸುದ್ದಿ, ಸೈಬರ್ ಬೆದರಿಕೆಗಳನ್ನು
ತಡೆಯಲು ರಾಜ್ಯ ಪೊಲೀಸ್ ಇಲಾಖೆ ಡಿಜಿಟಲ್ ವಾರಿಯರ್ಸ್ ಅನ್ನು ನಿಯೋಜಿಸಿದೆ ಎಂದು ವರದಿಗಳು ಹೇಳಿವೆ.

ಇದನ್ನೂಓದಿ:  ಬೆಂಗಳೂರು| ಟ್ರಾವೆಲ್ ಹಿಸ್ಟರಿ ಇಲ್ಲದ ಇಬ್ಬರು ಮಕ್ಕಳಲ್ಲಿ ಎಚ್‌ಎಂಪಿವಿ ವೈರಸ್ ಪತ್ತೆ

ಬೆಂಗಳೂರು| ಟ್ರಾವೆಲ್ ಹಿಸ್ಟರಿ ಇಲ್ಲದ ಇಬ್ಬರು ಮಕ್ಕಳಲ್ಲಿ ಎಚ್‌ಎಂಪಿವಿ ವೈರಸ್ ಪತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...