Homeಮುಖಪುಟಬಾಂಬೆ ಹೈಕೋರ್ಟ್‌ನ ನ್ಯಾಯಮೂರ್ತಿ ಸತ್ಯರಂಜನ್ ರಾಜೀನಾಮೆ

ಬಾಂಬೆ ಹೈಕೋರ್ಟ್‌ನ ನ್ಯಾಯಮೂರ್ತಿ ಸತ್ಯರಂಜನ್ ರಾಜೀನಾಮೆ

ವಿಚಾರವಾದಿ ಗೋವಿಂದ್ ಪನ್ಸಾರೆ ಮತ್ತು ನರೇಂದ್ರ ದಾಭೋಲ್ಕರ್ ಅವರ ಹತ್ಯೆಯಲ್ಲಿ ಸಿಬಿಐ ಮತ್ತು ಎಸ್‌ಐಟಿ ನಡೆಸಿದ ತನಿಖೆಯ ವೇಗದ ಬಗ್ಗೆ ನ್ಯಾಯಮೂರ್ತಿ ಧರ್ಮಧಿಕರಿ ಅಸಮಾಧಾನ ವ್ಯಕ್ತಪಡಿಸಿದ್ದರು.

- Advertisement -
- Advertisement -

ಬಾಂಬೆ ಹೈಕೋರ್ಟ್‌ನ ನ್ಯಾಯಮೂರ್ತಿ ವೈಯಕ್ತಿಕ ಕಾರಣ ನೀಡಿ ರಾಜೀನಾಮೆ ನೀಡಿದ್ದಾರೆ.

ಬಾಂಬೆ ಹೈಕೋರ್ಟ್‌ನ ನ್ಯಾಯಮೂರ್ತಿ “ಸತ್ಯರಂಜನ್ ಸಿ ಧರ್ಮಧಿಕರಿ” ಬಾಂಬೆ ಹೈಕೋರ್ಟ್‌ನ ಮುಖ್ಯ ನ್ಯಾಯಾಧೀಶರ ನಂತರ ಅತ್ಯಂತ ಹಿರಿಯ ನ್ಯಾಯಾಧೀಶರಾಗಿದ್ದರು. ಶುಕ್ರವಾರ ತಮ್ಮ ಮುಂದೆ ಹಾಜರಾದ ವಕೀಲರಿಗೆ ಅವರು ತಮ್ಮ ಕಚೇರಿಯನ್ನು ಖಾಲಿ ಮಾಡಿ ರಾಜೀನಾಮೆ ನೀಡಿದ್ದೇನೆ ಎಂದು ಹೇಳಿದರು.

ಪತ್ರಕರ್ತರಿಗೆ ತಮ್ಮ ರಾಜೀನಾಮೆಯ ಬಗ್ಗೆ ‘ಇದು ಸಂಪೂರ್ಣವಾಗಿ ವೈಯಕ್ತಿಕ ಹಾಗೂ ಕೌಟುಂಬಿಕ ಕಾರಣಕ್ಕೆ’ ಎಂದು ಹೇಳಿದ್ದಾರೆ. ನಾನು ಬಾಂಬೆಯನ್ನು ಬಿಟ್ಟು ಬೇರೆಡೆಗೆ ಹೋಗಲು ಸಾಧ್ಯವಿಲ್ಲ. ಹಾಗಾಗಿ ರಾಜೀನಾಮೆ ನೀಡುತ್ತಿದ್ದೇನೆ ಎಂದು ಹೇಳಿದ್ದಾರೆ.

1960 ರಲ್ಲಿ ಜನಿಸಿದ ನ್ಯಾಯಮೂರ್ತಿ ಧರ್ಮಧಿಕಾರಿ ಅವರು ಜೂನ್ 1983 ರಿಂದ ವಕೀಲರಾಗಿದ್ದರು. ಅವರನ್ನು ನವೆಂಬರ್ 14, 2003 ರಂದು ಹೈಕೋರ್ಟ್‌ನ ನ್ಯಾಯಾಧೀಶರಾಗಿ ನೇಮಿಸಲಾಗಿತ್ತು. ಅವರು ಎಲ್ಲಾ ರಾಜ್ಯ ಸರ್ಕಾರಗಳ ಅಧಿಕಾರಿಗಳ ವಿರುದ್ಧ ಹಲವಾರು ಕಟ್ಟುನಿಟ್ಟಾದದ ನಿಯಮವನ್ನು ಜಾರಿಗೆ ತಂದಿದ್ದರು.

ವಿಚಾರವಾದಿ ಗೋವಿಂದ್ ಪನ್ಸಾರೆ ಮತ್ತು ನರೇಂದ್ರ ದಾಭೋಲ್ಕರ್ ಅವರ ಹತ್ಯೆಯಲ್ಲಿ ಸಿಬಿಐ ಮತ್ತು ಎಸ್‌ಐಟಿ ನಡೆಸಿದ ತನಿಖೆಯ ವೇಗದ ಬಗ್ಗೆ ನ್ಯಾಯಮೂರ್ತಿ ಧರ್ಮಧಿಕರಿ ಅಸಮಾಧಾನ ವ್ಯಕ್ತಪಡಿಸಿದ್ದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಅರವಿಂದ್ ಕೇಜ್ರಿವಾಲ್, ಕೆ. ಕವಿತಾಗೆ ನೋ ರಿಲೀಫ್‌: ನ್ಯಾಯಾಂಗ ಬಂಧನ ಮೇ 7ರವರೆಗೆ ವಿಸ್ತರಣೆ

0
ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ನಾಯಕಿ ಕೆ ಕವಿತಾ ಅವರ ನ್ಯಾಯಾಂಗ ಬಂಧನವನ್ನು...