Homeಮುಖಪುಟಉತ್ತರ ಪ್ರದೇಶ: ಮದುವೆ ಮನೆಯಲ್ಲಿ ದುರಂತ, ಬಾವಿಯಲ್ಲಿ ಮುಳುಗಿ 13 ಜನರ ಸಾವು

ಉತ್ತರ ಪ್ರದೇಶ: ಮದುವೆ ಮನೆಯಲ್ಲಿ ದುರಂತ, ಬಾವಿಯಲ್ಲಿ ಮುಳುಗಿ 13 ಜನರ ಸಾವು

- Advertisement -
- Advertisement -

ಉತ್ತರ ಪ್ರದೇಶದ ಪೂರ್ವ ಭಾಗದಲ್ಲಿರುವ ಕುಶಿನಗರ ಜಿಲ್ಲೆಯ ಹಳ್ಳಿಯೊಂದರಲ್ಲಿ ನಿನ್ನೆ ರಾತ್ರಿ ಮದುವೆ ಸಂಭ್ರಮಾಚರಣೆ ವೇಳೆ ದುರಂತ ಘಟನೆ ಸಂಭವಿಸಿದೆ. ಮದುವೆ ಶಾಸ್ತ್ರವೊಂದರ ಆಚರಣೆ ವೇಳೆ ಆಕಸ್ಮಿಕವಾಗಿ ಬಾವಿಗೆ ಬಿದ್ದು ಏಳು ಮಹಿಳೆಯರು ಮತ್ತು ಆರು ಬಾಲಕಿಯರು ಸೇರಿದಂತೆ 13 ಜನರು ಸಾವನ್ನಪ್ಪಿದ್ದಾರೆ.

ಕುಶಿನಗರದ ನೆಬುವಾ ನೌರಂಗಿಯಾದಲ್ಲಿ ಬುಧವಾರ ರಾತ್ರಿ 8.30 ರ ಸುಮಾರಿಗೆ ಈ ಘಟನೆ ಸಂಭವಿಸಿದ್ದು, ಮಹಿಳೆಯರು 20 ರಿಂದ 35 ವರ್ಷ ವಯಸ್ಸಿನವರಾಗಿದ್ದು, ಮೃತರಲ್ಲಿ ಒಂದು ವರ್ಷದ ಮಗು ಕೂಡ ಸೇರಿದೆ ಎಂದು ತಿಳಿದುಬಂದಿದೆ.

ಅಧಿಕಾರಿಗಳ ಪ್ರಕಾರ, ಮದುವೆಯಲ್ಲಿ ’ಹಲ್ದಿ’ (ಅರಿಶಿನ ಶಾಸ್ತ್ರ) ಆಚರಣೆಗಾಗಿ ಮಹಿಳೆಯರು ಮತ್ತು ಬಾಲಕಿಯರು ಕಬ್ಬಿಣದ ಹೊದಿಕೆಯಿಂದ ಮುಚ್ಚಿದ ಹಳೆಯ ಬಾವಿಯನ್ನು ಮೇಲೆ ಕುಳಿತಿದ್ದರು. ಜನರ ಭಾರಕ್ಕೆ ರಭಸಕ್ಕೆ ಚಪ್ಪಡಿ ಕುಸಿದು ಬಿದ್ದಿದ್ದು, ಅದರ ಮೇಲೆ ಕುಳಿತಿದ್ದವರು ಸೀದಾ ಬಾವಿಗೆ ಬಿದ್ದಿದ್ದಾರೆ. ಅವರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಅಲ್ಲಿ 13 ಜನರು ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ ಚುನಾವಣೆ -2022: ಬಿಜೆಪಿ ಸೋಲಿನ ಭವಿಷ್ಯ ನುಡಿದ ನಾಯಕರು

ಘಟನೆಯಲ್ಲಿ ಮೃತಪಟ್ಟ ಪ್ರತಿಯೊಬ್ಬರ ಕುಟುಂಬಕ್ಕೆ 4 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಕುಶಿನಗರದ ಜಿಲ್ಲಾಧಿಕಾರಿ ಎಸ್ ರಾಜಲಿಂಗಂ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಸುದ್ದಿ ಸಂಸ್ಥೆ ANI ಯೊಂದಿಗೆ ಮಾತನಾಡಿರುವ ಗೋರಖ್‌ಪುರ ವಲಯದ ಎಡಿಜಿ ಅಖಿಲ್ ಕುಮಾರ್, “ಸಾವಿನ ಸಂಖ್ಯೆ 13 ಕ್ಕೆ ಏರಿದೆ. ಕಳೆದ ರಾತ್ರಿ 8.30 ರ ಸುಮಾರಿಗೆ ಕುಶಿನಗರದ ನೆಬುವಾ ನೌರಂಗಿಯಾದಲ್ಲಿ ಮದುವೆ ಕಾರ್ಯಕ್ರಮವೊಂದರಲ್ಲಿ ಕೆಲವರು ಬಾವಿಯನ್ನು ಮುಚ್ಚಿದ್ದ ಚಪ್ಪಡಿ ಮೇಲೆ ಕುಳಿತಿದ್ದಾಗ ಈ ಘಟನೆ ಸಂಭವಿಸಿದೆ. ಭಾರಿ ತೂಕದಿಂದ ಅದು ಮುರಿದಿದೆ” ಎಂದಿದ್ದಾರೆ.

ಘಟನೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನಿ ನರೇಂದ್ರ ಮೋದಿ ಟ್ವಿಟರ್‌ನಲ್ಲಿ ಸಂತಾಪ ಸೂಚಿಸಿದ್ದಾರೆ. ಘಟನೆಯನ್ನು ಹೃದಯ ವಿದ್ರಾವಕ ಎಂದಿರುವ ಅವರು ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಧಾನಿ ಮೋದಿ ಹಾರೈಸಿದ್ದಾರೆ.

ಘಟನೆಯ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.


ಇದನ್ನೂ ಓದಿ: ಗುಜರಾತ್: ಚರ್ಚಾ ಸ್ಪರ್ಧೆಯಲ್ಲಿ ಮಕ್ಕಳಿಗೆ ’ನನ್ನ ಆದರ್ಶ ಗೋಡ್ಸೆ’ ವಿಷಯ, ವ್ಯಾಪಕ ಖಂಡನೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಣಿಪುರ ಹಿಂಸಾಚಾರಕ್ಕೆ ಬಲಿಯಾದವರ ಬಗ್ಗೆ ಮೋದಿ ಸರ್ಕಾರಕ್ಕೆ ಸ್ವಲ್ಪವೂ ಸಹಾನುಭೂತಿ ಇಲ್ಲ: ಮಲ್ಲಿಕಾರ್ಜುನ ಖರ್ಗೆ

0
ಮಣಿಪುರದ ಪರಿಸ್ಥಿತಿಯ ಬಗ್ಗೆ ಮೋದಿ ಸರಕಾರ ನಿರಾಸಕ್ತಿಯನ್ನು ಹೊಂದಿದ್ದು, ಪಶ್ಚಾತ್ತಾಪವಿಲ್ಲದಂತೆ ವರ್ತಿಸುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿಯನ್ನು ನಡೆಸಿದೆ. ಈ ಕುರಿತು ಎಕ್ಸ್‌ನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ...