ಅಮೇಥಿಯಲ್ಲಿ 15 ವರ್ಷದ ದಲಿತ ಬಾಲಕಿಯ ಮೇಲೆ ನಡೆದ ಅತ್ಯಾಚಾರಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ. ಸಂತ್ರಸ್ತೆಯ ತಾಯಿ ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಆರೋಪಿಯನ್ನು ವಶಕ್ಕೆ ಪಡೆದು ಕಾನೂನು ಕ್ರಮ ಕೈಗೊಂಡಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ಮಂಗಳವಾರ ಬೆಳಿಗ್ಗೆ ಫರ್ಸತ್‌ಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಈ ಘಟನೆ ನಡೆದಿದೆ. ವರದಿಗಳ ಪ್ರಕಾರ, ಸಮೀಪದ ಗ್ರಾಮದ ನಿವಾಸಿ ಶಿವಂ ಯಾದವ್ ಸ್ಥಳಕ್ಕೆ ಬಂದಾಗ ಅಪ್ರಾಪ್ತ ಬಾಲಕಿ ಹೊಲಕ್ಕೆ ಹೋಗಿದ್ದಳು. ಬಾಲಕಿಯನ್ನು ಹತ್ತಿರದ ಕೊಳವೆ ಬಾವಿ ಬಳಿಗೆ ಕರೆದೊಯ್ದಿದ್ದ ಎನ್ನಲಾಗಿದೆ. ಅಲ್ಲಿ ಆತ ದೌರ್ಜನ್ಯ ನಡೆಸಿದ್ದಾನೆ. ಮನೆಗೆ ಹಿಂದಿರುಗಿದ ನಂತರ, ಸಂತ್ರಸ್ತೆ ತನ್ನ ಕುಟುಂಬಕ್ಕೆ ಈ ಘಟನೆಯ ಬಗ್ಗೆ ತಿಳಿಸಿದ್ದಾಳೆ.
ತಾಯಿಯೊಂದಿಗೆ ಬಂದ ಬಾಲಕಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಘಟನೆಯ ಬಗ್ಗೆ ದೂರು ನೀಡಿದ್ದಾಳೆ. ಈ ವಿಷಯಕ್ಕೆ ಸಂಬಂಧಿಸಿದಂತೆ, ತಾಯಿಯ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜ್ಞಾನೇಂದ್ರ ಸಿಂಗ್ ತಿಳಿಸಿದ್ದಾರೆ. ಆರೋಪಿ ಪ್ರಸ್ತುತ ಬಂಧನದಲ್ಲಿದ್ದಾನೆ ಮತ್ತು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.


