Homeಮುಖಪುಟಮುಸ್ಲಿಂ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ, ಆರೋಪಿಗಳಿಗೆ 24 ಗಂಟೆಯೊಳಗೆ ಜಾಮೀನು!

ಮುಸ್ಲಿಂ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ, ಆರೋಪಿಗಳಿಗೆ 24 ಗಂಟೆಯೊಳಗೆ ಜಾಮೀನು!

- Advertisement -
- Advertisement -

ಉತ್ತರ ಪ್ರದೇಶದ ಕಾನ್ಪುರದಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿ, ಬೀದಿಯಲ್ಲಿ ಮೆರವಣಿಗೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಿ, 24 ಗಂಟೆಯೊಳಗೆ ಆರೋಪಿಗಳಿಗೆ ಜಾಮೀನು ನೀಡಲಾಗಿದೆ.

ಗುರುವಾರ ಕಾನ್ಪುರ ಪಟ್ಟಣದಲ್ಲಿ ಇ- ರಿಕ್ಷಾ ಚಾಲಕನಾಗಿರುವ 45 ವರ್ಷದ ಮುಸ್ಲಿಂ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ್ದ ಗುಂಪೊಂದು “ಜೈ ಶ್ರೀ ರಾಮ್” ಘೋಷಣೆಗಳನ್ನು ಕೂಗಿಕೊಂಡು ಬೀದಿಯಲ್ಲಿ ಮೆರವಣಿಗೆ ಮಾಡಿದ್ದ ಘಟನೆ ನಡೆದಿತ್ತು.

ಕಾನ್ಪೂರ ಪೊಲೀಸ್ ಠಾಣೆಯಿಂದ ಆರೋಪಿಗಳಿಗೆ ಜಾಮೀನು ನೀಡಲಾಗಿದೆ. ಆರೋಪಿಗಳ ವಿರುದ್ಧ ಏಳು ವರ್ಷಗಳಿಗಿಂತ ಕಡಿಮೆ ಶಿಕ್ಷೆ ಆಗುವಂತಹ ಪ್ರಕರಣಗಳು, ಸೆಕ್ಷನ್‌ಗಳನ್ನು ಹಾಕಲಾಗಿದೆ. ಆದರೆ, ಪೊಲೀಸರು ಮಾತ್ರ ಸೂಕ್ತ ಪ್ರಕ್ರಿಯೆಯನ್ನು ಅನುಸರಿಸಲಾಗಿದೆ. ಇತರ ಆರೋಪಿಗಳನ್ನು ಹಿಡಿಯಲು ಪ್ರಯತ್ನಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಯುಪಿ ಚುನಾವಣಾ ಹಿಂಸಾಚಾರ: ಐಎಎಸ್‌ ಅಧಿಕಾರಿಯಿಂದ ಪತ್ರಕರ್ತನ ಮೇಲೆ ಹಲ್ಲೆ

“ನಾವು ಮೂವರನ್ನು ಬಂಧಿಸಿದ್ದೇವೆ, ಅವರು ಪ್ರಕರಣದ ಪ್ರಮುಖ ಆರೋಪಿಗಳು. ಈ ಪ್ರಕರಣದಲ್ಲಿ ಉಳಿದ ಆರೋಪಿಗಳನ್ನು ಬಂಧಿಸಲು ಪ್ರಯತ್ನಿಸುತ್ತಿದ್ದೇವೆ. ಈ ಪ್ರದೇಶದಲ್ಲಿ ಸಾಕಷ್ಟು ತಂಡಗಳನ್ನು ನಿಯೋಜಿಸಲಾಗಿದೆ. ಆರೋಪಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ” ಎಂದು ಕಾನ್ಪುರ ಪೊಲೀಸ್ ಆಯುಕ್ತ ಅರುಣ್ ಈ ಹಿಂದೆ ಹೇಳಿದ್ದರು.

ಆರೋಪಿಗಳ ಬಂಧನದ ನಂತರ, ಬಜರಂಗದಳದ ಕಾರ್ಯಕರ್ತರ ಗುಂಪು ಕಾನ್ಪುರದ ಪೊಲೀಸ್ ಠಾಣೆಯ ಹೊರಗೆ ಪ್ರತಿಭಟನೆ ನಡೆಸಿದ್ದರು. ನ್ಯಾಯಯುತ ತನಿಖೆಯ ಬಗ್ಗೆ ಪೊಲೀಸರಿಂದ ‘ಭರವಸೆ’ ಸಿಕ್ಕಿದ ನಂತರವೇ ಅವರು ಅಲ್ಲಿಂದ ಹೊರಟುಹೋಗಿದ್ದರು. ಜೊತೆಗೆ ಬಂಧಿತರನ್ನು ಶೀಘ್ರ ಬಿಡುಗಡೆ ಮಾಡದಿದ್ದರೆ ಮತ್ತೆ ಪ್ರತಿಭಟನೆ ನಡೆಸುವ ಬೆದರಿಕೆ ಹಾಕಿದ್ದರು.

ಬಲಪಂಥೀಯ ಗುಂಪು ಬಜರಂಗದಳವು ಸಭೆ ನಡೆಸಿದ ಸ್ಥಳದಿಂದ 500 ಮೀಟರ್ ದೂರದಲ್ಲಿ ಗುರುವಾರ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆದಿತ್ತು. ಆ ಪ್ರದೇಶದಲ್ಲಿ ಮುಸ್ಲಿಮರು ಹಿಂದೂ ಯುವತಿಯರನ್ನು ಮತಾಂತರ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಬಜರಂಗದಳದ ಸಭೆಯ ನಂತರ ಹಲ್ಲೆ ನಡೆದಿದೆ ಎಂದು ವರದಿಯಾಗಿತ್ತು.

ಕಾನ್ಪುರ ಪೊಲೀಸರು ಹಲ್ಲೆಗೊಳಗಾದ ವ್ಯಕ್ತಿಯ ದೂರಿನ ಆಧಾರದ ಮೇಲೆ ಸ್ಥಳೀಯವಾಗಿ ಮದುವೆ ಬ್ಯಾಂಡ್ ನಡೆಸುತ್ತಿರುವ ಸ್ಥಳೀಯ, ಆತನ ಮಗ ಮತ್ತು ಸುಮಾರು 10 ಅಪರಿಚಿತ ವ್ಯಕ್ತಿಗಳ ವಿರುದ್ಧ ಗಲಭೆ ಪ್ರಕರಣ ದಾಖಲಿಸಿದ್ದರು. ಆದರೆ, ಬಜರಂಗದಳದ ವ್ಯಕ್ತಿಗಳು ವಿರುದ್ಧ ಪ್ರಕರಣ ದಾಖಲಾಗಿದೆಯೇ ಎಂಬ ಬಗ್ಗೆ ಮಾಹಿತಿ ನೀಡಿರಲಿಲ್ಲ.


ಇದನ್ನೂ ಓದಿ: ಉತ್ತರ ಪ್ರದೇಶ: ಮುಸ್ಲಿಂ ವ್ಯಕ್ತಿ ಮೇಲೆ ಹಲ್ಲೆ: ತಂದೆಯನ್ನು ಹೊಡೆಯದಂತೆ ಬೇಡಿಕೊಂಡ ಮಗು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...