Homeಮುಖಪುಟಉತ್ತರ ಪ್ರದೇಶ: ಅಧಿಕಾರಿಗಳ ಎದುರೇ ಗುಂಡು ಹಾರಿಸಿ ಹತ್ಯೆಗೈದ ಬಿಜೆಪಿ ಶಾಸಕನ ಆಪ್ತ!

ಉತ್ತರ ಪ್ರದೇಶ: ಅಧಿಕಾರಿಗಳ ಎದುರೇ ಗುಂಡು ಹಾರಿಸಿ ಹತ್ಯೆಗೈದ ಬಿಜೆಪಿ ಶಾಸಕನ ಆಪ್ತ!

ಬಿಜೆಪಿ ಶಾಸಕ ಸುರೇಂದ್ರ ಸಿಂಗ್, ಆರೋಪಿಯನ್ನು ಬಿಜೆಪಿಯ ಮಾಜಿ ಸೈನಿಕರ ಘಟಕದ ಮುಖ್ಯಸ್ಥರು ಎಂದು ದೃಢಪಡಿಸಿದ್ದು, ಈ ಘಟನೆ ಎಲ್ಲಿಬೇಕಾದರೂ ಸಂಭವಿಸಬಹುದಾದ ಆಕಸ್ಮಿಕ ಘಟನೆ ಎಂದಿದ್ದಾರೆ.

- Advertisement -
- Advertisement -

ವಿವಾದಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಬಲ್ಲಿಯಾದಲ್ಲಿ ಗುರುವಾರ ಸ್ಥಳೀಯ ಅಧಿಕಾರಿಗಳ ಎದುರು ವ್ಯಕ್ತಿಯೊಬ್ಬನನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದಾದ ನಂತರ ಘಟನಾ ಸ್ಥಳದಲ್ಲಿ ಹಾಜರಿದ್ದ ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಮುಖ್ಯಮಂತ್ರಿ ಆದಿತ್ಯನಾಥ್ ಆದೇಶಿಸಿದ್ದಾರೆ.

46 ವರ್ಷದ ಜೈಪ್ರಕಾಶ್ ಎಂಬುವವರನ್ನು ಬಿಜೆಪಿ ಶಾಸಕ ಸುರೇಂದ್ರ ಸಿಂಗ್ ಅವರ ಆಪ್ತ ಧೀರೇಂದ್ರ ಸಿಂಗ್, ಅಧಿಕಾರಿಗಳ ಎದುರೇ ಗುಂಡಿಕ್ಕಿ ಕೊಂದಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಎಎನ್‌ಐ ವೀಡಿಯೋವೊಂದನ್ನು ಟ್ವೀಟ್ ಮಾಡಿದ್ದು, “ಬಲ್ಲಿಯಾದಲ್ಲಿ ಸರ್ಕಾರಿ ಕೋಟಾದಡಿಯಲ್ಲಿ ಅಂಗಡಿಗಳನ್ನು ಮಂಜೂರು ಮಾಡಲು ಕರೆದಿದ್ದ ಸಭೆಯಲ್ಲಿ ಗುಂಡು ಹಾರಿಸಿದ್ದರಿಂದ ಒಬ್ಬರು ಮೃತಪಟ್ಟಿದ್ದಾರೆ. ಬಲ್ಲಿಯಾದ ಎಸ್‌ಪಿ ದೇವೇಂದ್ರನಾಥ್ ಪ್ರಕಾರ, ಸಭೆಯಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ಸಂಭವಿಸಿದ ನಂತರ ಈ ಘಟನೆ ನಡೆದಿದೆ. ತನಿಖೆ ನಡೆಯುತ್ತಿದೆ ಎಂದಿದ್ದಾರೆ” ಎಂದು ಹೇಳಿದೆ.

ಇದನ್ನೂ ಓದಿ: ಯುಪಿ: ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ ಅಪ್ರಾಪ್ತೆ ಅಸಹಜ ಸಾವು!

ಇದನ್ನೂ ಓದಿ: ದೇಶಾದ್ಯಂತ ನಡೆಯುವ ದಲಿತರ ಮೇಲಿನ ಹಲ್ಲೆಗಳಲ್ಲಿ ಶೇ.25 ಯುಪಿಯೊಂದರಲ್ಲಿ ವರದಿಯಾಗುತ್ತವೆ!

ಪಡಿತರ ಅಂಗಡಿಗಳ ಹಂಚಿಕೆ ಕುರಿತ ಸಭೆಯನ್ನು ಅಧಿಕಾರಿಯೊಬ್ಬರು ರದ್ದುಪಡಿಸಿದ ನಂತರ, ಅಲ್ಲಿ ಸೇರಿದ್ದ ಸದಸ್ಯರ ನಡುವಿನ ವಿವಾದದಿಂದಾಗಿ ದುರ್ಜನ್‌ಪುರ ಗ್ರಾಮದಲ್ಲಿ ನಡೆದ ಸಭೆಯಲ್ಲಿ ಗುಂಡು ಹಾರಿಸಲಾಗಿದೆ ಎಂದು ಎಸ್‌ಪಿ ದೇವೇಂದ್ರ ನಾಥ್ ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಸಭೆ ಟೆಂಟ್‌ನಲ್ಲಿ ನಡೆಯಿತು, ಅಲ್ಲಿ ಹೆಚ್ಚಿನ ಸಂಖ್ಯೆಯ ಜನರು ಜಮಾಯಿಸಿದರು. ಆಡಳಿತ ಮತ್ತು ಪೊಲೀಸ್ ಅಧಿಕಾರಿಗಳೂ ಅಲ್ಲಿದ್ದರು ಎಂದು ಸ್ಥಳೀಯ ನಿವಾಸಿಗಳು ತಿಳಿಸಿದ್ದಾರೆ.

ಬಿಜೆಪಿ ಶಾಸಕ ಸುರೇಂದ್ರ ಸಿಂಗ್, ಆರೋಪಿಯನ್ನು ಬಿಜೆಪಿಯ ಮಾಜಿ ಸೈನಿಕರ ಘಟಕದ ಮುಖ್ಯಸ್ಥರು ಎಂದು ದೃಢಪಡಿಸಿದ್ದು, “ಈ ಘಟನೆ ಎಲ್ಲಿಬೇಕಾದರೂ ಸಂಭವಿಸಬಹುದಾದ ಆಕಸ್ಮಿಕ ಘಟನೆ. ಇಲ್ಲಿ ಎರಡೂ ಕಡೆಯಿಂದ ಕಲ್ಲು ತೂರಾಟ ನಡೆದಿತ್ತು. ಈ ವಿಷಯದಲ್ಲಿ ಕಾನೂನು ತನ್ನ ಕೆಲಸವನ್ನು ನಿರ್ವಹಿಸಲಿದೆ” ಎಂದು ಹೇಳಿದರು.

ಇದನ್ನೂ ಓದಿ: ’ಯುಪಿ, ಬಿಹಾರದಂತೆ ಪ.ಬಂಗಾಳವೂ ಮಾಫಿಯಾ ರಾಜ್ಯವಾಗುತ್ತಿದೆ’- ಬಿಜೆಪಿ ನಾಯಕ

ಸಂತ್ರಸ್ತನ ಸಹೋದರ ನೀಡಿದ ದೂರಿನ ಮೇರೆಗೆ 15-20 ಜನರ ವಿರುದ್ಧ ಪೊಲೀಸ್ ಪ್ರಕರಣ ದಾಖಲಿಸಲಾಗಿದೆ. ಇನ್ನೂ ಯಾರನ್ನೂ ಬಂಧಿಸಿಲ್ಲ.

ಘಟನೆಯನ್ನು ಗಂಭೀರವಾಗಿ ಗಮನಿಸಿದ ಮುಖ್ಯಮಂತ್ರಿ ಆದಿತ್ಯನಾಥ್, ಸ್ಥಳದಲ್ಲಿದ್ದ ಎಸ್‌ಡಿಎಂ, ಸಿಒ ಮತ್ತು ಪೊಲೀಸ್ ಸಿಬ್ಬಂದಿಯನ್ನು ತಕ್ಷಣವೇ ಅಮಾನತುಗೊಳಿಸಬೇಕು ಮತ್ತು ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ನಿರ್ದೇಶಿಸಿದ್ದಾರೆ ಎಂದು ಗೃಹ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅವನಿಶ್ ಕುಮಾರ್ ಅವಸ್ಥಿ ತಿಳಿಸಿದ್ದಾರೆ.

ಕಾನೂನು ಸುವ್ಯವಸ್ಥೆ ಕಾಪಾಡಲು ಗ್ರಾಮದಲ್ಲಿ ಗಣನೀಯ ಪ್ರಮಾಣದ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


ಇದನ್ನೂ ಓದಿ: ಹತ್ರಾಸ್: ಶವ ಸುಟ್ಟಿದ್ದನ್ನು ಸುಪ್ರೀಂ‌ನಲ್ಲಿ ಸಮರ್ಥಿಸಿಕೊಂಡ ಯುಪಿ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...