Homeಮುಖಪುಟಉ.ಪ್ರದೇಶ: ದೂರು ನೀಡಲು ಬಂದ ದಲಿತ ಮಹಿಳೆ ಮೇಲೆ ಪೊಲೀಸ್ ಅಧಿಕಾರಿಯಿಂದಲೇ ಅತ್ಯಾಚಾರ

ಉ.ಪ್ರದೇಶ: ದೂರು ನೀಡಲು ಬಂದ ದಲಿತ ಮಹಿಳೆ ಮೇಲೆ ಪೊಲೀಸ್ ಅಧಿಕಾರಿಯಿಂದಲೇ ಅತ್ಯಾಚಾರ

- Advertisement -
- Advertisement -

ದೂರು ದಾಖಲಿಸಲು ತೆರಳಿದ್ದ ದಲಿತ ಮಹಿಳೆಯ ಮೇಲೆ ಪೊಲೀಸ್ ಅಧಿಕಾರಿಯೊಬ್ಬರು ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದ ಪ್ರಯಾಗ್​ರಾಜ್​ನಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಸಬ್​ ಇನ್ಸ್​ಪೆಕ್ಟರ್​ನನ್ನು ಅಮಾನತುಗೊಳಿಸಲಾಗಿದೆ ಎಂದು ಹೇಳಲಾಗಿದೆ.

ಈ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿ ಸುಧೀರ್ ಕುಮಾರ್ ಮಾತನಾಡಿ, ”ಸಂತ್ರಸ್ತೆ ತನ್ನ ದೂರಿನಲ್ಲಿ ಸೆಪ್ಟೆಂಬರ್ 21 ರಂದು ಝಂಘೈ ಪೊಲೀಸ್ ಹೊರಠಾಣೆ ಉಸ್ತುವಾರಿ ಸುಧೀರ್ ಕುಮಾರ್ ಪಾಂಡೆ ತನ್ನ ಮೇಲೆ ಅತ್ಯಾಚಾರವೆಸಗಿದ್ದಾರೆ” ಎಂದು ಆರೋಪಿಸಿದ್ದಾರೆ.

ಮಹಿಳೆಯ ದೂರಿನ ಆಧಾರದ ಮೇಲೆ ಸರಾಯಿ ಮಾಮ್ರೇಜ್ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್‌ಪೆಕ್ಟರ್ ಆಗಿರುವ ಪಾಂಡೆ ವಿರುದ್ಧ ಐಪಿಸಿ ಸೆಕ್ಷನ್ 376 (ಅತ್ಯಾಚಾರ) ಮತ್ತು 120 ಬಿ ಮತ್ತು ಎಸ್‌ಸಿ/ಎಸ್‌ಟಿ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಕುಮಾರ್ ಹೇಳಿದರು.

ಸಧ್ಯ ಇನ್ಸ್​ಪೆಕ್ಟರ್ ಪಾಂಡೆ ತಲೆಮರೆಸಿಕೊಂಡಿದ್ದಾನೆ. ಪೊಲೀಸ್ ಮೂಲಗಳ ಪ್ರಕಾರ, ಮಹಿಳೆಗೆ ಕೆಲವು ಪುರುಷರು ಕಿರುಕುಳ ನೀಡುತ್ತಿದ್ದಾರೆ ಮತ್ತು ಕೊಲೆ ಬೆದರಿಕೆಗಳನ್ನು ಹಾಕುತ್ತಿದ್ದಾರೆ ಎಂದು ದೂರು ನೀಡಲು ಮಹಿಳೆ ಪೊಲೀಸ್​ ಠಾಣೆಗೆ ಹೋಗಿದ್ದಳು.

ಸೆಪ್ಟೆಂಬರ್ 21 ರಂದು ಸಂಜೆ ಸಬ್ ಇನ್ಸ್‌ಪೆಕ್ಟರ್ ಪಾಂಡೆ ಆಕೆಯನ್ನು ಪೊಲೀಸ್ ಔಟ್‌ಪೋಸ್ಟ್‌ಗೆ ಕರೆಸಿದ್ದರು. ಪುರುಷರನ್ನು ಬಂಧಿಸಲು ಹೋಗುವ ನೆಪದಲ್ಲಿ ಆಕೆಯನ್ನು ಕಾರಿನಲ್ಲಿ ಕರೆದೊಯ್ದು ಮತ್ತು ಬರುವ ಔಷಧಿ ಬೆರೆಸಿ ಪ್ರಜ್ಞೆ ತಪ್ಪಿಸಿ ಕಾರಿನಲ್ಲಿ ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ತನಿಖೆ ನಡೆಸುವಂತೆ ಪೊಲೀಸ್ ಕಮಿಷನರ್ ರಮಿತ್ ಶರ್ಮಾ ಅವರು ಹಂಡಿಯಾ ಎಸಿಪಿ ಸುಧೀರ್ ಕುಮಾರ್ ಅವರಿಗೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಐಟಿ ನಿಯಮಗಳ ತಿದ್ದುಪಡಿ, ಪ್ರತ್ಯೇಕ ಫ್ಯಾಕ್ಟ್‌ಚೆಕ್ ಘಟಕದ ಅಗತ್ಯತೆ ಏನಿದೆ?: ಕೇಂದ್ರಕ್ಕೆ ಬಾಂಬೆ ಹೈಕೋರ್ಟ್ ಪ್ರಶ್ನೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...