Homeಮುಖಪುಟಉತ್ತರಪ್ರದೇಶ: ತುತ್ತು ಅನ್ನಕ್ಕಾಗಿ ತಾಯಿ-ಹೆಂಡತಿಯ ಮಾಂಗಲ್ಯ ಮಾರಿದ ವಲಸೆ ಕಾರ್ಮಿಕ; ಇದು ಇವನೊಬ್ಬನ ಕಥೆಯಲ್ಲ!

ಉತ್ತರಪ್ರದೇಶ: ತುತ್ತು ಅನ್ನಕ್ಕಾಗಿ ತಾಯಿ-ಹೆಂಡತಿಯ ಮಾಂಗಲ್ಯ ಮಾರಿದ ವಲಸೆ ಕಾರ್ಮಿಕ; ಇದು ಇವನೊಬ್ಬನ ಕಥೆಯಲ್ಲ!

- Advertisement -
- Advertisement -

ಕೊರೊನಾ ಲಾಕ್‌ಡೌನ್‌ನಿಂದ ಸಂಕಷ್ಟಕ್ಕೊಳಗಾದ ವಲಸೆ ಕಾರ್ಮಿಕನೊಬ್ಬ ಆಹಾರ ಮತ್ತು ಔಷಧಕ್ಕಾಗಿ ತನ್ನ ತಾಯಿ ಹಾಗೂ ಹೆಂಡತಿಯ ಮಾಂಗಲ್ಯ ಮಾರಿದ ಘಟನೆ ಉತ್ತರ ಪ್ರದೇಶದ ಖನೌ‌ಜ್‌ನಲ್ಲಿ ನಡೆದಿದೆ.

ಲಖನೌದಿಂದ 150 ಕಿ.ಮೀ ದೂರದಲ್ಲಿರುವ ಖನೌಜ್‌ನ ಫತೇಪುರ್ ಜಶೋಧ ಎಂಬ ಗ್ರಾಮದ ಶ್ರೀ ರಾಮ್ ತಮಿಳುನಾಡಿಗೆ ವಲಸೆ ಹೋಗಿ ಕಡಲೂರು ಎಂಬ ಜಿಲ್ಲೆಯಲ್ಲಿ ಕೃಷಿಯ ಜೊತೆಗೆ ಕುಲ್ಪೀ ಐಸ್ ಮಾರಾಟ ಮಾಡಿ ಬದುಕುತ್ತಿದ್ದರು.

ಕುಟುಂಬದ ಸದಸ್ಯರು ತಮಿಳುನಾಡಿನ ಓರ್ವ ಜಮೀನುದಾರನ ಬಳಿ ಕೃಷಿ ಕೂಲಿಗಾರರಾಗಿ ಕೆಲಸ ಮಾಡುತ್ತಿದ್ದರು. ಆದರೆ, ಕೊರೋನಾ ಲಾಕ್‌ಡೌನ್‌ ಕಾರಣದಿಂದಾಗಿ ಕುಟುಂಬ ಸಮೇತರಾಗಿ ಉತ್ತರಪ್ರದೇಶಕ್ಕೆ ಮರಳಿದ್ದ ಈ ಕುಟುಂಬ ತುತ್ತು ಅನ್ನಕ್ಕೂ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದ್ದು, ಶ್ರೀ ರಾಮ್ ಕನೌಜಿನ ಸ್ಥಳೀಯ ಮಾರುಕಟ್ಟೆಯಲ್ಲಿ ತನ್ನ ಹೆಂಡತಿ ಮತ್ತು ತಾಯಿಯ ಮಾಂಗಲ್ಯವನ್ನು ಕೇವಲ 1,500 ರೂ ಗೆ ಮಾರಾಟ ಮಾಡಿ ಮನೆಗೆ ಆಹಾರ ಧಾನ್ಯ ಮತ್ತು ಔಷಧಿಯನ್ನು ಖರೀದಿಸಿದ್ದಾರೆ.

ತಮಿಳುನಾಡಿನಿಂದ ಊರಿಗೆ ಮರಳಿರುವ ಅವರ ಕುಟುಂಬದ ಬಳಿ ಪಡಿತರ ಚೀಟಿ, ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಕೆಲಸ ಮಾಡಲು ಜಾಬ್ ಕಾರ್ಡ್ ಸಹ ಇರಲಿಲ್ಲ ಎನ್ನಲಾಗಿದ್ದು, ಹೀಗಾಗಿ ಶ್ರೀರಾಮ್ ಆಹಾರಕ್ಕಾಗಿ ತನ್ನ ತಾಯಿ ಮತ್ತು ಹೆಂಡತಿಯ ಮಾಂಗಲ್ಯ ಮಾರಾಟ ಮಾಡಲು ಮುಂದಾಗಿದ್ದಾರೆ.

ತನ್ನ ಅಸಹಾಯಕತೆಯ ಕುರಿತು ಸ್ಥಳೀಯ ಮಾಧ್ಯಮಗಳಲ್ಲಿ ಅಳಲು ತೋಡಿಕೊಂಡ ಶ್ರೀ ರಾಮ್, “ನಾವು ತಮಿಳುನಾಡಿನಿಂದ ಹಿಂದಿರುಗಿದಾಗ ಸರ್ಕಾರದಿಂದ ತಲಾ 10 ಕೆಜಿ ಅಕ್ಕಿ ಮತ್ತು ಧಾನ್ಯವನ್ನು ಪಡೆದುಕೊಂಡಿದ್ದೇವೆ. ಆದರೆ ನಾವು ಒಂದು ದೊಡ್ಡ ಕುಟುಂಬವಾದ್ದರಿಂದ ಈ ಧಾನ್ಯ ನಮಗೆ ಸಾಕಾಗಿರಲಿಲ್ಲ. ಅಲ್ಲದೆ, ಪಡಿತರ ಚೀಟಿಯೂ ಇಲ್ಲದ ಕಾರಣ ನಾವು ಪಡಿತರ ವ್ಯವಸ್ಥೆಯಿಂದಲೇ ಹೊರಗುಳಿದಿದ್ದೇವೆ” ಎಂದು ಹೇಳುತ್ತಾರೆ.

ಈ ನಡುವೆ ನನ್ನ ತಾಯಿ ಮತ್ತು ಇಬ್ಬರು ಒಡಹುಟ್ಟಿದವರು ಅನಾರೋಗ್ಯಕ್ಕೆ ಒಳಗಾದರು. ನನ್ನ ತಂದೆ ಕೆಲಸ ಪಡೆಯಲು ಪ್ರಯತ್ನಿಸಿದರು ಆದರೆ ಎಲ್ಲೂ ಉದ್ಯೋಗವಿಲ್ಲ. ಅಂತಿಮವಾಗಿ, ನನ್ನ ತಾಯಿ ಮತ್ತು ಹೆಂಡತಿ ಧರಿಸುತ್ತಿದ್ದ ಆಭರಣಗಳನ್ನು ಮಾರಾಟ ಮಾಡುವುದನ್ನು ಬಿಟ್ಟು ನನಗೆ ಬೇರೆ ದಾರಿಯಿಲ್ಲ. ಈ ಹಣ ಸಹ ಕೆಲವು ದಿನಗಳ ಆಹಾರ ಮತ್ತು ಔಷಧಕ್ಕೆ ಮಾತ್ರ ಸಾಲುತ್ತದೆ. ಹೊಸ ಪಡಿತರ ಚೀಟಿಗೆ ನಾವು ಮನವಿ ಸಲ್ಲಿಸಿದರೆ, ಈಗ ಪಡಿತರ ಚೀಟಿ ನೀಡಲಾಗುವುದಿಲ್ಲ ಎನ್ನುತ್ತಾರೆ” ಎಂದು ಅವರು ಹೇಳಿಕೊಂಡಿದ್ದಾರೆ.

ಈ ಸುದ್ದಿ ಸ್ಥಳೀಯ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದ್ದಂತೆ ಎಚ್ಚೆತ್ತಿರುವ ಜಿಲ್ಲಾಡಳಿತ ಈ ಕುಟುಂಬಕ್ಕೆ ಪಡಿತರ ಚೀಟಿ ಮತ್ತು ಉದ್ಯೋಗ ಖಾತ್ರಿ ಜಾಬ್‌ ಕಾರ್ಡ್‌ ಅನ್ನು ನೀಡಿದೆ.

ಆದರೆ ಜಾಲತಾಣಿಗರು, ಇದು ಕೇವಲ ಶ್ರೀರಾಮ್‌ ಎಂಬ ಓರ್ವ ವಲಸೆ ಕಾರ್ಮಿಕನ ಕಥೆಯಲ್ಲ. ಬದಲಾಗಿ ಭಾರತದಾದ್ಯಂತ ಇರುವ ಇಂತಹ ಲಕ್ಷಾಂತರ ಶ್ರೀರಾಮ್‌ಗಳು ಲಾಕ್‌ಡೌನ್ ಕಾರಣದಿಂದಾಗಿ ತುತ್ತು ಅನ್ನಕ್ಕಾಗಿ ಪರದಾಡಬೇಕಾದಂತಹ ಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳುತ್ತಿದ್ದಾರೆ.


ಓದಿ: ಯಾವೊಬ್ಬ ವಲಸೆ ಕಾರ್ಮಿಕರೂ ಆಹಾರವಿಲ್ಲದೆ ಸಾವನ್ನಪ್ಪಿಲ್ಲ: ನಳಿನ್ ಕುಮಾರ್‌ ಕಟೀಲ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...