Homeಮುಖಪುಟಉತ್ತರ ಪ್ರದೇಶ| ಪ್ರೀತಿಯಿಂದ ಸಾಕಿದ್ದ ಬೆಕ್ಕಿನ ಮರಣದಿಂದ ಮನನೊಂದು ಆತ್ಮಹತ್ಯೆಗೆ ಶರಣಾದ ಮಹಿಳೆ

ಉತ್ತರ ಪ್ರದೇಶ| ಪ್ರೀತಿಯಿಂದ ಸಾಕಿದ್ದ ಬೆಕ್ಕಿನ ಮರಣದಿಂದ ಮನನೊಂದು ಆತ್ಮಹತ್ಯೆಗೆ ಶರಣಾದ ಮಹಿಳೆ

- Advertisement -
- Advertisement -

ತಾನು ಪ್ರೀತಿಯಿಂದ ಸಾಕಿದ್ದ ಬೆಕ್ಕಿನ ಸಾವಿನಿಂದ ಕಂಗಾಲಾದ ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯ ಮಹಿಳೆಯೊಬ್ಬರು, ಅದು ಮತ್ತೆ ಜೀವಕ್ಕೆ ಬರುತ್ತದೆ ಎಂಬ ಆಶಯದೊಂದಿಗೆ ಎರಡು ದಿನಗಳ ಕಾಲ ಅದರ ಶವವನ್ನು ತನ್ನ ಹತ್ತಿರದಲ್ಲೇ ಇಟ್ಟುಕೊಂಡಿದ್ದರು. ಆಕೆಯ ಭರವಸೆಗಳು ಭಗ್ನಗೊಂಡಾಗ, ಮರುದಿನ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಅಮ್ರೋಹಾದ ಹಸನ್‌ಪುರ ನಿವಾಸಿಯಾಗಿದ್ದ 32 ವರ್ಷದ ಪೂಜಾ, ಸುಮಾರು ಎಂಟು ವರ್ಷಗಳ ಹಿಂದೆ ದೆಹಲಿಯ ವ್ಯಕ್ತಿಯನ್ನು ವಿವಾಹವಾದರು. ಆದರೆ, ಎರಡು ವರ್ಷಗಳ ನಂತರ ವಿವಾಹ ವಿಚ್ಛೇದನದಲ್ಲಿ ಕೊನೆಗೊಂಡಿತು. ಅಂದಿನಿಂದ ಅವರು ತಮ್ಮ ತಾಯಿ ಗಜ್ರಾ ದೇವಿಯೊಂದಿಗೆ ತಮ್ಮ ಪೋಷಕರ ಮನೆಯಲ್ಲಿ ವಾಸಿಸುತ್ತಿದ್ದರು.

ಒಂಟಿತನವನ್ನು ನಿಭಾಯಿಸಲು, ಪೂಜಾ ಒಂದು ಸಾಕು ಬೆಕ್ಕನ್ನು ದತ್ತು ಪಡೆದಿದ್ದು, ದರಾದೃಷ್ಟವಶಾತ್ ಅದು ಗುರುವಾರ ಸತ್ತುಹೋಯಿತು. ಆಕೆಯ ತಾಯಿ ಪ್ರಾಣಿಯನ್ನು ಹೂಳಲು ಸೂಚಿಸಿದಾಗ, ಪೂಜಾ ನಿರಾಕರಿಸಿದರು. ಅದು ಮತ್ತೆ ಜೀವಂತವಾಗುತ್ತದೆ ಎಂದು ಪಟ್ಟುಹಿಡಿದಿದ್ದರು. ಪೂಜಾ ಎರಡು ದಿನಗಳ ಕಾಲ ಬೆಕ್ಕಿನ ಶವವನ್ನು ಬಿಡಲು ಇಷ್ಟವಿರಲಿಲ್ಲ. ಆಕೆಯ ತಾಯಿ ಮತ್ತು ಇತರ ಕುಟುಂಬ ಸದಸ್ಯರು ಅದನ್ನು ಹೂಳಲು ಮನವೊಲಿಸಲು ಪ್ರಯತ್ನಿಸಿದ್ದರು ಎನ್ನಲಾಗಿದೆ.

ಶನಿವಾರ ಮಧ್ಯಾಹ್ನ, ಮೃತ ಮಹಿಳೆ ತಮ್ಮ ಮನೆಯ ಮೂರನೇ ಮಹಡಿಯಲ್ಲಿರುವ ತನ್ನ ಕೋಣೆಯಲ್ಲಿ ಬೀಗ ಹಾಕಿಕೊಂಡರು. ಆ ರಾತ್ರಿ 8 ಗಂಟೆ ಸುಮಾರಿಗೆ, ಗಜ್ರಾ ದೇವಿ ತನ್ನ ಮಗಳನ್ನು ನೋಡಲು ಹೋದರು. ಪೂಜಾಳ ಶವ ಸೀಲಿಂಗ್ ಫ್ಯಾನ್‌ಗೆ ನೇತಾಡುತ್ತಿರುವುದನ್ನು ಹಾಗೂ ಹತ್ತಿರದಲ್ಲಿ ಸತ್ತ ಬೆಕ್ಕು ಬಿದ್ದಿರುವುದನ್ನು ಅವರು ಕಂಡರು. ಆಕೆಯ ಕಿರುಚಾಟದಿಂದ ಎಚ್ಚೆತ್ತುಕೊಂಡ ನೆರೆಹೊರೆಯವರು, ತಕ್ಷಣ ಸ್ಥಳಕ್ಕೆ ಬಂದು ಪೊಲೀಸರಿಗೆ ಮಾಹಿತಿ ನೀಡಿದರು.

ಪೊಲೀಸರು ಮನೆಗೆ ಆಗಮಿಸಿದರು ಮತ್ತು ವಿಧಿವಿಜ್ಞಾನ ತಂಡವು ಸಾಕ್ಷ್ಯಗಳನ್ನು ಸಂಗ್ರಹಿಸಿತು. ಈ ವಿಷಯದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.

ನೆನಪಿಡಿ : ಯಾವುದೇ ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ. ದುಡುಕಿನ ನಿರ್ಧಾರ ತೆಗೆದುಕೊಳ್ಳಬೇಡಿ. ತುರ್ತು ಪರಿಸ್ಥಿತಿಯಿದ್ದರೆ ಕರೆ ಮಾಡಿ ವೈದ್ಯರೊಂದಿಗೆ ಮಾತನಾಡಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104

ನಕಲಿ ಮತದಾರರ ಗುರುತಿನ ಚೀಟಿಗಳು ನಕಲಿ ಮತದಾರರನ್ನು ಸೂಚಿಸುವುದಿಲ್ಲ: ಭಾರತೀಯ ಚುನಾವಣಾ ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...