Homeಮುಖಪುಟಉ.ಪ್ರದೇಶ: ದಲಿತ ಮಹಿಳೆಯ ಕೊಲೆ ಆರೋಪ, ತಲೆ ಮರೆಸಿಕೊಂಡ ಪೊಲೀಸ್ ಪೇದೆ!

ಉ.ಪ್ರದೇಶ: ದಲಿತ ಮಹಿಳೆಯ ಕೊಲೆ ಆರೋಪ, ತಲೆ ಮರೆಸಿಕೊಂಡ ಪೊಲೀಸ್ ಪೇದೆ!

- Advertisement -
- Advertisement -

ಉತ್ತರ ಪ್ರದೇಶದ ಪೊಲೀಸ್ ಪೇದೆಯೊಬ್ಬ ದಲಿತ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಆರೋಪ ಎದುರಿಸುತ್ತಿದ್ದು, ದೂರು ದಾಖಲಾಗುವ ಮುನ್ನವೆ ಆತ ತಲೆಮರೆಸಿಕೊಂಡಿರುವ ಘಟನೆ ಉತ್ತರ ಪ್ರದೇಶದಲ್ಲಿ ಕಳೆದ ಶನಿವಾರ ನಡೆದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಪೇದೆಯ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಆರೋಪಿ ರಾಘವೇಂದ್ರ ಸಿಂಗ್‌ನನ್ನು (26) ಆಗ್ರಾದ ಸಹಾಯಕ ಪೊಲೀಸ್ ಕಮಿಷನರ್ (ಎಸಿಪಿ) ಕಚೇರಿಯಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು ಎಂದು ತಿಳಿದುಬಂದಿದೆ.

ಮೃತ ಮಹಿಳೆಯ ತಂದೆ ಪೊಲೀಸ್ ಪೇದೆಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಆರೋಪಿಯ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯ ಸೆಕ್ಷನ್‌ಗಳನ್ನೂ ಸಹ ಹಾಕಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

‘ಕಾನ್ಸ್ಟೆಬಲ್ ತನ್ನ ಮಗಳನ್ನು ಆಗ್ರಾದಲ್ಲಿರುವ ತನ್ನ ಮನೆಗೆ ಕರೆದು ಅತ್ಯಾಚಾರ ಎಸಗಿದ್ದಾರೆ. ನಂತರ ಕತ್ತು ಹಿಸುಕಿ ಕೊಂದಿದ್ದಾನೆ. ನನ್ನ ಮಗಳನ್ನು ಕೊಲೆ ಮಾಡಿದ ನಂತರ ಆಸ್ಪತ್ರೆಗೆ ಕರೆದೊಯ್ದು ಅಲ್ಲಿಂದ ಪರಾರಿಯಾಗಿದ್ದಾನೆ’ ಮೃತ ಮಹಿಳೆಯ ತಂದೆ ಆರೋಪಿಸಿದ್ದಾರೆ.

‘ಆರೋಪಿ ರಾಘವೇಂದ್ರ ಸಿಂಗ್ ಅವರನ್ನು ಅಮಾನತುಗೊಳಿಸಲಾಗಿದ್ದು, ಆತನ ಪತ್ತೆಗೆ ಶೋಧ ನಡೆಸಲಾಗುತ್ತಿದೆ. ಸಂತ್ರಸ್ತೆಯ ಮರಣೋತ್ತರ ಪರೀಕ್ಷೆಯನ್ನು ವೈದ್ಯರ ಸಮಿತಿ ನಡೆಸುತ್ತಿದೆ ಮತ್ತು ಸಂಪೂರ್ಣ ಪ್ರಕ್ರಿಯೆಯನ್ನು ವೀಡಿಯೋ ಮಾಡಲಾಗುತ್ತಿದೆ’ ಎಂದು ಆಗ್ರಾದ ಎಸಿಪಿ ರಾಕೇಶ್ ಕುಮಾರ್ ಸಿಂಗ್ ಹೇಳಿದ್ದಾರೆ.

‘ಸಂತ್ರಸ್ತೆ ಗುರುಗ್ರಾಮದ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದು, ಕಳೆದ ಐದು ವರ್ಷಗಳಿಂದ ಕಾನ್ಸ್ಟೆಬಲ್ ಪರಿಚಯವಿತ್ತು. ಅವರು ಝಾನ್ಸಿಯ ನರ್ಸಿಂಗ್ ಶಾಲೆಯಲ್ಲಿ ಓದುತ್ತಿದ್ದಾಗ ಪರಸ್ಪರ ಸಂಪರ್ಕಕ್ಕೆ ಬಂದರು; ಮದುವೆಯಾಗಲು ಬಯಸಿದ್ದರು’ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆರೋಪಿ ಸಿಂಗ್ ಶುಕ್ರವಾರ ಮಧ್ಯಾಹ್ನ ಆಗ್ರಾದಲ್ಲಿರುವ ತನ್ನ ಸ್ನೇಹಿತ ಆಕಾಶ್‌ ಎಂಬುವವರಿಗೆ ಕರೆ ಮಾಡಿ, ‘ಗುರುವಾರ ರಾತ್ರಿ ಮಹಿಳಾ ಸ್ನೇಹಿತೆಯೊಬ್ಬರು ತಮ್ಮ ಮನೆಗೆ ಬಂದಿದ್ದಾರೆ’ ಎಂದು ತಿಳಿಸಿದ್ದಾನೆ. ಮರುದಿನ ಬೆಳಿಗ್ಗೆ (ಶುಕ್ರವಾರ) ಅವಳನ್ನು ಮನೆಯಲ್ಲಿ ಬಿಟ್ಟು ಕಚೇರಿಗೆ ಹೋದೆ ಎಂದು ಆತನ ತನ್ನ ಸ್ನೇಹಿತನಿಗೆ ಹೇಳಿದ್ದು, ಸುಮಾರು ಎರಡು ಗಂಟೆಗಳ ನಂತರ ರಾಘವೇಂದ್ರ ಮನೆಗೆ ಹಿಂದಿರುಗಿದಾಗ, ಆಕೆ ಸೀಲಿಂಗ್ ಫ್ಯಾನಿಗೆ ನೇಣು ಹಾಕಿಕೊಂಡಿರುವುದು ಕಂಡುಬಂದಿದೆ. ಕೂಡಲೇ ಆಕೆಯನ್ನು ಕೆಳಗಿಳಿಸಿ ಆಸ್ಪತ್ರೆಗೆ ಕರೆದೊಯ್ದಾಗ ವೈದ್ಯರು ಆಕೆ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸ್ ತಂಡ ಆಸ್ಪತ್ರೆಗೆ ಧಾವಿಸುವಷ್ಟರಲ್ಲಿ ಸಿಂಗ್ ಆಸ್ಪತ್ರೆಯಿಂದ ಪರಾರಿಯಾಗಿದ್ದಾನೆ. ನಂತರ ಪೊಲೀಸರು ಆತನ ಮನೆಗೆ ತಲುಪಿದಾಗ ಬೀಗ ಹಾಕಲಾಗಿತ್ತು. ಬಾಗಿಲು ಒಡೆದು ಮನೆಯನ್ನು ಶೋಧಿಸಿದ್ದಾರೆ. ಆದರೆ, ಮನೆಯಲ್ಲಿ ಯಾವುದೇ ಡೆತ್ ನೋಟ್ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ.

‘ಪ್ರಾಥಮಿಕ ವಿಚಾರಣೆಯಲ್ಲಿ ಸಿಂಗ್ ಮತ್ತು ಮೃತ ಮಹಿಳೆ ಸಂಬಂಧ ಹೊಂದಿದ್ದು ಬೆಳಕಿಗೆ ಬಂದಿದೆ. ರಾಘವೇಂದ್ರನ ತಂದೆ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು. ಕಳೆದ ತಿಂಗಳಿನಿಂದ ಜೋಡಿಗಳ ನಡುವೆ ಭಿನ್ನಾಭಿಪ್ರಾಯ ಉಂಟಾಗಿತ್ತು. ಗುರುವಾರ ರಾತ್ರಿ ಸಂತ್ರಸ್ತೆ ಆಗ್ರಾಕ್ಕೆ ಬಂದು ಕಾನ್ಸ್ಟೆಬಲ್ ಮನೆಗೆ ಹೋಗಿದ್ದಳು’ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ; ಹಿಂಬಾಲಿಸುವುದು, ನಿಂದಿಸುವುದು ಮಹಿಳೆಯ ಘನತೆಗೆ ಧಕ್ಕೆ ತರುವ ಅಪರಾಧವಾಗದು: ಬಾಂಬೆ ಹೈಕೋರ್ಟ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read