Homeಮುಖಪುಟಯುಪಿ: 9 ಜನರ ಮೇಲೆ ಪೊಲೀಸರ ಅಮಾನವೀಯ ಹಲ್ಲೆ, ರಿಟರ್ನ್ ಗಿಫ್ಟ್ ಎಂದ ಬಿಜೆಪಿ ಶಾಸಕ

ಯುಪಿ: 9 ಜನರ ಮೇಲೆ ಪೊಲೀಸರ ಅಮಾನವೀಯ ಹಲ್ಲೆ, ರಿಟರ್ನ್ ಗಿಫ್ಟ್ ಎಂದ ಬಿಜೆಪಿ ಶಾಸಕ

- Advertisement -
- Advertisement -

ನಿನ್ನೆಯಿಂದ ಸಾಮಾಜಿಕ ಜಾಲತಾಣದಲ್ಲಿ ಇಬ್ಬರು ಪೊಲೀಸರು 9 ಜನರನ್ನು ಲಾಠಿಯಿಂದ ಅಮಾನವೀಯವಾಗಿ, ಮನಬಂದಂತೆ ಥಳಿಸುತ್ತಿರುವ ವಿಡಿಯೋ ವೈರಲ್ ಆಗಿದ್ದು, ಪೊಲೀಸರ ವರ್ತನೆಗೆ ಜನರು ಆಕ್ರೋಶ ಹಾಕಿದ್ದಾರೆ.

ಉತ್ತರ ಪ್ರದೇಶದ ಬಿಜೆಪಿ ಶಾಸಕ ಶಲಭ್ ಮಣಿ ತ್ರಿಪಾಠಿ “ಗಲಭೆಕೋರರಿಗೆ ರಿಟರ್ನ್ ಗಿಫ್ಟ್” ಎಂಬ ಶೀರ್ಷಿಕೆಯೊಂದಿಗೆ ತಮ್ಮ ಟ್ವಿಟ್ಟರ್‌ನಲ್ಲಿ ಈ ವಿಡಿಯೊವನ್ನು ಹಂಚಿಕೊಂಡಿದ್ದಾರೆ. ತ್ರಿಪಾಠಿ ಈ ಘಟನೆ ಎಲ್ಲಿ ಮತ್ತು ಯಾವಾಗ ನಡೆಯಿತು ಎಂಬುದರ ಕುರಿತು ಯಾವುದೇ ವಿವರಗಳನ್ನು ಹಂಚಿಕೊಂಡಿಲ್ಲ.

ಶಾಸಕ ಶಲಭ್ ಮಣಿ ತ್ರಿಪಾಠಿ ಮಾಜಿ ಪತ್ರಕರ್ತರಾಗಿದ್ದು, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಮಾಧ್ಯಮ ಸಲಹೆಗಾರರಾಗಿದ್ದರು. ಈ ಘಟನೆಯ ವೀಡಿಯೊವು ಪೊಲೀಸರ ವಿರುದ್ಧ ಆಕ್ರೋಶವನ್ನು ಹುಟ್ಟುಹಾಕಿದ್ದು, ಪ್ರತಿಪಕ್ಷಗಳು ಪೊಲೀಸ್ ದೌರ್ಜನ್ಯದ ಆರೋಪಗಳನ್ನು ಮಾಡಿದೆ.

ಇದನ್ನೂ ಓದಿ: ಬೆಂಗಳೂರು: ಮದುವೆಯಾಗಲು ನಿರಾಕರಿಸಿದ ಮಹಿಳೆ ಮೇಲೆ ಆಸಿಡ್ ದಾಳಿ, ಆರೋಪಿ ಬಂಧನ

ವರದಿಗಳ ಪ್ರಕಾರ, ಪ್ರವಾದಿ ಮುಹಮ್ಮದ್ ವಿರುದ್ಧ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದ ಇಬ್ಬರು ಮಾಜಿ ಬಿಜೆಪಿ ವಕ್ತಾರರ ವಿರುದ್ಧ ಶುಕ್ರವಾರದ ಪ್ರಾರ್ಥನೆಯ ನಂತರ ಪ್ರತಿಭಟನೆಗಳು ಮತ್ತು ಘರ್ಷಣೆಗಳು ಭುಗಿಲೆದ್ದಿರುವ ಯುಪಿಯ ಸಹರಾನ್‌ಪುರದ ಪೊಲೀಸ್ ಠಾಣೆಯಲ್ಲಿ ಎರಡು ದಿನಗಳ ಹಿಂದೆ ಈ ಘಟನೆ ನಡೆದಿದೆ ಎನ್ನಲಾಗಿದೆ.

“ಇಂತಹ ಘಟನೆಗಳು ನ್ಯಾಯ ವ್ಯವಸ್ಥೆಯ ಮೇಲೆ ಜನರು ನಂಬಿಕೆ ಕಳೆದುಕೊಳ್ಳುವಂತೆ ಮಾಡುತ್ತದೆ. ಇಂತಹ ಪೊಲೀಸ್ ಠಾಣೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತಬೇಕು. ಲಾಕಪ್‌ ಡೇತ್‌ಗಳಲ್ಲಿ ಯುಪಿ ನಂ. 1 ಆಗಿದೆ, ಇದು ಮಾನವ ಹಕ್ಕುಗಳ ಉಲ್ಲಂಘನೆ ಮತ್ತು ದಲಿತರ ಮೇಲಿನ ದೌರ್ಜನ್ಯದಲ್ಲಿ ಅಗ್ರಸ್ಥಾನದಲ್ಲಿದೆ” ಎಂದು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಹೇಳಿದ್ದಾರೆ.

ಶುಕ್ರವಾರದ ಪ್ರತಿಭಟನೆ ಮತ್ತು ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಪೊಲೀಸರು ರಾಜ್ಯದ ವಿವಿಧ ಜಿಲ್ಲೆಗಳಿಂದ 300 ಕ್ಕೂ ಹೆಚ್ಚು ಜನರನ್ನು ಬಂಧಿಸಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ವಾತಾವರಣವನ್ನು ಹಾಳುಮಾಡಲು ಪ್ರಯತ್ನಿಸುವವರ ವಿರುದ್ಧ “ಕಠಿಣ” ಕ್ರಮದ ಎಚ್ಚರಿಕೆ ನೀಡಿದ್ದಾರೆ.

ಸಹರಾನ್‌ಪುರ ಮತ್ತು ಪ್ರಯಾಗ್‌ರಾಜ್‌ನಲ್ಲಿ, ಕಟ್ಟುನಿಟ್ಟಾದ ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿಯಲ್ಲಿ ಬಂಧಿಸಲ್ಪಟ್ಟವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಉತ್ತರ ಪ್ರದೇಶ ಸಹರಾನ್‌ಪುರದಲ್ಲಿ ಹಿಂಸಾಚಾರ ಉಲ್ಬಣಗೊಂಡ ಬೆನ್ನಲ್ಲೆ ಪೊಲೀಸ್ ಅಧಿಕಾರಿಗಳು ಮುಸ್ಲಿಂ ಸಮುದಾಯದ ಮನೆಗಳ ಮೇಲೆ ಬುಲ್ಡೋಜರ್ ಹರಿಸುತ್ತಿದ್ದಾರೆ. ಈ ಕುರಿತು ಹಲವರು ತೀವ್ರ ವಿರೋಧ ದಾಖಲಿಸಿದ್ದು, ಯಾವ ಕಾನೂನಿನ ಆಧಾರದಲ್ಲಿ ಬುಲ್ಡೋಜರ್‌ಗಳಿಂದ ಮನೆ ಧ್ವಂಸ ಮಾಡುತ್ತಿದ್ದೀರಿ ಎಂದು ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ಪರಿಷ್ಕೃತ ಪಠ್ಯ ಪುಸ್ತಕ ವಿರೋಧಿಸಿ ‘ಜೂನ್‌ 18ರ ಶನಿವಾರ’ ಬೆಂಗಳೂರಿನಲ್ಲಿ ಬೃಹತ್‌ ಪ್ರತಿಭಟನೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

2 COMMENTS

  1. ನರ ಕಟ್ ಮಾಡಬೇಕಿತ್ತು .ಈ ದಂಗೆ ಕೋರ ಭಶೀರರಿಗೆ ,ಈ ಶಿಕ್ಷೆ ಅವರಿಗೆ ಏನೇನೂ ಸಾಲದು ,ಸಾರ್ವಜನಿಕರ ಆಸ್ತಿ ಅಂದರೆ ಇನ್ನೊಮ್ಮೆ ಮುಟ್ಟಕ್ಕೂ ಎದರಬೇಕು ಕನಸ್ಸು ಮನಸ್ಸಲ್ಲಿ ಸಹ

  2. ಕೋಮುವಾದಿ ಹಲ್ಕಟ್ ಬಡ್ಡಿ ಮಕ್ಕಳು ತುಂಬಾ ಇದಾರೆ ಎಲ್ಲರಿಗೂ ಗಲ್ಲಿಗೆ ಎರಸಬೇಕು ಬೇವರ್ಸಿಗಳಿಗೆ 😡😡😡ಪ್ರತಿಭಟನೆ ಪ್ರತಿಯೊಬ್ಬ ಪ್ರಜೆಯ ಹಕ್ಕು ಅದನ್ನ ಹತ್ತಿಕ್ಕಲು ಇವರು ಯಾರು ಡೋಂಗಿಗಳು,, ಇಂತವರಿಗೆ ಪಾಠ ಕಲಿಸೋ ದಿನ ದೂರ ಇಲ್ಲ

LEAVE A REPLY

Please enter your comment!
Please enter your name here

- Advertisment -

Must Read

ಪ್ರಿಯಾಂಕ ಗಾಂಧಿ

ಗಾಜಾದಲ್ಲಿ ಇಸ್ರೇಲ್‌ನ ‘ಜನಾಂಗೀಯ ಕೃತ್ಯಗಳು’ ನಿಲ್ಲಬೇಕು: ಪ್ರಿಯಾಂಕಾ ಗಾಂಧಿ

0
ಗಾಜಾದಲ್ಲಿ ಇಸ್ರೇಲ್ ನಡೆಸುತ್ತಿರುವ ಮಿಲಿಟರಿ ದಾಳಿಯನ್ನು ಸ್ವೀಕಾರಾರ್ಹವಲ್ಲ ಮತ್ತು ಹತ್ಯಾಕಾಂಡ ಎಂದು ಹೇಳಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ಇದನ್ನು ಜಗತ್ತಿನ ಪ್ರತಿಯೊಂದು ಸರ್ಕಾರ ಖಂಡಿಸಬೇಕು ಎಂದು ಶುಕ್ರವಾರ ಕರೆ...