Homeಮುಖಪುಟಉತ್ತರ ಪ್ರದೇಶದ IFFCO ಸ್ಥಾವರದಲ್ಲಿ ಅನಿಲ ಸೋರಿಕೆ; ಇಬ್ಬರು ಸಾವು, 15 ಮಂದಿ ಅಸ್ವಸ್ಥ

ಉತ್ತರ ಪ್ರದೇಶದ IFFCO ಸ್ಥಾವರದಲ್ಲಿ ಅನಿಲ ಸೋರಿಕೆ; ಇಬ್ಬರು ಸಾವು, 15 ಮಂದಿ ಅಸ್ವಸ್ಥ

ಅನಿಲ ಸೋರಿಕೆಯನ್ನು​ ನಿಲ್ಲಿಸಲಾಗಿದ್ದು, ಸ್ಥಾವರವನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದ್ದು, ಪರಿಸ್ಥಿತಿ ಹತೋಟಿಯಲ್ಲಿದೆ ಎಂದು ಪ್ರಯಾಗ್​ರಾಜ್​ನ ಜಿಲ್ಲಾಧಿಕಾರಿ ಭಾನು ಚಂದ್ರ ಗೋಸ್ವಾಮಿ ತಿಳಿಸಿದ್ದಾರೆ.

- Advertisement -

ಉತ್ತರಪ್ರದೇಶದ ಪುಲ್ಪುರದಲ್ಲಿರುವ ಇಂಡಿಯನ್ ಫಾರ್ಮರ್ಸ್ ಫರ್ಟಿಲೈಜರ್ ಕೋಆಪರೇಟಿವ್ ಲಿಮಿಟೆಡ್ (IFFCO) ಸ್ಥಾವರದಲ್ಲಿ ಮಂಗಳವಾರ ಮಧ್ಯರಾತ್ರಿ ಅನಿಲ ಸೋರಿಕೆಯಾಗಿ ಇಬ್ಬರು ಅಧಿಕಾರಿಗಳು ಸಾವನ್ನಪ್ಪಿದ್ದಾರೆ ಎಂದು ಕಾರ್ಖಾನೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಅಮೋನಿಯಾ ಸ್ಥಾವರದಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಅಧಿಕಾರಿಗಳು ಸಾವನ್ನಪ್ಪಿದ್ದು, ಮೃತರನ್ನು ವಿ.ಪಿ ಸಿಂಗ್ ಹಾಗೂ ಅಭಯಾನಂದಕುಮಾರ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ 15 ಮಂದಿ ಕಾರ್ಮಿಕರು ಅಸ್ವಸ್ಥರಾಗಿದ್ದಾರೆ. ಕಾರ್ಮಿಕರನ್ನು ಪ್ರಯಾಗ್‌ರಾಜ್‌ನ ಎಸ್‌ಆರ್‌ಎನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ದೆಹಲಿ V/s ಉತ್ತರ ಪ್ರದೇಶ: ಮಾದರಿ ಶಾಲೆ ಚರ್ಚೆಗೆ ಬಾರದ ಉತ್ತರ ಪ್ರದೇಶ ಸಚಿವ!

ವರದಿಗಳ ಪ್ರಕಾರ, ಪ್ರಯಾಗರಾಜ್ ಜಿಲ್ಲೆಯ ಸಂಗಮ್ ನಗರದಿಂದ 25 ಕಿ.ಮೀ ದೂರದಲ್ಲಿರುವ ಇಫ್ಕೊ ಸ್ಥಾವರದ ಪಿಎಫ್ -1 ಘಟಕದಲ್ಲಿ ಅಮೋನಿಯಾ ಅನಿಲ ಸೋರಿಕೆಯಾಗಲು ಪ್ರಾರಂಭಿಸಿತು. ಘಟನಾ ಸ್ಥಳದಲ್ಲಿದ್ದ 47 ವರ್ಷದ ವಿ.ಪಿ.ಸಿಂಗ್ ಸೋರಿಕೆಯನ್ನು ಸರಿಪಡಿಸಲು ಹೋಗಿ ತಾವೇ ತೊಂದರೆಗೆ ಒಳಗಾಗಿದ್ದಾರೆ. ಇದನ್ನು ಗಮನಿಸಿದ ಮತ್ತೊಬ್ಬ ಅಧಿಕಾರಿ ಅಭಯ್ ನಂದನ್ (57 ವರ್ಷ) ಅವರ ಸಹಾಯಕ್ಕೆ ಧಾವಿಸಿದ್ದರು.

ಇಬ್ಬರು ಅಧಿಕಾರಿಗಳನ್ನು ಅಲ್ಲಿಂದ ಹೊರ ತರುವ ವೇಳೆಗೆ ಮತ್ತಷ್ಟು ಜನರು ಅಸ್ವಸ್ಥರಾಗಿ ಬೀಳಲಾರಂಭಿಸಿದ್ದರು. ನಂತರ ಇಫ್ಕೊ ತಜ್ಞರು ಆಗಮಿಸಿ ಅನಿಲ ಸೋರಿಕೆಯನ್ನು ತಡೆಯುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಲಂಚ ಪಡೆದು ಸ್ಟಿಂಗ್ ಆಪರೇಷನ್‌ನಲ್ಲಿ ಸಿಕ್ಕಿಬಿದ್ದವರು ಬಿಜೆಪಿ ಸೇರ್ಪಡೆ: ಧೃವ್ ರಾಠೀ ಟ್ವೀಟ್ ವೈರಲ್

ಸಧ್ಯ ಸ್ಥಾವರವನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದ್ದು, ಅನಿಲ ಸೋರಿಕೆ ನಿಂತಿದೆ. ಅಲ್ಲದೆ ಪರಿಸ್ಥಿತಿ ಹತೋಟಿಯಲ್ಲಿದೆ ಎಂದು ಪ್ರಯಾಗ್​ರಾಜ್​ನ ಜಿಲ್ಲಾಧಿಕಾರಿ ಭಾನು ಚಂದ್ರ ಗೋಸ್ವಾಮಿ ತಿಳಿಸಿದ್ದಾರೆ.

ಪೈಪ್​ ಲೀಕ್​ನಿಂದಾಗಿ ಈ ಅವಘಡ ನಡೆದಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿರುವುದಾಗಿ ವರದಿಯಾಗಿದೆ. ಘಟನೆ ಸಂಬಂಧ ಮುಖ್ಯಮಂತ್ರಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದು, ತನಿಖೆಗೆ ಆದೇಶ ಹೊರಡಿಸಿದ್ದಾರೆ.


ಇದನ್ನೂ ಓದಿ: ಪ.ಜಾತಿ, ಪ.ಪಂಗಡಗಳ ಬಡ್ತಿ ಸಮಸ್ಯೆ ನಿವಾರಿಸಿ, ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿಮಾಡಿ: ಸಿದ್ದರಾಮಯ್ಯ ಪತ್ರ

ನಾನು ಗೌರಿ ಡೆಸ್ಕ್
+ posts

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

Wordpress Social Share Plugin powered by Ultimatelysocial
Shares