Homeಮುಖಪುಟಉತ್ತರ ಪ್ರದೇಶ: ನೀಟ್ ತರಬೇತಿ ಪಡೆಯುತ್ತಿದ್ದ ಮತ್ತೋರ್ವ 'ಕೋಚಿಂಗ್ ಹಬ್' ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

ಉತ್ತರ ಪ್ರದೇಶ: ನೀಟ್ ತರಬೇತಿ ಪಡೆಯುತ್ತಿದ್ದ ಮತ್ತೋರ್ವ ‘ಕೋಚಿಂಗ್ ಹಬ್’ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

- Advertisement -
- Advertisement -

ದೇಶದ ‘ಕೋಚಿಂಗ್ ಹಬ್’ ಕೋಟಾದ ವಿದ್ಯಾರ್ಥಿಗಳ ಆತ್ಮಹತ್ಯೆಯ ಸರಣಿ ಮುಂದುವರಿದಿದ್ದು, ಮತ್ತೋರ್ವ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (NEET) ಆಕಾಂಕ್ಷಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಉತ್ತರ ಪ್ರದೇಶದ ರಾಜ್ಯದ ಇಪ್ಪತ್ತರ ಹರೆಯದ ಉರುಜ್ ಖಾನ್ ಎಂಬಾತ ನಗರದ ಬಾಡಿಗೆ ಕೊಠಡಿಯ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.

2024ರಲ್ಲೇ ಇದು 7ನೇ ವಿದ್ಯಾರ್ಥಿ ಆತ್ಮಹತ್ಯೆ ಘಟನೆಯಾಗಿದ್ದು ಎಲ್ಲರಿಗೂ ಆಘಾತ ಮೂಡಿಸಿದೆ. ಉತ್ತರ ಪ್ರದೇಶದ ಕನೌಜ್ ನಿವಾಸಿಯಾಗಿರುವ ಮೃತ ಉರುಜ್ ಖಾನ್, ವಿಜ್ಞಾನನಗರ ಪ್ರದೇಶದ ಬಾಡಿಗೆ ಫ್ಲಾಟ್‌ನಲ್ಲಿ ಸೋಮವಾರ ರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಉರುಜ್ ವಾಸವಿದ್ದ ಕಟ್ಟಡದ ಸಿಬ್ಬಂದಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದಿರುವುದನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕಾಗಮಿಸಿದ ಪೊಲೀಸರು ಮೃತದೇಹವನ್ನು ತಮ್ಮ ವಶಕ್ಕೆ ಪಡೆದು ಸಮೀಪದ ಎಂಬಿಎಸ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ.

ಉರುಜ್ ಖಾನ್ ಅವರು 20 ದಿನಗಳ ಹಿಂದಷ್ಟೇ ಕೊಠಡಿಗೆ ಸ್ಥಳಾಂತರಗೊಂಡಿದ್ದರು. ಆದರೆ ಕೋಟಾದಲ್ಲಿ ದೀರ್ಘಕಾಲ ತಂಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ವರದಿಗಳ ಪ್ರಕಾರ, ನೀಟ್ ಆಕಾಂಕ್ಷಿ ತೀವ್ರ ಹೆಜ್ಜೆ ಇಡಲು ಕಾರಣವೇನು ಎಂಬುದು ಸದ್ಯಕ್ಕೆ ತಿಳಿದಿಲ್ಲ.

ಮೃತ ವಿದ್ಯಾರ್ಥಿಯ ಕುಟುಂಬಕ್ಕೆ ಪೊಲೀಸರು ಮಾಹಿತಿ ನೀಡಿದ್ದು, ಬಂದ ನಂತರ ಶವಪರೀಕ್ಷೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಇದೆ ತಿಂಗಳಲ್ಲಿ ಕೋಟಾದಲ್ಲಿ ಜೆಇಇ ಆಕಾಂಕ್ಷಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದರು. ವಿದ್ಯಾರ್ಥಿಯನ್ನು ಅಭಿಷೇಕ್ ಕುಮಾರ್ ಎಂದು ಗುರುತಿಸಲಾಗಿದ್ದು, ಬಿಹಾರದ ಭಾಗಲ್ಪುರ ಜಿಲ್ಲೆಯವನು. ಜೆಇಇ ಆಕಾಂಕ್ಷಿಯಾಗಿದ್ದ ಅಭಿಷೇಕ್ ನಗರದ ವಿಜ್ಞಾನನಗರ ಪ್ರದೇಶದಲ್ಲಿ ಬಾಡಿಗೆಗೆ ಪಡೆದಿದ್ದ ಕೋಣೆಯಲ್ಲಿ ವಿಷಕಾರಿ ಪದಾರ್ಥ ಸೇವಿಸಿದ್ದಾರೆ.

ಘಟನೆಯ ಕುರಿತು ಪ್ರತಿಕ್ರಿಯಿಸಿದ ಪೊಲೀಸರು, ಕುಮಾರ್ ಅವರ ಕೊಠಡಿಯಿಂದ ವಿಷಕಾರಿ ಪದಾರ್ಥದ ಬಾಟಲಿ ಮತ್ತು ಮರಣ ಪತ್ರವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ; ವರುಣ್ ಗಾಂಧಿಗೆ ಬಿಜೆಪಿ ಟಿಕೆಟ್ ನಿರಾಕರಣೆ; ಕಾಂಗ್ರೆಸ್‌ಗೆ ಆಹ್ವಾನಿಸಿದ ಅಧೀರ್ ರಂಜನ್ ಚೌಧರಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ: ಸಿಎಂ ಸಿದ್ದರಾಮಯ್ಯ

0
ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ" ಎಂಬ ಬಿಜೆಪಿಗರ ಆರೋಪಕ್ಕೆ...