Homeಮುಖಪುಟಉತ್ತರ ಪ್ರದೇಶ: ರಂಜಾನ್ ಪ್ರಾರ್ಥನಾ ಸಭೆಗೆ ಬಜರಂಗದಳ ಕಾರ್ಯಕರ್ತರಿಂದ ಅಡ್ಡಿ

ಉತ್ತರ ಪ್ರದೇಶ: ರಂಜಾನ್ ಪ್ರಾರ್ಥನಾ ಸಭೆಗೆ ಬಜರಂಗದಳ ಕಾರ್ಯಕರ್ತರಿಂದ ಅಡ್ಡಿ

- Advertisement -
- Advertisement -

ಜಾಕೀರ್ ಹುಸೇನ್ ಎಂಬ ಮುಸ್ಲಿಂ ವ್ಯಕ್ತಿಗೆ ಸೇರಿದ ಗೋದಾಮಿನೊಳಗೆ ರಂಜಾನ್ ಪ್ರಾರ್ಥನಾ ಸಭೆ ನಡೆಸುತ್ತಿದ್ದ ಮುಸ್ಲಿಮರನ್ನು ಬಜರಂಗದಳದ ಗುಂಪು ಶನಿವಾರ ತಡೆದಿರುವ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್ ನಗರದಲ್ಲಿ ನಡೆದಿದೆ.

ಉತ್ತರ ಪ್ರದೇಶದ ಮೊರಾದಾಬಾದ್ ಜಿಲ್ಲೆಯಲ್ಲಿ ಮುಸ್ಲಿಂರ ಗುಂಪೊಂದು ಪ್ರಾರ್ಥನೆ ಸಲ್ಲಿಸುವುದನ್ನು ಬಲಪಂಥೀಯ ಸಂಘಟನೆ ರಾಷ್ಟ್ರೀಯ ಬಜರಂಗದಳದ ರಾಜ್ಯಾಧ್ಯಕ್ಷ ರೋಹನ್ ಸಕ್ಸೇನಾ ನೇತೃತ್ವದ ಗುಂಪು ವಿರೋಧಿಸಿದೆ. ರಂಜಾನ್ ಪ್ರಾರ್ಥನಾ ಸಭೆಗೆ ನುಗ್ಗಿ ಗದ್ದಲವನ್ನು ಸೃಷ್ಟಿಸಿದ್ದಾರೆ. ಆ ನಂತರ ಪೊಲೀಸರ ಮಧ್ಯಪ್ರವೇಶದಿಂದ ಪರಿಸ್ಥಿತಿಯನ್ನು ಶಾಂತಗೊಳಿಸಲಾಯಿತು.

”ನಗರದ ಲಜಪತ್ ನಗರ ಪ್ರದೇಶದ ನಿವಾಸಿಗಳಿಂದ ಪ್ರಾರ್ಥನಾ ಸಭೆಯ ಬಗ್ಗೆ ದೂರು ಸ್ವೀಕರಿಸಿದ್ದೇವೆ” ಎಂದು ಮೊರಾದಾಬಾದ್ ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಲಜಪತ್ ನಗರವು ಹಿಂದೂ ಬಹುಸಂಖ್ಯಾತ ವಿವಿಧ ಧರ್ಮಗಳ ಜನರಿಂದ ಕೂಡಿದೆ. ಪೊಲೀಸರ ಸಮ್ಮುಖದಲ್ಲಿ ಪ್ರಾರ್ಥನಾ ಸಭೆಯನ್ನು ಶನಿವಾರ ನಡೆಸಲು ಅನುಮತಿಸಲಾಗಿದೆ. ಆದರೆ ಪ್ರದೇಶದ ಮುಸ್ಲಿಮರು ತಮ್ಮ ಮನೆಗಳಲ್ಲಿ ಅಥವಾ ಧಾರ್ಮಿಕ ಸ್ಥಳಗಳಲ್ಲಿ ಪ್ರಾರ್ಥನೆ ಸಲ್ಲಿಸಲು ಕೇಳಿಕೊಂಡಿದ್ದಾರೆ” ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಸಕ್ಸೇನಾ, ನಗರದಲ್ಲಿ ಹೊಸ ಸಂಪ್ರದಾಯಗಳನ್ನು (ಸಂಪ್ರದಾಯ) ನಡೆಸಲು ನಾವು ಬಿಡುವುದಿಲ್ಲ ಎಂದಿದ್ದಾರೆ.

ಇದನ್ನೂ ಓದಿ: ಮಂಗಳೂರು: ಹೋಳಿ ಕಾರ್ಯಕ್ರಮಕ್ಕೆ ನುಗ್ಗಿ ಬಜರಂಗದಳ ಕಾರ್ಯಕರ್ತರ ಪುಂಡಾಟ; ಪ್ರಕರಣ ದಾಖಲು

”ಝಾಕಿರ್ ತನ್ನ ಮುಸ್ಲಿಂ ಸಹೋದರರೊಂದಿಗೆ ಪ್ರಾರ್ಥನೆ ನಡೆಸುವ ಮೂಲಕ ಹೊಸ ಸಂಪ್ರದಾಯವನ್ನು ಹುಟ್ಟುಹಾಕುತ್ತಿದ್ದಾರೆ ಎಂಬ ಮಾಹಿತಿ ನಮಗೆ ಸಿಕ್ಕಿದೆ. ನಾವು ಇದನ್ನು ತೀವ್ರವಾಗಿ ವಿರೋಧಿಸುತ್ತೇವೆ ಮತ್ತು ನಮ್ಮ ನಗರ ಅಥವಾ ರಾಜ್ಯದಲ್ಲಿ ಅಂತಹ ಯಾವುದೇ ಸಂಪ್ರದಾಯವನ್ನು ಹುಟ್ಟುಹಾಕಲು ಬಿಡುವುದಿಲ್ಲ” ಎಂದು ಸಕ್ಸೇನಾ ಹೇಳಿದ್ದಾರೆ.

”ನಮಗೆ ನಮಗೆ ಈ ಗೋದಾಮಿನ ನೆರೆಹೊರೆಯವರಿಂದ ಈ ಮಾಹಿತಿ ಬಂದಿದೆ. ನಮ್ಮಲ್ಲಿ ಪುರಾವೆಯಾಗಿ ಚಿತ್ರಗಳೂ ಇವೆ. ನಾವು ಇದನ್ನು ಸಹಿಸುವುದಿಲ್ಲ” ಅವರ ವಿರುದ್ಧ ದೂರು ದಾಖಲಿಸಲು ನಾವು ಪೊಲೀಸ್ ಅಧಿಕಾರಿಗಳನ್ನು ಕೇಳಿದ್ದೇವೆ. ಮತ್ತು ಅವರು ಕ್ರಮ ತಗೆದುಕೊಳ್ಳದಿದ್ದರೆ, ರಾಷ್ಟ್ರೀಯ ಬಜರಂಗದಳವು ಅದರ ವಿರುದ್ಧ ಪ್ರತಿಭಟಿಸಲು ಬೀದಿಗೆ ಬರಲಿದೆ ಎಂದು ಸಕ್ಸೇನಾ ಹೇಳಿದ್ದಾರೆ.

ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಹೆಚ್ಚಾದ ಹಿಂದುತ್ವ ಸಂಘಟನೆಗಳ ದಾಳಿಗಳು

ಕಳೆದ ಕೆಲವು ವರ್ಷಗಳಿಂದ, ಸಾರ್ವಜನಿಕವಾಗಿ ಪ್ರಾರ್ಥನೆ ಮಾಡಿದ್ದಕ್ಕಾಗಿ ಮುಸ್ಲಿಮರನ್ನು ಬಂಧಿಸುವ ಅಥವಾ ಕಿರುಕುಳ ನೀಡುವ ಹಲವಾರು ನಿದರ್ಶನಗಳಿವೆ. ಭಾರತೀಯ ಜನತಾ ಪಕ್ಷದ ಆಡಳಿತವಿರುವ ರಾಜ್ಯಗಳಲ್ಲಿ ಹೆಚ್ಚಿನ ಘಟನೆಗಳು ವರದಿಯಾಗಿವೆ ಮತ್ತು ಹಿಂದುತ್ವ ಸಂಘಟನೆಗಳ ಪ್ರತಿಭಟನೆಯ ನಂತರ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ಈ ಬಗ್ಗೆ ಮಾತನಾಡಿರುವ ಕಾನೂನು ತಜ್ಞರು ಸ್ಕ್ರಾಲ್‌ ಅವರು, ದ್ವೇಷವನ್ನು ಉತ್ತೇಜಿಸುವುದು, ಧಾರ್ಮಿಕ ಭಾವನೆಗಳನ್ನು ಕೆರಳಿಸುವುದು ಮತ್ತು ಸಾರ್ವಜನಿಕ ಕಿಡಿಗೇಡಿತನವನ್ನು ಉಂಟುಮಾಡುವುದು ಮುಂತಾದ ವಿವಿಧ ಆರೋಪಗಳ ಅಡಿಯಲ್ಲಿ ಬಂಧನಗಳನ್ನು ಮಾಡಲಾಗಿದೆ. ಸಾರ್ವಜನಿಕವಾಗಿ ಪ್ರಾರ್ಥನೆ ಸಲ್ಲಿಸುವ ಜನರನ್ನು ಬಂಧಿಸುವುದನ್ನು ಭಾರತೀಯ ಕಾನೂನನು ಬೆಂಬಲಿಸಲಾಗುವುದಿಲ್ಲ ಎಂದು ಹೇಳಿದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ದಲಿತ ಸಮುದಾಯದ ಆಕ್ರೋಶಕ್ಕೆ ಮಣಿದ ರಾಜ್ಯ ಸರ್ಕಾರ; ‘ಪ್ರಬುದ್ಧ’ ಯೋಜನೆ ಪುನರಾರಂಭ

0
ಎಸ್‌ಸಿ-ಎಸ್‌ಟಿ ಮತ್ತು ಇತರ ದುರ್ಬಲ ಸಮುದಾಯಗಳ ವಿದ್ಯಾರ್ಥಿಗಳು ತಮ್ಮ ಸ್ನಾತಕೋತ್ತರ ಮತ್ತು ಪಿಎಚ್‌ಡಿ ಕೋರ್ಸ್‌ಗಳನ್ನು ವಿದೇಶದ ವಿಶ್ವವಿದ್ಯಾಲಯಗಳಲ್ಲಿ ಅಧ್ಯಯನ ನಡೆಸಲು ಸಮಾಜ ಕಲ್ಯಾಣ ಇಲಾಖೆಯಿಂದ ನೀಡುವ ಆರ್ಥಿಕ ಯೋಜನೆಯಾದ 'ಪ್ರಬುದ್ಧ' ಕಾರ್ಯಕ್ರಮವನ್ನು ನಿಲ್ಲಿಸಿದ್ದ...