Homeಮುಖಪುಟಉತ್ತರ ಪ್ರದೇಶ| ಬಿಜೆಪಿ ದಲಿತ ಮುಖಂಡನಿಗೆ ಪಕ್ಷದ ಶಾಸಕನಿಂದ ಜೀವ ಬೆದರಿಕೆ; ಡಿಸಿ ಕಚೇರಿಯಲ್ಲಿ ಪ್ರತಿಭಟನೆ

ಉತ್ತರ ಪ್ರದೇಶ| ಬಿಜೆಪಿ ದಲಿತ ಮುಖಂಡನಿಗೆ ಪಕ್ಷದ ಶಾಸಕನಿಂದ ಜೀವ ಬೆದರಿಕೆ; ಡಿಸಿ ಕಚೇರಿಯಲ್ಲಿ ಪ್ರತಿಭಟನೆ

- Advertisement -
- Advertisement -

ಉತ್ತರ ಪ್ರದೇಶದ ಆಡಳಿತಾರೂಢ ಬಿಜೆಪಿಯ ದಲಿತ ಮುಖಂಡರೊಬ್ಬರು ಪಿಲಿಭಿತ್‌ನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿ, ತಮ್ಮ ಪಕ್ಷದ ಶಾಸಕರಿಂದ ಜೀವ ಬೆದರಿಕೆ ಇದೆ ಎಂದು ಆರೋಪಿಸಿದ್ದಾರೆ.

ಶಾಸಕರು ಆರೋಪವನ್ನು ತಳ್ಳಿಹಾಕಿದ್ದು, ಅಗ್ಗದ ಜನಪ್ರಿಯತೆಗಾಗಿ ಇತರ ನಾಯಕರ ಆಜ್ಞೆಯಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದರು.

ಪಿಲಿಭಿತ್‌ನಲ್ಲಿ ಬಿಜೆಪಿಯ ಪರಿಶಿಷ್ಟ ಜಾತಿ ಮೋರ್ಚಾದ ಅಧ್ಯಕ್ಷ ಶಾಂತಿ ಸ್ವರೂಪ್ ಸೋಂಕರ್ ಅವರು ತಮ್ಮ ಬೆಂಬಲಿಗರೊಂದಿಗೆ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪ್ರತಿಭಟನೆ ನಡೆಸಿದರು.

ಗ್ರಾಮದಲ್ಲಿ ಆರ್‌ಎಸ್‌ಇಟಿಐ (ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ) ಕೇಂದ್ರ ನಿರ್ಮಾಣಕ್ಕೆ ಸಂಬಂಧಿಸಿದ ವಿವಾದದಲ್ಲಿ ಬರ್ಖೇಡ ಶಾಸಕ ಸ್ವಾಮಿ ಪ್ರಬಕ್ತಾನಂದ (ಜಯದ್ರತ್) ಬೆದರಿಕೆ ಹಾಕಿದ್ದಾರೆ ಎಂದು ಕಳಯನಪುರ ನೌಗಾವಾನ್ ಗ್ರಾಮದ ಮುಖಂಡನ ಪತಿ ಸೋಂಕರ್ ಆರೋಪಿಸಿ ಆಡಳಿತಾತ್ಮಕ ಕ್ರಮಕ್ಕೆ ಮನವಿ ಮಾಡಿದರು.

“ಜಿಲ್ಲಾ ಮ್ಯಾಜಿಸ್ಟ್ರೇಟ್ ಸಂಜಯ್ ಸಿಂಗ್ ಈ ವಿಷಯದ ಬಗ್ಗೆ ತನಿಖೆಗೆ ಭರವಸೆ ನೀಡಿದ್ದಾರೆ” ಎಂದು ಅವರು ಮಾಧ್ಯಮಗಳಿಗೆ ತಿಳಿಸಿದರು.

ಇದೇ ಗ್ರಾಮದಲ್ಲಿ ವಾಸವಿರುವ ಶಾಸಕರು ಆರ್‌ಎಸ್‌ಇಟಿಐ ಕೇಂದ್ರದ ನೆಪದಲ್ಲಿ ತಮ್ಮ ಸಂಬಂಧಿಕರಿಗೆ ಲಾಭ ಮಾಡಿಕೊಡಲು ಯತ್ನಿಸುತ್ತಿದ್ದಾರೆ. ಆರ್‌ಎಸ್‌ಇಟಿಐ ಕೇಂದ್ರ ನಿರ್ಮಿಸುವ ನೆಪದಲ್ಲಿ ಶಾಸಕರು ಗ್ರಾಮದ ಜಮೀನನ್ನು ಅಕ್ರಮವಾಗಿ ವಶಪಡಿಸಿಕೊಳ್ಳಲು ತಮ್ಮ ಸಂಬಂಧಿಕರಿಗೆ ಸಹಾಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

“ಹಂಚಿಕೊಳ್ಳುತ್ತಿರುವ ಭೂಮಿಯಲ್ಲಿ ಅನರ್ಹ ವ್ಯಕ್ತಿಗಳು ಸೇರಿದ್ದಾರೆ” ಎಂದು ಸೋಂಕರ್ ಪ್ರತಿಪಾದಿಸಿದರು, ಶಾಸಕರ ಕ್ರಮಗಳು ನನ್ನ ಕೊಲೆಗೆ ಕಾರಣವಾಗಬಹುದು ಎಂದಿದ್ದಾರೆ.

ಶಾಸಕರ ಸಂಬಂಧಿಕರು ನಮ್ಮ ಜಮೀನಿನಲ್ಲಿ ಬೆಲೆಬಾಳುವ ಮರಗಳನ್ನು ಕಡಿಯುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಗ್ರಾಮಸ್ಥರ ಅಭಿಪ್ರಾಯ ಸಂಗ್ರಹಿಸಲು ಬಹಿರಂಗ ಸಭೆಗೆ ಒತ್ತಾಯಿಸಿದ ಸೋಂಕರ್, ಹೆಚ್ಚಿನ ಸ್ಥಳೀಯರು ಕೇಂದ್ರದ ನಿರ್ಮಾಣವನ್ನು ಬೆಂಬಲಿಸುತ್ತಾರೆ ಎಂದು ಪ್ರತಿಪಾದಿಸಿದರು.

ಆರೋಪವನ್ನು ನಿರಾಕರಿಸಿದ ಪ್ರಬಕ್ತಾನಂದ್, “ನಾನು ಶಾಂತಿ ಸ್ವರೂಪ್ ಸೋಂಕರ್ ಅವರೊಂದಿಗೆ ಎಂದಿಗೂ ಮಾತನಾಡಿಲ್ಲ. ಅವರ ಆರೋಪಗಳು ಆಧಾರರಹಿತ ಮತ್ತು ಸುಳ್ಳು. ಸೋಂಕರ್ ಪ್ರಚಾರಕ್ಕಾಗಿ ಬೇರೊಬ್ಬರ ಪ್ರಭಾವದಿಂದ ವರ್ತಿಸುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

“ನನ್ನ ಪ್ರಯತ್ನದಿಂದಾಗಿ ಕೇಂದ್ರವನ್ನು ನಿರ್ಮಿಸಲಾಗುತ್ತಿದೆ ಮತ್ತು ಇದು ಎಲ್ಲರಿಗೂ ಪ್ರಯೋಜನವನ್ನು ನೀಡುತ್ತದೆ” ಎಂದು ಅವರು ಮಾಧ್ಯಮಗಳಿಗೆ ತಿಳಿಸಿದರು.

ಆರ್‌ಎಸ್‌ಇಟಿಐ ಕೇಂದ್ರದ ನಿರ್ಮಾಣಕ್ಕೆ ಗ್ರಾಮವು ಗ್ರಾಮೀಣಾಭಿವೃದ್ಧಿ ಇಲಾಖೆಯ ಮೂಲಕ ಭೂಮಿಯನ್ನು ಒದಗಿಸಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.

ಬರ್ಖೇಡಾ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕಲ್ಯಾಣಪುರ ನೌಗಾವಾನ್ ಗ್ರಾಮದಲ್ಲಿ ₹2.5 ಕೋಟಿ ವೆಚ್ಚದಲ್ಲಿ ಆರ್‌ಎಸ್‌ಇಟಿಐ ಕೇಂದ್ರ ನಿರ್ಮಿಸಲಾಗುತ್ತಿದೆ. ಸ್ಥಳಾಂತರಗೊಂಡ ನಿವಾಸಿಗಳಿಗೆ ಶೀಘ್ರದಲ್ಲೇ ಪುನರ್ವಸತಿ ಕಲ್ಪಿಸಲಾಗುವುದು ಮತ್ತು ಯಾವುದೇ ಗ್ರಾಮಸ್ಥರು ಯಾವುದೇ ಸಮಸ್ಯೆಗಳನ್ನು ಎದುರಿಸುವುದಿಲ್ಲ ಎಂದು ಅವರು ಹೇಳಿದರು.

ಇದನ್ನೂ ಓದಿ; ಮಧ್ಯಪ್ರದೇಶ| ಟ್ರ್ಯಾಕ್ಟರ್‌ನಿಂದ ದಲಿತ ಕುಟುಂಬದ ಗುಡಿಸಲು-ಬೆಳೆ ನಾಶಪಡಿಸಿದ ಸವರ್ಣೀಯರು; ಮುಖದ ಮೇಲೆ ಮೂತ್ರ ವಿಸರ್ಜಿಸಿ ದೌರ್ಜನ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....