Homeಮುಖಪುಟಉತ್ತರ ಪ್ರದೇಶ - ಗನ್‌ ತೋರಿಸಿ ಮಹಿಳೆಯ ಸಾಮೂಹಿಕ ಅತ್ಯಾಚಾರ ಎಸಗಿದ ಬಿಜೆಪಿ ನಾಯಕ

ಉತ್ತರ ಪ್ರದೇಶ – ಗನ್‌ ತೋರಿಸಿ ಮಹಿಳೆಯ ಸಾಮೂಹಿಕ ಅತ್ಯಾಚಾರ ಎಸಗಿದ ಬಿಜೆಪಿ ನಾಯಕ

- Advertisement -
- Advertisement -

ಬಿಜೆಪಿ ನಾಯಕನೊಬ್ಬ ಕೆಲಸ ಕೊಡಿಸುವ ನೆಪದಲ್ಲಿ ದೆಹಲಿ ಮೂಲದ ಮಹಿಳೆಯೊಬ್ಬರ ಕರೆಸಿ ಗನ್ ತೋರಿಸಿ ಅವರ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿರುವ ಘಟನೆ ಉತ್ತರ ಪ್ರದೇಶದ ಮಥುರಾದಲ್ಲಿ ನಡೆದಿದೆ ಎಂದು ಟೈಮ್ಸ್‌ ಆಫ್ ಇಂಡಿಯಾ ವರದಿ ಮಾಡಿದೆ. ಆರೋಪಿಯ ವಿರುದ್ಧ ಬಿಎನ್‌ಎಸ್‌ ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ ಎಂದು ವರದಿ ಹೇಳಿದ್ದು, ಆದರೆ ವರದಿಯು ಆರೋಪಿಯ ಹೆಸರನ್ನು ಬಹಿರಂಗಪಡಿಸಿಲ್ಲ. ಉತ್ತರ ಪ್ರದೇಶ

“ಆರೋಪಿಯ ವಿರುದ್ಧ ಬಿಎನ್‌ಎಸ್ ಸೆಕ್ಷನ್ 64 (1) (ಅತ್ಯಾಚಾರ) ಮತ್ತು 351 (3) (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಮಹಿಳೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿ, ಅವರ ಹೇಳಿಕೆ ದಾಖಲಿಸಿ ತನಿಖೆ ನಡೆಸಲಾಗುವುದು” ಎಂದು ಹೈವೇ ಪೊಲೀಸ್ ಠಾಣೆಯ ಎಸ್‌ಎಚ್‌ಒ ಆನಂದ್ ಕುಮಾರ್ ತಿಳಿಸಿದ್ದಾರೆ.. ಉತ್ತರ ಪ್ರದೇಶ

ಬಿಜೆಪಿಯ ಕಿಸಾನ್ ಮೋರ್ಚಾದ ಮಾಜಿ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ಮತ್ತು ಅಖಿಲ ಭಾರತೀಯ ಕ್ಷತ್ರಿಯ ಮಹಾಸಭಾದ ನಾಯಕರಾಗಿರುವ ಆರೋಪಿಯು ತನ್ನ ವಿರುದ್ಧದ ಎಲ್ಲಾ ಆರೋಪಗಳನ್ನು ತಳ್ಳಿ ಹಾಕಿದ್ದಾರೆ. “ನನ್ನ ವಿರುದ್ಧ ಹೊರಿಸಲಾದ ಎಲ್ಲಾ ಆರೋಪಗಳು ಆಧಾರರಹಿತವಾಗಿದ್ದು, ನನ್ನ ಪ್ರತಿಷ್ಠೆಗೆ ಕಳಂಕ ತರುವ ಪ್ರಯತ್ನ ಇದಾಗಿದೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸಂತ್ರಸ್ತ ಮಹಿಳೆ ದೆಹಲಿಯಲ್ಲಿ ನೆಲೆಸಿದ್ದು, ಅವರು ನೀಡಿದ ದೂರಿನಲ್ಲಿ, ಬಿಜೆಪಿ ಮುಖಂಡ ತನಗೆ ಫೇಸ್‌ಬುಕ್‌ನಲ್ಲಿ ಪರಿಚಯವಾಗಿದ್ದು, ನಾಲ್ಕು ವರ್ಷದಿಂದ ಇಬ್ಬರು ಆನ್‌ಲೈನ್ ಮೂಲಕವೇ ಸಂಪರ್ಕ ಹೊಂದಿದ್ದಾಗಿ ಹೇಳಿದ್ದಾರೆ. “ಆರೋಪಿಯು ಎನ್‌ಜಿಒ ನಡೆಸುತ್ತಿದ್ದಾನೆ. ಸೆಪ್ಟಂಬರ್‌ನಲ್ಲಿ ನಾವು ಎನ್‌ಜಿಒ ಸಂಬಂಧಿತ ವಿಚಾರದಲ್ಲಿ ಸಂಪರ್ಕಿಸಿದ್ದೆವು. ಸೆಪ್ಟೆಂಬರ್ 14ರಂದು ಉದ್ಯೋಗ ನೀಡುವ ನೆಪದಲ್ಲಿ ನನ್ನನ್ನು ಮಥುರಾಗೆ ಕರೆದನು. ನಾನು ನನ್ನ ಸ್ನೇಹಿತನೊಂದಿಗೆ ನರಹೌಲಿ ಪ್ರದೇಶ ತಲುಪಿದೆ. ಅಲ್ಲಿಂದ ಆರೋಪಿ ಮತ್ತು ಆತನ ಸಹಚರರು ನಮ್ಮನ್ನು ಕರೆದೊಯ್ದರು” ಎಂದು ಮಹಿಳೆ ತಿಳಿಸಿದ್ದಾರೆ.

“ಅಲ್ಲಿ ಕೋಣೆಯೊಂದಕ್ಕೆ ಕರೆದೊಯ್ದು ಗನ್ ತೋರಿಸಿ ಅತ್ಯಾಚಾರ ಮಾಡಿದ್ದಾರೆ. ಜೊತೆಗೆ ಮುಂದಿನ ಬಾರಿ ಸ್ನೇಹಿತನೊಂದಿಗೆ ಬರದೆ ಒಬ್ಬಳೇ ಬರಬೇಕು ಎಂದು ಸೂಚಿಸಿದ್ದಾರೆ” ಎಂದು ಮಹಿಳೆ ಹೇಳಿದ್ದಾರೆ. ಮಹಿಳೆ ಘಟನೆ ನಡೆದ ಮರುದಿನವೇ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದರು. ಆದರೆ ಆರೋಪಿಗೆ ಹೆಚ್ಚು ಪ್ರಭಾವ ಇರುವ ಕಾರಣ ಪೊಲೀಸರು ದೂರನ್ನು ನಿರ್ಲಕ್ಷಿಸಿದ್ದಾರೆ ಎಂದು ಅವರು ದೂರಿದ್ದಾರೆ.

ಇದರ ನಂತರ ಮಹಿಳೆ ನಿರಂತರವಾಗಿ ಪೊಲೀಸ್ ಠಾಣೆಗೆ ಭೇಟಿ ನೀಡಿ ದೂರು ದಾಖಲಿಸುವಂತೆ ಒತ್ತಾಯಿಸಿದ್ದರು. ಅಂತಿಮವಾಗಿ ಅಪರಾಧ ನಡೆದು ಮೂರು ತಿಂಗಳ ಬಳಿಕ ಶುಕ್ರವಾರ ಮಥುರಾದ ಹೆದ್ದಾರಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಸಂತ್ರಸ್ತೆ ಹೇಳಿದ್ದಾರೆ. ಉತ್ತರ ಪ್ರದೇಶ

ಇದನ್ನೂ ಓದಿ: Explainer | ಹೈಕೋರ್ಟ್‌ ನ್ಯಾಯಾಧೀಶರನ್ನು ಹುದ್ದೆಯಿಂದ ಕೆಳಗಿಳಿಸುವುದು ಸಾಧ್ಯವೆ?

Explainer | ಹೈಕೋರ್ಟ್‌ ನ್ಯಾಯಾಧೀಶರನ್ನು ಹುದ್ದೆಯಿಂದ ಕೆಳಗಿಳಿಸುವುದು ಸಾಧ್ಯನಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...

ನಾಗಾಲ್ಯಾಂಡ್‌| ಕೇಂದ್ರದ ‘ವಂದೇ ಮಾತರಂ’ ಕಡ್ಡಾಯ ನಿರ್ದೇಶನ ವಿರೋಧಿಸಿ ನಾಗಾ ವಿದ್ಯಾರ್ಥಿ ಒಕ್ಕೂಟದಿಂದ ಪ್ರತಿಭಟನೆ

ಸರ್ಕಾರದ ಅಧಿಕೃತ ಕಾರ್ಯಕ್ರಮಗಳ ಸಮಯದಲ್ಲಿ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ವಂದೇ ಮಾತರಂ ಹಾಡುವುದನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ನೀಡಿರುವ ನಿರ್ದೇಶನವನ್ನು ವಿರೋಧಿಸಿ ಸೋಮವಾರ ನಾಗಾ ವಿದ್ಯಾರ್ಥಿ ಒಕ್ಕೂಟದ (ಎನ್‌ಎಸ್‌ಎಫ್) ಬ್ಯಾನರ್...

‘ಹೇಡಿತನದ, ಅವಿವೇಕದ ಹಿಂಸಾಚಾರ’: 400 ಜನರನ್ನು ಬಲಿತೆಗೆದುಕೊಂಡ ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕ್ ದಾಳಿ ಖಂಡಿಸಿದ ಭಾರತ 

ಕಾಬೂಲ್‌ನ ಆಸ್ಪತ್ರೆಯ ಮೇಲೆ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಭಾರತ ಮಂಗಳವಾರ ಖಂಡಿಸಿದೆ. ಈ ದಾಳಿಯಲ್ಲಿ ಕನಿಷ್ಠ 400 ಜನರು ಅಸ್ವಸ್ಥರಾಗಿ 250 ಜನರು ಗಾಯಗೊಂಡಿದ್ದರು. ಈ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA)...

ಮೂಡುಬಿದಿರೆ ಠಾಣೆ ಇನ್‌ಸ್ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ: ತನಿಖೆಗೆ ಕಮಿಷನರ್ ಆದೇಶ

ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಮಹಿಳೆಯರಿಗೆ ಲೈಂಗಿಕ, ಮಾನಸಿಕ ಕಿರುಕುಳ ನೀಡಿದ್ದಲ್ಲದೆ, ಹಣ ಕೊಡುವಂತೆ ಪೀಡಿಸಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದ್ದು, ಈ...

ಅಸ್ಸಾಂ: ರಂಜಾನ್ ಆಹಾರ ವ್ಯವಸ್ಥೆಗಾಗಿ ಮೀನು ಹಿಡಿಯುತ್ತಿದ್ದ ಮುಸ್ಲಿಂ ಸಹೋದರರ ಮೇಲೆ ಬಿಎಸ್‌ಎಫ್ ಗುಂಡಿನ ದಾಳಿ: ಗಂಭೀರ ಗಾಯ

ಅಸ್ಸಾಂನ ದಕ್ಷಿಣ ಸಲ್ಮಾರಾ–ಮಂಕಚಾರ್ ಜಿಲ್ಲೆಯ ಇಬ್ಬರು ಸಹೋದರರು ಭಾರತದ ಭೂಪ್ರದೇಶದೊಳಗಿನ ನದಿನೀರಿನಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿ ಗುಂಡು ಹಾರಿಸಿ ಪ್ರಾಣಕ್ಕಾಗಿ ಹೋರಾಡುತ್ತಿದ್ದಾರೆ. ಈ ಘಟನೆ ಮಾರ್ಚ್ 8-9, 2026...