ಧುರಂಧರ್ ಚಿತ್ರದ ಹಾಡಿಗೆ ಬುರ್ಖಾ ಧರಿಸಿ ನೃತ್ಯ ಮಾಡಿದ ಯುವಕರು ಇಸ್ಲಾಮಿಕ್ ಉಡುಗೆಯನ್ನು ಬಹಿರಂಗವಾಗಿ ಅಪಹಾಸ್ಯ ಮಾಡಿದ್ದಾರೆ ಎಂಬ ಕಾರಣಕ್ಕೆ ವ್ಯಾಪಕ ಟೀಕೆಗೆ ಗುರಿಯಾಗಿದ್ದಾರೆ. ಉತ್ತರ ಪ್ರದೇಶದ ಅಮ್ರೋಹಾದಲ್ಲಿ ಶಾಲಾ ಕಾರ್ಯಕ್ರಮವೊಂದರಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.
ಡಿಸೆಂಬರ್ 30, ಮಂಗಳವಾರ ಈ ಘಟನೆಯ ವೀಡಿಯೊ ವೈರಲ್ ಆಗಿದೆ. ಅಮ್ರೋಹಾದ ಮೆಸ್ಕೊ ಪಬ್ಲಿಕ್ ಶಾಲೆಯಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಕೋಮು ಅಗೌರವವನ್ನು ಉತ್ತೇಜಿಸುವ ಮತ್ತು ಸಾಮಾಜಿಕ ಸಾಮರಸ್ಯವನ್ನು ಕದಡುವ ಗುರಿಯನ್ನು ಹೊಂದಿರುವ ಧಾರ್ಮಿಕ ಚಿಹ್ನೆಯ ಉದ್ದೇಶಪೂರ್ವಕ ಅಪಹಾಸ್ಯ ಎಂದು ಹಲವಾರು ಜನರು ಆಕ್ಷೇಪ ವ್ಯಕ್ತಪಡಿಸಿ, ಪೊಲೀಸರ ಹಸ್ತಕ್ಷೇಪಕ್ಕೆ ಕರೆ ನೀಡಿದ್ದಾರೆ.
ಈಗ ವೈರಲ್ ಆಗಿರುವ ವೀಡಿಯೊದಲ್ಲಿ, ಪ್ರೇಕ್ಷಕರು ಹರ್ಷೋದ್ಗಾರ ಮಾಡಿ ಯುವಕರಿಗೆ ಉತ್ತೇಜನ ನೀಡಿದ್ದಾರೆ. ಮತ್ತೊಬ್ಬ ವ್ಯಕ್ತಿಯ ನೇತೃತ್ವದಲ್ಲಿ ಯುವಕರು ವೇದಿಕೆ ಪ್ರವೇಶಿಸುತ್ತಿರುವುದು ವಿಡಿಯೋದಲ್ಲಿದೆ. ಕೆಲವರು ಪ್ರದರ್ಶನದ ಸಮಯದಲ್ಲಿ ನೃತ್ಯ ಮಾಡುವುದನ್ನು ಮುಂದುವರೆಸುತ್ತಾ ಅಶ್ಲೀಲ ಸನ್ನೆಗಳನ್ನು ತೋರಿಸುತ್ತಾ ಯುವಕರನ್ನು ಸೇರಲು ಪ್ರಯತ್ನಿಸಿದ್ದಾರೆ.
ಹಿನ್ನೆಲೆಯಲ್ಲಿ ಕೇಳಿಬರುತ್ತಿರುವ ಸಂಗೀತವು ವಿವಾದಾತ್ಮಕ ಚಿತ್ರ ಧುರಂಧರ್‌ನ ಜನಪ್ರಿಯ ಹಾಡಾಗಿದೆ.
ಕೆಲ ಪೋಷಕರು ಶಾಲಾ ಆಡಳಿತ ಮಂಡಳಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ನೃತ್ಯಕ್ಕಾಗಿ ಸಾರ್ವಜನಿಕ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿದರು.
ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿರುವ ವೀಡಿಯೊಗಳಿಗೆ ಪ್ರತಿಕ್ರಿಯಿಸಿದ ಅಮ್ರೋಹಾ ಪೊಲೀಸರು, ಎಕ್ಸ್‌ನಲ್ಲಿ ಪೋಸ್ಟ್ ಮಾಡಿ, ಈ ವಿಷಯವನ್ನು ನೌಗವಾನ್ ಸಾದತ್ ಪೊಲೀಸ್ ಠಾಣೆಗೆ ನಿರ್ದೇಶಿಸಲಾಗಿದೆ ಎಂದು ಹೇಳಿದರು. ತನಿಖೆ ಮತ್ತು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.


