Homeಮುಖಪುಟಉತ್ತರ ಪ್ರದೇಶ: ಬಿಎಸ್‌ಪಿ ಸಂಸದ ಅಫ್ಜಲ್ ಅನ್ಸಾರಿಗೆ ಜೈಲು ಶಿಕ್ಷೆ

ಉತ್ತರ ಪ್ರದೇಶ: ಬಿಎಸ್‌ಪಿ ಸಂಸದ ಅಫ್ಜಲ್ ಅನ್ಸಾರಿಗೆ ಜೈಲು ಶಿಕ್ಷೆ

- Advertisement -
- Advertisement -

2007ರಲ್ಲಿ ದಾಖಲಾದ ಪ್ರಕರಣವೊಂದರಲ್ಲಿ ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಸಂಸದ ಅಫ್ಜಲ್ ಅನ್ಸಾರಿ ಮತ್ತು ಅವರ ಸಹೋದರ ಮುಖ್ತಾರ್ ಅನ್ಸಾರಿ ಅವರನ್ನು ಉತ್ತರ ಪ್ರದೇಶದ ನ್ಯಾಯಾಲಯ ಶನಿವಾರ ದೋಷಿ ಎಂದು ಘೋಷಿಸಿದೆ ಎಂದು ಪಿಟಿಐ ವರದಿ ಮಾಡಿದೆ.

ಉತ್ತರ ಪ್ರದೇಶದ ‘ಗ್ಯಾಂಗ್‌ಸ್ಟರ್‌ ಮತ್ತು ಸಾಮಾಜಿಕ ವಿರೋಧಿ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ’ಯಡಿ ಘಾಜಿಪುರ ಜಿಲ್ಲೆಯ ಮುಹಮ್ಮದಾಬಾದ್ ಕೊಟ್ವಾಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಗ್ಯಾಂಗ್‌ಸ್ಟರ್‌-ರಾಜಕಾರಣಿಯಾಗಿರುವ ಮುಖ್ತಾರ್ ಅನ್ಸಾರಿಗೆ ಹತ್ತು ವರ್ಷಗಳ ಜೈಲು ಶಿಕ್ಷೆ ಮತ್ತು ಅಫ್ಜಲ್ ಅನ್ಸಾರಿಗೆ ನಾಲ್ಕು ವರ್ಷಗಳ ಜೈಲು ಶಿಕ್ಷೆ ವಿಧಿಸಿದ್ದಾರೆ. ನ್ಯಾಯಾಲಯವು ಮುಖ್ತಾರ್ ಅನ್ಸಾರಿಗೆ 5 ಲಕ್ಷ ರೂಪಾಯಿ ಮತ್ತು ಅಫ್ಜಲ್ ಅನ್ಸಾರಿಗೆ 1 ಲಕ್ಷ ರೂಪಾಯಿ ದಂಡ ವಿಧಿಸಿದೆ.

ಈ ತೀರ್ಪು, ಅಫ್ಜಲ್ ಅನ್ಸಾರಿ ಅವರನ್ನು ಲೋಕಸಭಾ ಸಂಸದ ಸ್ಥಾನದಿಂದ ಅನರ್ಹಗೊಳಿಸಲು ಕಾರಣವಾಗಬಹುದು. ಪ್ರಜಾಪ್ರತಿನಿಧಿ ಕಾಯಿದೆಯ ಸೆಕ್ಷನ್ 8(3)ರ ಪ್ರಕಾರ, ಎರಡು ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ಅವಧಿಗೆ ಜೈಲು ಶಿಕ್ಷೆಗೆ ಗುರಿಯಾದ ಶಾಸಕರನ್ನು ಶಿಕ್ಷೆಯ ದಿನಾಂಕದಿಂದ ಆರು ವರ್ಷಗಳ ಅವಧಿಯವರೆಗೆ ಅನರ್ಹಗೊಳಿಸಲಾಗುತ್ತದೆ.

ಬಹುಜನ ಸಮಾಜ ಪಕ್ಷದ ನಾಯಕನಿಗೆ ಶಿಕ್ಷೆಯಾದ ಮೊದಲ ಪ್ರಕರಣ ಇದಾಗಿದೆ.

ಮೌ ಪಟ್ಟಣದಲ್ಲಿ ನಡೆದ ಕೋಮುಗಲಭೆಗೆ ಸಂಬಂಧಿಸಿದಂತೆ ಪೊಲೀಸರಿಗೆ ಶರಣಾದ ಮುಖ್ತಾರ್ ಅನ್ಸಾರಿ 2005ರಿಂದ ಜೈಲಿನಲ್ಲಿದ್ದರು. ಜೈಲರ್‌ನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ ಮತ್ತು ಅವನತ್ತ ಬಂದೂಕನ್ನು ತೋರಿಸಿದ್ದಕ್ಕಾಗಿ ಅನ್ಸಾರಿಗೆ ಏಳು ವರ್ಷಗಳ ಜೈಲು ಶಿಕ್ಷೆಯನ್ನು ಸೆಪ್ಟೆಂಬರ್‌ನಲ್ಲಿ ವಿಧಿಸಲಾಯಿತು.

ಇಬ್ಬರು ಸಹೋದರರ ಪರ ವಕೀಲ ಲಿಯಾಕತ್ ಅಲಿ ಅವರು ಶಿಕ್ಷೆಯ ವಿರುದ್ಧ ಮೇಲ್ಮನವಿ ಸಲ್ಲಿಸುವುದಾಗಿ ಹೇಳಿದ್ದಾರೆ ಎಂದು ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ.

ಮುಖ್ತಾರ್ ಅನ್ಸಾರಿ ಸದ್ಯ ಬಂದಾ ಜಿಲ್ಲಾ ಕಾರಾಗೃಹದಲ್ಲಿದ್ದಾರೆ. ನ್ಯಾಯಾಲಯವು ಈ ಆದೇಶವನ್ನು ಪ್ರಕಟಿಸಿದ ನಂತರ ಶನಿವಾರ ಅಫ್ಜಲ್ ಅನ್ಸಾರಿಯನ್ನೂ ಪೊಲೀಸರು ಕಸ್ಟಡಿಗೆ ತೆಗೆದುಕೊಂಡರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...