Homeಮುಖಪುಟಉತ್ತರ ಪ್ರದೇಶ ಉಪ ಚುನಾವಣೆ | 9ರಲ್ಲಿ 7 ಕ್ಷೇತ್ರಗಳು ಬಿಜೆಪಿಯ ಎನ್‌ಡಿಎ ಪಾಲು; ಎಸ್‌ಪಿಗೆ...

ಉತ್ತರ ಪ್ರದೇಶ ಉಪ ಚುನಾವಣೆ | 9ರಲ್ಲಿ 7 ಕ್ಷೇತ್ರಗಳು ಬಿಜೆಪಿಯ ಎನ್‌ಡಿಎ ಪಾಲು; ಎಸ್‌ಪಿಗೆ 2!

- Advertisement -
- Advertisement -

ಉತ್ತರ ಪ್ರದೇಶದ ಒಂಬತ್ತು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಚುನಾವಣೆಯ ಫಲಿತಾಂಶ ಶನಿವಾರ ಹೊರಬಿದ್ದಿದ್ದು, ಆಡಳಿತರೂಢ ಬಿಜೆಪಿ 6 ಕ್ಷೇತ್ರಗಳನ್ನು ಗೆದ್ದುಕೊಂಡಿದ್ದು, ಒಂದು ಕ್ಷೇತ್ರ ಬಿಜೆಪಿಯ ಮಿತ್ರ ಪಕ್ಷವಾದ ರಾಷ್ಟ್ರೀಯ ಲೋಕದಳ ತನ್ನದಾಗಿಸಿದೆ. ಉಳಿದ ಎರಡು ಕ್ಷೇತ್ರಗಳಲ್ಲಿ ರಾಜ್ಯ ಪ್ರಮುಖ ವಿಪಕ್ಷವಾದ ಸಮಾಜವಾದಿ ಪಕ್ಷ ಗೆದ್ದುಕೊಂಡಿದೆ. ಉತ್ತರ ಪ್ರದೇಶ

ಉತ್ತರ ಪ್ರದೇಶದ ಕರ್ಹಾಲ್‌ ಕ್ಷೇತ್ರದ ಶಾಸಕರಾಗಿದ್ದ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಸಂಸದರಾಗಿ ಆಯ್ಕೆಯಾದ ನಂತರ ಕ್ಷೇತ್ರವೂ ತೆರವುಗೊಂಡಿತ್ತು. ಇದೀಗ ಅವರ ಸೋದರಳಿಯ ತೇಜ್ ಪ್ರತಾಪ್ ಸಿಂಗ್ ಅವರು 1,04,304 ಮತಗಳನ್ನು ಪಡೆದು 14,725) ಕ್ಕೂ ಹೆಚ್ಚು ಮತಗಳಿಂದ ಜಯಗಳಿಸಿದ್ದಾರೆ. ಸಿಸಮಾವು ಕ್ಷೇತ್ರದಲ್ಲಿ ಕೂಡಾ ಸಮಾಜವಾದಿ ಪಕ್ಷವೂ ಗೆಲುವು ಕಂಡಿದ್ದು ಪಕ್ಷದ ಅಭ್ಯರ್ಥಿ ನಸೀಮ್ ಸೋಲಂಕಿ ಅವರು 69,714 ಮತಗಳನ್ನು ಪಡೆದು 8,564 ಮತಗಳ ಅಂತರದಲ್ಲಿ ಗೆದ್ದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಬಿಜೆಪಿ ಒಟ್ಟು 6 ಕ್ಷೇತ್ರಗಳನ್ನು ತನ್ನದಾಗಿಸಿಕೊಂಡಿದ್ದು, ಕುಂದರ್ಕಿಯಲ್ಲಿ ಪಕ್ಷದ ಅಭ್ಯರ್ಥಿಯಾದ ರಾಮ್‌ವೀರ್ ಸಿಂಗ್, ಗಾಜಿಯಾಬಾದ್‌ನಲ್ಲಿ ಸಂಜೀವ್ ಶರ್ಮಾ, ಖೇರ್‌ನಲ್ಲಿ ಸುರೇಂದರ್ ದಿಲೇರ್, ಫೂಲ್ಪುರ್‌ನಲ್ಲಿ ದೀಪಕ್ ಪಟೇಲ್, ಕತಿಹಾರಿಯಲ್ಲಿ ಧರ್ಮರಾಜ್ ನಿಶಾದ್, ಮಜ್ವಾನ್‌ನಲ್ಲಿ ಸುಚಿಸ್ಮಿತ ಮೌರ್ಯ ಅವರು ಗೆದ್ದಿದ್ದಾರೆ.

ಉಳಿದಂತೆ ಮೀರಾಪುರದಲ್ಲಿ ರಾಷ್ಟ್ರೀಯ ಲೋಕದಳದ ಮಿಥಿಲೇಶ್ ಪಾಲ್ ಅವರು 84,304 ಮತಗಳನ್ನು ಪಡೆದು 30 ಸಾವಿರಕ್ಕೂ ಅಧಿಕ ಮತಗಳಿಂದ ಗೆದ್ದದ್ದಾರೆ. ರಾಷ್ಟ್ರೀಯ ಲೋಕದಳವು ಈ ಹಿಂದೆ ಸಮಾಜವಾದಿ ಪಕ್ಷದ ಜೊತೆಗೆ ಮೈತ್ರಿಯಲ್ಲಿತ್ತು. ಈ ಮೈತ್ರಿಯನ್ನು ಮುರಿದು ಇತ್ತಿಚೆಗಷ್ಟೆ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಯನ್ನು ಸೇರಿಕೊಂಡಿತ್ತು.

ಉಪ ಚುನಾವಣೆಯಲ್ಲಿ ತಮ್ಮ ಪಕ್ಷದ ಗೆಲುವಿನ ಬಗ್ಗೆ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಅದಿತ್ಯನಾಥ್, “ಉತ್ತರ ಪ್ರದೇಶ ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿ-ಎನ್‌ಡಿಎ ಗೆಲುವು ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿಯವರ ಯಶಸ್ವಿ ನಾಯಕತ್ವ ಮತ್ತು ಮಾರ್ಗದರ್ಶನದ ಮೇಲೆ ಜನರ ಅಚಲ ನಂಬಿಕೆಗೆ ಸಾಕ್ಷಿಯಾಗಿದೆ. ಈ ಗೆಲುವು ಡಬಲ್ ಇಂಜಿನ್ ಸರ್ಕಾರದ ಭದ್ರತೆ, ಉತ್ತಮ ಆಡಳಿತ ಮತ್ತು ಸಾರ್ವಜನಿಕ ಕಲ್ಯಾಣ ನೀತಿಗಳು ಮತ್ತು ಸಮರ್ಪಿತ ಕಾರ್ಯಕರ್ತರ ದಣಿವರಿಯದ ಕಠಿಣ ಪರಿಶ್ರಮದ ಫಲಿತಾಂಶ.” ಎಂದು ಹೇಳಿದ್ದು, ಗೆಲುವಿಗಾಗಿ ಮತದಾರರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ

ಒಟ್ಟು 9 ಕ್ಷೇತ್ರಗಳ ಉಪ ಚುನಾವಣೆ ಇದ್ದರೂ ಕಾಂಗ್ರೆಸ್ ಯಾವುದೇ ಕ್ಷೇತ್ರಗಳಲ್ಲಿ ಸ್ಪರ್ಧಿಸಿರಲಿಲ್ಲ. ಬದಲಾಗಿ ಇಂಡಿಯಾ ಮೈತ್ರಿಯ ಮಿತ್ರ ಪಕ್ಷವಾದ ಸಮಾಜವಾದಿ ಪಕ್ಷಕ್ಕೆ ತನ್ನ ಬೆಂಬಲ ಘೋಷಿಸಿತ್ತು.

ಅದಾಗ್ಯೂ, ಲೋಕಸಭೆ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್ ಮೈತ್ರಿಕೂಟ ರಾಜ್ಯದ 80 ಸ್ಥಾನಗಳ ಪೈಕಿ 43 ಸ್ಥಾನಗಳನ್ನು ಗೆದ್ದಿತ್ತು. ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷ 37 ಸ್ಥಾನಗಳು ಗೆದ್ದು ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ಕಾಂಗ್ರೆಸ್ ಆರು ಸ್ಥಾನಗಳನ್ನು ಗೆದ್ದುಕೊಂಡಿತ್ತು.

2019 ರ ಲೋಕಸಭೆ ಚುನಾವಣೆಯಲ್ಲಿ 62 ಸಂಸದೀಯ ಸ್ಥಾನಗಳನ್ನು ಗೆದ್ದಿದ್ದ ಬಿಜೆಪಿ, 2024 ಲೋಕಸಭೆಯಲ್ಲಿ ಕೇಲವ 33 ಕ್ಷೇತ್ರಗಳಲ್ಲಿ ಗೆದ್ದಿತ್ತು. ಉತ್ತರ ಪ್ರದೇಶದಲ್ಲಿ ಪಕ್ಷದ ಮತಗಳ ಪ್ರಮಾಣವು 2019 ರಲ್ಲಿ ಸಾರ್ವಕಾಲಿಕ ಗರಿಷ್ಠವಾದ 49.9% ರಿಂದ 41.3% ಕ್ಕೆ ಇಳಿದಿತ್ತು.

ಇದನ್ನೂ ಓದಿ: ಬಂಗಾಳ ಉಪಚುನಾವಣೆ: 6 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿದ ಟಿಎಂಸಿ, 8 ವರ್ಷಗಳ ಬಳಿಕ ಬಿಜೆಪಿ ಕ್ಷೇತ್ರ ವಶಕ್ಕೆ

ಬಂಗಾಳ ಉಪಚುನಾವಣೆ: 6 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿದ ಟಿಎಂಸಿ, 8 ವರ್ಷಗಳ ಬಳಿಕ ಬಿಜೆಪಿ ಕ್ಷೇತ್ರ ವಶಕ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...