Homeದಲಿತ್ ಫೈಲ್ಸ್ಉತ್ತರ ಪ್ರದೇಶ| ಜಾತಿ ನಿಂದನೆ-ಹಲ್ಲೆ; ದೃಷ್ಟಿ ಕಳೆದುಕೊಂಡ ದಲಿತ ಯುವಕ

ಉತ್ತರ ಪ್ರದೇಶ| ಜಾತಿ ನಿಂದನೆ-ಹಲ್ಲೆ; ದೃಷ್ಟಿ ಕಳೆದುಕೊಂಡ ದಲಿತ ಯುವಕ

- Advertisement -
- Advertisement -

ಕಾಲುವೆ ಬಳಿ ಮಲವಿಸರ್ಜನೆ ಮಾಡುತ್ತಿದ್ದ ದಲಿತ ಯುವಕನ ಜೊತೆಗೆ ನಡೆದ ಜಗಳ ತೀವ್ರಗೊಂಡು, ದಾಳಿಕೋರನೊಬ್ಬ ಮೋಟಾರ್ ಸೈಕಲ್ ಕೀಲಿಯಿಂದ ಚುಚ್ಚಿದ ಪರಿಣಾಮ ಆತ ಒಂದು ಕಣ್ಣಿನ ದೃಷ್ಠಿ ಕಳೆದುಕೊಂಡಿದ್ದಾರೆ.

20 ರ ಹರೆಯದ ದಲಿತ ಸುಮದಾಯದ ರಾಹುಲ್ ಎಂಬ ಯುವಕನನ್ನು ಭಾನುವಾರ ಜಿಲ್ಲಾ ಆಸ್ಪತ್ರೆಯಿಂದ ವಾರಣಾಸಿಗೆ ಹೆಚ್ಚಿನ ಚಿಕಿತ್ಸೆಗಾಗಿ ಕರೆದೊಯ್ಯಲಾಯಿತು. ಪ್ರಬಲ ಜಾತಿಗೆ ಸೇರಿದ ಗುಂಪು ರಾಹುಲ್‌ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ್ದಾರೆ. ಆತ ಒಂದು ಕಣ್ಣಿನ ದೃಷ್ಟಿ ಕಳೆದುಕೊಂಡಿದ್ದಾನೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಶುಕ್ರವಾರ ಮಧ್ಯಾಹ್ನ ರಾಹುಲ್ ಮಲವಿಸರ್ಜನೆ ಮಾಡಲು ಔರೈ ಪ್ರದೇಶದ ಕಾಲುವೆಗೆ ಹೋಗಿದ್ದಾಗ ಈ ಘಟನೆ ನಡೆದಿದೆ.

ರಾಹುಲ್ ಕಾಲುವೆ ಬಳಿ ಮಲವಿಸರ್ಜನೆ ಮಾಡುವುದನ್ನು ಆಕ್ಷೇಪಿಸಿದ ಕಾರಣ, ಬಲಿಪಶು ಮತ್ತು ಆರೋಪಿ ಶಂಕರ್ ಬಿಂದ್ ನಡುವೆ ವಾಗ್ವಾದ ನಡೆಯಿತು. ದಾಳಿಕೋರ ರಾಹುಲ್ ಅವರನ್ನು ಜಾತಿ ನಿಂದನೆ ಮಾಡಿ, ಕೆಟ್ಟದಾಗಿ ನಿಂದಿಸಿ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.

ರಾಹುಲ್ ತಪ್ಪಿಸಿಕೊಳ್ಳಲು ಪ್ರಯತ್ನಿಸಿದಾಗ, ಆರೋಪಿ ತನ್ನ ಎಡಗಣ್ಣಿಗೆ ಮೋಟಾರ್ ಸೈಕಲ್ ಕೀಲಿಯಿಂದ ಚುಚ್ಚಿ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅಭಿಮನ್ಯು ಮಾಂಗ್ಲಿಕ್ ಹೇಳಿದ್ದಾರೆ. ದಾಳಿ ಬಳಿಕ ಬಲಿಪಶು ತೀವ್ರ ನೋವಿನಿಂದ ನೆಲಕ್ಕೆ ಕುಸಿದು ಬಿದ್ದಿದ್ದಾನೆ. ಸ್ಥಳೀಯರು ಯುವಕನ ರಕ್ಷಣೆಗೆ ಆಗಮಿಸಿದ ನಂತರ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ.

ದಾಳಿ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ತಲುಪಿ ಗಾಯಗೊಂಡ ಯುವಕನನ್ನು ಸಮುದಾಯ ಆರೋಗ್ಯ ಕೇಂದ್ರಕ್ಕೆ ಸ್ಥಳಾಂತರಿಸಿ, ನಂತರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ಎಸ್‌ಪಿ ಹೇಳಿದರು.

“ಅವನ ಎಡಗಣ್ಣಿಗೆ ಗಂಭೀರ ಗಾಯವಾಗಿದ್ದರಿಂದ ದೃಷ್ಠಿ ನಷ್ಟವಾಗಿದೆ ಎಂದು ದೂರು ನೀಡಿದ್ದರಿಂದ, ವೈದ್ಯರು ಭಾನುವಾರ ಅವರನ್ನು ವಾರಣಾಸಿಯ ಬಿಎಚ್‌ಯು ಟ್ರಾಮಾ ಸೆಂಟರ್‌ಗೆ ವರ್ಗಾಯಿಸಿದ್ದಾರೆ” ಎಂದು ಮಾಂಗ್ಲಿಕ್ ಹೇಳಿದರು.

ಬಲಿಪಶುವಿನ ತಂದೆ ರಾಮ್ ಧನಿ ಅವರ ದೂರಿನ ಮೇರೆಗೆ ಆರೋಪಿ ಶಂಕರ್ ಬಿಂದ್ ವಿರುದ್ಧ ಭಾರತೀಯ ನ್ಯಾಯ ಸಂಹಿತಾ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ಹೇಳಿದರು.

ಆರೋಪಿಯ ವಿರುದ್ಧ ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಎಸ್‌ಪಿ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...