Homeಮುಖಪುಟಉತ್ತರ ಪ್ರದೇಶ: ಮೂವರು ಅಪ್ರಾಪ್ತ ದಲಿತ ಸಹೋದರಿಯರ ಮೇಲೆ ಕೆಮಿಕಲ್ ದಾಳಿ!

ಉತ್ತರ ಪ್ರದೇಶ: ಮೂವರು ಅಪ್ರಾಪ್ತ ದಲಿತ ಸಹೋದರಿಯರ ಮೇಲೆ ಕೆಮಿಕಲ್ ದಾಳಿ!

ಮಂಗಳವಾರ(ಅ .13) ಮುಂಜಾನೆ 2 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಸದ್ಯ ಮೂವರು ಬಾಲಕಿಯರನ್ನೂ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

- Advertisement -
- Advertisement -

ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯ ಪಾಸ್ಕಾ ಗ್ರಾಮದಲ್ಲಿ ಮನೆಯ ಮಹಡಿ ಮೇಲೆ ನಿದ್ರೆ ಮಾಡುತ್ತಿದ್ದ ಮೂವರು ಅಪ್ರಾಪ್ತ ದಲಿತ ಸಹೋದರಿಯರ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ರಾಸಾಯನಿಕ ಸುರಿದಿದ್ದಾನೆ. ಪರಿಣಾಮವಾಗಿ ಬಾಲಕಿಯರಿಗೆ ಸುಟ್ಟು ಗಾಯಗಳಾಗಿವೆ.

ಮಂಗಳವಾರ(ಅ .13) ಮುಂಜಾನೆ 2 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಸದ್ಯ ಮೂವರು ಬಾಲಕಿಯರನ್ನೂ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಮೂವರು ಬಾಲಕಿಯರಲ್ಲಿ ಇಬ್ಬರಿಗೆ ಸಣ್ಣಪುಟ್ಟ ಸುಟ್ಟ ಗಾಯಗಳಾಗಿದ್ದರೆ, ಹಿರಿಯವಳಾದ ಕಾಜಲ್ (17) ಗೆ ಶೇ. 30ರಷ್ಟು ಸುಟ್ಟ ಗಾಯಗಳಾಗಿವೆ. ಮಹೀಮಾ (12)ಗೆ ಶೇ. 20ರಷ್ಟು ಸುಟ್ಟ ಗಾಯಗಳಾಗಿವೆ ಮತ್ತು ಸೋನಮ್ (8)ಗೆ ಶೇ. 7ರಷ್ಟು ಸುಟ್ಟ ಗಾಯಗಳಾಗಿವೆ ಎಂದು ಗೊಂಡಾ ಪೊಲೀಸ್ ವರಿಷ್ಠಾಧಿಕಾರಿ ಹೇಳಿದ್ದಾರೆ.

ಇದನ್ನೂ ಓದಿ: ಸಾಮೂಹಿಕ ಅತ್ಯಾಚಾರ: ದಲಿತ ಮಹಿಳೆ ಮತ್ತು ಆಕೆಯ ಮಗುವನ್ನು ಕಾಲುವೆಗೆ ಎಸೆದ ಪಾಪಿಗಳು!

“ಬಾಲಕಿಯರ ತಂದೆ ರಾಮ್ ಅವತಾರ್ ಅವರು ಯಾರೊಂದಿಗೂ ದ್ವೇಷ ಹೊಂದಿಲ್ಲ ಮತ್ತು ಅಪರಾಧದ ಹಿಂದಿನ ಚಿಕ್ಕ ಸುಳಿವು ಕೂಡ ಹೊಂದಿರಲಿಲ್ಲ. ಬಾಲಕಿಯರನ್ನು ಪೊಲೀಸರು ವಿಚಾರಿಸುತ್ತಿದ್ದು, ಅಪರಾಧಿಗಳನ್ನು ಪತ್ತೆ ಹಚ್ಚಲು ಪೊಲೀಸ್ ತಂಡಗಳನ್ನು ಸ್ಥಾಪಿಸಲಾಗಿದೆ” ಎಂದು ಗೊಂಡಾ ಪೊಲೀಸ್ ವರಿಷ್ಠಾಧಿಕಾರಿ ಶೈಲೇಶ್ ಕುಮಾರ್ ಪಾಂಡೆ ತಿಳಿಸಿದ್ದಾರೆ.

‘ದಾಳಿಯಲ್ಲಿ ಬಳಸಿದ ರಾಸಾಯನಿಕ ಇನ್ನೂ ‍ಪತ್ತೆ ಆಗಿಲ್ಲ. ತಜ್ಞರು ಯಾವ ರಾಸಾಯನಿಕ ಎಂದು ತನಿಖೆ ನಡೆಸುತ್ತಿದ್ದಾರೆ. ತನಿಖೆಯ ನಂತರ ಇದು ಸ್ಪಷ್ಟವಾಗಲಿದೆ’ ಎಂದು ಹೇಳಿದ್ದಾರೆ.

ಘಟನೆ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ತಂದೆಯ ಹೇಳಿಕೆ ಇರುವ ವಿಡಿಯೋವನ್ನು ಪೋಸ್ಟ್ ಮಾಡಿ, ’ಈ ವ್ಯಕ್ತಿಯ ಮೂವರು ಹೆಣ್ಣುಮಕ್ಕಳು ಮನೆಯಲ್ಲಿ ಮಲಗಿದ್ದಾಗ ಅಲ್ಲಿಗೆ ಪ್ರವೇಶಿದ ಅಪರಿಚಿತ ಅವರ ಮೇಲೆ ಆಸಿಡ್ ಎರಚಿದ್ದಾನೆ. ಮಹಿಳೆಯರ ಮೇಲಿನ ಅಪರಾಧಗಳನ್ನು ಸಮರ್ಥಿಸುವ ಮತ್ತು ರಕ್ಷಿಸುವ ಉತ್ತರ ಪ್ರದೇಶ ಸರ್ಕಾರದ ರಾಜಕೀಯ ಪ್ರೇರಿತ ನಿರೂಪಣೆಯು ರಾಜ್ಯಾದ್ಯಂತ ಅಪರಾಧಿಗಳಿಗೆ ಧೈರ್ಯ ತುಂಬುತ್ತಿದೆ’ ಎಂದಿದ್ದಾರೆ.

ಉತ್ತರ ಪ್ರದೇಶದಲ್ಲಿ ಅತ್ಯಾಚಾರ ಪ್ರಕರಣಗಳು, ದಲಿತರ ಮೇಲಿನ ಹಲ್ಲೆಗಳು ಹೆಚ್ಚಾಗಿ ವರದಿಯಾಗುತ್ತಿರುವ ಬೆನ್ನಿಗೆ ಈಗ ಕೆಮಿಕಲ್ ದಾಳಿ ಪ್ರಕರಣಗಳು ಸೇರಿಕೊಳ್ಳುತ್ತಿವೆ. ಸರ್ಕಾರ ಇಂತಹ ಘಟನೆಗಳ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಉತ್ತರಪ್ರದೇಶ: ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, 8 ಮಂದಿ ಬಂಧನ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಗೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ: ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ

0
ಲೋಕಸಭೆ ಚುನಾವಣೆಯಲ್ಲಿ ಕೊಪ್ಪಳ ಕ್ಷೇತ್ರದ ಟಿಕೆಟ್‌ ಕೈತಪ್ಪಿದ ಹಿನ್ನೆಲೆ ಬಿಜೆಪಿ ವಿರುದ್ದ ಮುನಿಸಿಕೊಂಡಿದ್ದ ಹಾಲಿ ಸಂಸದ ಸಂಗಣ್ಣ ಕರಡಿ ಅವರು ತಮ್ಮ ಸಂಸದ ಸ್ಥಾನಕ್ಕೆ ಮತ್ತು ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ...