Homeಮುಖಪುಟಉತ್ತರಪ್ರದೇಶ: ದೂರು ಸ್ವೀಕರಿಸದೆ ಪೊಲೀಸ್ ನಿರ್ಲಕ್ಷ್ಯ; ದಲಿತ ವ್ಯಕ್ತಿ ಆತ್ಮಹತ್ಯೆಗೆ ಯತ್ನ

ಉತ್ತರಪ್ರದೇಶ: ದೂರು ಸ್ವೀಕರಿಸದೆ ಪೊಲೀಸ್ ನಿರ್ಲಕ್ಷ್ಯ; ದಲಿತ ವ್ಯಕ್ತಿ ಆತ್ಮಹತ್ಯೆಗೆ ಯತ್ನ

- Advertisement -
- Advertisement -

ಭೂಮಿ ಒತ್ತುವರಿ ಮಾಡಿಕೊಂಡಿರುವ ಕುರಿತು ತಾನು ನೀಡಿರುವ ದೂರನ್ನು ಸ್ವೀಕರಿಸದೆ ಪೊಲೀಸರು ನಿರ್ಲಕ್ಷಿಸಿದ್ದಾರೆಂದು ಆರೋಪಿಸಿ ದಲಿತ ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಉತ್ತರಪ್ರದೇಶದ ಬಲರಾಂಪುರದಲ್ಲಿ ನಡೆದಿದೆ.

ಘಟನೆಗೆ ಸಂಬಂಧಿಸಿ ಕರ್ತವ್ಯ ನಿರ್ಲಕ್ಷ್ಯದ ಆರೋಪದ ಮೇಲೆ ಗೈದಾಸ್ ಬುಜುರ್ಗ್ ಠಾಣಾಧಿಕಾರಿ ಪವನ್ ಕುಮಾರ್ ಅವರನ್ನು ಬಲರಾಂಪುರ ಪೊಲೀಸ್ ವರಿಷ್ಠಾಧಿಕಾರಿ ಕೇಶವಕುಮಾರ್ ಅಮಾನತುಗೊಳಿಸಿದ್ದಾರೆ.

ಜಾಗವನ್ನು ಒತ್ತುವರಿ ಮಾಡಿಕೊಂಡು ಕಟ್ಟಡಕ್ಕೆ ಶಂಕುಸ್ಥಾಪನೆ ಮಾಡುತ್ತಿದ್ದಾರೆ ಎಂದು ದೂರು ದಾಖಲಿಸಿದರೂ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದಲಿತ ವ್ಯಕ್ತಿ ರಾಮ್ ಬುಜ್‌ಹರತ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಪೊಲೀಸ್ ಅಧೀಕ್ಷಕ ಕೇಶವ್ ಕುಮಾರ್ ತಿಳಿಸಿದ್ದಾರೆ.

ಅ.24ರಂದು ರಾಮ್ ಬುಜ್‌ಹರತ್ ಆತ್ಮಹತ್ಯೆಗೆ ಯತ್ನಿಸಿದ್ದು, ಗಂಭೀರವಾಗಿರುವ ಅವರನ್ನು ಲಕ್ನೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿದೆ ಎಂದು ಹೇಳಲಾಗಿದೆ.
ದಲಿತ ವ್ಯಕ್ತಿಯ ಆತ್ಮಹತ್ಯೆ ಯತ್ನ ಪ್ರಕರಣದ ಕುರಿತು ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ನಮ್ರತಾ ಶ್ರೀವಾತ್ಸವ್ ಅವರು ತನಿಖೆ ನಡೆಸಿದ್ದು, ಈ ವೇಳೆ ಗೈದಾಸ್ ಬುಝುರ್ಗ್ ಪೊಲೀಸ್ ಠಾಣೆಯ ಅಧಿಕಾರಿ ಪವನ್ ಕುಮಾರ್ ನಿರ್ಲಕ್ಷ್ಯ ವಹಿಸಿರುವುದು ಕಂಡು ಬಂದಿದೆ. ತನಿಖಾ ವರದಿಯ ಆಧಾರದಲ್ಲಿ ಎಸ್ಪಿ ಠಾಣಾಧಿಕಾರಿಯನ್ನು ಅಮಾನತುಗೊಳಿಸಿದ್ದಾರೆ.

 

ಇದನ್ನು ಓದಿ: ಪೊಲೀಸ್‌ ಠಾಣೆ ಮೇಲೆ ದಾಳಿಗೆ ಪ್ರಚೋದನೆ: ಬಿಜೆಪಿ ಸಂಸದ ಸೇರಿ 17ಮಂದಿ ವಿರುದ್ಧ ಎಫ್‌ಐಆರ್‌

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...