Homeಮುಖಪುಟಉತ್ತರ ಪ್ರದೇಶ: ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ್ದ ಅಪರಾಧಿಗೆ 10 ವರ್ಷ ಜೈಲು

ಉತ್ತರ ಪ್ರದೇಶ: ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ್ದ ಅಪರಾಧಿಗೆ 10 ವರ್ಷ ಜೈಲು

- Advertisement -
- Advertisement -

ಉತ್ತರ ಪ್ರದೇಶದ ಸುಲ್ತಾನ್‌ಪುರ ಜಿಲ್ಲೆಯಲ್ಲಿ ಎರಡು ವರ್ಷಗಳ ಹಿಂದೆ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ವಿಡಿಯೋ ಮಾಡಿಕೊಂಡಿದ್ದ ಅಪರಾಧಿಗೆ ಸುಲ್ತಾನ್‌ಪುರ ನ್ಯಾಯಾಲಯವೊಂದು 10 ವರ್ಷ ಜೈಲು ಶಿಕ್ಷೆ ವಿಧಿಸಿದೆ.

ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ವಿಶೇಷ ನ್ಯಾಯಾಧೀಶ ಪವನ್ ಕುಮಾರ್ ಶರ್ಮಾ ಅವರು ಅಪರಾಧಿ ಸೂರಜ್ ಸರೋಜ್‌ಗೆ 10 ವರ್ಷ ಜೈಲು ಮತ್ತು 51,000 ರೂಪಾಯಿ ದಂಡ ವಿಧಿಸಿದ್ದಾರೆ. ಸುಲ್ತಾನ್‌ಪುರ ಜಿಲ್ಲೆಯ ಸಂಗ್ರಾಮಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು.

10 ನೇ ತರಗತಿಯ ವಿದ್ಯಾರ್ಥಿನಿಯಾಗಿದ್ದ ತನ್ನ 15 ವರ್ಷದ ಮಗಳನ್ನು 2020 ರ ಜನವರಿ 25 ರಂದು ಸೂರಜ್ ಸರೋಜ್ ಬಲವಂತವಾಗಿ ಕೋಳಿ ಫಾರಂಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎಂದು ಸಂತ್ರಸ್ತೆಯ ತಾಯಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಸೂರಜ್ ಸರೋಜ್ ತನ್ನ ಸಹಚರರ ಸಹಾಯದಿಂದ ಈ ಕೃತ್ಯವನ್ನು ಚಿತ್ರೀಕರಿಸಿದ್ದಾರೆ. ಈ ಬಗ್ಗೆ ಯಾರಿಗಾದರೂ ತಿಳಿಸಿದರೆ ಗಂಭೀರ ಪರಿಣಾಮ ಬೀರುವುದಾಗಿ ಬಾಲಕಿಗೆ ಬೆದರಿಕೆ ಹಾಕಿದ್ದಾರೆ ಎಂದು ದೂರುದಾರರು ತಿಳಿಸಿದ್ದಾರೆ.

ಇದನ್ನೂ ಓದಿ: ನಿಮ್ಮಿಂದಾಗಿ ನಾನು ನೇಣು ಹಾಕಿಕೊಳ್ಬೇಕಾ? ಸುವರ್ಣ ಟಿ.ವಿ. ವಿರುದ್ಧ ನಟಿ ಸಂಜನಾ ಕಿಡಿ

ದೂರಿನ ಆಧಾರದ ಮೇಲೆ, ಜನವರಿ 29, 2020 ರಂದು ಸೂರಜ್ ಸರೋಜ್ ವಿರುದ್ಧ ಪ್ರಕರಣ ದಾಖಲಿಸಿ, ಆತನನ್ನು ಬಂಧಿಸಲಾಗಿತ್ತು. ಬಳಿಕ ಪೊಲೀಸರು ಆತನ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಪ್ರಾಸಿಕ್ಯೂಷನ್ ಪರವಾಗಿ ಹಾಜರಾದ ಸರ್ಕಾರಿ ವಕೀಲ ಸಿ.ಎಲ್. ದ್ವಿವೇದಿ ಅವರು ಸಾಕ್ಷ್ಯಗಳನ್ನು ಪ್ರಸ್ತುತಪಡಿಸಿದ್ದರು. ಈ ಘೋರ ಅಪರಾಧಕ್ಕೆ ಆರೋಪಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿದ್ದರು.

ಬಾಲಕಿಯ ಮೇಲಿನ ಅತ್ಯಾಚಾರವನ್ನು ಚಿತ್ರೀಕರಿಸಲು ಸಹಾಯ ಮಾಡಿದ ಅಪರಾಧಿ ಸೂರಜ್ ಸರೋಜ್ ಸಹಚರರನ್ನು ಪೊಲೀಸರು ಇನ್ನೂ ಗುರುತಿಸಿಲ್ಲ.


ಇದನ್ನೂ ಓದಿ: ಲೈಂಗಿಕ ದೌರ್ಜನ್ಯ ಪ್ರಕರಣ: ’ಸಂತ್ರಸ್ತೆಯಾಗಿ ಬದುಕುವುದು ಸುಲಭವಲ್ಲ’ 5 ವರ್ಷಗಳ ಪ್ರಯಾಣ ನೆನಪಿಸಿಕೊಂಡ ನಟಿ ಭಾವನಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...