ಉತ್ತರ ಪ್ರದೇಶದ ಕೊರೊನಾ ನಿರ್ವಹಣೆ ಬಗ್ಗೆ ಸಿಎಂ ಆದಿತ್ಯನಾಥ್‌ಗೆ ಪತ್ರ ಬರೆದ ಪ್ರಿಯಾಂಕಾ ಗಾಂಧಿ

ಕೊರೊನಾ ಸಾಂಕ್ರಾಮಿಕದ ಪರಿಣಾಮದಿಂದ ‘ಮಧ್ಯಮ ವರ್ಗ’ ಸಂಕಷ್ಟಕ್ಕೆ ಈಡಾಗುತ್ತಿದೆ. ರಾಜ್ಯದಲ್ಲಿ ಖಾಸಗಿ ಆಸ್ಪತ್ರೆಗಳು ಹೆಚ್ಚಿನ ಶುಲ್ಕ ವಿಧಿಸುತ್ತಿವೆ ಇವುಗಳನ್ನು ನಿವಾರಿಸಿ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್‌ಗೆ ಪತ್ರ ಬರೆದಿದ್ದಾರೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಬರೆದ ಪತ್ರದಲ್ಲಿ, “ಸಾಂಕ್ರಾಮಿಕ ರೋಗದ ಎರಡನೇ ಅಲೆಯು ಜನಸಾಮಾನ್ಯರ ಮೇಲೆ ತೀವ್ರ ಪರಿಣಾಮ ಬೀರಿದೆ. ಆಡಳಿತದ ಅಸಮರ್ಥತೆ ಮತ್ತು ಸಿದ್ಧತೆಯ ಕೊರತೆಯಿಂದಾಗಿ ಜನರು ಅಸಹನೀಯ ನೋವು ಅನುಭವಿಸಬೇಕಾಯಿತು” ಎಂದರು.

“ಏಪ್ರಿಲ್-ಮೇ ತಿಂಗಳಲ್ಲಿನ ಕೊರೊನಾ ಅಪಾಯದ ಬಗ್ಗೆ ಸರ್ಕಾರಕ್ಕೆ ಯಾವುದೇ ಯೋಜನೆಯನ್ನು ಹೊಂದಿಲ್ಲ ಎಂದು ಸ್ಪಷ್ಟಪಡಿಸಿದೆ. ಅನೇಕ ಅನಗತ್ಯ ನಿಯಮಗಳು ಜನರಿಗೆ ಸಮಸ್ಯೆಗಳನ್ನು ತಂದಿಟ್ಟಿದೆ” ಎಂದು ಉತ್ತರ ಪ್ರದೇಶದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ.

ಇದನ್ನೂ ಓದಿ: ಕೇರಳ ಐತಿಹಾಸಿಕ ನಿರ್ಧಾರ: ದೇವಸ್ವಂ( ಮುಜರಾಯಿ ಇಲಾಖೆ) ಸಚಿವರಾಗಿ ದಲಿತ ಸಮುದಾಯದ ಶಾಸಕ ಆಯ್ಕೆ

’ಒಂದು ಕಡೆ ಸಾಂಕ್ರಾಮಿಕ ರೋಗವು ನಮ್ಮನ್ನು ಕಾಡುತ್ತಿದೆ, ಮತ್ತೊಂದೆಡೆ ಇದು ಜನರ ಜೀವನೋಪಾಯ, ಉದ್ಯೋಗ ಮತ್ತು ವ್ಯವಹಾರದ ವಿಷಯದಲ್ಲಿ ಭಾರಿ ತೊಂದರೆಗಳನ್ನು ಸೃಷ್ಟಿಸಿದೆ’ ಎಂದು ಪ್ರಿಯಾಂಕಾ ಗಾಂಧಿ ಹೇಳಿದರು.

“ಇಂದು, ಕೋಟ್ಯಾಂತರ ಜನರು ತಮ್ಮ ಭವಿಷ್ಯದ ಬಗ್ಗೆ ಭಯಭೀತರಾಗಿದ್ದಾರೆ, ಅವರ ಉದ್ಯೋಗ, ಸಂಪಾದನೆಯ ದಾರಿ ಕಡಿಮೆಯಾಗಿವೆ. ಇತ್ತ ಹಣದುಬ್ಬರ ಹೆಚ್ಚಾಗಿದ್ದು, ವಿಶೇಷವಾಗಿ ಮಧ್ಯಮ ವರ್ಗವನ್ನು ತೊಂದರೆಗೆ ಸಿಲುಕಿಸಿದೆ” ಎಂದು ಪತ್ರದಲ್ಲಿ ಬರೆದಿದ್ದಾರೆ.

ಪತ್ರದಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ, ರಾಜ್ಯದ ಜನರಿಗೆ ಪರಿಹಾರ ಒದಗಿಸಲು ಯೋಗಿ ಆದಿತ್ಯನಾಥ್ ಅವರಿಗೆ ಐದು ಸಲಹೆಗಳನ್ನು ನೀಡಿದ್ದಾರೆ.

ಇದನ್ನೂ ಓದಿ: ಈ ಊರಿನಲ್ಲಿ ಮರವೇ ಕೊರೊನಾ ಕೇಂದ್ರ, ಕೊಂಬೆಗಳಲ್ಲಿ ನೇತಾಡುತ್ತವೆ ಗ್ಲೂಕೋಸ್ ಬಾಟಲ್‌ಗಳು!

ರಾಜ್ಯದಲ್ಲಿ ಸಾಂಕ್ರಾಮಿಕ ರೋಗ ನಿವಾರಣೆಯಲ್ಲಿ ಖಾಸಗಿ ವಲಯದ ಆಸ್ಪತ್ರೆಗಳು ದೊಡ್ಡ ಪಾತ್ರವಹಿಸಿವೆ, ಆದರೆ ಖಾಸಗಿ ಆಸ್ಪತ್ರೆಗಳು ಜನರಿಗೆ ಕೊರೊನಾ ಚಿಕಿತ್ಸೆಗಾಗಿ ಭಾರಿ ಮೊತ್ತವನ್ನು ವಿಧಿಸುತ್ತಿವೆ. ಆದರಿಂದ ವೈದ್ಯಕೀಯ ಸೌಲಭ್ಯಗಳಿಗೆ ಅನುಗುಣವಾಗಿ ಜನರಿಗೆ ಅನುಕೂಲಕರ ಬೆಲೆಗಳನ್ನು ನಿಗದಿಪಡಿಸಲು ಖಾಸಗಿ ಆಸ್ಪತ್ರೆಗಳ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸಬೇಕು ಎಂದು ಪ್ರಿಯಾಂಕಾ ಗಾಂಧಿ ಮುಖ್ಯಮಂತ್ರಿಯನ್ನು ಒತ್ತಾಯಿಸಿದ್ದಾರೆ.

ಖಾಸಗಿ ಆಸ್ಪತ್ರೆಗಳಲ್ಲಿ ಹೆಚ್ಚಿನ ಹಣವನ್ನು ವಸೂಲಿ ಮಾಡಿದವರಿಗೆ ರಾಜ್ಯ ಸರ್ಕಾರವು ಪರಿಹಾರವನ್ನು ನೀಡಬೇಕು ಎಂದು ಹೇಳಿದ್ದಾರೆ.

ಲಾಕ್‌ಡೌನ್ ಸಮಯದಲ್ಲಿ ಜನರಿಗೆ ತೊಂದರೆಯಾಗದಂತೆ, ಹಣದುಬ್ಬರವನ್ನು ನಿಯಂತ್ರಿಸಬೇಕು ಮತ್ತು ಅಗತ್ಯ ವಸ್ತುಗಳಾದ ಖಾದ್ಯ ತೈಲಗಳು, ತರಕಾರಿಗಳು ಮತ್ತು ಹಣ್ಣುಗಳ ಬೆಲೆ ದರ ನಿಗದಿಪಡಿಸುವಂತೆ ಪ್ರಿಯಾಂಕಾ ಗಾಂಧಿ ಮನವಿ ಮಾಡಿದ್ದಾರೆ.

ಈಗಿರುವ ಸಮಸ್ಯೆಗಳ ನಡುವೆಯೇ ಹೆಚ್ಚಿನ ವಿದ್ಯುತ್ ಬಿಲ್‌ಗಳಿಂದಾಗಿ ಜನರ ಸಮಸ್ಯೆಗಳು ಹೆಚ್ಚಾಗಿದೆ. ಹೀಗಾಗಿ   ಬಿಲ್ ಪಾವತಿಗೆ ಪರಿಹಾರ ನೀಡಬೇಕು ಮತ್ತು ವಿದ್ಯುತ್ ಬೆಲೆಯನ್ನು ಮತ್ತಷ್ಟು ಹೆಚ್ಚಿಸಬಾರದು ಎಂದಿದ್ದಾರೆ.

“ಶಾಲೆಗಳು ಮುಚ್ಚಲ್ಪಟ್ಟಿವೆ ಆದರೆ ಪ್ರತಿ ತಿಂಗಳು ಶುಲ್ಕವನ್ನು ಕಟ್ಟುವಂತೆ ಶಾಲೆಗಳು ಒತ್ತಾಯಿಸುತ್ತಿದ್ದು, ಪೋಷಕರು ಒತ್ತಡದಲ್ಲಿದ್ದಾರೆ ಎಂದು ಪ್ರಿಯಾಂಕಾ ಗಾಂಧಿ ಪತ್ರದಲ್ಲಿ ಬರೆದಿದ್ದಾರೆ.

ಉತ್ತರ ಪ್ರದೇಶದಲ್ಲಿ ಕೊರೊನಾ ಪ್ರಕರಣಗಳು, ಸಾವುಗಳ ಸಂಖ್ಯೆ ಹೆಚ್ಚಿದ್ದರೂ ಸರ್ಕಾರ ಮಾಹಿತಿಯನ್ನು ಮುಚ್ಚಿಡುತ್ತಿದೆ ಎಂದು ಸಾಮಾಜಿಕ ಕಾರ್ಯಕರ್ತರು, ವಿಪಕ್ಷಗಳು ಆರೋಪಿಸಿವೆ.


ಇದನ್ನೂ ಓದಿ: ಯುಪಿ: ಸೋಂಕಿತ ರೋಗಿಯ ನಿರ್ಲಕ್ಷ್ಯದ ಬಗ್ಗೆ ಪತ್ರಕರ್ತರಿಗೆ ಮಾಹಿತಿ; ಗ್ರಾಮಸ್ಥನ ಮೇಲೆ ಪ್ರಕರಣ ದಾಖಲು!

Donate

ನ್ಯಾಯದ ಜೊತೆಗಿರಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ

ಜನಪರ ಸ್ವತಂತ್ರ ಪತ್ರಿಕೋದ್ಯಮವೇ ನಮ್ಮ ಆಶಯ. ನಿಮ್ಮಗಳ ಬೆಂಬಲವೇ ನಮಗೆ ಬಲ. ನ್ಯಾಯದ ಜೊತೆಗಿರಲು ಬಯಸುವ, ಸತ್ಯಪಥವನ್ನು ತುಳಿಯಲು ಪ್ರೋತ್ಸಾಹಿಸುವವರು ಬೆಂಬಲಿಸಿ. ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ ಪಾವತಿಸಬಹುದು.
ಧನ್ಯವಾದಗಳು

Independent journalism can’t be independent without your support, contribute by clicking below.

ಪ್ರತಿವಾರದ ವಿದ್ಯಮಾನಗಳ ವಿಶ್ಲೇಷಣೆಗಳು, ಅಂಕಣಗಳು ಹಾಗೂ ವಿಶೇಷ ಬರಹಗಳನ್ನು ಓದಲು ನ್ಯಾಯಪಥ ಪತ್ರಿಕೆಗೆ ಚಂದಾದಾರರಾಗಿ. ಚಂದಾ ಹಣವನ್ನು ಪಾವತಿಸಲು ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ.
Avatar
ನಾನು ಗೌರಿ ಡೆಸ್ಕ್
+ posts

LEAVE A REPLY

Please enter your comment!
Please enter your name here