Homeಕರೋನಾ ತಲ್ಲಣಉತ್ತರಪ್ರದೇಶ: ವಾರದಲ್ಲಿ ಮೂವರು ಬಿಜೆಪಿ ಶಾಸಕರು ಕೊರೊನಾಗೆ ಬಲಿ

ಉತ್ತರಪ್ರದೇಶ: ವಾರದಲ್ಲಿ ಮೂವರು ಬಿಜೆಪಿ ಶಾಸಕರು ಕೊರೊನಾಗೆ ಬಲಿ

ಬುಧವಾರ ಮೃತರಾದ ಶಾಸಕ ಸಿಂಗ್ ಅವರ ಪುತ್ರ ಏಪ್ರಿಲ್ 18 ರಂದು ಸಾಮಾಜಿಕ ಜಾಲತಾಣದಲ್ಲಿ, ಒಬ್ಬ ಶಾಸಕರಿಗೂ ಸೂಕ್ತ ಚಿಕಿತ್ಸೆ ಸಿಗದಷ್ಟು ಆರೋಗ್ಯ ವ್ಯವಸ್ಥೆ ಕುಸಿದಿದೆ ಎಂದು ಆದಿತ್ಯನಾಥ್‌‌ ಸರ್ಕಾರವನ್ನು ಟೀಕಿಸಿದ್ದರು.

- Advertisement -
- Advertisement -

ಕೊರೊನಾ ಎರಡನೇ ಅಲೆ ಉತ್ತರಪ್ರದೇಶದಲ್ಲಿ ವ್ಯಾಪಕವಾಗತೊಡಗಿದ್ದು, ಅಲ್ಲಿನ ಭಾರತೀಯ ಜನತಾ ಪಕ್ಷ (ಬಿಜೆಪಿ) ತನ್ನ ಮೂವರು ಶಾಸಕರನ್ನು ಒಂದು ವಾರದೊಳಗೆ ಸಾಂಕ್ರಾಮಿಕ ರೋಗದಿಂದ ಕಳೆದುಕೊಂಡಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಕೊರೊನಾದಿಂದ ಬಳಲುತ್ತಿದ್ದ ಬರೇಲಿಯ ನವಾಬ್‌ಗಂಜ್ ಕ್ಷೇತ್ರದ ಶಾಸಕ, ಬಿಜೆಪಿಯ ನಾಯಕ ಕೇಸರ್ ಸಿಂಗ್ ಅವರು ಬುಧವಾರ ನೋಯ್ಡಾದ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ಅವರು ಸಿಂಗ್ ಸಾವಿನ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ‘ಮೌನವಾಗಿರಲ್ಲ, ನೀವು ಪ್ರಯತ್ನಿಸುತ್ತಲೇ ಇರಿ’: ತನ್ನ ನಂಬರ್‌ ಲೀಕ್‌ ಮಾಡಿದ ಬಿಜೆಪಿಗೆ ಸಿದ್ದಾರ್ಥ್

ಕಳೆದ ತಿಂಗಳಿನಿಂದ ಸಿಂಗ್ ಅನಾರೋಗ್ಯದಿಂದ ಬಳಲುತ್ತಿದ್ದರು. ಆರಂಭದಲ್ಲಿ ಭೋಜಪುರದ ವೈದ್ಯಕೀಯ ಕಾಲೇಜಿನಲ್ಲಿ ದಾಖಲಾಗಿದ್ದರು. ಚೇತರಿಸಿಕೊಂಡ ನಂತರ ಅವರನ್ನು ಅಲ್ಲಿಂದ ಬಿಡುಗಡೆ ಮಾಡಲಾಯಿತು. ನಂತರ ಅವರ ಆರೋಗ್ಯವು ಮತ್ತೆ ಹದಗೆಟ್ಟಿದ್ದು, ಅವರನ್ನು ಮತ್ತೆ ಆಸ್ಪತ್ರೆಗೆ ಕರೆದೊಯ್ಯಬೇಕಾಯಿತು. ಅಲ್ಲಿ ಅವರಿಗೆ ಮತ್ತೆ ಪಾಸಿಟಿವ್ ಆಗಿದೆ. ಪ್ಲಾಸ್ಮಾ ಚಿಕಿತ್ಸೆಯನ್ನು ಪಡೆದ ನಂತರವೂ ಯಾವುದೇ ಮಹತ್ವದ ಸುಧಾರಣೆ ಕಂಡುಬರಲಿಲ್ಲ.

ಏಪ್ರಿಲ್ 18 ರಂದು, ಅವರ ಮಗ ವಿಶಾಲ್ ಗಂಗ್ವಾರ್ ಅವರು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿ, ಒಬ್ಬ ಆಡಳಿತ ಪಕ್ಷದ ಶಾಸಕರಿಗೆ ಸೂಕ್ತ ಚಿಕಿತ್ಸೆ ಸಿಗುತ್ತಿಲ್ಲ ಎಂದು ರಾಜ್ಯದ ಆರೋಗ್ಯ ವ್ಯವಸ್ಥೆಯನ್ನು ಟೀಕಿಸಿ, ರಾಜ್ಯ ಸರ್ಕಾರವನ್ನು ದೂಷಿಸಿದ್ದರು.

ಇದನ್ನೂ ಓದಿ: ಜನರ ಗಮನ ಬೇರೆಡೆ ಸೆಳೆಯಲು ರೋಮ್‌ ಚಕ್ರವರ್ತಿಗಳು ಗ್ಲಾಡಿಯೇಟರ್‌‌ಗಳನ್ನು ಆಡಿಸುತ್ತಿದ್ದರು, ನಮಗೆ ಐಪಿಎಲ್ ಇದೆ!

ನಂತರ ಆರೋಗ್ಯ ಸಚಿವಾಲಯವು ಗಂಗ್ವಾರ್ ಅವರನ್ನು ಏಪ್ರಿಲ್ 19 ರಂದು ನೋಯ್ಡಾದ ಆಸ್ಪತ್ರೆಗೆ ದಾಖಲಿಸಿತು.

ಒಂದು ವಾರದೊಳಗೆ ಉತ್ತರ ಪ್ರದೇಶದಲ್ಲಿ ಇದು ಮೂರನೇ ಬಿಜೆಪಿ ಶಾಸಕರ ಸಾವಾಗಿದೆ. ಇದಕ್ಕೂ ಮೊದಲು ಬಿಜೆಪಿ ಶಾಸಕರಾದ ರಮೇಶ್ ಚಂದ್ರ ದಿವಾಕರ್ ಮತ್ತು ಸುರೇಶ್ ಶ್ರೀವಾಸ್ತವ ಕೂಡ ಕೊರೊನಾದಿಂದ ಮೃತಪಟ್ಟಿದ್ದರು.

ಬುಧವಾರ ಮೃತರಾದ ಸಿಂಗ್ ಬಹಳ ಸಮಯದಿಂದ ರಾಜಕೀಯದಲ್ಲಿ ಸಕ್ರಿಯರಾಗಿದ್ದರು. ಅವರು ಬಿಎಸ್‌ಪಿ ಸರ್ಕಾರದಲ್ಲಿ ಎಂಎಲ್ ಸಿ ಆಗಿದ್ದರು. ಇದಲ್ಲದೆ, ಅವರ ಸಹೋದರನ ಪತ್ನಿ ಉಷಾ ಗಂಗ್ವಾರ್ ಅವರು ಬರೇಲಿಯ ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿದ್ದಾರೆ. ಅದರು ಬಿಜೆಪಿಗೆ ಸೇರಿದ ನಂತರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ನವಾಬ್‌ ಗಂಜ್‌ನಿಂದ ಭಾರಿ ಮತ ಅಂತರದಿಂದ ಜಯಗಳಿಸಿದ್ದರು.

ಇದನ್ನೂ ಓದಿ: ಅಕ್ಕಿ ಕೊಡಿ ಎಂದ ರೈತನಿಗೆ ‘ಸತ್ತೊಗು’ ಎಂದ ಆಹಾರ ಸಚಿವ ಉಮೇಶ್ ಕತ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಜನಸಾಮಾನ್ಯರ ಬದಲಿಗೆ, ಈ ವ್ಯವಸ್ಥೆ ಕೆಡಿಸಿದ ದರಿದ್ರ ನಾಯಕರ ಜೀವ ಬಲಿಯಾಗುವುದು ೧೦೦% ವಾಸಿ. ಆಗಲೇ ಈ ಭಿಕಾರಿಗಳಿಗೆ ಬುದ್ದಿಬರುವುದು.

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...