Homeಮುಖಪುಟಉತ್ತರ ಪ್ರದೇಶ: ದಲಿತ ಬಾಲಕನಿಗೆ ಬಲವಂತವಾಗಿ ಮೂತ್ರ ಕುಡಿಸಿ ಥಳಿಸಿದ ಯುವಕರ ಗುಂಪು

ಉತ್ತರ ಪ್ರದೇಶ: ದಲಿತ ಬಾಲಕನಿಗೆ ಬಲವಂತವಾಗಿ ಮೂತ್ರ ಕುಡಿಸಿ ಥಳಿಸಿದ ಯುವಕರ ಗುಂಪು

- Advertisement -
- Advertisement -

ಉತ್ತರ ಪ್ರದೇಶದ ಶ್ರಾವಸ್ತಿ ಜಿಲ್ಲೆಯಲ್ಲಿ ಎರಡು ದಿನಗಳ ಹಿಂದೆ ದಲಿತ ಅಪ್ರಾಪ್ತ ಬಾಲಕನಿಗೆ ಮೂತ್ರ ಕುಡಿಸುವಂತೆ ಒತ್ತಾಯಿಸಿದ ಮೂವರು ಯುವಕರನ್ನು ಗುರುವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 15 ವರ್ಷ ವಯಸ್ಸಿನ ಸಂತ್ರತ್ರಸ್ತ ತಂತ್ರಜ್ಞರಾಗಿ ಕೆಲಸ ಮಾಡುತ್ತಿದ್ದು, ಸಾಮಾಜಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸೌಂಡ್ ಮಿಕ್ಸರ್ ಮತ್ತು ಆಡಿಯೊ ಸಿಸ್ಟಮ್‌ಗಳನ್ನು ಅಳವಡಿಸುತ್ತಿದ್ದ ಎನ್ನಲಾಗಿದೆ.

ಮಂಗಳವಾರ ರಾತ್ರಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಮದ್ಯದ ಅಮಲಿನಲ್ಲಿದ್ದ ಕಿಶನ್ ತಿವಾರಿ, ದಿಲೀಪ್ ಮಿಶ್ರಾ ಮತ್ತು ಸತ್ಯಂ ತಿವಾರಿ ಎಂಬುವರು ಆತನನ್ನು ಅಡ್ಡಗಟ್ಟಿದ್ದಾರೆ. ದಿಲೀಪ್ ಮಿಶ್ರಾ ಮದ್ಯದ ಬಾಟಲಿಯಲ್ಲಿ ಮೂತ್ರ ವಿಸರ್ಜನೆ ಮಾಡಿ, ಸತ್ಯಂ ಮತ್ತು ಕಿಶನ್ ಹುಡುಗನನ್ನು ಕೆಳಕ್ಕೆ ಬೀಳಿಸಿ ಬಾಟಲಿಯಿಂದ ಬಲವಂತವಾಗಿ ಬಾಲಕನಿಗೆ ಮೂತ್ರ ಕಿಡಿಸಲು ಒತ್ತಾಯಿಸಿದ್ದಾರೆ.

ಆರೋಪಿಗಳು ತಮ್ಮ ಮನೆಯಲ್ಲಿ ಕಾರ್ಯಕ್ರಮಕ್ಕಾಗಿ ಸ್ಥಾಪಿಸಿದ ಆಡಿಯೊ ಸಿಸ್ಟಮ್‌ಗೆ ಹೆಚ್ಚುವರಿ ಶುಲ್ಕ ವಿಧಿಸಿದ್ದ ಬಾಲಕನ ಕುಟುಂಬದ ಮೇಲೆ ಕೋಪಗೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

“ಆರೋಪಿಗಳು ಅಪ್ರಾಪ್ತನೊಂದಿಗೆ ಅನುಚಿತವಾಗಿ ವರ್ತಿಸಿ ಥಳಿಸಿದ್ದಾರೆ. ಅವರಲ್ಲಿ ಒಬ್ಬಾತ ಇಡೀ ಘಟನೆಯ ವೀಡಿಯೊವನ್ನು ಚಿತ್ರೀಕರಿಸಿದ್ದಾನೆ” ಎಂದು ಗಿಲೌಲಾ ಪೊಲೀಸ್ ಠಾಣೆಯ ಠಾಣಾಧಿಕಾರಿ ಮಹಿಮಾ ನಾಥ್ ಉಪಾಧ್ಯಾಯ ಹೇಳಿದರು.

ಬಾಲಕ ಮನೆಗೆ ಬಂದು ತನ್ನ ಅಣ್ಣನಿಗೆ ನಡೆದ ಘಟನೆ ಬಗ್ಗೆ ಹೇಳಿದ ಮರುದಿನ, ಆತನ ಪೋಷಕರು ಮತ್ತು ಸಹೋದರ ಪೊಲೀಸರಿಗೆ ದೂರು ನೀಡಿದ್ದರು.

ಪ್ರತ್ಯಕ್ಷದರ್ಶಿಗಳ ಮಾಹಿತಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋ ಆಧರಿಸಿ ಪೊಲೀಸರು ಪ್ರಾಥಮಿಕ ತನಿಖೆ ನಡೆಸಿ ಆರೋಪಿಯನ್ನು ಗುರುವಾರ ಬಂಧಿಸಿದ್ದಾರೆ.

ಪೊಲೀಸ್ ಮೂಲಗಳ ಪ್ರಕಾರ, ಆರೋಪಿಯು ಬಾಲಕ ಮತ್ತು ಅವನ ಕುಟುಂಬವು ಗ್ರಾಮದಲ್ಲಿ ಡಿಜೆ ನಡೆಸುತ್ತಿದ್ದರು ಮತ್ತು ಭಾರಿ ಮೊತ್ತವನ್ನು ವಸೂಲಿ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಸಮಾರಂಭವೊಂದರಲ್ಲಿ, ಜನರೇಟರ್‌ನಲ್ಲಿ ಇಂಧನ ಕೊರತೆಯನ್ನು ಉಲ್ಲೇಖಿಸಿ ಸಂತ್ರಸ್ತರ ಡಿಜೆ ನಿಲ್ಲಿಸಿದ್ದನು, ಇದು ಅವರ ನಡುವಿನ ದ್ವೇಷವನ್ನು ಮತ್ತಷ್ಟು ಹೆಚ್ಚಿಸಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ; ಗುಜರಾತ್ : ನಕಲಿ ಟೋಲ್ ಪ್ಲಾಝಾ, ಸರ್ಕಾರಿ ಕಚೇರಿ ಬಳಿಕ ಈಗ ನಕಲಿ ಆಸ್ಪತ್ರೆ ಪತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...