Homeದಲಿತ್ ಫೈಲ್ಸ್ಉತ್ತರ ಪ್ರದೇಶ| ದೇವಸ್ಥಾನದ ಬಳಿ 'ಆಕಸ್ಮಿಕವಾಗಿ' ಮೂತ್ರ ವಿಸರ್ಜನೆ; ನೆಲ ನೆಕ್ಕುವಂತೆ ದಲಿತ ವೃದ್ದನಿಗೆ ಹಿಂಸೆ

ಉತ್ತರ ಪ್ರದೇಶ| ದೇವಸ್ಥಾನದ ಬಳಿ ‘ಆಕಸ್ಮಿಕವಾಗಿ’ ಮೂತ್ರ ವಿಸರ್ಜನೆ; ನೆಲ ನೆಕ್ಕುವಂತೆ ದಲಿತ ವೃದ್ದನಿಗೆ ಹಿಂಸೆ

- Advertisement -
- Advertisement -

ದೀಪಾವಳಿ ಹಬ್ಬದಂದು ಲಕ್ನೋದ ಹೊರವಲಯದಲ್ಲಿರುವ ದೇವಸ್ಥಾನದ ಬಳಿ ವಯಸ್ಸಾದ ದಲಿತ ವ್ಯಕ್ತಿಯೊಬ್ಬರು ಮೂತ್ರ ವಿಸರ್ಜನೆ ಮಾಡಿದ್ದಾರೆ ಎಂದು ಆರೋಪಿಸಿದ ನಂತರ ಅವರನ್ನು ಬಲವಂತವಾಗಿ ನೆಲ ನೆಕ್ಕುವಂತೆ ಒತ್ತಾಯಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

60 ವರ್ಷದ ದಲಿತ ವ್ಯಕ್ತಿಯ ಮೊಮ್ಮಗ ಮಾತನಾಡಿ, ‘ನನ್ನ ಅಜ್ಜನಿಗೆ ಉಸಿರಾಟದ ತೊಂದರೆ ಇದೆ, ಕೆಮ್ಮುವಾಗ ಆಕಸ್ಮಿಕವಾಗಿ ಮೂತ್ರ ವಿಸರ್ಜಿಸಿದ್ದಾರೆ’ ಎಂದು ಹೇಳಿಕೊಂಡಿದ್ದಾನೆ.

ಪೊಲೀಸರ ಪ್ರಕಾರ, ಸೋಮವಾರ ಸಂಜೆ 7 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ. ಆರೋಪಿಯು ದಲಿತ ವ್ಯಕ್ತಿಯನ್ನು ಬಲವಂತವಾಗಿ ನೆಲ ನೆಕ್ಕುವಂತೆ ಬಲವಂತಪಡಿಸಿದ್ದಾನೆ ಎಂದು ಹೇಳಿದ್ದಾರೆ. ಪ್ರಸ್ತುತ ಈ ಘಟನೆ ರಾಜಕೀಯ ಗದ್ದಲಕ್ಕೆ ಕಾರಣವಾಯಿತು, ವಿರೋಧ ಪಕ್ಷಗಳು ಬಿಜೆಪಿಯನ್ನು ಟೀಕಿಸಿದ್ದಾರೆ.

ಸಂತ್ರಸ್ತ ರಾಂಪಾಲ್ ರಾವತ್ ಪೊಲೀಸ್ ದೂರಿನಲ್ಲಿ, “ನಿನ್ನೆ ಸಂಜೆ, ನಾನು ಲಕ್ನೋದ ಕಾಕೋರಿ ಪ್ರದೇಶದ ಶೀತ್ಲಾ ಮಾತಾ ಮಂದಿರದಲ್ಲಿ ನೀರು ಕುಡಿಯುತ್ತಿದ್ದೆ, ಸ್ವಾಮಿ ಕಾಂತ್ ನನ್ನ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾರೆ” ಎಂದು ಆರೋಪಿಸಿದರು.

“ಮೂತ್ರ ವಿಸರ್ಜಿಸಿಲ್ಲ, ಅಲ್ಲಿ ನೀರು ಬಿದ್ದಿದೆ ಎಂದು ನಾನು ಹೇಳಿದೆ. ಆದರೆ, ಅವನು (ಪಮ್ಮು) ಸುಮ್ಮನಾಗಲಿಲ್ಲ, ನನ್ನ ಮೇಲೆ ಜಾತಿ ನಿಂದನೆ ಪದ ಬಳಸಿದನು. ಅವರು ನನ್ನನ್ನು ಬೆದರಿಸಿ ನೆಲ ನೆಕ್ಕುವಂತೆ ಮಾಡಿದರು” ಎಂದು ಪೊಲೀಸರಿಗೆ ತಿಳಿಸಿದ್ದಾರೆ.

ರಾಂಪಾಲ್ ರಾವತ್ ಅವರ ಮೊಮ್ಮಗ ಮುಖೇಶ್ ಕುಮಾರ್ ಅವರನ್ನು ಸಂಪರ್ಕಿಸಿದಾಗ, “ನನ್ನ ಅಜ್ಜನಿಗೆ ಉಸಿರಾಟದ ತೊಂದರೆ ಇದೆ. ಅವರು ಔಷಧಿಗಳನ್ನು ತೆಗೆದುಕೊಳ್ಳದಿದ್ದರೆ ಬದುಕುಳಿಯುವುದಿಲ್ಲ. ನಿನ್ನೆ ಸಂಜೆ, ಅವರು ಕೆಮ್ಮಲು ಪ್ರಾರಂಭಿಸಿದರು, ಅವರು ಆಕಸ್ಮಿಕವಾಗಿ ಮೂತ್ರ ವಿಸರ್ಜನೆ ಮಾಡಿದರು. ಇದಾದ ನಂತರ, ಪಮ್ಮು ಅಲ್ಲಿಗೆ ಬಂದು ನನ್ನ ಅಜ್ಜನ ಮೇಲೆ ಜಾತಿನಿಂದನೆ ಪದ ಬಳಸಿದ್ದಾನೆ” ಎಂದು ವಿವರಿಸಿದರು.

ಮುಖೇಶ್ ಕುಮಾರ್ ಅವರ ಅಜ್ಜ ಭಯಭೀತರಾಗಿದ್ದಾರೆ. ಅವರನ್ನು ನೆಲ ನೆಕ್ಕಲು ಬಲವಂತಪಡಿಸಿದಾಗ, ರಾಂಪಾಲ್ ಅದನ್ನು ನೆಕ್ಕಿದರು ಎಂದು ಹೇಳಿದರು. ಇದಾದ ನಂತರ, ಆರೋಪಿ ರಾಂಪಾಲ್ ಅವರನ್ನು ಜಾಗವನ್ನು ನೀರಿನಿಂದ ತೊಳೆಯುವಂತೆ ಒತ್ತಾಯಿಸಿದರು ಎಂದು ಅವರು ಹೇಳಿಕೊಂಡರು.

“ನನ್ನ ಅಜ್ಜ ರಾತ್ರಿ ನಡೆದ ಘಟನೆಯ ಬಗ್ಗೆ ಯಾರಿಗೂ ಹೇಳಲಿಲ್ಲ. ಅವರು ಇಂದು ಘಟನೆಯನ್ನು ವಿವರಿಸಿದರು. ಇದರ ನಂತರ, ನಾವು ಪೊಲೀಸರಿಗೆ ದೂರು ನೀಡಿದ್ದೇವೆ” ಎಂದು ಮೊಮ್ಮಗ ಹೇಳಿದರು.

ಮುಖ್ಯ ದೇವಾಲಯವು ತನ್ನ ಅಜ್ಜ ಆಕಸ್ಮಿಕವಾಗಿ ಮೂತ್ರ ವಿಸರ್ಜನೆ ಮಾಡಿದ ಸ್ಥಳದಿಂದ ಕನಿಷ್ಠ 40 ಮೀಟರ್ ದೂರದಲ್ಲಿದೆ ಎಂದು ಮುಖೇಶ್ ಕುಮಾರ್ ಹೇಳಿದ್ದಾರೆ.

ಸ್ವಾಮಿ ಕಾಂತ್ ವಿರುದ್ಧ ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ 115(2) (ಸ್ವಯಂಪ್ರೇರಿತವಾಗಿ ನೋವುಂಟುಮಾಡುವುದು), 351(3) (ಕ್ರಿಮಿನಲ್ ಬೆದರಿಕೆ) ಮತ್ತು 352 (ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕವಾಗಿ ಅವಮಾನಿಸುವುದು) ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

“ಬಲವಂತವಾಗಿ ನೆಲ ನೆಕ್ಕುವಂತೆ ಮಾಡಲಾಗಿದೆ ಎಂದು ಬಲಿಪಶು ಹೇಳುತ್ತಿದ್ದಾರೆ. ಆದರೆ, ಆರೋಪಿಯು ನೆಕ್ಕುವಂತೆ ಒತ್ತಾಯಿಸಿಲ್ಲ, ಅದನ್ನು ಮಾತ್ರ ಹೇಳಲಾಗಿತ್ತು ಎಂದು ಹೇಳುತ್ತಿದ್ದಾನೆ. ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಅವರನ್ನು ಬಂಧಿಸಲಾಗಿದೆ” ಎಂದು ಪೊಲೀಸರು ತಿಳಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಉತ್ತರ ಪ್ರದೇಶದ ವಿರೋಧ ಪಕ್ಷಗಳು ರಾಜ್ಯದ ಬಿಜೆಪಿ ಸರ್ಕಾರವನ್ನು ಟೀಕಿಸಿವೆ, ಈ ಘಟನೆಯನ್ನು ‘ಮಾನವೀಯತೆಗೆ ಎಸಗಿದ ಕಳಂಕ’ ಎಂದು ಕರೆದಿವೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, “ಯಾರದ್ದೋ ತಪ್ಪು ಎಂದರೆ ಅವರಿಗೆ ಅವಮಾನಕರ, ಅಮಾನವೀಯ ಶಿಕ್ಷೆ ವಿಧಿಸಬೇಕು ಎಂದಲ್ಲ. ಬದಲಾವಣೆ ಮಾತ್ರ ಬದಲಾವಣೆ ತರುತ್ತದೆ!” ಎಂದು ಹೇಳಿದ್ದಾರೆ.

ಕಾಂಗ್ರೆಸ್ ಪೋಸ್ಟ್‌ನಲ್ಲಿ, “ಲಕ್ನೋದಲ್ಲಿ, ಆರ್‌ಎಸ್‌ಎಸ್ ಕಾರ್ಯಕರ್ತನೊಬ್ಬ ವೃದ್ಧ ದಲಿತ ವ್ಯಕ್ತಿಯೊಬ್ಬರ ಮೂತ್ರವನ್ನು ನೆಕ್ಕುವಂತೆ ಒತ್ತಾಯಿಸಿದ್ದಾನೆ. ವೃದ್ಧ ವ್ಯಕ್ತಿ ದೇವಾಲಯದ ಅಂಗಳದಲ್ಲಿ ಕುಳಿತಿದ್ದಾಗ, ಅನಾರೋಗ್ಯದ ಕಾರಣ ಆಕಸ್ಮಿಕವಾಗಿ ಮೂತ್ರ ವಿಸರ್ಜನೆ ಮಾಡಿದ್ದಾನೆ” ಎಂದು ಹೇಳಿಕೊಂಡಿದೆ.

“ಕೋಪಗೊಂಡ ಆರ್‌ಎಸ್‌ಎಸ್ ಕಾರ್ಯಕರ್ತನೊಬ್ಬ ಸ್ಥಳಕ್ಕೆ ಧಾವಿಸಿ, ಅವರ ಮೇಲೆ ಜಾತಿ ನಿಂದನೆ ಮಾಡಿ, ಅವರನ್ನು ಮೂತ್ರ ನೆಕ್ಕುವಂತೆ ಒತ್ತಾಯಿಸಿದ್ದಾನೆ” ಎಂದು ಪಕ್ಷ ಹೇಳಿಕೊಂಡಿದೆ.

ಆದರೆ, ಆರೋಪಿಗೆ ಆರ್‌ಎಸ್‌ಎಸ್‌ಗೂ ಯಾವುದೇ ಸಂಬಂಧವಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

“ಬಿಜೆಪಿ ಆಡಳಿತವಿರುವ ಉತ್ತರ ಪ್ರದೇಶದಲ್ಲಿ ನಡೆದ ಈ ಘಟನೆ ಮಾನವೀಯತೆಗೆ ಕಳಂಕ” ಎಂದು ಹೇಳಿದೆ. “ಈ ಘಟನೆಯು ಆರ್‌ಎಸ್‌ಎಸ್-ಬಿಜೆಪಿಯ ದಲಿತ ವಿರೋಧಿ ಮನಸ್ಥಿತಿಯ ಸಂಕೇತವಾಗಿದೆ. ದಲಿತರ ಮೇಲಿನ ದ್ವೇಷ ಅವರ ರಕ್ತದಲ್ಲಿ ಹರಿಯುತ್ತಿದೆ. ಅದಕ್ಕಾಗಿಯೇ ಅವರು ಸಂವಿಧಾನವನ್ನು ರದ್ದುಗೊಳಿಸಿ ದೇಶದಲ್ಲಿ ‘ಮನುವಾದ’ವನ್ನು ಜಾರಿಗೆ ತರಲು ಬಯಸುತ್ತಾರೆ, ಇದರಿಂದ ಅವರು ಜಾತಿಯ ಆಧಾರದ ಮೇಲೆ ಜನರನ್ನು ಶೋಷಿಸಬಹುದು” ಎಂದು ಕಾಂಗ್ರೆಸ್ ಹೇಳಿದೆ.

ನಾಮಪತ್ರ ಹಿಂಪಡೆಯುವಂತೆ ಬಿಜೆಪಿ ನಾಯಕರಿಂದ ನಮ್ಮ ಅಭ್ಯರ್ಥಿಗಳಿಗೆ ಬೆದರಿಕೆ : ಪ್ರಶಾಂತ್ ಕಿಶೋರ್ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...