Homeಮುಖಪುಟಉತ್ತರಪ್ರದೇಶ: ಲೈಂಗಿಕ ಕ್ರಿಯೆಗೆ ಒಪ್ಪಿಗೆ ನೀಡದ ಕಾರಣಕ್ಕೆ ದಲಿತ ಬಾಲಕಿಗೆ ಬೆಂಕಿಹಚ್ಚಿದ ಕ್ರೂರಿ!

ಉತ್ತರಪ್ರದೇಶ: ಲೈಂಗಿಕ ಕ್ರಿಯೆಗೆ ಒಪ್ಪಿಗೆ ನೀಡದ ಕಾರಣಕ್ಕೆ ದಲಿತ ಬಾಲಕಿಗೆ ಬೆಂಕಿಹಚ್ಚಿದ ಕ್ರೂರಿ!

ಸಂತ್ರಸ್ತೆಯನ್ನು ಬಲ್ಲಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಾಲಕಿಯ ಪರಿಸ್ಥಿತಿ ಗಂಭೀರವಾಗುತ್ತಿದ್ದಂತೆ ಆಕೆಯನ್ನು ವಾರಣಾಸಿಯ ಆಸ್ಪತ್ರೆಗೆ ಕರೆದೊಯ್ಯಲಾಗಿದೆ

- Advertisement -
- Advertisement -

ಲೈಂಗಿಕ ಕ್ರಿಯೆಗೆ ಒಪ್ಪಿಗೆ ನೀಡಿಲ್ಲ ಎಂಬ ಕಾರಣಕ್ಕೆ ಬಲ್ಲಿಯಾ ಜಿಲ್ಲೆಯ ಹಳ್ಳಿಯೊಂದರಲ್ಲಿ 15 ವರ್ಷದ ದಲಿತ ಬಾಲಕಿಯೊಬ್ಬಳಿಗೆ ಅದೇ ಗ್ರಾಮದ ಯುವಕನೊಬ್ಬ ಬೆಂಕಿ ಹಚ್ಚಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

21 ವರ್ಷದ ಯುವಕ ಕೃಷ್ಣ ಗುಪ್ತಾ ಎಂಬುವವನು ಬಾಲಕಿಗೆ ಶುಕ್ರವಾರ ಬೆಂಕಿ ಹಚ್ಚಿದ್ದು, ನಂತರ ಸಂತ್ರಸ್ತೆಯನ್ನು ಬಲ್ಲಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಾಲಕಿಯ ಪರಿಸ್ಥಿತಿ ಗಂಭೀರವಾಗುತ್ತಿದ್ದಂತೆ ಆಕೆಯನ್ನು ವಾರಣಾಸಿಯ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ದುಬಾರ್ ಪೊಲೀಸ್ ಠಾಣಾಧಿಕಾರಿ ಅನಿಲ್ ಚಂದ್ರ ತಿವಾರಿ ತಿಳಿಸಿದ್ದಾರೆ.

ಇದನ್ನೂ ಓದಿ: ಉತ್ತರಪ್ರದೇಶ: ಮೂತ್ರ ಕುಡಿಸಿ ದಲಿತ ತಂದೆ-ಮಗನ ಮೇಲೆ ಹಲ್ಲೆ

ಬಾಲಕಿಯ ತಂದೆಯ ದೂರಿನ ಮೇರೆಗೆ ಪೊಲೀಸರು, ಭಾರತೀಯ ದಂಡ ಸಂಹಿತೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ತನ್ನ ಮಗಳನ್ನು ತನ್ನ ಮನೆಯಿಂದ ಅಪಹರಿಸಿ ಬೆಂಕಿ ಹಚ್ಚಿದ್ದಾನೆ ಎಂದು ಬಾಲಕಿಯ ತಂದೆ ಪೊಲೀಸರಿಗೆ ತಿಳಿಸಿದ್ದಾರೆ. ನಂತರ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲಿಸರು ಹೇಳಿದರು.


ಇದನ್ನೂ ಓದಿ: ಉತ್ತರಪ್ರದೇಶ: ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, 8 ಮಂದಿ ಬಂಧನ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹೆಡ್ಗೆವಾರ್‌ ಸಂಘಪರಿವಾರದವರಿಗೆ ಮಾತ್ರ ಆದರ್ಶ, ರಾಜ್ಯದ ಜನತೆ ಅಲ್ಲ: ಎಸ್‌ಎಫ್‌ಐ ಕಿಡಿ | Naanu Gauri

ಹೆಡ್ಗೆವಾರ್‌ ಸಂಘಪರಿವಾರದವರಿಗೆ ಮಾತ್ರ ಆದರ್ಶ, ರಾಜ್ಯದ ಜನತೆ ಅಲ್ಲ: ಭಗತ್‌ ಸಿಂಗ್‌ ಪಾಠ ಕೈ...

0
ರಾಜ್ಯದ ಪಠ್ಯ ಪುಸ್ತಕದಲ್ಲಿ ಸ್ವಾತಂತ್ಯ ಹೋರಾಟಗಾರ ಭಗತ್‌ ಸಿಂಗ್ ಪಾಠ ಸೇರಿ ಅನೇಕ ಪ್ರಗತಿಪರ ಚಿಂತನೆಯ ಪೂರಕ ಪಾಠಗಳನ್ನು ಕೈ ಬಿಟ್ಟು ಸಂಘಪರಿವಾರದ ಸಂಸ್ಥಾಪಕ ಹೆಡಗೇವಾರ್ ಭಾಷಣ ಸೇರ್ಪಡೆ ಹಾಗೂ ಶಿಕ್ಷಣದ ಕೇಸರೀಕರಣ...