Homeದಲಿತ್ ಫೈಲ್ಸ್ಉತ್ತರ ಪ್ರದೇಶ| ಕಳ್ಳನೆಂದು ಭಾವಿಸಿ ದಲಿತ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಉತ್ತರ ಪ್ರದೇಶ| ಕಳ್ಳನೆಂದು ಭಾವಿಸಿ ದಲಿತ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

- Advertisement -
- Advertisement -

ಸ್ಥಳೀಯರ ಗುಂಪೊಂದು ಕಳ್ಳನೆಂದು ಭಾವಿಸಿ ದಲಿತ ವ್ಯಕ್ತಿಯನ್ನು ಕ್ರೂರವಾಗಿ ಥಳಿಸಿ ಕೊಂದಿರುವ ಘಟನೆ ಉತ್ತರ ಪ್ರದೇಶದ ರಾಯ್ ಬರೇಲಿಯಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇದುವರೆಗೆ ಐದು ಜನರನ್ನು ಬಂಧಿಸಿದ್ದಾರೆ.

ಘಟನೆಯ ವೀಡಿಯೊ ಕೂಡ ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿದ್ದು, ಹರಿಓಮ್ ಎಂದು ಗುರುತಿಸಲಾದ ಬಲಿಪಶುವನ್ನುಗುಂಪೊಂದು ದೊಣ್ಣೆ ಮತ್ತು ಬೆಲ್ಟ್‌ಗಳಿಂದ ಥಳಿಸುತ್ತಿರುವುದು ಸೆರೆಯಾಗಿದೆ. ಮಾನಸಿಕ ಅಸ್ವಸ್ಥನೆಂದು ನಂಬಲಾದ ಆ ವ್ಯಕ್ತಿ ‘ರಾಹುಲ್ ಗಾಂಧಿ’ ಸೇರಿದಂತೆ ಕೆಲವು ಪದಗಳನ್ನು ಗೊಣಗುತ್ತಿರುವುದು ಮಸುಕಾಗಿ ಕೇಳಿಸುತ್ತದೆ.

ಮೃತ ವ್ಯಕ್ತಿ ದಂಡೇಪುರ ಜಮುನಾಪುರದಲ್ಲಿರುವ ಅವರ ಅತ್ತೆಯ ಮನೆಗೆ ಹೋಗುತ್ತಿದ್ದಾಗ, ಜನರ ಗುಂಪೊಂದು ಅವರನ್ನು ಸುತ್ತುವರೆದು ಅವರನ್ನು ಡ್ರೋನ್ ಕಳ್ಳ ಎಂದು ಶಂಕಿಸಿ ಹೊಡೆಯಲು ಪ್ರಾರಂಭಿಸಿತು.

ಘಟನೆಯ ಕುರಿತು ಮಾತನಾಡಿದ ರಾಯ್ ಬರೇಲಿ ಎಎಸ್‌ಪಿ ಸಂಜೀವ್ ಕುಮಾರ್ ಸಿನ್ಹಾ, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ದೂರು ದಾಖಲಿಸಿದ್ದಾರೆ, ಇತರ ಆರೋಪಿಗಳನ್ನು ಬಂಧಿಸಲು ಹುಡುಕಾಟ ನಡೆಯುತ್ತಿದೆ ಎಂದು ಹೇಳಿದರು.

“ಉಂಚಹಾರ್ ಪೊಲೀಸ್ ಠಾಣೆ ಪ್ರದೇಶದಲ್ಲಿ, ಕಳ್ಳನೆಂದು ತಪ್ಪಾಗಿ ಭಾವಿಸಿ ಕೆಲವು ಜನರು ವ್ಯಕ್ತಿಯನ್ನು ಹೊಡೆದು ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ತಕ್ಷಣವೇ ಪ್ರಕರಣ ದಾಖಲಿಸಲಾಗಿದ್ದು, ಐದು ಜನರನ್ನು ಜೈಲಿಗೆ ಕಳುಹಿಸಲಾಗಿದೆ. ಉಳಿದ ಆರೋಪಿಗಳನ್ನು ಶೀಘ್ರದಲ್ಲೇ ಗುರುತಿಸಿ ಬಂಧಿಸಲಾಗುವುದು ಮತ್ತು ಅವರನ್ನು ಬಂಧಿಸುವ ಪ್ರಯತ್ನಗಳು ನಡೆಯುತ್ತಿವೆ” ಎಂದು ಸಿನ್ಹಾ ಹೇಳಿದರು.

ಗುಜರಾತ್| ದಲಿತ ಯುವತಿಯನ್ನು ಗರ್ಬಾ ಕಾರ್ಯಕ್ರಮದಿಂದ ಹೊರಗೆ ಕಳಿಸಿ ಅವಮಾನ; ದೂರು ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ನೂತನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ‘ಪ್ರಜ್ಞಾಹೀನ’, ಕೋಮ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ: ವರದಿ

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಅವರು ಕೋಮ್‌ನಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಪ್ರಜ್ಞಾಹೀನರಾಗಿದ್ದಾರೆ ಎಂದು ನಂಬಲಾಗಿದೆ ಎಂದು ಗುಪ್ತಚರ ಆಧಾರಿತ ರಾಜತಾಂತ್ರಿಕ ಜ್ಞಾಪಕ ಪತ್ರವನ್ನು ಉಲ್ಲೇಖಿಸಿ ದಿ ಟೈಮ್ಸ್ ವರದಿ...

ಪ. ಬಂಗಾಳ : ಎಸ್‌ಐಆರ್‌ನಲ್ಲಿ ಮತದಾರರ ಪಟ್ಟಿಯಿಂದ ಕೈ ಬಿಟ್ಟಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ವೇಳೆ (ಎಸ್‌ಐಆರ್‌) ತೆಗೆದು ಹಾಕಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರನ್ನು ಮತದಾರರ ಪಟ್ಟಿಗೆ ಮರು ಸೇರ್ಪಡೆಗೊಳಿಸುವಂತೆ ಮೇಲ್ಮನವಿ ನ್ಯಾಯಮಂಡಳಿ ಸೋಮವಾರ (ಏ.6) ಆದೇಶಿಸಿರುವುದಾಗಿ ವರದಿಯಾಗಿದೆ. ರತುವಾ...

ಹೈದರಾಬಾದ್| ಐಪಿಎಲ್ ಪಂದ್ಯದಿಂದ ಭಾರೀ ಸಂಚಾರ ದಟ್ಟಣೆ; ಆಂಬ್ಯುಲೆನ್ಸ್‌ನಲ್ಲಿದ್ದ ಮಹಿಳೆ ಸಾವು

ಏಪ್ರಿಲ್ 5 ರ ಭಾನುವಾರ ಉಪ್ಪಳದಲ್ಲಿ ಉಂಟಾದ ಭಾರೀ ಸಂಚಾರ ದಟ್ಟಣೆಯಿಂದಾಗಿ ಒಂದು ಗಂಟೆಗೂ ಹೆಚ್ಚು ಕಾಲ ಆಂಬ್ಯುಲೆನ್ಸ್‌ನಲ್ಲಿ ಸಿಲುಕಿಕೊಂಡಿದ್ದ ಬಿಷ್ಣಾ ಎಂಬ 30 ವರ್ಷದ ಮಹಿಳೆ ಸಾವನ್ನಪ್ಪಿದ ದುರಂತ ಘಟನೆ ನಡೆದಿದೆ. ಉಪ್ಪಳದ...

ಪಶ್ಚಿಮ ಬಂಗಾಳ: ನಂದಿಗ್ರಾಮದಲ್ಲಿ ಎಸ್‌ಐಆರ್ ಪೂರಕ ಪಟ್ಟಿಯಿಂದ 95% ಮುಸ್ಲಿಂ ಮತದಾರರ ಹೆಸರು ತೆಗೆದುಹಾಕಲಾಗಿದೆ: ವರದಿ 

ಸುವೇಂದು ಅಧಿಕಾರಿ ಪ್ರತಿನಿಧಿಸುವ ಪೂರ್ವ ಮಿಡ್ನಾಪುರ ವಿಧಾನಸಭಾ ಕ್ಷೇತ್ರವಾದ ನಂದಿಗ್ರಾಮದಲ್ಲಿ ಒಂದು ಅಧ್ಯಯನವು ಆತಂಕಕಾರಿ ಅಸಮಾನತೆಯನ್ನು ಎತ್ತಿ ತೋರಿಸಿದೆ, ಅಲ್ಲಿ ಮತದಾರರಲ್ಲಿ ಕಡಿಮೆ ಪಾಲು ಇದ್ದರೂ ಎಸ್‌ಐಆರ್ ಪೂರಕ ಪಟ್ಟಿಯಿಂದ ಅಳಿಸಲಾದ ಮತದಾರರಲ್ಲಿ...

ಟೋಲ್ ಪ್ಲಾಜಾಗಳಲ್ಲಿನ ಅಶುಚಿತ್ವ ಶೌಚಾಲಯಗಳ ಬಗ್ಗೆ ವರದಿ ಮಾಡಿದರೆ ಬಹುಮಾನ: ಕೇಂದ್ರ ಸರ್ಕಾರ

ರಾಷ್ಟ್ರೀಯ ಹೆದ್ದಾರಿಗಳಲ್ಲಿನ ನೈರ್ಮಲ್ಯದ ಬಗ್ಗೆ ದೀರ್ಘಕಾಲದ ಕಳವಳಗಳನ್ನು ಪರಿಹರಿಸುವ ಪ್ರಯತ್ನದಲ್ಲಿ, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ (MoRTH) ಟೋಲ್ ಪ್ಲಾಜಾಗಳಲ್ಲಿ ಅಶುಚಿಯಾದ ಶೌಚಾಲಯ ಸೌಲಭ್ಯಗಳ ಬಗ್ಗೆ ವರದಿ ಮಾಡಲು ಪ್ರಯಾಣಿಕರನ್ನು ಪ್ರೋತ್ಸಾಹಿಸುವ...

ಮಣಿಪುರ: ಬಾಂಬ್ ದಾಳಿಗೆ ಇಬ್ಬರು ಮಕ್ಕಳು ಬಲಿ; ಕುಕಿ ದಂಗೆಕೋರರಿಂದ ದಾಳಿ ಆರೋಪ; ಇದು ಅನಾಗರಿಕ ಕೃತ್ಯ ಎಂದ ಸಿಎಂ 

ಗುವಾಹಟಿ: ಮಣಿಪುರದ ಮೈತೇಯಿ ಪ್ರಾಬಲ್ಯದ ಬಿಷ್ಣುಪುರ ಜಿಲ್ಲೆಯಲ್ಲಿ ಮಂಗಳವಾರ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಘಟನೆಯಲ್ಲಿ ಐದು ತಿಂಗಳ ಗಂಡು ಮಗು ಸೇರಿದಂತೆ ಇಬ್ಬರು ಅಪ್ರಾಪ್ತ ವಯಸ್ಕರು ಸಾವನ್ನಪ್ಪಿರುವ ಘಟನೆ ನಡೆದಿದೆ.  ಮೊಯಿರಾಂಗ್...

ಮುಖ್ಯ ಚುನಾವಣಾ ಆಯುಕ್ತರ ಪದಚ್ಯುತಿಗೆ ವಿಪಕ್ಷಗಳಿಂದ ನೋಟಿಸ್‌ : ಕಾರಣ ನೀಡದೆ ತಿರಸ್ಕರಿಸಿದ ಸಂಸತ್ತಿನ ಉಭಯ ಸದನಗಳ ಮುಖ್ಯಸ್ಥರು-ವರದಿ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸಲು ವಿಪಕ್ಷ ಸಂಸದರು ಸಲ್ಲಿಸಿದ್ದ ನಿಲುವಳಿ ನೋಟಿಸ್ ಅನ್ನು ರಾಜ್ಯಸಭಾ ಅಧ್ಯಕ್ಷ ಸಿ.ಪಿ. ರಾಧಾಕೃಷ್ಣನ್ ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ತಿರಸ್ಕರಿಸಿದ್ದಾರೆ. ಉಭಯ...

ಎನ್‌ಸಿಪಿ ನಾಯಕನ ಕೊಲೆ ಪ್ರಕರಣ : ಛತ್ತೀಸ್‌ಗಢ ಮಾಜಿ ಸಿಎಂ ಅಜಿತ್ ಜೋಗಿ ಮಗ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ

2003ರ ಕೊಲೆ ಪ್ರಕರಣದಲ್ಲಿ ಛತ್ತೀಸ್‌ಗಢ ಹೈಕೋರ್ಟ್ ಮಾಜಿ ಮುಖ್ಯಮಂತ್ರಿ ಅಜಿತ್ ಜೋಗಿ ಅವರ ಪುತ್ರ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು ದಿ ಹಿಂದೂ ಸೋಮವಾರ (ಏ.6) ವರದಿ ಮಾಡಿದೆ. ರಾಷ್ಟ್ರೀಯವಾದಿ ಕಾಂಗ್ರೆಸ್...

ಪ. ಬಂಗಾಳ | ಮತದಾರರ ಪಟ್ಟಿಯಿಂದ ಕೈಬಿಟ್ಟಿದ್ದಕ್ಕೆ ಸೂಕ್ತ ಕಾರಣ ನೀಡದ ಚುನಾವಣಾ ಆಯೋಗ : ಕಾಂಗ್ರೆಸ್ ಅಭ್ಯರ್ಥಿ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲ್ಪಟ್ಟವರ ಅರ್ಜಿಗಳ ವಿಚಾರಣೆಗಾಗಿ ಕೋಲ್ಕತ್ತಾದಲ್ಲಿ ಸ್ಥಾಪಿಸಲಾದ ಮೇಲ್ಮನವಿ ನ್ಯಾಯಮಂಡಳಿಯು, ಮುಂಬರುವ ವಿಧಾನಸಭಾ ಚುನಾವಣೆಯ ಫರಕ್ಕಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೊತಾಬ್ ಶೇಖ್ ಅವರ ಹೆಸರನ್ನು ಭಾನುವಾರ...

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...