Homeಮುಖಪುಟಉತ್ತರ ಪ್ರದೇಶ: ದಲಿತ ಯುವಕನ ಮೇಲೆ ಮಾರಣಾಂತಿಕ ಹಲ್ಲೆ, ಒಬ್ಬನ ಬಂಧನ

ಉತ್ತರ ಪ್ರದೇಶ: ದಲಿತ ಯುವಕನ ಮೇಲೆ ಮಾರಣಾಂತಿಕ ಹಲ್ಲೆ, ಒಬ್ಬನ ಬಂಧನ

- Advertisement -
- Advertisement -

20 ವರ್ಷದ ದಲಿತ ಯುವಕನ ಮೇಲೆ ಜನರ ಗುಂಪೊಂದು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರ್ ದೇಹತ್ ಜಿಲ್ಲೆಯಲ್ಲಿ ನಡೆದಿದೆ. ಹಲ್ಲೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಜನರ ಗುಂಪೊಂದು ಯುವಕನ ಕೂದಲನ್ನು ಎಳೆಯುತ್ತಿರುವುದು, ಮೊಣಕೈಗಳಿಂದ ಮುಖಕ್ಕೆ ಗುದ್ದುತ್ತಿರುವುದು, ಬಟ್ಟೆ ಎಳೆದು ಕಸದ ಹತ್ತಿರ ಎಳೆ ತಂದು ಕೋಲುಗಳಿಂದ ಹೊಡೆಯುತ್ತಿರುವುದು ವಿಡಿಯೊದಲ್ಲಿ ದಾಖಲಾಗಿದೆ. ಪ್ರಕರಣದಲ್ಲಿ ಒಬ್ಬನನ್ನು ಬಂಧಿಸಲಾಗಿದ್ದು, ಇತರ ಆರೋಪಿಗಳನ್ನು ಹುಡುಕಲು ಪೊಲೀಸ್ ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಘಟನೆ ಎರಡು ದಿನಗಳ ಹಿಂದೆ ಕಾನ್ಪುರ್ ದೇಹತ್‌ನ ಅಕ್ಬರ್‌ಪುರ ಪ್ರದೇಶದಲ್ಲಿ ನಡೆದಿದೆ.

ಮೊದಲು ಯುವಕನ ಜಾತಿಯನ್ನು ಕೇಳಿ, ಬಳಿಕ ಆತ ದಲಿತ ಸಮುದಾಯದವನು ಎಂದು ತಿಳಿದ ಬಳಿಕ ಹಲ್ಲೆ ನಡೆಸಲಾಗಿದೆ. ಯುವಕ ನೋವಿನಿಂದ ಕೂಗುತ್ತಿದ್ದರೂ ಕೂಡ, ಹೊಡೆತಕ್ಕೆ ಪ್ರತಿರೋಧ ತೋರಿಸದೇ ಈ ಮಾರಣಾಂತಿಕ ಹಲ್ಲೆಯನ್ನು ಸಹಿಸಿಕೊಳ್ಳತ್ತಿರುವುದನ್ನು ವಿಡಿಯೊದಲ್ಲಿ ಕಾಣಬಹುದಾಗಿದೆ.

ಇದನ್ನೂ ಓದಿ: ಮೇಲ್ಜಾತಿ ಹುಡುಗಿಗೆ ಮೊಬೈಲ್‌ ನೀಡಿದ್ದಕ್ಕೆ ದಲಿತ ಯುವಕರ ತಲೆ ಬೋಳಿಸಿ, ಎಂಜಲು ತಿನ್ನಿಸಿದ ಅಮಾವೀಯ ಘಟನೆ

ವಿಡಿಯೊವನ್ನು ಹಂಚಿಕೊಂಡಿರುವ ಹಲವು ಮಂದಿ ಇದೊಂದು ಪ್ರೇಮ ಪ್ರಸಂಗಕ್ಕೆ ಸಂಬಂಧಿಸಿ ನಡೆದಿರುವ ಮಾರಣಾಂತಿಕ ಹಲ್ಲೆ ಎಂದು ಹೇಳಲಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಕಾನ್ಪುರ್ ದೇಹತ್ ಹೆಚ್ಚುವರಿ ಎಸ್ಪಿ ಘಾನಶ್ಯಾಂ ಚೌರಾಸಿಯಾ, “ನಾವು ವಿಡಿಯೊವನ್ನು ನೋಡಿದ ತಕ್ಷಣ, ಘಟನೆ ಕುರಿತು ಪೊಲೀಸ್ ಪ್ರಕರಣವನ್ನು ದಾಖಲಿಸಲಾಗಿದೆ. ವೈರಲ್ ವಿಡಿಯೊದಲ್ಲಿ ಗುರುತಿಸಲ್ಪಟ್ಟ ವ್ಯಕ್ತಿಯನ್ನು ಬಂಧಿಸಲಾಗಿದೆ. ದಲಿತ ಯುವಕನ ಮೇಲೆ ಹಲ್ಲೆ ನಡೆಸಿದ ಇನ್ನೂ ಇಬ್ಬರನ್ನು ಕಂಡುಹಿಡಿಯಲು ಪ್ರಯತ್ನಿಸುತ್ತಿದ್ದೇವೆ. ಅವರನ್ನು ಬಂಧಿಸಲು ತಂಡಗಳನ್ನು ರಚಿಸಲಾಗಿದೆ” ಎಂದಿದ್ದಾರೆ.

ಮತ್ತೊಂದು ವಿಡಿಯೊದಲ್ಲಿ, ಮರಕ್ಕೆ ಯುವನೊಬ್ಬನನ್ನು ಕಟ್ಟಿ, ಪ್ಯಾಂಟ್ ಬಿಚ್ಚಿ ಆತನ ಖಾಸಗಿ ಭಾಗಗಳಿಗೆ ಕೋಲಿನಿಂದ ತಿವಿಯುತ್ತಿರುವ ದೃಶ್ಯ ಸೆರೆಯಾಗಿದೆ. ಹಲ್ಲೆಗೊಳಗಾದ ಯುವಕನನ್ನು ಕಾನ್ಪುರ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನು, ಆಡಳಿತ ಪಕ್ಷ ಬಿಜೆಪಿಯ ಇಬ್ಬರು ಕಾರ್ಯಕರ್ತರು, ಬ್ಲಾಕ್ ಪಂಚಾಯತ್‌ ಚುನಾವಣೆಗೆ ನಾಮಪತ್ರ ಸಲ್ಲಿಸಲು ಹೋಗುತ್ತಿದ್ದ ಅಖಿಲೇಶ್ ಯಾದವ್ ಅವರ ಸಮಾಜವಾದಿ ಪಕ್ಷದ ಬೆಂಬಲಿಗ ಮಹಿಳೆಯ ಸೀರೆಯನ್ನು ಎಳೆದಿದ್ದ ಘಟನೆ ಉತ್ತರ ಪ್ರದೇಶದಲ್ಲಿ ಕಳೆದೆರಡು ದಿನಗಳ ಹಿಂದೆ ನಡೆದಿದೆ.


ಇದನ್ನೂ ಓದಿ: ಕೊಪ್ಪಳ: ಅನ್ಯಜಾತಿಯ ಯುವತಿಯನ್ನು ಪ್ರೀತಿಸಿದ್ದಕ್ಕೆ ದಲಿತ ಯುವಕನ ಬರ್ಬರ ಕೊಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಾಕಿಸ್ತಾನದ ಐಎಸ್‌ಐ ಪರ ಬೇಹುಗಾರಿಕೆ ಆರೋಪ : ನೌಕಾಪಡೆಯ ಲ್ಯಾನ್ಸ್ ನಾಯಕ್ ಆದರ್ಶ್ ಕುಮಾರ್ ಬಂಧನ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್ಐ) ಪರ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ 24 ವರ್ಷದ ಭಾರತೀಯ ನೌಕಾಪಡೆಯ ಲ್ಯಾನ್ಸ್ ನಾಯಕ್ ಅವರನ್ನು ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಮಂಗಳವಾರ (ಮಾ.10)...

ಅಮೆರಿಕದ ತೈಲ ಸಂಸ್ಕರಣಾ ಘಟಕಕ್ಕೆ ರಿಲಯನ್ಸ್ ಹೂಡಿಕೆ : ಟ್ರಂಪ್ ಘೋಷಣೆ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಹೂಡಿಕೆಯ ಸಹಾಯದಿಂದ 50 ವರ್ಷಗಳಲ್ಲಿ ಅಮೆರಿಕ ತನ್ನ ಮೊದಲ ಹೊಸ ತೈಲ ಸಂಸ್ಕರಣಾಗಾರವನ್ನು ಪಡೆಯಲಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. 'ಅಮೆರಿಕ ಫಸ್ಟ್ ರಿಫೈನಿಂಗ್ ಸಂಸ್ಥೆ'ಯು ಟೆಕ್ಸಾಸ್‌ನ...

ಭಾರತೀಯರ ಅಡುಗೆ ಮನೆ ತಲುಪಿದ ಯುದ್ಧದ ಪರಿಣಾಮ : ದೇಶದಾದ್ಯಂತ ಎಲ್‌ಪಿಜಿ ಕೊರತೆ ಉಲ್ಬಣ

ಅಮೆರಿಕ, ಇಸ್ರೇಲ್, ಇರಾನ್ ಮತ್ತು ಗಲ್ಫ್ ರಾಷ್ಟ್ರಗಳ ಸಂಘರ್ಷದಿಂದ ಭಾರತದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ದೇಶ ಪ್ರಧಾನಿ ಮೋದಿಯವರ ಕೈಯಲ್ಲಿ ಭದ್ರವಾಗಿದೆ ಎಂದು ಒಂದಷ್ಟು ಜನರು ಸಾಮಾಜಿಕ ಜಾಲತಾಣಗಳಲ್ಲಿ ಕಾಮೆಂಟ್ ಮಾಡುತ್ತಿರುವಾಗಲೇ,...

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...