Homeದಲಿತ್ ಫೈಲ್ಸ್ಉತ್ತರ ಪ್ರದೇಶ| ಪೊಲೀಸ್ ಠಾಣೆ ಶೌಚಾಲಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ದಲಿತ ವ್ಯಕ್ತಿ ಶವ ಪತ್ತೆ

ಉತ್ತರ ಪ್ರದೇಶ| ಪೊಲೀಸ್ ಠಾಣೆ ಶೌಚಾಲಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ದಲಿತ ವ್ಯಕ್ತಿ ಶವ ಪತ್ತೆ

- Advertisement -
- Advertisement -

ಉತ್ತರ ಪ್ರದೇಶದ ಅಜಮ್‌ಗಢದ ತರ್ವಾ ಪೊಲೀಸ್ ಠಾಣೆಯ ಶೌಚಾಲಯದಲ್ಲಿ 21 ವರ್ಷದ ದಲಿತ ವ್ಯಕ್ತಿಯೊಬ್ಬ ಸೋಮವಾರ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಭಾರಿ ಪ್ರತಿಭಟನೆಗೆ ಕಾರಣವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಎಚ್‌ಒ ಸೇರಿದಂತೆ ನಾಲ್ವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ.

ಮಾರ್ಚ್ 28 ರಂದು ದಲಿತ ಹುಡುಗಿಯೊಬ್ಬರು ಹಾದುಹೋಗುವಾಗ ಅಶ್ಲೀಲ ಸನ್ನೆಗಳನ್ನು ಮಾಡಿದ ಮತ್ತು ತನ್ನ ಸೆಲ್‌ಫೋನ್‌ನಲ್ಲಿ ಅಶ್ಲೀಲ ಹಾಡುಗಳನ್ನು ಪ್ಲೇ ಮಾಡಿದ ಆರೋಪದ ಮೇಲೆ ಸನ್ನಿ ಕುಮಾರ್ ಅವರನ್ನು ಭಾನುವಾರ ರಾತ್ರಿ ಬಂಧಿಸಲಾಗಿತ್ತು. ಪೊಲೀಸರ ಪ್ರಕಾರ, ಸೋಮವಾರ ಈದ್ ಪ್ರಾರ್ಥನೆಯ ನಂತರ ಬಿಎನ್‌ಎಸ್‌ 74 (ಮಹಿಳೆಯ ಘನತೆಗೆ ಧಕ್ಕೆ) ಅಡಿಯಲ್ಲಿ ಆರೋಪದ ಮೇಲೆ ಸನ್ನಿಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಬೇಕಿತ್ತು. ಆದರೂ, ನೆಲಮಟ್ಟದಿಂದ ಸುಮಾರು 6 ಅಡಿ ಎತ್ತರದಲ್ಲಿ ಗ್ರಿಲ್‌ನಿಂದ ಪೈಜಾದಿಂದ ನೇಣು ಬಿಗಿದ ಸ್ಥಿತಿಯಲ್ಲಿ ಆರೋಪಿ ಪತ್ತೆಯಾಗಿದ್ದಾನೆ.

ಅಜಮ್‌ಗಢ ಎಸ್‌ಎಸ್‌ಪಿ ಹೇಮರಾಜ್ ಮೀನಾ, ಸಬ್ ಇನ್ಸ್‌ಪೆಕ್ಟರ್ ತರ್ವಾ ಎಸ್‌ಎಚ್‌ಒ ಕಮಲೇಶ್ ಪಟೇಲ್ ಮತ್ತು ಇಬ್ಬರು ಕಾನ್‌ಸ್ಟೆಬಲ್‌ಗಳನ್ನು ಅಮಾನತುಗೊಳಿಸಿದ್ದಾರೆ.

ಹೆಚ್ಚುವರಿ ಎಸ್‌ಪಿ ಶ್ರೇಣಿಯ ಅಧಿಕಾರಿಯ ನೇತೃತ್ವದಲ್ಲಿ ತನಿಖೆ ಆರಂಭಿಸಲಾಗಿದೆ. ಅಜಮ್‌ಗಢ ಡಿಎಂ ನವನೀತ್ ಸಿಂಗ್ ಚಾಹಲ್ ಅವರು ಎಡಿಎಂ ಶ್ರೇಣಿಯ ಅಧಿಕಾರಿಯಿಂದ ಪ್ರತ್ಯೇಕ ತನಿಖೆಗೆ ಆದೇಶಿಸಿದ್ದಾರೆ.

ಸನ್ನಿಯ ತಂದೆ ಹರಿಕಾಂತ್, ಪೊಲೀಸ್ ಠಾಣೆಯ ಸಂಪೂರ್ಣ ಸಿಬ್ಬಂದಿಯನ್ನು ಅಮಾನತುಗೊಳಿಸಬೇಕೆಂದು ಒತ್ತಾಯಿಸಿದರು. ಸಿಬ್ಬಂದಿಗಳನ್ನು ನಿರ್ಲಕ್ಷ್ಯಕ್ಕೆ ಹೊಣೆಗಾರರನ್ನಾಗಿ ಮಾಡಿದ ಅವರು, ಪೊಲೀಸರು ಮತ್ತು ಹುಡುಗಿಯ ತಂದೆಯ ಜೊತೆಗೂಡಿ ತಮ್ಮ ಮಗನ ಮೇಲೆ ಆರೋಪ ಹೊರಿಸಲಾಗಿದೆ ಎಂದು ಆರೋಪಿಸಿದರು.

ಸನ್ನಿಯ ಸಾವಿನ ಸುದ್ದಿ ಹರಡುತ್ತಿದ್ದಂತೆ, ಗ್ರಾಮಸ್ಥರು ಪೊಲೀಸ್ ಠಾಣೆಯ ಹೊರಗೆ ಜಮಾಯಿಸಿ, ಪೊಲೀಸರು ಯುವಕನನ್ನು ಕಸ್ಟಡಿಯಲ್ಲಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದರು. ಪೊಲೀಸರೊಂದಿಗೆ ಘರ್ಷಣೆ ನಡೆಸಿ ಕಲ್ಲು ತೂರಾಟ ನಡೆಸಿದರು. ಪೊಲೀಸರು ಲಘು ಲಾಠಿ ಪ್ರಹಾರ ನಡೆಸಬೇಕಾಯಿತು. ಅಶಾಂತಿ ಹೆಚ್ಚಾದಂತೆ, ಇತರ ಪ್ರದೇಶಗಳಿಂದ ಪೊಲೀಸ್ ಪಡೆಗಳನ್ನು ನಿಯೋಜಿಸಲಾಯಿತು; ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಬಂದರು. ಪ್ರತಿಭಟನಾಕಾರರು ಅಜಮ್‌ಘರ್ ಅನ್ನು ವಾರಣಾಸಿಯೊಂದಿಗೆ ಸಂಪರ್ಕಿಸುವ ಒಂದು ರಸ್ತೆ ಸೇರಿದಂತೆ ಪ್ರಮುಖ ರಸ್ತೆಗಳನ್ನು ಗಂಟೆಗಳ ಕಾಲ ತಡೆದರು.

ವಿಟ್ಲ ದಲಿತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ | ಪೋಕ್ಸೋ ದಾಖಲಾಗಿದ್ದರೂ ಬಿಜೆಪಿ ಮುಖಂಡನ ಬಂಧನವಿಲ್ಲ; ಹೋರಾಟಕ್ಕೆ ಮುಂದಾದ ಡಿಎಚ್‌ಎಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...