Homeದಲಿತ್ ಫೈಲ್ಸ್ಉತ್ತರ ಪ್ರದೇಶ: ದಲಿತ ವ್ಯಕ್ತಿಯ ಕಿವಿಯಲ್ಲಿ ಮೂತ್ರ ವಿಸರ್ಜನೆ; ಆರೋಪಿಗಳ ಬಂಧನ

ಉತ್ತರ ಪ್ರದೇಶ: ದಲಿತ ವ್ಯಕ್ತಿಯ ಕಿವಿಯಲ್ಲಿ ಮೂತ್ರ ವಿಸರ್ಜನೆ; ಆರೋಪಿಗಳ ಬಂಧನ

- Advertisement -
- Advertisement -

ಉತ್ತರ ಪ್ರದೇಶದ ಸೋನ್‌ಭದ್ರಾ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ದಲಿತ ಸಮುದಾಯದ ವ್ಯಕ್ತಿಯ ಕಿವಿಯಲ್ಲಿ ಮೂತ್ರ ವಿಸರ್ಜನೆ ಮಾಡುತ್ತಿರುವ ಆಘಾತಕಾರಿ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ವ್ಯಕ್ತಿಯೊಬ್ಬ ಮತ್ತೊಬ್ಬನ ಮೇಲೆ ಮೂತ್ರ ವಿಸರ್ಜನೆ ಮಾಡುತ್ತಿರುವ ದೃಶ್ಯ ಭಾರೀ ವೈರಲ್‌ ಆದ ಬೆನ್ನಲ್ಲೇ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಕೆಲ ದಿನಗಳ ಹಿಂದೆ ಮಧ್ಯಪ್ರದೇಶದಲ್ಲಿ ಬಿಜೆಪಿ ಮುಖಂಡನೊಬ್ಬ ಬುಡಕಟ್ಟು ಸಮುದಾಯದ ಯುವಕನ ಮುಖದ ಮೇಲೆ ಮೂತ್ರ ಮಾಡಿದ ವಿಡಿಯೋ ವೈರಲ್ ಆಗಿತ್ತು.

ಜುಲೈ 11ರಂದು ಸೋನ್‌ಭದ್ರಾ ಜಿಲ್ಲೆಯ ಜುಗೈಲ್ ಪ್ರದೇಶದಲ್ಲಿ ಈ ಅಮಾನವೀಯ ಘಟನೆ ನಡೆದಿದೆ. ಆರೋಪಿ ಹಾಗೂ ದಲಿತ ವ್ಯಕ್ತಿ ಇಬ್ಬರು ಸ್ನೇಹಿತರಾಗಿದ್ದು, ಮದ್ಯ ಸೇವಿಸಿ ಜಗಳ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಎಸ್‌ಪಿ ಯಶವೀರ್ ಸಿಂಗ್ ಮಾಹಿತಿ ನೀಡಿದ್ದು, ”ಆರೋಪಿಗಳಾದ ಜವಾಹರ್ ಪಟೇಲ್ ಮತ್ತು ಇನ್ನೋರ್ವ ವ್ಯಕ್ತಿ ಹಾಗೂ ಗುಲಾಬ್ ಕೋಲ್ ಪರಸ್ಪರ ಸ್ನೇಹಿತರಾಗಿದ್ದು, ಕೃಷಿ ಕಾರ್ಮಿಕರಾಗಿ ದುಡಿಯುತ್ತಿದ್ದಾರೆ. ಈ ಮೂವರೂ ಒಟ್ಟಿಗೆ ಮದ್ಯಪಾನ ಮಾಡಿದ್ದಾರೆ. ಈ ವೇಳೆ ಗುಲಾಬ್ ಜೊತೆ ಜಗಳವಾಡಿದ ಪಟೇಲ್ ಆತನನ್ನು ಥಳಿಸಿದ್ದಾನೆ. ಆ ಬಳಿಕ ಆತನ ಕಿವಿಯಲ್ಲಿ ಮೂತ್ರ ವಿಸರ್ಜನೆ ಮಾಡಿದ್ದಾನೆ ಎಂದು ಹೇಳಿದರು. ಜೊತೆಗಿದ್ದ ಇನ್ನೋರ್ವ ಆರೋಪಿಯ ಹೆಸರು ಬಹಿರಂಗಪಡಿಸಿಲ್ಲ.

ಕುಡಿದ ಮತ್ತಲ್ಲಿದ್ದ ಗುಲಾಬ್‌ಗೆ ಏನಾಯಿತು ಎಂದು ಗೊತ್ತಾಗಿಲ್ಲ ಆದರೆ, ಘಟನೆಯ ವಿಡಿಯೋವನ್ನು ಯಾರೋ ಚಿತ್ರೀಕರಿಸಿದ್ದಾರೆ. ಆ ಬಳಿಕ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಗುಲಾಬ್ ಕೋಲ್ ದೂರು ದಾಖಲಿಸಿದ್ದು, ಎಫ್‌ಐಆರ್ ದಾಖಲಿಸಲಾಗುತ್ತಿದೆ ಎಂದು ಯಶವೀರ್ ಸಿಂಗ್ ಹೇಳಿದ್ದಾರೆ.

ಘಟನೆ ಮುನ್ನೆಲೆಗೆ ಬಂದ ನಂತರ ಹೆಚ್ಚಿನ ಸಂಖ್ಯೆಯ ಪೊಲೀಸ್ ಅಧಿಕಾರಿಗಳು ಮತ್ತು ಆಡಳಿತ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಪಟೇಲ್ ಮತ್ತು ಆತನ ಸಹಚರನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಧ್ಯಪ್ರದೇಶ: ಆದಿವಾಸಿ ಯುವಕನ ಮುಖದ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದ ಬಿಜೆಪಿ ಮುಖಂಡ

ಮಧ್ಯಪ್ರದೇಶದ ಬಿಜೆಪಿ ಮುಖಂಡನೊಬ್ಬ ಆದಿವಾಸಿ ಬುಡಕಟ್ಟು ಸಮುದಾಯದ ಯುವಕನ ಮುಖದ ಮೇಲೆ ಮೂತ್ರ ವಿಸರ್ಜನೆ ಮಾಡಿರುವ ಅಮಾನುಷ ಘಟನೆ ಸಿಧಿ ಜಿಲ್ಲೆಯಲ್ಲಿ ವರದಿಯಾಗಿತ್ತು. ಮನುಷ್ಯರೆಲ್ಲರೂ ತಲೆತಗ್ಗಿಸಬೇಕಾದ ಅಮಾನವೀಯ ಘಟನೆಯ ವಿಡಿಯೋ ವೈರಲ್ ಆದ ಬೆನ್ನಲ್ಲೇ ಆರೋಪಿಯನ್ನು ಬಂಧಿಸಿದ್ದಾರೆ ಮತ್ತು ಅವರ ಮೇಲೆ ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ)ಯನ್ನು ದಾಖಲು ಮಾಡಿದ್ದಾರೆ.

ಆರೋಪಿ ಸಿಧಿ ಬಿಜೆಪಿ ಶಾಸಕ ಕೇದಾರ್ ನಾಥ್ ಶುಕ್ಲಾ ಅವರ ಬೆಂಬಲಿಗ ಪ್ರವೇಶ್ ಶುಕ್ಲಾನನ್ನು ಬಂಧಿಸಲು ಹಲವಾರು ತಂಡಗಳನ್ನು ಕಳುಹಿಸಲಾಗಿತ್ತು. ಆರೋಪಿ ತನ್ನ ಸ್ಥಳಗಳನ್ನು ಬದಲಾಯಿಸುತ್ತಿದ್ದ ಕೊನೆಗೂ ಅವರನ್ನು ಪತ್ತೆಹಚ್ಚುವಲ್ಲಿ ಮಧ್ಯಪ್ರದೇಶ ಪೊಲೀಸರು ಯಶಸ್ವಿಯಾಗಿದ್ದಾರೆ. ಆತನನ್ನು ಬಂಧಿಸಲಾಗಿದ್ದು, ಸದ್ಯ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಆದಿವಾಸಿಯ ಮೇಲೆ ಮೂತ್ರ ಮಾಡಿದ ಶುಕ್ಲಾ ಮನೆ ಮರುನಿರ್ಮಾಣಕ್ಕೆ ಬ್ರಾಹ್ಮಣ ಗುಂಪಿನಿಂದ ಹಣ ಸಂಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...