ತನ್ನ ಸಂಬಂಧಿಗೆ ಹಲ್ಲೆ ನಡೆಸುತ್ತಿದ್ದ ವೇಳೆ ಮಧ್ಯಪ್ರವೇಶಿಸಿ ಅವರನ್ನು ರಕ್ಷಿಸಲು ಪ್ರಯತ್ನಿಸಿದ 29 ವರ್ಷದ ದಲಿತ ಮಹಿಳೆಯನ್ನು ದುಷ್ಕರ್ಮಿಗಳು ನಗ್ನಗೊಳಿಸಿ ದಾಳಿ ಮಾಡಿರುವ ಘಟನೆ ಉತ್ತರ ಪ್ರದೇಶ ಖೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆಸಿದೆ ಎಂದು ಟೈಮ್ಸ್ ಆಫ್ ಇಂಡಿಯಾ ಪತ್ರಿಕೆಯು ಶನಿವಾರ ವರದಿ ಮಾಡಿದೆ. ಉತ್ತರ ಪ್ರದೇಶ
ಕಬ್ಬಿನ ಹೊಲದಲ್ಲಿ ಹಲವಾರು ಗ್ರಾಮಸ್ಥರ ಮುಂದೆ ತನ್ನ ಗಂಡನ ಕಿರಿಯ ಸಹೋದರನನ್ನು ಯಾವುದೋ ವಿವಾದದ ಮೇಲೆ ಕ್ರೂರವಾಗಿ ಥಳಿಸುತ್ತಿದ್ದ ದಾಳಿಕೋರರ ಹಿಡಿತದಿಂದ ರಕ್ಷಿಸಲು ಮಹಿಳೆ ಪ್ರಯತ್ನಿಸಿದ್ದರು. ಈ ವೇಳೆ ದುಷ್ಕರ್ಮಿಗಳು ಅವರನ್ನು ನಗ್ನಗೊಳಿಸಿದ್ದಾರೆ ಎಂದು ಆರೋಪಿಸಲಾಗಿದೆ. ದೂರಿನ ಮೇರೆಗೆ ಆರು ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಉತ್ತರ ಪ್ರದೇಶ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಖೇರಿ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮಕ್ಕೆ ಸೇರಿದ ಸಂತ್ರಸ್ತೆಯು, ಹರಿತವಾದ ಆಯುಧದಿಂದ ಆರೋಪಿಗಳು ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಹಲ್ಲೆಯಿಂದ ಅವರ ಬಲಗೈಗೆ ಆಳವಾದ ಗಾಯವಾಗಿದೆ. ಅಷ್ಟೆ ಅಲ್ಲದೆ, ಮಹಿಳೆಯನ್ನು ರಕ್ಷಿಸಲು ಮಧ್ಯಪ್ರವೇಶಿಸಿದ ಮತ್ತೊಬ್ಬ ವ್ಯಕ್ತಿಯ ಎಡಗೈಯ ಬೆರಳನ್ನು ಕುಡುಗೋಲಿನಿಂದ ಕತ್ತರಿಸಲಾಗಿದೆ ಎಂದು ವರದಿ ಹೇಳಿದೆ.
ಘಟನೆ ಬುಧವಾರ ಸಂಜೆ ನಡೆದಿದ್ದು, ಗುರುವಾರ ಎಫ್‌ಐಆರ್ ದಾಖಲಿಸಲಾಗಿದೆ. ಆರೋಪಿಗಳ ವಿರುದ್ಧ ಬಿಎನ್ಎಸ್ ಸೆಕ್ಷನ್ 191 (2) (ಗಲಭೆ), 191 (3) (ಗಲಭೆ, ಮಾರಕ ಆಯುಧದಿಂದ ಶಸ್ತ್ರಸಜ್ಜಿತವಾಗಿರುವುದು), 115 (2) (ಸ್ವಯಂಪ್ರೇರಣೆಯಿಂದ ನೋವುಂಟುಮಾಡುವುದು), 352 (ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕವಾಗಿ ಅವಮಾನಿಸುವುದು), 76 (ಮಹಿಳೆಯ ಮೇಲೆ ಹಲ್ಲೆ ಅಥವಾ ಕ್ರಿಮಿನಲ್ ಬಲಪ್ರಯೋಗ) ಮತ್ತು ಎಸ್‌ಸಿ/ಎಸ್‌ಟಿ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಎಸ್‌ಎಚ್‌ಒ ಸಂತೋಷ್ ಕುಮಾರ್ ಸಿಂಗ್ ತಿಳಿಸಿದ್ದಾರೆ. ಆರೋಪಿಗಳು ತಲೆಮರೆಸಿಕೊಂಡಿದ್ದಾರೆ ಎಂದು ಅವರು ಹೇಳಿದರು.
ಇದನ್ನೂಓದಿ: ಶೀಘ್ರದಲ್ಲೇ ಬಿಜೆಪಿ ರಾಜ್ಯಾಧ್ಯಕ್ಷರ ಚುನಾವಣೆ: ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್
ಶೀಘ್ರದಲ್ಲೇ ಬಿಜೆಪಿ ರಾಜ್ಯಾಧ್ಯಕ್ಷರ ಚುನಾವಣೆ: ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್


