Homeದಲಿತ್ ಫೈಲ್ಸ್ಉತ್ತರ ಪ್ರದೇಶ| ದಲಿತ ಯುವಕನ ಮೇಲೆ ತೀವ್ರ ಹಲ್ಲೆ, ಶೂ ನೆಕ್ಕುವಂತೆ ಒತ್ತಾಯ; 12 ದಿನಗಳ...

ಉತ್ತರ ಪ್ರದೇಶ| ದಲಿತ ಯುವಕನ ಮೇಲೆ ತೀವ್ರ ಹಲ್ಲೆ, ಶೂ ನೆಕ್ಕುವಂತೆ ಒತ್ತಾಯ; 12 ದಿನಗಳ ನಂತರ ಎಫ್‌ಐಆರ್

- Advertisement -
- Advertisement -

ಉತ್ತರ ಪ್ರದೇಶದ ಹಮೀರ್‌ಪುರ ಜಿಲ್ಲೆಯಲ್ಲಿ ಜಾತಿ ಆಧಾರಿತ ಹಿಂಸಾಚಾರದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಅಲ್ಲಿ ಮೇಲ್ಜಾತಿಯ ಜನರ ಗುಂಪೊಂದು ದಲಿತ ಯುವಕನ ಮೇಲೆ ತೀವ್ರವಾಗಿ ಹಲ್ಲೆ ನಡೆಸಿ ಶೂ ನೆಕ್ಕುವಂತೆ ಒತ್ತಾಯಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಡಾ. ಬಿ.ಆರ್. ಅಂಬೇಡ್ಕರ್ ಅವರ ಛಾಯಾಚಿತ್ರ ಹರಿದಿದ ಹಳೆಯ ವಿವಾದದಿಂದ ಜಗಳ ಉಂಟಾಗಿದೆ. ದಾಳಿಯಲ್ಲಿ ಉಮೇಶ್ ಬಾಬು ವರ್ಮಾ ಎಂಬ ಬಲಿಪಶುವಿನ ಕೈ ಮುರಿದಿದೆ. ಘಟನೆ ಅಕ್ಟೋಬರ್ 5 ರಂದು ನಡೆದಿದ್ದರೂ, ಸ್ಥಳೀಯ ಪೊಲೀಸರು 12 ದಿನಗಳವರೆಗೆ ದೂರು ದಾಖಲಿಸಲು ನಿರಾಕರಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯ ನೇರ ಹಸ್ತಕ್ಷೇಪದ ನಂತರವೇ ಎಫ್‌ಐಆರ್ ದಾಖಲಿಸಿದ್ದಾರೆ.

ಮೂಲತಃ ಸಿಮ್ನೌಡಿ ಗ್ರಾಮದ ಉಮೇಶ್, ಅಭಯ್ ಸಿಂಗ್ ಮತ್ತು ಇಬ್ಬರು ಅಪರಿಚಿತ ವ್ಯಕ್ತಿಗಳು ರಸ್ತೆಬದಿಯಲ್ಲಿ ಅವರನ್ನು ತಡೆದಾಗ ತಾನು ಮಾರುಕಟ್ಟೆಗೆ ಹೋಗುತ್ತಿದ್ದೆ ಎಂದು ಹೇಳಿದ್ದಾರೆ. “ಅವರು ನನ್ನನ್ನು ಜಾತಿ ಹೆಸರಿಡಿದು ನಿಂದಿಸಲು ಪ್ರಾರಂಭಿಸಿದರು, ಬಲವಂತವಾಗಿ ಶೂ ನೆಕ್ಕಿಸಿದರು, ನಂತರ ನನ್ನ ಮೇಲೆ ಹಲ್ಲೆ ನಡೆಸಿ ಕೈ ಮುರಿದರು” ಎಂದು ಅವರು ಸ್ಥಳೀಯ ವರದಿಗಾರರಿಗೆ ತಿಳಿಸಿದರು.

ಸ್ಥಳೀಯ ಪೊಲೀಸರಿಂದ ಸಹಾಯ ಪಡೆಯಲು ಪದೇ ಪದೇ ಮಾಡಿದ ಪ್ರಯತ್ನಗಳನ್ನು ನಿರ್ಲಕ್ಷಿಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ. “ನಾನು ಹಲವಾರು ಬಾರಿ ಪೊಲೀಸ್ ಠಾಣೆಗೆ ಹೋದೆ. ಆದರೆ, ಅವರು ನನ್ನ ಮಾತನ್ನು ಕೇಳಲಿಲ್ಲ”ಎಂದು ಅವರು ಹೇಳಿದರು.

ಪೊಲೀಸರ ನಿಷ್ಕ್ರಿಯತೆಯಿಂದ ಹತಾಶೆಗೊಂಡ ಅವರು ಅಂತಿಮವಾಗಿ ಪೊಲೀಸ್ ವರಿಷ್ಠಾಧಿಕಾರಿ ಡಾ. ದೀಕ್ಷಾ ಶರ್ಮಾ ಅವರನ್ನು ಸಂಪರ್ಕಿಸಿ ಇಡೀ ಘಟನೆಯನ್ನು ವಿವರಿಸಿದರು.

ಎಸ್‌ಪಿ ನಿರ್ದೇಶನಗಳನ್ನು ಅನುಸರಿಸಿ, ಪೊಲೀಸರು ಅಂತಿಮವಾಗಿ ಅಭಯ್ ಸಿಂಗ್ ಮತ್ತು ಇತರ ಇಬ್ಬರ ವಿರುದ್ಧ ದಲಿತರ ಮೇಲಿನ ಹಲ್ಲೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದರು.

ಎಫ್‌ಐಆರ್ ದಾಖಲಿಸುವಲ್ಲಿ 12 ದಿನಗಳ ವಿಳಂಬವು ಸ್ಥಳೀಯರಲ್ಲಿ ಆಕ್ರೋಶವನ್ನು ಹುಟ್ಟುಹಾಕಿದೆ. ಈ ಪ್ರಕರಣವು ಸ್ಥಳೀಯ ಅಧಿಕಾರಿಗಳ ಜಾತಿ ಆಧಾರಿತ ಹಿಂಸಾಚಾರವನ್ನು ಪರಿಹರಿಸುವಲ್ಲಿ ನಿರಂತರ ವೈಫಲ್ಯವನ್ನು ಬಹಿರಂಗಪಡಿಸುತ್ತದೆ ಎಂದು ಅವರು ವಾದಿಸಿದ್ದಾರೆ. ಬಲಿಪಶುವಿನ ಕುಟುಂಬವು ಈಗ ಆರೋಪಿಗಳನ್ನು ತಕ್ಷಣ ಬಂಧಿಸಬೇಕು ಮತ್ತು ಆರಂಭದಲ್ಲಿ ದೂರು ದಾಖಲಿಸಲು ನಿರಾಕರಿಸಿದ ಪೊಲೀಸ್ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದೆ.

ಪುಣೆ ಕಾಲೇಜಿನ ಜಾತಿ ತಾರತಮ್ಯದಿಂದ ಇಂಗ್ಲೆಂಡ್‌ನಲ್ಲಿ ಉದ್ಯೋಗ ಕಳೆದುಕೊಂಡೆ : ದಲಿತ ಯುವಕನಿಂದ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...