Homeದಲಿತ್ ಫೈಲ್ಸ್ಉತ್ತರ ಪ್ರದೇಶ: ದುರ್ಗಾ ಮೂರ್ತಿ ವಿಸರ್ಜನೆ ಮೆರವಣಿಗೆ ವೀಕ್ಷಿಸುತ್ತಿದ್ದ ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ;...

ಉತ್ತರ ಪ್ರದೇಶ: ದುರ್ಗಾ ಮೂರ್ತಿ ವಿಸರ್ಜನೆ ಮೆರವಣಿಗೆ ವೀಕ್ಷಿಸುತ್ತಿದ್ದ ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; ಆರು ಜನರ ವಿರುದ್ಧ ಪ್ರಕರಣ

- Advertisement -
- Advertisement -

ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯಲ್ಲಿ ದುರ್ಗಾ ಮೂರ್ತಿ ವಿಸರ್ಜನೆ ಮೆರವಣಿಗೆಯನ್ನು ವೀಕ್ಷಿಸುತ್ತಿದ್ದ ದಲಿತ ಸಮುದಾಯದ ಪುರುಷರ ಮೇಲೆ ಗುಂಪೊಂದು ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿರುವ ಆರೋಪ ಕೇಳಿಬಂದಿದೆ. ಈ ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದು, ಆರು ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಕ್ಟೋಬರ್ 21ರಂದು ಬಲ್ಲಿಯಾ ಜಿಲ್ಲೆಯ ಗರ್ವಾರ್ ಪೊಲೀಸ್ ಠಾಣೆ ವ್ಯಾಪ್ತಿಯ ದೈ ಸ್ಥಾನ್ ಬಳಿ ದುರ್ಗಾ ಮೂರ್ತಿ ವಿಸರ್ಜನೆ ಮೆರವಣಿಗೆ ಸಾಗುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. ಮೆರವಣಿಗೆಯನ್ನು ವೀಕ್ಷಿಸುತ್ತಿದ್ದ ಪಪ್ಪು ಮತ್ತು ಪಂಕಜ್ ಕುಮಾರ್ ಅವರನ್ನು ಆರೋಪಿಗಳು ಗುರಿಯಾಗಿಸಿಕೊಂಡು ಜಾತಿ ನಿಂದನೆ ಮಾಡಿದ್ದಾರೆ. ಬಳಿಕ ದೊಣ್ಣೆಗಳು ಮತ್ತು ಇತರ ಆಯುಧಗಳನ್ನು ಬಳಸಿ ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಪಪ್ಪು ಮತ್ತು ಪಂಕಜ್ ಮೇಲಿನ ಹಲ್ಲೆಯನ್ನು ತಡೆಯಲು ಹರೀಂದ್ರ ಮತ್ತು ಅಜಿತ್ ಮಧ್ಯಪ್ರವೇಶಿಸಿದಾಗ, ಅವರ ಮೇಲೂ ಹಲ್ಲೆ ನಡೆಸಲಾಗಿದೆ. ಈ ದಾಳಿಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಹಲ್ಲೆ ನಡೆಸಿದ ಆರೋಪಿಗಳು ಸ್ಥಳದಿಂದ ಪರಾರಿಯಾಗುವ ಮೊದಲು ಸಂತ್ರಸ್ತರಿಗೆ ಜೀವ ಬೆದರಿಕೆ ಹಾಕಿದ್ದಾರೆ ಎಂದೂ ದೂರಿನಲ್ಲಿ ತಿಳಿಸಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಭಾಷ್ ರಾಜ್‌ಭರ್, ಮುಖೇಶ್ ರಾಜ್‌ಭರ್, ಪ್ರದೀಪ್, ಅಭಯ್, ಪ್ರಿನ್ಸ್ ಮತ್ತು ಸೌರಭ್ ಎಂಬ ಆರು ಮಂದಿಯನ್ನು ಆರೋಪಿಗಳೆಂದು ಹೆಸರಿಸಲಾಗಿದೆ. ಈ ಕುರಿತು ಶುಕ್ರವಾರ ಪ್ರಕರಣ ದಾಖಲಿಸಲಾಗಿದೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಸತೀಶ್ ಶರ್ಮಾ ತಿಳಿಸಿದ್ದಾರೆ.

ದಲಿತ ಸಮುದಾಯದವರ ಮೇಲಿನ ಹಲ್ಲೆ ಮತ್ತು ಜಾತಿ ನಿಂದನೆಯ ಆರೋಪಗಳ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣದ ತನಿಖೆ ಕೈಗೊಂಡಿದ್ದಾರೆ. ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿರುವುದರಿಂದ, ಆರೋಪಗಳ ಕುರಿತು ತನಿಖೆ ಮುಂದುವರಿದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು| ಜಾತಿ ತಾರತಮ್ಯಕ್ಕೆ ದಲಿತ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ಶಿಕ್ಷಕನ ಬಂಧನ; ಸಹಪಾಠಿಗಳ ವಿರುದ್ಧ ಕೇಸ್‌ ದಾಖಲು

ಕೊಯಮತ್ತೂರಿನ ಸರ್ಕಾರಿ ಅನುದಾನಿತ ಶಾಲೆಯೊಂದರಲ್ಲಿ 11ನೇ ತರಗತಿಯಲ್ಲಿ ಓದುತ್ತಿದ್ದ 16 ವರ್ಷದ ದಲಿತ ವಿದ್ಯಾರ್ಥಿಯೊಬ್ಬ, ಸಹಪಾಠಿಗಳಿಂದ ಜಾತಿ ಆಧಾರಿತ ಕಿರುಕುಳಕ್ಕೆ ಒಳಗಾದ ನಂತರ, ಅಕ್ಟೋಬರ್ 21, ಬುಧವಾರದಂದು ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ...

ತಮಿಳುನಾಡು ಮುಖ್ಯ ಚುನಾವಣಾಧಿಕಾರಿಯ ಸರ್ವಪಕ್ಷ ಸಭೆಯಿಂದ ಹೊರನಡೆದ ಟಿವಿಕೆ, ಡಿಎಂಕೆ ಸೇರಿದಂತೆ ಒಂಬತ್ತು ಪಕ್ಷಗಳು : ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮತ್ತು ಪ್ರಮುಖ ವಿರೋಧ ಪಕ್ಷವಾದ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸೇರಿದಂತೆ ಒಂಬತ್ತು ರಾಜಕೀಯ ಪಕ್ಷಗಳು, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ...

‘ಮತ್ತೊಂದು ಗಾಲ್ವಾನ್ ಸಂಭವಿಸುತ್ತಿದೆಯೇ?’: ಅರುಣಾಚಲದಲ್ಲಿ ಚೀನಾ ಸೇನೆ ಜೊತೆಗಿನ ಮುಖಾಮುಖಿ ವರದಿ ಬೆನ್ನಲ್ಲೇ ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಅರುಣಾಚಲ ಪ್ರದೇಶದಲ್ಲಿ ಭಾರತ ಮತ್ತು ಚೀನಾ ಪಡೆಗಳ ನಡುವೆ ಮುಖಾಮುಖಿ ಮುಂದುವರಿದಿರುವ ವರದಿಗಳ ಕುರಿತು ಕೇಂದ್ರ ಸರ್ಕಾರ ಮೌನ ವಹಿಸಿದೆ ಎಂದು ಶುಕ್ರವಾರ (ಅ.23) ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. ಗಡಿ ಭದ್ರತೆ ಮತ್ತು...

ಎಸ್‌ಐಆರ್ ವಿರುದ್ಧ ಒಂದಾದ ದಲಿತ, ರೈತ, ಕಾರ್ಮಿಕ, ಮಹಿಳಾ ಸಂಘಟನೆಗಳು: ಟೌನ್ ಹಾಲ್‌ನಿಂದ ಫ್ರೀಡಂ ಪಾರ್ಕ್‌ವರೆಗೆ ರಾಷ್ಟ್ರಧ್ವಜದೊಂದಿಗೆ ಜಾಥಾ

ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯ; ಬೆಂಗಳೂರಿನಲ್ಲಿ ದಲಿತ, ರೈತ, ಕಾರ್ಮಿಕ, ವಿದ್ಯಾರ್ಥಿ, ಮಹಿಳಾ ಮತ್ತು ಅಲ್ಪಸಂಖ್ಯಾತ ಸಂಘಟನೆಗಳ ಒಗ್ಗಟ್ಟಿನ ಹೋರಾಟ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ರದ್ದುಗೊಳಿಸಬೇಕು, ಮುಖ್ಯ ಚುನಾವಣಾ...

ಎಸ್‌ಐಆರ್ ವಿರುದ್ಧ ದೆಹಲಿಯಲ್ಲಿ ಭುಗಿಲೆದ್ದ ಪ್ರತಿಭಟನೆ: ಚುನಾವಣಾ ಆಯೋಗದತ್ತ ಮೆರವಣಿಗೆ, ಹಲವರನ್ನು ವಶಕ್ಕೆ ಪಡೆದ ಪೊಲೀಸರು 

ನವದೆಹಲಿ: ದೇಶದ ಹಲವು ರಾಜ್ಯಗಳಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಮತದಾರರ ಹೆಸರುಗಳನ್ನು ಅಳಿಸಲಾಗುತ್ತಿದೆ ಎಂದು ಆರೋಪಿಸಿ, ದೆಹಲಿಯಲ್ಲಿ ಶುಕ್ರವಾರ ನಡೆದ ‘ಪೀಪಲ್ ಅಗೇನ್ಸ್ಟ್ ಎಸ್‌ಐಆರ್’ ಪ್ರತಿಭಟನಾ...

“ಭಿನ್ನಾಭಿಪ್ರಾಯ ಅಪರಾಧವಲ್ಲ”: ಬಾಬರಿ ಮಸೀದಿ ತೀರ್ಪಿನ ವಿರುದ್ಧ ಪೋಸ್ಟರ್ ಹಾಕಿದ್ದ 13 ಜನರ ಮೇಲಿನ ದೇಶದ್ರೋಹ ಪ್ರಕರಣ ರದ್ದುಪಡಿಸಿದ ಹೈಕೋರ್ಟ್

ಮಂಗಳೂರು: ಸುಪ್ರೀಂ ಕೋರ್ಟ್‌ನ ಬಾಬರಿ ಮಸೀದಿ ತೀರ್ಪಿನ ವಿರುದ್ಧ ಭಿನ್ನಾಭಿಪ್ರಾಯ ವ್ಯಕ್ತಪಡಿಸುವ ಪೋಸ್ಟರ್‌ಗಳನ್ನು ಹಾಕಿದ್ದ ಆರೋಪದ ಮೇಲೆ 13 ಜನರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ಸರ್ಕಾರದ ಅಥವಾ ನ್ಯಾಯಾಲಯದ...

ಯುಪಿ ಎಂಎಲ್‌ಸಿ ಚುನಾವಣೆ: ‘ಕಳ್ಳಮತದಾನ’ ಹಾಗೂ ‘ಬೂತ್ ಕ್ಯಾಪ್ಚರಿಂಗ್’ ರಂಪಾಟ; ಬಿಜೆಪಿ ನಾಯಕರು ಹಾಗೂ ಅಧಿಕಾರಿಗಳ ವಿರುದ್ಧ ಎಸ್‌ಪಿ ಗಂಭೀರ ಆರೋಪ!

ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಎಂಎಲ್‌ಸಿ (ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳ) ಚುನಾವಣೆಯ ಮತದಾನದ ವೇಳೆ ಆಡಳಿತಾರೂಢ ಬಿಜೆಪಿ ನಾಯಕರು ಮತ್ತು ಸರ್ಕಾರಿ ಅಧಿಕಾರಿಗಳು ಸಾಲು ಸಾಲು ಚುನಾವಣಾ ಅಕ್ರಮಗಳಲ್ಲಿ ಭಾಗಿಯಾಗಿದ್ದಾರೆ ಎಂಬ...

ತಮಿಳುನಾಡು| ದಲಿತ ವಿದ್ಯಾರ್ಥಿ ಸಾವು; ಶಾಲೆಯಲ್ಲಿ ಜಾತಿ ತಾರತಮ್ಯ ಎಂದು ಆರೋಪಿಸಿದ ಪೋಷಕರು

ತಮಿಳುನಾಡಿನ ಕೊಯಮತ್ತೂರಿನಲ್ಲಿ 11ನೇ ತರಗತಿಯ ದಲಿತ ವಿದ್ಯಾರ್ಥಿಯೊಬ್ಬ ಶಾಲೆಯ ಪೂಜಾ ರಜೆ ಮುಗಿಸಿ ಮರಳಿ ಶಾಲೆಗೆ ತೆರಳಿದ ದಿನವೇ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಶಾಲೆಯಲ್ಲಿ ತನ್ನ ಮಗ ಜಾತಿ ಆಧಾರಿತ ತಾರತಮ್ಯವನ್ನು ಎದುರಿಸುತ್ತಿದ್ದ...

ಅರುಣಾಚಲ ಪ್ರದೇಶದಲ್ಲಿ ಚೀನಾ ಜೊತೆ ಮುಂದುವರಿದ ಮುಖಾಮುಖಿ: ಮೋದಿ ಸರ್ಕಾರದ ‘ಕಿವುಡಗೊಳಿಸುವ ಮೌನ’ವನ್ನು ಟೀಕಿಸಿದ ಕಾಂಗ್ರೆಸ್

ನವದೆಹಲಿ: ಅರುಣಾಚಲ ಪ್ರದೇಶದ ಗಡಿಯಲ್ಲಿ ಚೀನಾದ ಸೈನಿಕರೊಂದಿಗೆ ಹಲವು ಸ್ಥಳಗಳಲ್ಲಿ ಮುಖಾಮುಖಿ ಮುಂದುವರಿದಿದೆ ಎಂಬ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ) ಮಹಾನಿರ್ದೇಶಕ ಶತ್ರುಜೀತ್ ಕಪೂರ್ ಅವರ ಹೇಳಿಕೆಯ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ...

ಅರುಣಾಚಲದಲ್ಲಿ ಚೀನಾ ಒಳನುಗ್ಗುವಿಕೆ ದೃಢ: ಬ್ರಿಕ್ಸ್ ಸಮಯದಲ್ಲೂ ಮುಂದುವರಿದಿತ್ತು ಗಡಿ ಬಿಕ್ಕಟ್ಟು; ಐಟಿಬಿಪಿ ಡಿಜಿ ಹೇಳಿಕೆಯಿಂದ ಕೇಂದ್ರ ಸರ್ಕಾರದ ಮೌನ ಬಟಾಬಯಲು!

ಭಾರತ ಮತ್ತು ಚೀನಾ ಗಡಿಯ ನೈಜ ಪರಿಸ್ಥಿತಿಯ ಕುರಿತು ಕೇಂದ್ರ ಸರ್ಕಾರವು ಬಿಂಬಿಸುತ್ತಾ ಬಂದಿರುವ ಸಮಾಧಾನಕರ ಚಿತ್ರಣದ ರಾಜತಾಂತ್ರಿಕ ಧೋರಣೆಯ ವಿರುದ್ಧ ಗಂಭೀರ ಪ್ರಶ್ನೆಗಳು ಎದ್ದಿವೆ. ಅರುಣಾಚಲ ಪ್ರದೇಶದ ಗಡಿ ಭಾಗಗಳಲ್ಲಿ ಚೀನಾ...