Homeಮುಖಪುಟಉತ್ತರ ಪ್ರದೇಶ: ಡೆಂಗ್ಯೂಗೆ ಬಲಿಯಾದವರ ಸಂಖ್ಯೆ 60 ಕ್ಕೆ ಏರಿಕೆ

ಉತ್ತರ ಪ್ರದೇಶ: ಡೆಂಗ್ಯೂಗೆ ಬಲಿಯಾದವರ ಸಂಖ್ಯೆ 60 ಕ್ಕೆ ಏರಿಕೆ

- Advertisement -
- Advertisement -

ಉತ್ತರ ಪ್ರದೇಶದಲ್ಲಿ ಡೆಂಗ್ಯೂಗೆ ಇನ್ನೂ ಎರಡು ಸಾವುಗಳು ಸಂಭವಿಸಿದ್ದು, ಜಿಲ್ಲೆಯಲ್ಲಿ ವೈರಲ್ ಜ್ವರದಿಂದ ಸಾವಿಗೀಡಾದವರ ಸಂಖ್ಯೆ 60 ಕ್ಕೆ ಏರಿದೆ ಎಂದು ಫಿರೋಜಾಬಾದ್ ಅಧಿಕಾರಿಗಳು ತಿಳಿಸಿದ್ದಾರೆ.

ಸೋಮವಾರ 14 ವರ್ಷದ ಬಾಲಕಿಯೊಬ್ಬರು ವೈದ್ಯಕೀಯ ಕಾಲೇಜಿನಲ್ಲಿ ಸಾವನ್ನಪ್ಪಿದ್ದಾರೆ. ಜೊತೆಗೆ ಒಂದು ಮಗು ಕೂಡ ಡೆಂಗ್ಯೂಗೆ ಬಲಿಯಾಗಿದೆ ಎಂದು ಆರೋಗ್ಯ ವಿಭಾಗದ ಹೆಚ್ಚುವರಿ ನಿರ್ದೇಶಕ ಎ. ಕೆ ಸಿಂಗ್ ಮಾಹಿತಿ ನೀಡಿದ್ದಾರೆ.

ಬಾಲಕಿಯ ಸಾವಿನ ನಂತರ, ಆಕೆಯ ಸಹೋದರಿ ವಿಭಾಗೀಯ ಆಯುಕ್ತ ಅಮಿತ್ ಗುಪ್ತಾ ಅವರ ವಾಹನದ ಮುಂದೆ ಕುಳಿತು ಆಕೆಯನ್ನು ಬದುಕಿಸುವಂತೆ ಬೇಡುತ್ತಿದ್ದ ದೃಶ್ಯ ನೆರೆದಿದ್ದವರ ಮನ ಕಲಕುವಂತಿತ್ತು. ಬಳಿಕ ಆಡಳಿತ ಅಧಿಕಾರಿಗಳು ಆಕೆಗೆ ಪರಿಸ್ಥಿತಿಯನ್ನು ವಿವರಿಸಿ ಸಮಾಧಾನಗೊಳಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ಯುಪಿ: 3 ಗಂಟೆ ಕಾದರೂ ದಾಖಲಿಸದ ಆಸ್ಪತ್ರೆ, ಹೆತ್ತವರ ಕಣ್ಣು ಮುಂದೆ 5 ವರ್ಷದ ಬಾಲಕಿ ಸಾವು

ಇನ್ನುಕೊರೊನಾ ಸಾಂಕ್ರಾಮಿಕದ ನಡುವೆ ಹಬ್ಬುತ್ತಿರುವ ಡೆಂಗ್ಯೂ, ವೈರಲ್ ಜ್ವರದ ಲಾಭ ಪಡೆಯುತ್ತಿರುವ ಆಸ್ಪತ್ರೆಗಳು ಅಧಿಕ ಶುಲ್ಕಾ ವಿಧಿಸುತ್ತಿರುವ ಕುರಿತು ಹಲವು ವರದಿಗಳು ಪ್ರಕಟವಾಗಿದ್ದವು. ಹೀಗಾಗಿ ಆಸ್ಪತ್ರೆಗಳು ತೆಗೆದುಕೊಳ್ಳಬೇಕಾದ ದರಗಳ ಕುರಿತು ಮಾರ್ಗಸೂಚಿಗಳನ್ನು ನೀಡಲಾಗಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಚಂದ್ರ ವಿಜಯ್ ಸಿಂಗ್ ಹೇಳಿದ್ದಾರೆ.

ಆಗ್ರಾದಿಂದ 50 ಕಿಮೀ ಮತ್ತು ಲಕ್ನೋದಿಂದ 320 ಕಿಮೀ ದೂರದಲ್ಲಿರುವ ಫಿರೋಜಾಬಾದ್‌ನಲ್ಲಿ ಕಳೆದ ಮೂರು ವಾರಗಳಿಂದ ಡೆಂಗ್ಯೂ ಮತ್ತು ಮಾರಣಾಂತಿಕ ನಿಗೂಢ ವೈರಲ್ ಜ್ವರದಿಂದ ಜನ ಬಳಲುತ್ತಿದ್ದಾರೆ. ಇದರಲ್ಲಿ ಹೆಚ್ಚಿಗೆ ಮಕ್ಕಳು ಸಾವನ್ನಪ್ಪಿದ್ದಾರೆ.

ಫಿರೋಜಾಬಾದ್‌ ಜೊತೆಗೆ ನೆರೆಯ ಮಥುರಾ, ಆಗ್ರಾ ಮತ್ತು ಮೈನ್‌ಪುರಿಯಲ್ಲಿಯೂ ಹಲವು ಪ್ರಕರಣಗಳು ವರದಿಯಾಗುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಡೆಂಗ್ಯೂ ಜ್ವರ ಬಂದ ತಮ್ಮ ಐದು ವರ್ಷದ ಮಗಳನ್ನು ಎತ್ತಿಕೊಂಡು ಆಸ್ಪತ್ರೆಯೊಳಗೆ ಮೂರು ಗಂಟೆ ಅಲೆದಾಡಿದರೂ, ಚಿಕಿತ್ಸೆ ಸಿಗದೆ ಹೆತ್ತರವರ ಕಣ್ಣ ಮುಂದೆಯೆ ಬಾಲಕಿ ಮೃತಪಟ್ಟಿರುವ ಘಟನೆ ಸೋಮವಾರ ನಡೆದಿತ್ತು.

ಡೆಂಗ್ಯೂ ಬಗ್ಗೆ ಉತ್ತರ ಪ್ರದೇಶ ಸರ್ಕಾರ ಕಳಪೆಯಾಗಿ ನಿರ್ವಹಣೆ ಮಾಡಿರುವುದರ ವಿರುದ್ದ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಳೆದ ವಾರವಷ್ಟೇ ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾದ ವ್ಯವಸ್ಥೆಗಳ ಕೊರತೆಯಿಂದ ಅನೇಕ ರೋಗಿಗಳು ಸಾಯುತ್ತಿದ್ದಾರೆ ಎಂದು ಆರೋಪಿಸಿದ್ದರು.


ಇದನ್ನೂ ಓದಿ: ಉತ್ತರ ಪ್ರದೇಶ: ಫಿರೋಜಾಬಾದ್‌ನಲ್ಲಿ ಶಂಕಿತ ಡೆಂಗ್ಯೂಗೆ 45 ಮಕ್ಕಳು ಸೇರಿ 53 ಮಂದಿ ಬಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...