Homeಮುಖಪುಟಉತ್ತರ ಪ್ರದೇಶ: ಮೋದಿ ರ್‍ಯಾಲಿಗೆ ಜನ ಸೇರಿಸಲು ಸರ್ಕಾರಿ ಇಲಾಖೆಗಳಿಗೆ ಜಿಲ್ಲಾಡಳಿತದ ಸೂಚನೆ

ಉತ್ತರ ಪ್ರದೇಶ: ಮೋದಿ ರ್‍ಯಾಲಿಗೆ ಜನ ಸೇರಿಸಲು ಸರ್ಕಾರಿ ಇಲಾಖೆಗಳಿಗೆ ಜಿಲ್ಲಾಡಳಿತದ ಸೂಚನೆ

- Advertisement -
- Advertisement -

ಉತ್ತರ ಪ್ರದೇಶದ ಕಾನ್ಪುರ ಜಿಲ್ಲೆಯಲ್ಲಿ ಇಂದು ಪ್ರಧಾನಿ ಮೋದಿ, ಮೆಟ್ರೋ ರೈಲು ಯೋಜನೆಯ ಉದ್ಘಾಟನೆ ನಡೆಸಿದ್ದಾರೆ. ಇದಾದ ನಂತರ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿಯವರ ರ್‍ಯಾಲಿಗೆ ಸುಮಾರು 75,000 ಜನರನ್ನು ಕರೆತರುವಂತೆ ಸಕಾರಿ ಇಲಾಖೆಗಳಿಗೆ ಜಿಲ್ಲಾಡಳಿತ ಅಧಿಕೃತ ಸೂಚನೆ ನೀಡಿರುವುದಾಗಿ ಡೆಕನ್ ಹೆರಾಲ್ಡ್ ವರದಿ ಮಾಡಿದೆ.

ರ್‍ಯಾಲಿಯಲ್ಲಿ ಭಾಗವಹಿಸಲು ಕೇಂದ್ರ ಯೋಜನೆಗಳ ಸುಮಾರು 75,000 ಫಲಾನುಭವಿಗಳನ್ನು ಕರೆತರುವಂತೆ ಸರ್ಕಾರಿ ಇಲಾಖೆಗಳಿಗೆ ಕಾನ್ಪುರ ಜಿಲ್ಲಾಡಳಿತ ಸೂಚನೆ ನೀಡಿದೆ.

ವೈದ್ಯಕೀಯ ಮತ್ತು ಆರೋಗ್ಯ, ಆಹಾರ ಮತ್ತು ನಾಗರಿಕ ಸರಬರಾಜು, ತೋಟಗಾರಿಕೆ, ಸಮಾಜ ಕಲ್ಯಾಣ, ಕಾರ್ಮಿಕ, ಗ್ರಾಮೀಣಾಭಿವೃದ್ಧಿ ಮತ್ತು ಇತರ ಇಲಾಖೆಗಳಿಗೆ ಸುತ್ತೋಲೆ ಕಳುಹಿಸಲಾಗಿದೆ.

ಇದನ್ನೂ ಓದಿ: ಚಂಡೀಗಢ ಚುನಾವಣೆ: ವಿವಾದಿತ ಕೃಷಿ ಕಾಯ್ದೆಗಳ ರದ್ದುಗೊಳಿಸಿದ ಬಳಿಕ ಬಿಜೆಪಿಗೆ ಮೊದಲ ಮುಖಭಂಗ

ಅಂಗನವಾಡಿ, ಆಶಾ ಹಾಗೂ ಪಂಚಾಯತ್‌ ಕಾರ್ಯಕರ್ತೆಯರು ಕಡ್ಡಾಯವಾಗಿ ಹಾಜರಿರುವಂತೆ ಪ್ರಕಟಣೆಯಲ್ಲಿ ಸೂಚಿಸಲಾಗಿದೆ. ರ್‍ಯಾಲಿಗೆ ಬರಲಿರುವ 75,000 ಜನರಿಗೂ ಸಾರಿಗೆ, ಆಹಾರ ಮತ್ತು ವಸತಿಗೆ ವ್ಯವಸ್ಥೆ ಮಾಡುವಂತೆಯೂ ಹೇಳಲಾಗಿದೆ. ಈ ಜನರನ್ನು ರ್‍ಯಾಲಿ ಸ್ಥಳಕ್ಕೆ ಕರೆದೊಯ್ಯಲು 2,000 ಕ್ಕೂ ಹೆಚ್ಚು ಯುಪಿಯ ಸರ್ಕಾರಿ ರಸ್ತೆಗಳು ಮತ್ತು ಖಾಸಗಿ ಬಸ್‌ಗಳನ್ನು ನಿಯೋಜಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

ಇದಕ್ಕೂ ಮೊದಲು, ಪ್ರಯಾಗ್‌ರಾಜ್‌ನಲ್ಲಿ ಜಿಲ್ಲಾಡಳಿತವು ‘ಶಿಕ್ಷಾ ಮಿತ್ರರು’ (ತಾತ್ಕಾಲಿಕ ಪ್ರಾಥಮಿಕ ಶಿಕ್ಷಕರು) ಮತ್ತು ವಿವಿಧ ಸರ್ಕಾರಿ ಇಲಾಖೆಗಳ ನೌಕರರಿಗೆ ಭಾನುವಾರ ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಸಭೆಗೆ ಹಾಜರಾಗುವಂತೆ ಸೂಚಿಸಿತ್ತು.

ಈ ಹಿಂದೆಯೂ ಸಹ ರಾಜ್ಯದ ವಿವಿಧ ಭಾಗಗಳಲ್ಲಿ ನಡೆದ ಪ್ರಧಾನಿ ಮೋದಿ ಅವರ ರ್‍ಯಾಲಿಗಳಿಗೆ ಸರ್ಕಾರಿ ಬಸ್‌ಗಳಲ್ಲಿ ಜನರನ್ನು ಕರೆದೊಯ್ಯುಲಾಗಿತ್ತು ಎಂಬ ವರದಿಗಳಿವೆ. ಪಕ್ಷದ ಪ್ರಾಯೋಜಿತ ರ್‍ಯಾಲಿಗಳಿಗೆ ಸರ್ಕಾರಿ ಯಂತ್ರವನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ ಎಂದು ಪ್ರತಿಪಕ್ಷಗಳು ಬಿಜೆಪಿಯನ್ನು ಕಟುವಾಗಿ ಟೀಕಿಸಿವೆ.


ಇದನ್ನೂ ಓದಿ: ಆರೋಗ್ಯ ಸೂಚ್ಯಂಕದಲ್ಲಿ ಕೇರಳ ಅತ್ಯುತ್ತಮ ರಾಜ್ಯ, ಉತ್ತರ ಪ್ರದೇಶಕ್ಕೆ ಕಡೆಯ ಸ್ಥಾನ: ನೀತಿ ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...