Homeಮುಖಪುಟಯುಪಿ ಚುನಾವಣೆ: ಪ್ರಚೋದನಾಕಾರಿ ಭಾಷಣ ಮಾಡಿದ ಬಿಜೆಪಿ ಅಭ್ಯರ್ಥಿ ವಿರುದ್ಧ ಪ್ರಕರಣ

ಯುಪಿ ಚುನಾವಣೆ: ಪ್ರಚೋದನಾಕಾರಿ ಭಾಷಣ ಮಾಡಿದ ಬಿಜೆಪಿ ಅಭ್ಯರ್ಥಿ ವಿರುದ್ಧ ಪ್ರಕರಣ

- Advertisement -
- Advertisement -

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುತ್ತಿರುವ ಬಿಜೆಪಿಯ ಮಿರನ್‌ಪುರ ಅಭ್ಯರ್ಥಿ ಚುನಾವಣಾ ಸಭೆಯಲ್ಲಿ ಪ್ರಚೋದನಕಾರಿ ಭಾಷಣ ಮತ್ತು ಪ್ರಚಾರದಲ್ಲಿ ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ದೂರು ದಾಖಲಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಮಿರನ್‌ಪುರ ಬಿಜೆಪಿ ಅಭ್ಯರ್ಥಿ ಪರ್ಶಾಂತ್ ಗುಜ್ಜರ್ ಮತ್ತು ಅವರ 40 ಬೆಂಬಲಿಗರ ಮೇಲೆ ಭಾನುವಾರ ಅನುಮತಿಯಿಲ್ಲದೆ ಸಭೆ ನಡೆಸಿದ್ದಕ್ಕಾಗಿ ಪ್ರಕರಣ ದಾಖಲಿಸಲಾಗಿದೆ ಎಂದು ಕಾಕ್ರೋಲಿ ಸ್ಟೇಷನ್ ಹೌಸ್ ಆಫೀಸರ್ (ಎಸ್‌ಎಚ್‌ಒ) ಸುನೀಲ್ ಶರ್ಮಾ ತಿಳಿಸಿದ್ದಾರೆ.

ಕೋವಿಡ್ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಚುನಾವಣಾ ಆಯೋಗವು ಎಲ್ಲಾ ರೀತಿಯ ದೈಹಿಕ ಚುನಾವಣಾ ಸಾರ್ವಜನಿಕ ಸಭೆಗಳು ಮತ್ತು ರ್‍ಯಾಲಿಗಳನ್ನು ನಿಷೇಧಿಸಿದ್ದರೂ ಸಹ ಸಭೆ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿ: ಬಿಹಾರ: ಮಕ್ಕಳನ್ನು ಓಡಿಸಲು ಗುಂಡು ಹಾರಿಸಿದ ಬಿಜೆಪಿ ಶಾಸಕನ ಮಗನಿಗೆ ಗ್ರಾಮಸ್ಥರಿಂದ ಥಳಿತ

ಬಿಜೆಪಿ ಹಿಂದೂಗಳದ್ದು. ವಿರೋಧ ಪಕ್ಷವಾದ ಸಮಾಜವಾದಿ ಪಕ್ಷ (ಎಸ್‌ಪಿ) ಮುಸ್ಲಿಮರ ಪಕ್ಷವಾಗಿರುವುದರಿಂದ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವಂತೆ ಚೋರವಾಲಾ ಗ್ರಾಮದ ಜನರಿಗೆ ಬಿಜೆಪಿ ಅಭ್ಯರ್ಥಿ ಪರ್ಶಾಂತ್ ಗುಜ್ಜರ್ ಅವರು ಮನವಿ ಮಾಡಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವೀಡಿಯೊದ ತನಿಖೆಯ ನಂತರ ಗುಜ್ಜರ್ ಮತ್ತು ಅವರ ಬೆಂಬಲಿಗರ ಮೇಲೆ ಪ್ರಕರಣ ದಾಖಲಿಸಲಾಗಿದೆ. ಈ ಚುನಾವಣಾ ಸಭೆಯನ್ನು ಜಿಲ್ಲಾ ಅಧಿಕಾರಿಗಳ ಅನುಮತಿಯಿಲ್ಲದೆ ಮತ್ತು ಇಸಿ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಆಯೋಜಿಸಲಾಗಿದೆ ಎಂದು ಸುನೀಲ್ ಶರ್ಮಾ ಹೇಳಿದ್ದಾರೆ.

ಅಭ್ಯರ್ಥಿ ಪರ್ಶಾಂತ್ ಗುಜ್ಜರ್ ಮತ್ತು ಅವರ 40 ಬೆಂಬಲಿಗರ ವಿರುದ್ಧ ಜನತಾ ಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್ 125 (ಚುನಾವಣೆಗೆ ಸಂಬಂಧಿಸಿದಂತೆ ವರ್ಗಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), ಸಾಂಕ್ರಾಮಿಕ ರೋಗಗಳ ಕಾಯ್ದೆಯ ಸೆಕ್ಷನ್ 3 ಮತ್ತು ವಿಪತ್ತು ನಿರ್ವಹಣಾ ಕಾಯ್ದೆಯ ಸೆಕ್ಷನ್ 51 ರ ಅಡಿಯಲ್ಲಿ ಮತ್ತು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 188 (ಸಾರ್ವಜನಿಕ ಸೇವಕರು ಸರಿಯಾಗಿ ಘೋಷಿಸಿದ ಆದೇಶಕ್ಕೆ ಅವಿಧೇಯತೆ) ಮತ್ತು ಸೆಕ್ಷನ್ 269, 270, 505(2) ಮತ್ತು 171 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಶರ್ಮಾ ಹೇಳಿದ್ದಾರೆ.

ಏಳು ಹಂತಗಳಲ್ಲಿ ನಡೆಯಲಿರುವ ಉತ್ತರ ಪ್ರದೇಶ ಚುನಾವಣೆಗಳಲ್ಲಿ ಮಿರನ್‌ಪುರ ವಿಧಾನಸಭಾ ಕ್ಷೇತ್ರಕ್ಕೆ ಫೆಬ್ರವರಿ 10 ರಂದು ಮತದಾನ ನಡೆಯಲಿದೆ.


ಇದನ್ನೂ ಓದಿ: ಉತ್ತರ ಪ್ರದೇಶ ಚುನಾವಣೆ: ಬಿಜೆಪಿ ಶಾಸಕರನ್ನು ಬೆನ್ನಟ್ಟಿ ಸ್ವಕ್ಷೇತ್ರದಿಂದ ಓಡಿಸಿದ ಜನತೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಧಾನಿ ಮೋದಿ ಜನರನ್ನು ಪ್ರಚೋದಿಸುತ್ತಿದ್ದಾರೆ, ಚುನಾವಣಾ ಆಯೋಗ ಕ್ರಮ ಕೈಗೊಳ್ಳಬೇಕು: ಮಲ್ಲಿಕಾರ್ಜುನ ಖರ್ಗೆ

0
'ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷ ಅಧಿಕಾರಕ್ಕೆ ಬಂದರೆ ಅಯೋಧ್ಯೆಯ ರಾಮಮಂದಿರದ ಮೇಲೆ ಬುಲ್ಡೋಜರ್ ಹರಿಸಲಿದೆ' ಎಂದು ಹೇಳುವ ಮೂಲಕ ಪ್ರಧಾನಿ ಮೋದಿ ಜನರನ್ನು ಪ್ರಚೋದಿಸುವ ಕೆಲಸ ಮಾಡುತ್ತಿದ್ದಾರೆ. ಅವರ ವಿರುದ್ಧ ಚುನಾವಣಾ ಆಯೋಗ...