Homeಮುಖಪುಟಉತ್ತರ ಪ್ರದೇಶ ಚುನಾವಣೆ: ಬಿಜೆಪಿ ಶಾಸಕರನ್ನು ಬೆನ್ನಟ್ಟಿ ಸ್ವಕ್ಷೇತ್ರದಿಂದ ಓಡಿಸಿದ ಜನತೆ

ಉತ್ತರ ಪ್ರದೇಶ ಚುನಾವಣೆ: ಬಿಜೆಪಿ ಶಾಸಕರನ್ನು ಬೆನ್ನಟ್ಟಿ ಸ್ವಕ್ಷೇತ್ರದಿಂದ ಓಡಿಸಿದ ಜನತೆ

- Advertisement -
- Advertisement -

ಮುಂಬರುವ ಉತ್ತರ ಪ್ರದೇಶದ ಚುನಾವಣಾ ಕಣ ದಿನ ದಿನಕ್ಕೂ ರಂಗೇರುತ್ತಿದ್ದು, ಪಕ್ಷದ ಪರ ಪ್ರಚಾರದಲ್ಲಿ ತೊಡಗಿರುವ ಬಿಜೆಪಿ ಶಾಸಕರನ್ನು ಅವರ ಸ್ವಂತ ಕ್ಷೇತ್ರ ಮುಜಾಫರ್‌ನಗರದ ಗ್ರಾಮಸ್ಥರು ಓಡಿಸಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಬಿಜೆಪಿ ಶಾಸಕ ಮತ್ತು ಮುಜಾಫರ್‌ನಗರದ ಖತೌಲಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ವಿಕ್ರಮ್ ಸೈನಿ ಅವರು ತಮ್ಮ ಪ್ರದೇಶದ ಮಾನವ್‌ವರ್‌ಪುರ ಗ್ರಾಮದಲ್ಲಿ ಸಭೆಗೆ ಆಗಮಿಸಿದ್ದರು. ಈ ವೇಳೆ ಶಾಸಕರ ವಿರುದ್ಧ ಅಸಮಾಧಾನ ಹೊರ ಹಾಕಿದ ಗ್ರಾಮಸ್ಥರು, ಶಾಸಕರನ್ನು ಇಲ್ಲಿಂದ ಹೊರಟು ಹೋಗುವಂತೆ ಎಚ್ಚರಿಸಿ ಬೆನ್ನಟ್ಟಿ ಓಡಿಸಿದ್ದಾರೆ.

ವೈರಲ್ ವೀಡಿಯೊದಲ್ಲಿ, ಗ್ರಾಮಸ್ಥರ ಗುಂಪು ಶಾಸಕ ವಿಕ್ರಮ್ ಸಿಂಗ್ ಸೈನಿಯನ್ನು ಅವರ ಕಾರಿನವರೆಗೆ ಹಿಂಬಾಲಿಸುತ್ತದೆ. ಅವರು ಕಾರು ಹತ್ತುತ್ತಿದ್ದಂತೆ ಗ್ರಾಮಸ್ಥರು ಶಾಸಕರ ವಿರುದ್ಧ ಘೋಷಣೆ ಕೂಗುತ್ತಿರುವುದು ಕೇಳಿಬರುತ್ತಿದೆ. ಜೊತೆಗೆ ಇಲ್ಲಿಂದ ಹೊರಟು ಹೋಗುವಂತೆ ಘೋಷಣೆ ಮತ್ತು ಸನ್ನೆಗಳ ಮೂಲಕ ತಿಳಿಸುತ್ತದೆ.

ಇದನ್ನೂ ಓದಿ: ಯುಪಿ: ಹಿಂದುತ್ವದ ಐಕಾನ್‌ ಆಗಿದ್ದ ಯೋಗಿ ತಮ್ಮ ಚರಿಷ್ಮಾ ಕಳೆದುಕೊಂಡಿದ್ದಾರಾ?

ಕಳೆದ ವರ್ಷ ವಿವಾದಿತ ಕೃಷಿ ಕಾನೂನುಗಳ ವಿರುದ್ಧ ನಡೆದ ರೈತರ ಒಂದು ವರ್ಷದ ಪ್ರತಿಭಟನೆಯ ಕಿಚ್ಚು ಇನ್ನು ರೈತರಲ್ಲಿ ಆರಿಲ್ಲ. ಈ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರ ವಿರುದ್ಧ ಅಸಮಾಧಾನ ಹೊರಹಾಕುತ್ತಲೇ ಇದ್ದಾರೆ.

ಇದಕ್ಕೆ ಪ್ರತಿಕ್ರಿಯೆಯಾಗಿ, ಶಾಸಕ ಸೈನಿ ಅವರು ತಮ್ಮ ಕೈಗಳನ್ನು ಮುಗಿದು ರೈತರ ಬಳಿ ಕ್ಷಮೆ ಕೇಳಿ ಕಾರಿನಲ್ಲಿ ಹೊರಟು ಹೋಗಿದ್ದಾರೆ.

ಶಾಸಕ ವಿಕ್ರಮ್ ಸೈನಿ ಹಲವು ಬಾರಿ ಉದ್ರೇಕಕಾರಿ ಹೇಳಿಕೆಗಳನ್ನು ನೀಡಿದ್ದಾರೆ. 2019 ರಲ್ಲಿ, ಭಾರತದಲ್ಲಿ ಅಸುರಕ್ಷಿತ ಎಂದು ಭಾವಿಸುವವರಿಗೆ “ಬಾಂಬ್” ಹಾಕುವುದಾಗಿ ಬೆದರಿಕೆ ಹಾಕಿದ್ದರು. ಅದಕ್ಕೂ ಹಿಂದೆ “ನಮ್ಮ ದೇಶವನ್ನು ಹಿಂದೂಸ್ತಾನ್ ಎಂದು ಕರೆಯಲಾಗುತ್ತದೆ, ಅಂದರೆ ಹಿಂದೂಗಳ ರಾಷ್ಟ್ರ” ಎಂದು ಹೇಳಿದ್ದರು. ಗೋಹತ್ಯೆ ಮಾಡುವವರ ಕೈಕಾಲು ಮುರಿಯುವುದಾಗಿಯೂ ಬೆದರಿಕೆ ಹಾಕಿದ್ದಾರೆ.

ಚುನಾವಣೆಗೂ ಮುನ್ನವೇ ಅಭ್ಯರ್ಥಿಗಳು ಹಾಗೂ ಮುಖಂಡರಿಗೆ ಮತದಾರರು ವಿರೋಧ ವ್ಯಕ್ತಪಡಿಸುತ್ತಿರುವ ಪ್ರಕರಣಗಳು ಮುನ್ನೆಲೆಗೆ ಬಂದಿವೆ. ಇತ್ತೀಚೆಗೆ, ಬಿಜೆಪಿ ಪಕ್ಷದ 200 ಬೂತ್ ಅಧ್ಯಕ್ಷರು ಸೇರಿದಂತೆ ಹೆಚ್ಚಿನ ಸಂಖ್ಯೆಯ ಕಾರ್ಯಕರ್ತರು ಪಕ್ಷವನ್ನು ತೊರೆದಿದ್ದಾರೆ.

ಉತ್ತರ ಪ್ರದೇಶದಲ್ಲಿ ಫೆಬ್ರವರಿ 10 ರಿಂದ ಏಳು ಹಂತಗಳಲ್ಲಿ ಮತದಾನ ನಡೆಯಲಿದ್ದು, ಮಾರ್ಚ್ 10 ರಂದು ಫಲಿತಾಂಶ ಪ್ರಕಟವಾಗಲಿದೆ.


ಇದನ್ನೂ ಓದಿ: ಯುಪಿ ಚುನಾವಣೆ-2022: ಏಕಾಂಗಿ ಸ್ಪರ್ಧೆ ಎಂದ ಭೀಮ್‌ ಆರ್ಮಿ ಮುಖ್ಯಸ್ಥ ಚಂದ್ರಶೇಖರ್‌ ಆಜಾದ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...