Homeಮುಖಪುಟಯುಪಿ ಚುನಾವಣೆ: ಬಿಎಸ್‌ಪಿ ಅಭ್ಯರ್ಥಿಗಳ 2ನೇ ಪಟ್ಟಿಯಲ್ಲಿ ಅಲ್ಪಸಂಖ್ಯಾತರ ಮೇಲಗೈ

ಯುಪಿ ಚುನಾವಣೆ: ಬಿಎಸ್‌ಪಿ ಅಭ್ಯರ್ಥಿಗಳ 2ನೇ ಪಟ್ಟಿಯಲ್ಲಿ ಅಲ್ಪಸಂಖ್ಯಾತರ ಮೇಲಗೈ

- Advertisement -
- Advertisement -

ಉತ್ತರ ಪ್ರದೇಶದಲ್ಲಿ ಮುಂದಿನ ತಿಂಗಳು ಫೆಬ್ರವರಿ 14 ರಂದು ನಡೆಯಲಿರುವ ಎರಡನೇ ಹಂತದ ಚುನಾವಣೆಗೆ ಬಿಎಸ್‌ಪಿ ವರಿಷ್ಠೆ ಮಾಯಾವತಿ ಅವರು 51 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಶನಿವಾರ ಬಿಡುಗಡೆ ಮಾಡಿದ್ದಾರೆ. ಇದರಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಹೆಚ್ಚಿನ ಪ್ರಾಮುಖ್ಯತೆ.

ಬಿಎಸ್‌ಪಿಯ ಎರಡನೇ ಪಟ್ಟಿಯಲ್ಲಿ ಮುಸ್ಲಿಂ ಸಮುದಾಯದಿಂದ 23, ಪರಿಶಿಷ್ಟ ಜಾತಿಯಿಂದ 10, ಒಬಿಸಿಯಿಂದ 12, ಇಬ್ಬರು ಬ್ರಾಹ್ಮಣರು ಮತ್ತು ಇತರ ನಾಲ್ವರು ಅಭ್ಯರ್ಥಿಗಳು ಸೇರಿದ್ದಾರೆ.

ಫೆಬ್ರವರಿ 14 ರಂದು ಎರಡನೇ ಹಂತದಲ್ಲಿ ಒಟ್ಟು 55 ಸ್ಥಾನಗಳಿಗೆ ಮತದಾನ ನಡೆಯಲಿದೆ. ಉಳಿದ ನಾಲ್ಕು ಹೆಸರುಗಳನ್ನು ಪಕ್ಷವು ಶೀಘ್ರದಲ್ಲೇ ಘೋಷಿಸಲಿದೆ ಎಂದು ಮಾಯಾವತಿ ಹೇಳಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ ಚುನಾವಣೆ: ಬಿಜೆಪಿ ಶಾಸಕರನ್ನು ಬೆನ್ನಟ್ಟಿ ಸ್ವಕ್ಷೇತ್ರದಿಂದ ಓಡಿಸಿದ ಜನತೆ

ಜನವರಿ 15 ರಂದು ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಾಗಿತ್ತು. ಈ ಎರಡನೇ ಪಟ್ಟಿಯಲ್ಲಿ ಸಹರಾನ್‌ಪುರ, ಬಿಜ್ನೋರ್, ಮೊರಾದಾಬಾದ್, ಸಂಭಾಲ್, ರಾಮ್‌ಪುರ್, ಅಮ್ರೋಹಾ, ಬದೌನ್, ಬರೇಲಿ ಮತ್ತು ಷಹಜಹಾನ್‌ಪುರ ಜಿಲ್ಲಾ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಒಳಗೊಂಡಿದೆ.

2007 ರಲ್ಲಿ ಮಾಡಿದ ಪ್ಲ್ಯಾನ್ ಮತ್ತೆ ಮಾಡಲು ಮಾಯಾವತಿ ಪಕ್ಷ ಹೊರಟಿದ್ದು, ಇದುವರೆಗೆ ಮೊದಲ ಎರಡು ಹಂತಗಳಿಗೆ 113 ಅಭ್ಯರ್ಥಿಗಳಲ್ಲಿ 109 ಅಭ್ಯರ್ಥಿಗಳನ್ನು ಘೋಷಿಸಿದೆ. ಎರಡು ಪಟ್ಟಿಗಳ ಅಭ್ಯರ್ಥಿಗಳನ್ನು ಗಮನಿಸಿದರೆ, 2017 ರಲ್ಲಿ ಮಾಡಿದ ಟಿಕೆಟ್ ಹಂಚಿಕೆಯ ಅದೇ ಪ್ರವೃತ್ತಿಯನ್ನು ಅನುಸರಿಸುತ್ತಿದೆ ಎಂಬುದು ಸ್ಪಷ್ಟವಾಗುತ್ತದೆ. ಹಿಂದಿನ ವಿಧಾನಸಭಾ ಚುನಾವಣೆಯಲ್ಲಿ, ಪಕ್ಷವು ಒಟ್ಟು 403 ಅಭ್ಯರ್ಥಿಗಳಲ್ಲಿ ಶೇಕಡಾ 40 ರಷ್ಟು (98) ಮುಸ್ಲಿಂ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿತ್ತು.

ಇದುವರೆಗೆ ಬಹುಜನ ಸಮಾಜ ಪಾರ್ಟಿ ಘೋಷಿಸಲಾದ 109 ಅಭ್ಯರ್ಥಿಗಳಲ್ಲಿ, 41 ಮುಸ್ಲಿಮರು (37.6%), 28 ಒಬಿಸಿಗಳು (25.6%), 18 ಪರಿಶಿಷ್ಟ ಜಾತಿ (16.51), 12 ಬ್ರಾಹ್ಮಣರು (11%) ಮತ್ತು ಇತರ ಒಂಬತ್ತು ಜನರಿಗೆ ಟಿಕೆಟ್ ನೀಡಿದೆ.


ಇದನ್ನೂ ಓದಿ: ವಿಶ್ಲೇಷಣೆ: ಆದಿತ್ಯನಾಥ್‌ ವಿರುದ್ಧ ರಾವಣ್ ಸ್ಪರ್ಧೆಯ ಲೆಕ್ಕಾಚಾರಗಳೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...