Homeಮುಖಪುಟಪ್ರಧಾನಿ, ಯೋಗಿ ಆದಿತ್ಯನಾಥ್ ಪರ ಘೋಷಣೆ ಕೂಗುವಂತೆ ಮಕ್ಕಳಿಗೆ ಸೂಚನೆ : ತನಿಖೆಗೆ ಆದೇಶ

ಪ್ರಧಾನಿ, ಯೋಗಿ ಆದಿತ್ಯನಾಥ್ ಪರ ಘೋಷಣೆ ಕೂಗುವಂತೆ ಮಕ್ಕಳಿಗೆ ಸೂಚನೆ : ತನಿಖೆಗೆ ಆದೇಶ

- Advertisement -
- Advertisement -

ಉತ್ತರ ಪ್ರದೇಶದಲ್ಲಿ ಗಣರಾಜ್ಯೋತ್ಸವದಂದು ಪ್ರಾಂಶುಪಾಲರು ಮತ್ತು ಶಿಕ್ಷಕರ ಸೂಚನೆ ಮೇರೆಗೆ ಶಾಲಾ ಮಕ್ಕಳು ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಶ್ಲಾಘಿಸಿ ಘೋಷಣೆ ಕೂಗಿದ್ದರು. ಈ ಘಟನೆ ಸಂಬಂಧ ಜಿಲ್ಲಾಧಿಕಾರಿಗಳು ತನಿಖೆಗೆ ಆದೇಶಿಸಿದ್ದಾರೆ.

ಸಿದ್ಧಾರ್ಥನಗರ ಜಿಲ್ಲೆಯ ಸೊಹ್ರತ್‌ಗಢ್ ಬ್ಲಾಕ್‌ನಲ್ಲಿರುವ ಪ್ರಾಥಮಿಕ ಶಾಲೆಯಲ್ಲಿ ಗಣರಾಜ್ಯೋತ್ಸವದಂದು ನಡೆದ ಕಾರ್ಯಕ್ರಮದ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ವೀಡಿಯೋದಲ್ಲಿ ವಿದ್ಯಾರ್ಥಿಗಳು ರಾಷ್ಟ್ರಗೀತೆಯನ್ನು ಹಾಡಿದ ನಂತರ ಶಿಕ್ಷಕರ ನಿರ್ದೇಶನದ ಮೇರೆಗೆ ಪ್ರಧಾನಿ ಮೋದಿ ಮತ್ತು ಮುಖ್ಯಮಂತ್ರಿ ಆದಿತ್ಯನಾಥ್ ಅವರ ಹೆಸರಿನಲ್ಲಿ, ಸ್ವಾತಂತ್ರ್ಯ ಹೋರಾಟಗಾರರ ಹೆಸರಿನಲ್ಲಿ ಘೋಷಣೆಗಳನ್ನು ಕೂಗಿದ್ದಾರೆ.

ಇದನ್ನೂ ಓದಿ: ವಿದ್ಯಾರ್ಥಿನಿಯ ಸಾವು ಬಳಸಿಕೊಂಡು ದ್ವೇಷ ರಾಜಕೀಯದ ಆರೋಪ: ಅಣ್ಣಾಮಲೈ ಬಂಧನಕ್ಕೆ ಆಗ್ರಹ

ಇದು ಪ್ರಸ್ತುತ ಚುನಾವಣಾಗೆ ಸಿದ್ಧವಾಗಿರುವ ಉತ್ತರ ಪ್ರದೇಶದಲ್ಲಿ ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ. 

ಘಟನೆ ಬಗ್ಗೆ ಮಾಧ್ಯಮಗಳ ಜೊತೆಗೆ ಮಾತನಾಡಿರುವ ಸಿದ್ಧಾರ್ಥನಗರದ ಜಿಲ್ಲಾಧಿಕಾರಿ ದೀಪಕ್ ಮೀನಾ, ಸಾಮಾಜಿಕ ಜಾಲತಾಣಗಳ ಮೂಲಕ ವಿಡಿಯೋ ಬಗ್ಗೆ ತಿಳಿದಿದೆ ಎಂದಿದ್ದಾರೆ.

“ನಮಗೆ ಘಟನೆ ಬಗ್ಗೆ ತಿಳಿದು ಬಂದಿದೆ. ಅದರ ಬಗ್ಗೆ ತನಿಖೆ ನಡೆಸಲು ಪ್ರಾಥಮಿಕ ಶಿಕ್ಷಣ ಅಧಿಕಾರಿಗೆ (ಬಿಎಸ್ಎ) ನಿರ್ದೇಶನ ನೀಡಿದ್ದೇವೆ. ಯಾರೇ ತಪ್ಪಿತಸ್ಥರೆಂದು ಕಂಡುಬಂದರೂ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು” ಎಂದು ಅವರು ಹೇಳಿದ್ದಾರೆ.


ಇದನ್ನೂ ಓದಿ: ಪೊಲೀಸ್ ಇಲಾಖೆಯಿಂದ ಐಪಿಎಸ್ ಅಧಿಕಾರಿ ರವಿ ಡಿ ಚನ್ನಣ್ಣನವರ್‌ ವರ್ಗಾವಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...