Homeಮುಖಪುಟಯುಪಿ ಚುನಾವಣೆ: ಹೋರಾಟಗಾರರು, ಸಂತ್ರಸ್ತರು ಸೇರಿ 40% ಮಹಿಳೆಯರಿಗೆ ಕಾಂಗ್ರೆಸ್ ಟಿಕೆಟ್

ಯುಪಿ ಚುನಾವಣೆ: ಹೋರಾಟಗಾರರು, ಸಂತ್ರಸ್ತರು ಸೇರಿ 40% ಮಹಿಳೆಯರಿಗೆ ಕಾಂಗ್ರೆಸ್ ಟಿಕೆಟ್

- Advertisement -
- Advertisement -

ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷವು 125 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಗುರುವಾರ (ಜ.13) ಪ್ರಕಟಿಸಿದೆ. ಈ ಪಟ್ಟಿ ಜನರ ಗಮನ ಸೆಳೆಯುತ್ತಿದೆ. ಶೇಕಡಾ 40 ರಷ್ಟು ಮಹಿಳೆಯರು ಮತ್ತು ಶೇಕಡಾ 40 ಯುವಜನತೆ ಪಟ್ಟಿಯಲ್ಲಿ ತುಂಬಿದ್ದಾರೆ. ಆಶಾ ಕಾರ್ಯಕರ್ತೆ, ಸಿಎಎ ಹೋರಾಟಗಾರ್ತಿಯರು, ಅತ್ಯಾಚಾರ ಸಂತ್ರಸ್ತೆಯ ತಾಯಿ, ಬುಡಕಟ್ಟು ಹೋರಾಟಗಾರರು ಈ ಬಾರಿಯ ಯುಪಿ ಕಾಂಗ್ರೆಸ್ ಅಭ್ಯರ್ಥಿಗಳಾಗಿದ್ದಾರೆ.

ಚುನಾವಣೆ ಪಟ್ಟಿ ಬಿಡುಗಡೆಗೆ ಮೊದಲೇ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಭರವಸೆ ನೀಡಿದಂತೆ, ಪಕ್ಷವು 40 % ಮಹಿಳಾ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಮೊದಲ ಪಟ್ಟಿಯಲ್ಲಿ 50 ಮಂದಿ ಮಹಿಳೆಯರಿದ್ದಾರೆ. ಇವರಲ್ಲಿ ಹೆಚ್ಚಿನವರು ಮೊದಲ ಬಾರಿಗೆ ಅಭ್ಯರ್ಥಿಗಳಾಗಿ ಚುನಾವಣೆ ಎದುರಿಸುತ್ತಿದ್ದಾರೆ. ಅವರಲ್ಲಿ ಕೆಲವರ ವಿವರ ಇಲ್ಲಿದೆ.

ಆಶಾ ಸಿಂಗ್, ಉನ್ನಾವೋ ಕ್ಷೇತ್ರ

ಆಶಾ ಸಿಂಗ್, ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ತಾಯಿ. ಉನ್ನಾವೋ ಪ್ರಕರಣದಲ್ಲಿ ಬಿಜೆಪಿಯ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಅತ್ಯಾಚಾರ ಆರೋಪ ಸಾಬೀತಾಗಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದಾರೆ. ಸಂತ್ರಸ್ತೆಯ ತಂದೆಯ ಸಾವಿನ ಪ್ರಕರಣದಲ್ಲಿ ಸೆಂಗಾರ್‌ಗೆ ಶಿಕ್ಷೆ ವಿಧಿಸಲಾಗಿದೆ. 2017 ರ ಈ ದುರ್ಘಟನೆಗೂ ಮುನ್ನ ಆಶಾ ಸಿಂಗ್ ಮನೆಯಿಂದ ಹೊರ ಬಂದವರಲಲ. ಆದರೆ, ಈಗ ತನ್ನ ಮಗಳಿಗೆ ನ್ಯಾಯಕ್ಕಾಗಿ ನಡೆದ ಹೋರಾಟ ತನ್ನ ಜೀವನವನ್ನು ಬದಲಾಯಿಸಿದೆ ಎಂದು ಹೇಳುತ್ತಾರೆ. ನ್ಯಾಯಕ್ಕಾಗಿ ನಡೆಯುತ್ತಿರುವ ತನ್ನ ಅಭಿಯಾನವನ್ನು ಹೆಚ್ಚಿಸಲು ಉನ್ನಾವೊ ಕ್ಷೇತ್ರದಿಂದ ಚುನಾವಣೆ ಎದುರಿಸಲು ಸಿದ್ಧ ಎಂದು ಆಶಾ ಸಿಂಗ್ ಹೇಳಿದ್ದಾರೆ.

ಇದನ್ನೂ ಓದಿ: ಪಂಜಾಬ್: ನಟ ಸೋನು ಸೂದ್‌ ಸಹೋದರಿ ಮಾಳವಿಕಾ ಕಾಂಗ್ರೆಸ್ ಸೇರ್ಪಡೆ

ಪೂನಂ ಪಾಂಡೆ, ಶಹಜಹಾನ್‌ಪುರ ಕ್ಷೇತ್ರ

ಪೂನಂ ಪಾಂಡೆ ಒಬ್ಬ ಆಶಾ ಕಾರ್ಯಕರ್ತೆ. ಕಳೆದ ವರ್ಷ ತಮ್ಮ ಗೌರವಧನವನ್ನು ಹೆಚ್ಚಿಸುವಂತೆ ಒತ್ತಾಯಿಸಿ, ಪೂನಂ ಮತ್ತು ಇತರ ಆಶಾ ಕಾರ್ಯಕರ್ತೆಯರು ಲಕ್ನೋದಲ್ಲಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ನಿವಾಸದ ಕಡೆಗೆ ಮೆರವಣಿಗೆ ನಡೆಸುತ್ತಿದ್ದಾಗ ಪೊಲೀಸರು ಅವರ ಮೇಲೆ ಹಲ್ಲೇ ಮಾಡಿದ್ದರು. ಆಗ ಘಟನೆಯ ವಿಡಿಯೋ ವೈರಲ್ ಆಗಿತ್ತು. ನಂತರ, ಮುಖದ ಮೇಲೆ ಗಾಯದ ಗುರುತುಗಳು ಮತ್ತು ಬಲಗೈಗೆ ಪ್ಲ್ಯಾಸ್ಟೆಡ್ ಮಾಡಿದ ಪೂನಂ, ಇತರ ಆಶಾ ಕಾರ್ಯಕರ್ತೆಯರೊಂದಿಗೆ ಪ್ರಿಯಾಂಕಾ ಗಾಂಧಿಯನ್ನು ಭೇಟಿಯಾಗಿದ್ದರು. ಕಾಂಗ್ರೆಸ್ ಈಗ ಅವರನ್ನು ಶಹಜಾನ್‌ಪುರ ಕ್ಷೇತ್ರದಿಂದ ಕಣಕ್ಕಿಳಿಸಿದೆ.

ಸದಾಫ್ ಜಾಫರ್, ಲಕ್ನೋ ಕೇಂದ್ರ

ನಟಿ, ಹೋರಾಟಗಾರ್ತಿ ಆಗಿರುವ ಸದಾಫ್ ಜಾಫರ್ ಅವರನ್ನು ಡಿಸೆಂಬರ್ 19, 2019 ರಂದು ಲಕ್ನೋದಲ್ಲಿ CAA-NRC ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ ಫೇಸ್‌ಬುಕ್ ಲೈವ್ ಮಾಡುತ್ತಿದ್ದಾಗ ಬಂಧಿಸಲಾಗಿತ್ತು. ಕೊಲೆಯ ಯತ್ನ, ಗಲಭೆ, ಕ್ರಿಮಿನಲ್ ಪಿತೂರಿ, ಸಾರ್ವಜನಿಕ ಸೇವಕನ ಮೇಲೆ ಹಲ್ಲೆ ಇತ್ಯಾದಿ ಆರೋಪಗಳ ಮೇಲೆ ಆಕೆಯನ್ನು ದಾಖಲಿಸಲಾಗಿತ್ತು. ಈಗ ಲಕ್ನೋ ಸೆಂಟ್ರಲ್ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ.

ರಿತು ಸಿಂಗ್, ಮುಹಮ್ಮದಿ ಸ್ಥಾನ, ಲಖಿಂಪುರ ಖೇರಿ

ರಿತು ಸಿಂಗ್ ಮಾಜಿ ಸಮಾಜವಾದಿ ಪಕ್ಷದ ಕಾರ್ಯಕರ್ತೆ. ಅವರು ಪಾಸ್ಗಾವಾನ್ ಬ್ಲಾಕ್‌ನ ಬ್ಲಾಕ್ ಮುಖ್ಯಸ್ಥರ ಹುದ್ದೆಗೆ ಎಸ್‌ಪಿ ಬೆಂಬಲಿತ ಅಭ್ಯರ್ಥಿಯಾಗಿದ್ದರು. ಕಳೆದ ವರ್ಷ ಲಖಿಂಪುರ ಖೇರಿ ಜಿಲ್ಲೆಯಲ್ಲಿ ನಾಮಪತ್ರ ಸಲ್ಲಿಸುವ ತನ್ನ ಪ್ರಯತ್ನವನ್ನು ವಿಫಲಗೊಳಿಸಲು ಕೆಲವು ಬಿಜೆಒಇ ಕಾರ್ಯಕರ್ತರು ಹಲ್ಲೆ ಮಾಡಿದ್ದಾರೆ, ಬಟ್ಟೆ ಹರಿದಿದ್ದಾರೆ ಎಂದು ಆರೋಪಿಸಿದ್ದಾರೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ನಂತರ ಲಕ್ನೋದಲ್ಲಿ ತನ್ನ ಕುಟುಂಬದೊಂದಿಗೆ ಪ್ರಿಯಾಂಕಾ ಗಾಂಧಿಯನ್ನು ಭೇಟಿಯಾದ ನಂತರ ಅವರು ಕಾಂಗ್ರೆಸ್ ಸೇರಿದರು.

’ಒಂದು ವೇಳೆ ನಾಮಪತ್ರ ಸಲ್ಲಿಸಲು ಹೋದರೆ ಗೂಂಡಾಗಳಿಂದ ಥಳಿಸುತ್ತಾರೆ ಎಂಬ ಭಯ ನನಗಿತ್ತು, ಆದರೆ ಈಗ ಅಸೆಂಬ್ಲಿ ಚುನಾವಣೆಗೆ ಸ್ಪರ್ಧಿಸಲು ಎದುರು ನೋಡುತ್ತಿದ್ದೇನೆ’ ಎಂದಿದ್ದಾರೆ.

ಇದನ್ನೂ ಓದಿ: ಯುಪಿ ಬಿಜೆಪಿ: ಅತ್ತ ರಾಜೀನಾಮೆ ಪರ್ವ, ಇತ್ತ ಸೀಟು ಹಂಚಿಕೆಯಲ್ಲಿ ಪಾಲು ಹೆಚ್ಚಳಕ್ಕೆ ಮಿತ್ರಪಕ್ಷಗಳ ಪಟ್ಟು

ಪಂಖೂರಿ ಪಾಠಕ್, ಗೌತಮ್ ಬುದ್ಧ ನಗರ

ಉತ್ತರಾಖಂಡದವರಾದ ಪಂಖೂರಿ ಪಾಠಕ್ ದೆಹಲಿಯಲ್ಲಿ ಬೆಳೆದವರು. ಆಕೆಯ ಪೋಷಕರು ವೈದ್ಯರು. ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿಯಾಗಿದ್ದ ಅವರು ಬಳಿಕ ಹಂಸರಾಜ್ ಕಾಲೇಜಿನಲ್ಲಿ ಜಂಟಿ ಕಾರ್ಯದರ್ಶಿಯಾಗಿದ್ದರು. ಅಲ್ಲಿಂದ ಸಮಾಜವಾದಿ ಪಕ್ಷಕ್ಕೆ ಸೇರಿ ಅದರ ಯುವ ಸಂಘಟನೆಗಾಗಿ ಕೆಲಸ ಮಾಡಿದರು. 2016 ರಲ್ಲಿ, ಅವರು ಪಕ್ಷದ ಮೊದಲ ಮಹಿಳಾ ವಕ್ತಾರರಾದರು, ಆದರೆ 2019 ರ ಆರಂಭದಲ್ಲಿ, ಪಕ್ಷದ ಇತರ ಸದಸ್ಯರೊಂದಿಗೆ ಭಿನ್ನಾಭಿಪ್ರಾಯಗಳ ನಂತರ ಕಾಂಗ್ರೆಸ್‌ಗೆ ಸೇರಿದ್ದಾರೆ. ಅವರ ಪತಿ, ಮಾಜಿ ಎಸ್‌ಪಿ ವಕ್ತಾರ ಅನಿಲ್ ಯಾದವ್ ಕೂಡ ಕಳೆದ ವರ್ಷ ರಾಜೀನಾಮೆ ನೀಡಿ ಕಾಂಗ್ರೆಸ್‌ಗೆ ಸೇರಿದ್ದರು. ಪಂಖೂರಿ ಪ್ರಸ್ತುತ ಕಾಂಗ್ರೆಸ್‌ನ ಯುಪಿ ಮಾಧ್ಯಮ ವಿಭಾಗದ ಉಪಾಧ್ಯಕ್ಷರಾಗಿದ್ದಾರೆ.

ನಿದಾ ಅಹ್ಮದ್, ಸಂಭಾಲ್

ಕಾಂಗ್ರೆಸ್‌ ಪಕ್ಷದ ಸಂಭಾಲ್ ಕುಟುಂಬದಲ್ಲಿ ಜನಿಸಿದ 36 ವರ್ಷದ ನಿದಾ ಅಹ್ಮದ್ ಸುಮಾರು 12 ವರ್ಷಗಳ ಹಿಂದೆ ದೆಹಲಿಯಲ್ಲಿ ಪತ್ರಕರ್ತೆಯಾಗಿ ಕೆಲಸ ಮಾಡಲು ಪ್ರಾರಂಭಿಸಿದ್ದರು. ಟಿವಿ ನಿರೂಪಕಿ, ನಿದಾ ಅವರು ಆಜ್ ತಕ್ ಗ್ರೂಪ್, ಝೀ ಮೀಡಿಯಾ, ನ್ಯೂಸ್ ಇಂಡಿಯಾ 24×7 ಗಳಲ್ಲಿ ಕೆಲಸ ನಿರ್ವಹಿಸಿದ್ದಾರೆ. ಈ ವಾರದ ಆರಂಭದಲ್ಲಿ ಅವರು ಕಾಂಗ್ರೆಸ್ ಸೇರಿದ್ದರು.

ಅರ್ಚನಾ ಗೌತಮ್, ಹಸ್ತಿನಾಪುರ

ಮೀರತ್‌ನ ಹಸ್ತಿನಾಪುರ ಕ್ಷೇತ್ರದಿಂದ (SC-ಮೀಸಲು) ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ 26 ವರ್ಷ ವಯಸ್ಸಿನ ನಟಿ ಮತ್ತು ರೂಪದರ್ಶಿ ಅರ್ಚನಾ ಗೌತಮ್‌ಗೆ ಕಾಂಗ್ರೆಸ್ ಟಿಕೆಟ್ ನೀಡಿದೆ. ಅವರು ಹಿಂದಿ ಮತ್ತು ತಮಿಳು ಚಿತ್ರಗಳಲ್ಲಿ ಪರಿಚಿತ ಮುಖ. ಮೀರತ್‌ನ ಐಐಎಂಟಿಯಿಂದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಪದವಿ ಪಡೆದಿದ್ದಾರೆ. ಕಳೆದ ವರ್ಷ ಲಕ್ನೋದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಅವರು ಕಾಂಗ್ರೆಸ್ ಸೇರಿದ್ದರು. ಗೌತಮ್ 2014 ರಲ್ಲಿ ಐಐಎಂಟಿಯಲ್ಲಿ ಓದುತ್ತಿದ್ದಾಗ ಮಿಸ್ ಯುಪಿ ಪ್ರಶಸ್ತಿಯನ್ನು ಗೆದ್ದಿದ್ದರು. ಅವರು 2018 ರಲ್ಲಿ ಮಿಸ್ ಬಿಕಿನಿ ಇಂಡಿಯಾ ಪ್ರಶಸ್ತಿಯನ್ನು ಪಡೆದಿದ್ದಾರೆ.


ಇದನ್ನೂ ಓದಿ: ಉತ್ತರ ಪ್ರದೇಶ ಚುನಾವಣೆ: ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ತಾಯಿಗೆ ಕಾಂಗ್ರೆಸ್‌ನಿಂದ ಟಿಕೆಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...