Homeಮುಖಪುಟಉತ್ತರ ಪ್ರದೇಶ ಚುನಾವಣೆ: ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ತಾಯಿಗೆ ಕಾಂಗ್ರೆಸ್‌ನಿಂದ ಟಿಕೆಟ್

ಉತ್ತರ ಪ್ರದೇಶ ಚುನಾವಣೆ: ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ತಾಯಿಗೆ ಕಾಂಗ್ರೆಸ್‌ನಿಂದ ಟಿಕೆಟ್

- Advertisement -
- Advertisement -

ಉತ್ತರ ಪ್ರದೇಶದಲ್ಲಿ ಮುಂದಿನ ತಿಂಗಳು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಯಾಗಿ 2017 ರ ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ತಾಯಿಯನ್ನು ಕಣಕ್ಕಿಳಿಸಿದೆ. ಇಂದು (ಜ.13) ಪಕ್ಷ ಬಿಡುಗಡೆ ಮಾಡಿದ ಮೊದಲ ಪಟ್ಟಿಯಲ್ಲಿ ಉನ್ನಾವೋ ಸಂತ್ರಸ್ತೆಯ ತಾಯಿ ಆಶಾ ಸಿಂಗ್ ಕೂಡ ಸೇರಿದ್ದಾರೆ.

“ನೀವು ಕಿರುಕುಳ ಮತ್ತು ಚಿತ್ರಹಿಂಸೆಗೆ ಬಲಿಯಾಗಿದ್ದರೆ, ಕಾಂಗ್ರೆಸ್ ನಿಮ್ಮನ್ನು ಬೆಂಬಲಿಸುತ್ತದೆ ಎಂಬ ಹೊಸ ಸಂದೇಶವನ್ನು ನಮ್ಮ ಈ ಪಟ್ಟಿ ರವಾನಿಸುತ್ತದೆ ” ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ.

ಈ ಹಿಂದೆ ಮಹಿಳಾ ಕೇಂದ್ರಿತ “ಲಡ್ಕಿ ಹೂಂ, ಲಾಡ್ ಸಕ್ತಿ ಹೂಂ” (ನಾನು ಹುಡುಗಿ, ನಾನು ಹೋರಾಡಬಲ್ಲೆ) ಪ್ರಚಾರ ಅಭಿಯಾನ ನಡೆಸುತ್ತಿರುವ ಪ್ರಿಯಾಂಕಾ ಗಾಂಧಿ, ಪಟ್ಟಿಯಲ್ಲಿ ಶೇಕಡಾ 40 ರಷ್ಟು ಟಿಕೆಟ್‌ಗಳನ್ನು ಮಹಿಳೆಯರಿಗೆ ಮತ್ತು ಶೇಕಡಾ 40 ರಷ್ಟು ಟಿಕೆಟ್ ಯುವಜನತೆಗೆ ಮೀಸಲಿಡಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: “ನಾನು ಹುಡುಗಿ ಮತ್ತು ನಾನು ಹೋರಾಡಬಲ್ಲೆ”: ಯುಪಿ ಕಾಂಗ್ರೆಸ್ ಅಭಿಯಾನಕ್ಕೆ ಪ್ರಿಯಾಂಕಾ ಗಾಂಧಿ ಚಾಲನೆ

ಯುಪಿ ಚುನಾವಣೆಗೆ 125 ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ತಾಯಿ ಆಶಾ ಸಿಂಗ್ ಸೇರಿದಂತೆ 50 ಅಭ್ಯರ್ಥಿಗಳು ಮಹಿಳೆಯರಿದ್ದಾರೆ. ಗೌರವಧನ ಹೆಚ್ಚಳಕ್ಕಾಗಿ ನಡೆದ ಆಂದೋಲನದ ನೇತೃತ್ವ ವಹಿಸಿದ್ದ ಆಶಾ ಕಾರ್ಯಕರ್ತೆ ಪೂನಂ ಪಾಂಡೆಯನ್ನು ಶಹಜಹಾನ್‌ಪುರದಿಂದ ಕಣಕ್ಕಿಳಿಸಿದ್ದೇವೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ತಿಳಿಸಿದ್ದಾರೆ.

ಉತ್ತರ ಪ್ರದೇಶ ರಾಜ್ಯದಲ್ಲಿ ಮಹಿಳೆಯರ ವಿರುದ್ಧ ಹೆಚ್ಚುತ್ತಿರುವ ಅಪರಾಧಗಳ ಬಗ್ಗೆ, ಲಿಂಗ ಸಮಾನತೆಯ ಬಗ್ಗೆ ಪದೇ ಪದೇ ಮಾತನಾಡುತ್ತಿರುವ ಕಾಂಗ್ರೆಸ್, ಹತ್ರಾಸ್‌ನಲ್ಲಿ ದಲಿತ ಯುವತಿಯ ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಉನ್ನಾವೋ ಪ್ರಕರಣ ಸೇರಿದಂತೆ ಹಲವು ಪ್ರಕರಣಗಳಲ್ಲಿ ದನಿ ಎತ್ತಿದೆ.

2017ರಲ್ಲಿ 17 ವರ್ಷದ ಬಾಲಕಿ ಕೆಲಸ ಮುಗಿಸಿ ಬರುವಾಗ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ನಿವಾಸದಲ್ಲಿ ಅತ್ಯಾಚಾರಕ್ಕೊಳಗಾದ್ದರು. ಬಳಿಕ 2019 ರಲ್ಲಿ ಆಕೆ ತನ್ನ ಕುಟುಂಬದೊಂದಿಗೆ ಪ್ರಯಾಣಿಸುತ್ತಿದ್ದಾಗ ಉತ್ತರ ರಾಜ್ಯದ ರಾಯ್ ಬರೇಲಿ ಜಿಲ್ಲೆಯಲ್ಲಿ ವೇಗವಾಗಿ ಬಂದ ಟ್ರಕ್ ಅವರ ಕಾರಿಗೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಆಕೆಯ ಕುಟುಂಬದ ಇಬ್ಬರು ಸದಸ್ಯರು ಸಾವನ್ನಪ್ಪಿದ್ದು, ಆಕೆ ಮತ್ತು ಆಕೆಯ ವಕೀಲರು ತೀವ್ರವಾಗಿ ಗಾಯಗೊಂಡಿದ್ದಾರೆ. ಪ್ರಕರಣದಲ್ಲಿ ಬಿಜೆಪಿಯ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಅಪರಾಧಿ ಎಂದು ದೆಹಲಿಯ ಟಿಸ್ ಹಜಾರಿ ನ್ಯಾಯಾಲಯ ಘೋಷಿಸಿದ್ದು, ಜೀವಾವಧಿ ಶಿಕ್ಷೆ ವಿಧಿಸಿದೆ.


ಇದನ್ನೂ ಓದಿ: ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ಅಪಘಾತ: ಸಿಬಿಐ ತನಿಖೆ ಎತ್ತಿ ಹಿಡಿದ ದೆಹಲಿ ನ್ಯಾಯಾಲಯ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಅಧಿಕಾರಕ್ಕೆ ಬಂದರೆ ‘ಪಿತ್ರಾರ್ಜಿತ ಆಸ್ತಿ ತೆರಿಗೆ’ ಜಾರಿಗೊಳಿಸುವುದಾಗಿ ಕಾಂಗ್ರೆಸ್ ಹೇಳಿಲ್ಲ

0
ಕಳೆದ ಎರಡು ದಿನಗಳಿಂದ ದೇಶದಲ್ಲಿ 'ಪಿತ್ರಾರ್ಜಿತ ಆಸ್ತಿ ತೆರಿಗೆ' (Inheritance Tax) ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿವೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದಲ್ಲಿ 'ಪಿತ್ರಾರ್ಜಿತ ಆಸ್ತಿ ತೆರಿಗೆ' ಜಾರಿಗೆ ತರಲಿದೆ. ಈ...