Homeಮುಖಪುಟಯುಪಿ ಚುನಾವಣೆ: ಮಹಿಳೆಯರಿಗೆ ಕಾಂಗ್ರೆಸ್‌ ಆದ್ಯತೆ; ಉಳಿದ ಪಕ್ಷಗಳ ಕಥೆಯೇನು..?

ಯುಪಿ ಚುನಾವಣೆ: ಮಹಿಳೆಯರಿಗೆ ಕಾಂಗ್ರೆಸ್‌ ಆದ್ಯತೆ; ಉಳಿದ ಪಕ್ಷಗಳ ಕಥೆಯೇನು..?

- Advertisement -
- Advertisement -

ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯು ಬಿಜೆಪಿ ನೇತೃತ್ವದ ಎನ್‌ಡಿಎ, ಅಖಿಲೇಶ್ ಯಾದವ್ ಅವರ ಸಮಾಜವಾದಿ ಪಕ್ಷ, ಕಾಂಗ್ರೆಸ್ ಪಕ್ಷಗಳ ನಡುವಿನ ಸ್ಪರ್ಧೆಯಾಗಿದೆ. ಮಾಯಾವತಿಯವರ ಬಿಎಸ್‌ಪಿ ಪಕ್ಷ ಈ ಬಾರಿ ಇದ್ದು ಇಲ್ಲದಂತಾಗಿದೆ.

ಬಿಜೆಪಿಯ ಹಲವು ಹಾಲಿ ಶಾಸಕ, ಸಚಿವರು ಬಿಜೆಪಿ ತೊರೆದು ಸಮಾಜವಾದಿ ಪಕ್ಷದೆಡೆಗೆ ಮುಖ ಮಾಡಿದ್ದಾರೆ. ಇದು ಸಮಾಜವಾದಿ ಪಕ್ಷವು ಯುಪಿಯಲ್ಲಿ ಮುಂದಿನ ಸರ್ಕಾರವನ್ನು ರಚಿಸುವ ಸಾಧ್ಯತೆಯನ್ನು ಹುಟ್ಟುಹಾಕಿದೆ ಎಂಬ ಅಭಿಪ್ರಾಯವೂ ವ್ಯಕ್ತವಾಗುತ್ತಿದೆ.

ಒಂದು ಕಾಲದಲ್ಲಿ ಪ್ರಬಲ ಪಕ್ಷವಾಗಿದ್ದ ಕಾಂಗ್ರೆಸ್‌ ಈಗ ಉತ್ತರ ಪ್ರದೇಶದಲ್ಲಿ ತನ್ನ ಪ್ರಬಲ್ಯವನ್ನು ಕಳೆದುಕೊಂಡಿದೆ. ಈ ಬಾರಿಯ ಚುನಾವಣೆಯಲ್ಲಿ ತನ್ನ ನೆಲೆಯನ್ನು ಮರುಸೃಷ್ಟಿಸಿಕೊಳ್ಳಲು ಕಾಂಗ್ರೆಸ್‌ ಭಾರೀ ಪ್ರಯತ್ನ ಮಾಡುತ್ತಿದೆ. ಪ್ರಿಯಾಂಕಾ ಗಾಂಧಿ ನೇತೃತ್ವದಲ್ಲಿ ಯುಪಿ ಚುನಾವಣೆಯನ್ನು ಎದುರಿಸುತ್ತಿರುವ ಕಾಂಗ್ರೆಸ್‌, ಮಹಿಳೆಯರಿಗೆ ಹೆಚ್ಚಿನ ಆದ್ಯತೆಯನ್ನು ನೀಡುತ್ತಿದೆ.

ಪ್ರಬಲ ಮಹಿಳಾ ರಾಜಕಾರಣಿಗಳು ದೇಶಕ್ಕೆ ಹೊಸದೇನಲ್ಲ. ಪ್ರಿಯಾಂಕಾ ಗಾಂಧಿ ಅವರ ಅಜ್ಜಿ ಮತ್ತು ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರು ದಶಕಗಳ ಕಾಲ ದೇಶದ ರಾಜಕೀಯದ ಮೇಲೆ ಪ್ರಭಾವ ಬೀರಿದ್ದಾರೆ.

ಹೀಗಾಗಿ, ಕೇಂದ್ರ ಸರ್ಕಾರವು ಜಾರಿಗೊಳಿಸಲು ಮುಂದಾಗಿದ್ದ ಸಿಎಎ ಕಾನೂನಿನ ವಿರುದ್ದ ಪ್ರತಿಭಟಿಸಿ ಜೈಲು ಸೇರಿದ್ದ ನಟಿ ಸದಾಫ್ ಜಾಫರ್, ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ತಾಯಿ ಹಾಗೂ ಸೌಂದರ್ಯ ಸ್ಪರ್ಧೆಯ ವಿಜೇತೆ ಸೇರಿದಂತೆ ಯುಪಿಯ ಒಟ್ಟು ಸೀಟುಗಳ ಪೈಕಿ ಶೇ.40 ರಷ್ಟು ಸ್ಥಾನಗಳಲ್ಲಿ ಮಹಿಳಾ ಅಭ್ಯರ್ಥಿಗಳನ್ನು ಕಾಂಗ್ರೆಸ್‌ ಕಣಕ್ಕಿಳಿಸುತ್ತಿದೆ.

ಇದನ್ನೂ ಓದಿ: ಯುಪಿ ಚುನಾವಣೆ: ಹೋರಾಟಗಾರರು, ಸಂತ್ರಸ್ತರು ಸೇರಿ 40% ಮಹಿಳೆಯರಿಗೆ ಕಾಂಗ್ರೆಸ್ ಟಿಕೆಟ್

ಎಲ್ಲಾ ರಾಜಕೀಯ ಪಕ್ಷಗಳು ಮಹಿಳಾ ಮತದಾರರನ್ನು ನೆಚ್ಚಿಕೊಂಡಿದ್ದರೂ, ಹೆಚ್ಚಿನ ಸಂಖ್ಯೆಯ ಮಹಿಳಾ ಶಾಸಕರನ್ನು ಯಾವುದೇ ರಾಜ್ಯವೂ ಇದೂವರೆಗೂ ಹೊಂದಲು ಸಾಧ್ಯವಾಗಿಲ್ಲ. ಇಂಟರ್ ಪಾರ್ಲಿಮೆಂಟರಿ ಯೂನಿಯನ್ ಬಿಡುಗಡೆ ಮಾಡಿದ ಅಂಕಿಅಂಶಗಳ ಪ್ರಕಾರ, ಲೋಕಸಭೆಯಲ್ಲಿ ಮಹಿಳೆಯರ ಶೇಕಡಾವಾರು ಪ್ರಮಾಣದಲ್ಲಿ ಭಾರತವು ಕಳೆದ ವರ್ಷ 193 ರಾಷ್ಟ್ರಗಳ ಪೈಕಿ 147 ನೇ ಸ್ಥಾನದಲ್ಲಿದೆ.

ರಾಜ್ಯದಲ್ಲಿ ಬಿಜೆಪಿ ಮತ್ತು ಅದರ ಪ್ರಮುಖ ಪ್ರತಿಸ್ಪರ್ಧಿ ಸಮಾಜವಾದಿ ಪಕ್ಷಗಳು ಕಾಂಗ್ರೆಸ್‌ ಅನ್ನು ಗಂಭೀರ ಎದುರಾಳಿಯಾಗಿ ಪರಿಗಣಿಸುತ್ತವೆಯೇ ಎಂದು ನೋಡಬೇಕಾಗಿದೆ. ಇಲ್ಲಿಯವರೆಗೆ ಬಿಜೆಪಿ ತನ್ನ 107 ಅಭ್ಯರ್ಥಿಗಳ ಪೈಕಿ 10 ಮಹಿಳೆಯರನ್ನು ಕಣಕ್ಕಿಳಿಸಿದ್ದರೆ, ಸಮಾಜವಾದಿ ಪಕ್ಷವು ಪ್ರಾದೇಶಿಕ ಪಕ್ಷದೊಂದಿಗಿನ ಮೈತ್ರಿಯಿಂದ ಒಬ್ಬ ಮಹಿಳಾ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ.

“ಕಾಂಗ್ರೆಸ್ ಪಕ್ಷವು ಸಂಘಟನಾ ರಚನೆಯನ್ನು ಹೊಂದಿಲ್ಲ ಮತ್ತು ತಳಮಟ್ಟದಲ್ಲಿ ಕಾರ್ಯಕರ್ತರನ್ನು ಹೊಂದಿಲ್ಲ ಎಂಬ ಅಂಶವನ್ನು ತೆಗೆದುಹಾಕಲು ಸಾಧ್ಯವಿಲ್ಲ. ಪಕ್ಷವು ಮಹಿಳೆಯರಿಗೆ ಹೆಚ್ಚಿನ ಆಧ್ಯತೆ ನೀಡುತ್ತಿರುವುದು ಪಕ್ಷವನ್ನು ಪುನರುಜ್ಜೀವನಗೊಳಿಸಲು ಸಹಾಯ ಮಾಡುತ್ತದೆ ಎಂಬುದು ಪ್ರಶ್ನಾರ್ಹವಾಗಿದೆ” ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ರಾಜಕೀಯ ಅಧ್ಯಯನ ಕೇಂದ್ರದ ಪ್ರಾಧ್ಯಾಪಕಿ ಸುಧಾ ಪೈ ಹೇಳಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ ಚುನಾವಣೆ: ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ತಾಯಿಗೆ ಕಾಂಗ್ರೆಸ್‌ನಿಂದ ಟಿಕೆಟ್

ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್‌ನ ‘ಲಡ್ಕಿ ಹು, ಲಾಡ್ ಸಕ್ತಿ ಹೂ’ (ನಾನು ಹುಡುಗಿ, ನಾನು ಹೋರಾಡಬಲ್ಲೆ)’ ಪ್ರಚಾರದ ಮುಖವಾಗಿರುವ ಪ್ರಿಯಾಂಕಾ ಮೌರ್ಯ ಅವರಿಗೆ ಕಾಂಗ್ರೆಸ್‌ನಿಂದ ಟಿಕೆಟ್‌ ನೀಡಲು ನಿರಾಕರಿಸಲಾಗಿದೆ ಎಂದು ಹೇಳಲಾಗಿದ್ದು, ಅವರು ಕಾಂಗ್ರೆಸ್‌ ತೊರೆದು ಬಿಜೆಪಿ ಸೇರುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

ಅಲ್ಲದೆ, ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಅವರ ಸೊಸೆ ಅಪರ್ಣಾ ಯಾದವ್ ಅವರು ಬಿಜೆಪಿಗೆ ಸೇರಿದ್ದಾರೆ. ಹಲವು ಬಿಜೆಪಿ ನಾಯಕರು, ಶಾಸಕ, ಸಚಿವರು ಬಿಜೆಪಿ ತೊರೆದು ಸಮಾಜವಾದಿ ಪಕ್ಷವನ್ನು ಸೇರುತ್ತಿದ್ದಾರೆ.

ಬಿಜೆಪಿ ಅಧ್ಯಕ್ಷ ಜೆಡಿ ನಡ್ಡಾ ಅವರು ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಅಪ್ನಾ ದಳ (ಎಸ್) ಮತ್ತು ನಿಶಾದ್ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡು ಕಣಕ್ಕಿಳಿಯಲಿದೆ ಎಂದು ಘೋಷಿಸಿದ್ದಾರೆ. ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯು ಫೆಬ್ರವರಿ 10 ರಿಂದ ಏಳು ಹಂತಗಳಲ್ಲಿ ನಡೆಯಲಿದೆ. ಮಾರ್ಚ್ 10 ರಂದು ಫಲಿತಾಂಶ ಪ್ರಕಟವಾಗಲಿದೆ.


ಇದನ್ನೂ ಓದಿ: ಯುಪಿ: ಹಿಂದುತ್ವದ ಐಕಾನ್‌ ಆಗಿದ್ದ ಯೋಗಿ ತಮ್ಮ ಚರಿಷ್ಮಾ ಕಳೆದುಕೊಂಡಿದ್ದಾರಾ?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹಿಂದು-ಮುಸ್ಲಿಂ ರೈತ ಮೈತ್ರಿಯ ಚಹರೆ ಗುಲಾಮ್ ಮಹಮ್ಮದ್ ಜೌಲಾ ಇನ್ನಿಲ್ಲ

0
ಭಾರತೀಯ ಕಿಸಾನ್ ಯೂನಿಯನ್‌ನ ಸಂಸ್ಥಾಪಕ ಸದಸ್ಯ ಮತ್ತು ಹಿಂದೂ-ಮುಸ್ಲಿಂ ಏಕತೆಯ ಪ್ರತೀಕವಾಗಿದ್ದ ಗುಲಾಮ್ ಮಹಮ್ಮದ್ ಜೌಲಾ ಇನ್ನಿಲ್ಲವಾಗಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು. ಜೌಲಾ ನಿಧನದಿಂದಾಗಿ ಮಹೇಂದ್ರಸಿಂಗ್ ಟಿಕೇತ್ ಸ್ಥಾಪಿಸಿದ್ದ ಭಾರತೀಯ ಕಿಸಾನ್ ಯೂನಿಯನ್...